1. {ತೂರಿನ ಬಗ್ಗೆ ಪ್ರವಾದನೆ} [PS] ತೂರಿನ ವಿಷಯವಾದ ದೈವೋಕ್ತಿ. [QBR] ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. [QBR] ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು. [QBR]
2. ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ಹಾದು ಹೋಗುವ, [QBR] ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನವಾಗಿರಿ! [QBR]
3. ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ, [QBR] ನೈಲ್ ನದಿಯ ಬೆಳೆಯಿಂದಲೂ ಆದಾಯಹೊಂದಿದ ನಿಮ್ಮ ನಗರವು ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು. [QBR]
4. ಚೀದೋನೇ, ನಾಚಿಕೆಪಡು. ಏಕೆಂದರೆ ಸಮುದ್ರವೂ, ಸಮುದ್ರದ ದುರ್ಗವೂ, [QBR] “ನಾವು ವೇದನೆ ಪಡಲಿಲ್ಲ, ಪ್ರಸವಿಸಲಿಲ್ಲ, [QBR] ಯುವತಿ ಯುವಕರನ್ನು ಸಾಕಿ ಸಲಹಲಿಲ್ಲ” ಎಂದು ನುಡಿದಿದೆಯಷ್ಟೆ. [QBR]
5. ತೂರಿನ ಸಮಾಚಾರವು ಐಗುಪ್ತ್ಯರಿಗೆ ಮುಟ್ಟಿದಾಗ ಅದಕ್ಕಾಗಿ ಸಂಕಟಪಡುವರು. [QBR]
6. ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ದ್ವೀಪ ನಿವಾಸಿಗಳೇ, ಗೋಳಾಡಿರಿ! [QBR]
7. ನಿಮ್ಮ ಉಲ್ಲಾಸದ ಪಟ್ಟಣವು ಇದೇನೋ? ಅದರ ಉತ್ಪತ್ತಿಯು ಪುರಾತನವಾದದ್ದೇ ಸರಿ; [QBR] ಅವರ ಕಾಲುಗಳು ಅವರನ್ನು ದೂರ ದೇಶದಲ್ಲಿ ವಾಸಿಸುವುದಕ್ಕೆ ಕರೆದುಕೊಂಡು ಹೋಗುವವು. [QBR]
8. ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರು ಪ್ರಭುಗಳು, [QBR] ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು? [QBR]
9. ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, [QBR] ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ. [QBR]
10. ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ಭೂಮಿಯನ್ನು ಬಿತ್ತು. ತೂರ್ ಪಟ್ಟಣದಲ್ಲಿ ಇನ್ನು ಮುಂದೆ ವ್ಯಾಪಾರ ಸ್ಥಳವು ಇರುವುದಿಲ್ಲ. [QBR]
11. ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. [QBR] ಕಾನಾನಿನ [* ಕಾನಾನಿನ ಪೊಯಿನಿಕೆಯ.] ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ. [QBR]
12. ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; [QBR] ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ. [QBR]
13. ಇಗೋ, ಕಸ್ದೀಯರ [† ಕಸ್ದೀಯರ ಬಾಬೆಲಿನವರು.] ದೇಶವು! ಈ ಜನಾಂಗವು ನಿರ್ನಾಮವಾಯಿತು. ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು. [QBR] ಗೋಪುರಗಳನ್ನು ಕಟ್ಟಿಕೊಂಡು ಅದರ ಕೋಟೆಗಳನ್ನು ಕೆಡವಿ ಅದನ್ನು ನಾಶಪಡಿಸಿದರು. [QBR]
14. ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು. [PE][PS]
15. ಆ ದಿನದಲ್ಲಿ ತೂರ್ ಪಟ್ಟಣವು ಒಬ್ಬ ಅರಸನ ಆಡಳಿತದ ಎಪ್ಪತ್ತು ವರ್ಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವುದು; ಎಪ್ಪತ್ತು ವರ್ಷದ ಮೇಲೆ ವ್ಯಭಿಚಾರಿ ವಿಷಯವಾದ ಗೀತೆಯಂತೆ ಆಗುವುದು. [QBR]
16. ಅದೇನೆಂದರೆ, “ಎಲ್ಲರೂ ಮರೆತುಹೋದ ವ್ಯಭಿಚಾರಿಯೇ, ಕಿನ್ನರಿಯನ್ನು ತೆಗೆದುಕೊಂಡು ಪಟ್ಟಣದಲ್ಲಿ ಅಲೆಯುತ್ತಾ, [QBR] ಜನರು ನಿನ್ನನ್ನು ಜ್ಞಾಪಿಸಿಕೊಳ್ಳುವಂತೆ ಚೆನ್ನಾಗಿ ನುಡಿಸಿ, ಬಹಳ ಗೀತೆಗಳನ್ನು ಹಾಡು” ಎಂಬುದೇ. [PE][PS]
17. ಎಪ್ಪತ್ತು ವರ್ಷಗಳ ಮೇಲೆ ಯೆಹೋವನು ತೂರ್ ಪಟ್ಟಣವನ್ನು ಪರಾಂಬರಿಸುವನು. ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದಲ್ಲಿರುವ ಸಕಲ ಅರಸರೊಂದಿಗೆ ಸೇರಿ ವ್ಯಾಪಾರ ಮಾಡುವಳು.
18. ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು. [PE]