1. {#1ತೂರಿನ ಬಗ್ಗೆ ಪ್ರವಾದನೆ } [PS]ತೂರಿನ ವಿಷಯವಾದ ದೈವೋಕ್ತಿ. [PE][QS]ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು, ನಿಮಗೆ ನೆಲೆಯಿಲ್ಲ, ರೇವಿಲ್ಲ. [QE][QS]ಕಿತ್ತೀಮ್ ದೇಶದವರಿಂದ ಅವರಿಗೆ ತಿಳಿಯಿತು. [QE]
2. [QS]ದ್ವೀಪಗಳ ನಿವಾಸಿಗಳೇ, ಸಮುದ್ರವನ್ನು ಹಾದು ಹೋಗುವ, [QE][QS]ಚೀದೋನಿನ ವರ್ತಕರಿಂದ ಸಮೃದ್ಧಿಯನ್ನು ಹೊಂದಿದವರೇ, ಮೌನವಾಗಿರಿ! [QE]
3. [QS]ವಿಶಾಲವಾದ ಸಾಗರದ ಮೇಲೆ ತಂದ ಶೀಹೋರಿನ ಧಾನ್ಯದಿಂದಲೂ, [QE][QS]ನೈಲ್ ನದಿಯ ಬೆಳೆಯಿಂದಲೂ ಆದಾಯಹೊಂದಿದ ನಿಮ್ಮ ನಗರವು ಅನೇಕ ಜನಾಂಗಗಳಿಗೆ ವ್ಯಾಪಾರ ಸ್ಥಳವಾಗಿತ್ತು. [QE]
4. [QS]ಚೀದೋನೇ, ನಾಚಿಕೆಪಡು. ಏಕೆಂದರೆ ಸಮುದ್ರವೂ, ಸಮುದ್ರದ ದುರ್ಗವೂ, [QE][QS]“ನಾವು ವೇದನೆ ಪಡಲಿಲ್ಲ, ಪ್ರಸವಿಸಲಿಲ್ಲ, [QE][QS]ಯುವತಿ ಯುವಕರನ್ನು ಸಾಕಿ ಸಲಹಲಿಲ್ಲ” ಎಂದು ನುಡಿದಿದೆಯಷ್ಟೆ. [QE]
5. [QS]ತೂರಿನ ಸಮಾಚಾರವು ಐಗುಪ್ತ್ಯರಿಗೆ ಮುಟ್ಟಿದಾಗ ಅದಕ್ಕಾಗಿ ಸಂಕಟಪಡುವರು. [QE]
6. [QS]ತಾರ್ಷೀಷಿಗೆ ಸಮುದ್ರದ ಮೇಲೆ ಹಾದುಹೋಗಿರಿ, ದ್ವೀಪ ನಿವಾಸಿಗಳೇ, ಗೋಳಾಡಿರಿ! [QE]
7. [QS]ನಿಮ್ಮ ಉಲ್ಲಾಸದ ಪಟ್ಟಣವು ಇದೇನೋ? ಅದರ ಉತ್ಪತ್ತಿಯು ಪುರಾತನವಾದದ್ದೇ ಸರಿ; [QE][QS]ಅವರ ಕಾಲುಗಳು ಅವರನ್ನು ದೂರ ದೇಶದಲ್ಲಿ ವಾಸಿಸುವುದಕ್ಕೆ ಕರೆದುಕೊಂಡು ಹೋಗುವವು. [QE]
8. [QS]ಅದು ಕಿರೀಟದಾಯಕವಾದ ಪಟ್ಟಣವು. ಅದರ ವರ್ತಕರು ಪ್ರಭುಗಳು, [QE][QS]ಅದರ ವ್ಯಾಪಾರಿಗಳು ಭೂಮಿಯಲ್ಲಿ ಘನವುಳ್ಳವರಾಗಿದ್ದಾರೆ. ಇಂಥ ತೂರಿಗೆ ವಿರುದ್ಧವಾಗಿ ಈ ಸಂಕಲ್ಪವನ್ನು ಮಾಡಿದವನು ಯಾರು? [QE]
9. [QS]ಗರ್ವದ ಸಕಲ ವೈಭವವನ್ನು ಹೊಲಸು ಮಾಡಬೇಕೆಂತಲೂ, [QE][QS]ಭೂಮಿಯಲ್ಲಿ ಘನವುಳ್ಳವರೆಲ್ಲರನ್ನು ಅವಮಾನಪಡಿಸಬೇಕೆಂತಲೂ ಸೇನಾಧೀಶ್ವರನಾದ ಯೆಹೋವನೇ ಹೀಗೆ ಸಂಕಲ್ಪಿಸಿದ್ದಾನೆ. [QE]
10. [QS]ತಾರ್ಷೀಷ್ ನಗರಿಯೇ, ನೈಲ್ ನದಿಯಂತೆ ನಿನ್ನ ಭೂಮಿಯನ್ನು ಬಿತ್ತು. ತೂರ್ ಪಟ್ಟಣದಲ್ಲಿ ಇನ್ನು ಮುಂದೆ ವ್ಯಾಪಾರ ಸ್ಥಳವು ಇರುವುದಿಲ್ಲ. [QE]
11. [QS]ಯೆಹೋವನು ಸಮುದ್ರದ ಮೇಲೆ ಕೈಚಾಚಿ ರಾಜ್ಯಗಳನ್ನು ನಡುಗಿಸಿದ್ದಾನೆ. [QE][QS]ಕಾನಾನಿನ[* ಕಾನಾನಿನ ಪೊಯಿನಿಕೆಯ. ] ದುರ್ಗಗಳನ್ನು ನಾಶಮಾಡಲು ಅದರ ವಿಷಯವಾಗಿ ಯೆಹೋವನು ಅಪ್ಪಣೆಕೊಟ್ಟಿದ್ದಾನೆ. [QE]
12. [QS]ಆತನು, “ಹಿಂಸೆಗೆ ಈಡಾದ ಕನ್ಯೆಯಂತಿರುವ ಚೀದೋನ್ ನಗರಿಯೇ, ಇನ್ನು ಮೇಲೆ ನಿನಗೆ ಹರ್ಷವೇ ಇಲ್ಲ; [QE][QS]ಎದ್ದು ಕಿತ್ತೀಮಿಗೆ ಸಮುದ್ರದ ಮೇಲೆ ಹಾದುಹೋಗು, ಅಲ್ಲಿಯೂ ನಿನಗೆ ವಿಶ್ರಾಂತಿ ಇರದು” ಎಂದು ಹೇಳಿದ್ದಾನೆ. [QE]
13. [QS]ಇಗೋ, ಕಸ್ದೀಯರ[† ಕಸ್ದೀಯರ ಬಾಬೆಲಿನವರು. ] ದೇಶವು! ಈ ಜನಾಂಗವು ನಿರ್ನಾಮವಾಯಿತು. ಅಶ್ಶೂರ್ಯರು ಈ ದೇಶವನ್ನು ಕಾಡುಮೃಗಗಳಿಗೆ ಈಡುಮಾಡಿದರು. [QE][QS]ಗೋಪುರಗಳನ್ನು ಕಟ್ಟಿಕೊಂಡು ಅದರ ಕೋಟೆಗಳನ್ನು ಕೆಡವಿ ಅದನ್ನು ನಾಶಪಡಿಸಿದರು. [QE]
14. [QS]ತಾರ್ಷೀಷಿನ ಹಡಗುಗಳೇ, ಗೋಳಾಡಿರಿ! ಏಕೆಂದರೆ ನಿಮ್ಮ ಆಶ್ರಯವು ಹಾಳಾಯಿತು. [QE]
15.
16. [PS]ಆ ದಿನದಲ್ಲಿ ತೂರ್ ಪಟ್ಟಣವು ಒಬ್ಬ ಅರಸನ ಆಡಳಿತದ ಎಪ್ಪತ್ತು ವರ್ಷಗಳ ತನಕ ಜ್ಞಾಪಕಕ್ಕೆ ಬಾರದೇ ಇರುವುದು; ಎಪ್ಪತ್ತು ವರ್ಷದ ಮೇಲೆ ವ್ಯಭಿಚಾರಿ ವಿಷಯವಾದ ಗೀತೆಯಂತೆ ಆಗುವುದು. [PE][QS]ಅದೇನೆಂದರೆ, “ಎಲ್ಲರೂ ಮರೆತುಹೋದ ವ್ಯಭಿಚಾರಿಯೇ, ಕಿನ್ನರಿಯನ್ನು ತೆಗೆದುಕೊಂಡು ಪಟ್ಟಣದಲ್ಲಿ ಅಲೆಯುತ್ತಾ, [QE][QS]ಜನರು ನಿನ್ನನ್ನು ಜ್ಞಾಪಿಸಿಕೊಳ್ಳುವಂತೆ ಚೆನ್ನಾಗಿ ನುಡಿಸಿ, ಬಹಳ ಗೀತೆಗಳನ್ನು ಹಾಡು” ಎಂಬುದೇ. [QE]
17. [PS]ಎಪ್ಪತ್ತು ವರ್ಷಗಳ ಮೇಲೆ ಯೆಹೋವನು ತೂರ್ ಪಟ್ಟಣವನ್ನು ಪರಾಂಬರಿಸುವನು. ಅವಳು ತನ್ನ ಆದಾಯಕ್ಕಾಗಿ ಹಿಂದಿರುಗಿ ಭೂಲೋಕದಲ್ಲಿರುವ ಸಕಲ ಅರಸರೊಂದಿಗೆ ಸೇರಿ ವ್ಯಾಪಾರ ಮಾಡುವಳು.
18. ಅವಳ ವ್ಯಾಪಾರವೂ ಮತ್ತು ಅವಳ ಆದಾಯವೂ ಅವಳಿಗೆ ನಿಧಿನಿಕ್ಷೇಪವಾಗದೆ ಯೆಹೋವನಿಗೇ ಮೀಸಲಾಗುವುದು. ಆ ವ್ಯಾಪಾರವು ಯೆಹೋವನ ಸನ್ನಿಧಾನದಲ್ಲಿ ವಾಸಿಸುವವರಿಗೆ ಬೇಕಾದಷ್ಟು ಅನ್ನವನ್ನೂ, ಶ್ರೇಷ್ಠವಾದ ಉಡುಪನ್ನೂ ಒದಗಿಸಲು ಅನುಕೂಲವಾಗುವುದು. [PE]