1. {#1ಭೂಮಿಗೆ ಬರಲಿರುವ ವಿನಾಶ }
2. [PS]ಇಗೋ, ಯೆಹೋವನು ಭೂಮಿಯನ್ನು ಬರಿದುಮಾಡಿ, ಎಲ್ಲಾ ಪ್ರದೇಶವನ್ನು ನಿರ್ಜನಮಾಡಿ, ಅದನ್ನು ವಿಕಾರಪಡಿಸಿ, ಅದರ ನಿವಾಸಿಗಳನ್ನು ಚದುರಿಸಿಬಿಡುವವನಾಗಿದ್ದಾನೆ. [PE][QS]ಪ್ರಜೆಗಳು ಯಾಜಕ, ದಾಸ ಯಜಮಾನ, ದಾಸಿ, ಯಜಮಾನಿ, [QE][QS]ಕೊಳ್ಳುವವನು, ಮಾರುವವನು, ಸಾಲ ಕೊಡುವವನು ಸಾಲ ಪಡೆಯುವವನು, ಬಡ್ಡಿ ಪಡೆಯುವವನು ಬಡ್ಡಿ ತೆರುವವನು, ಇವರೆಲ್ಲರಿಗೂ ಒಂದೇ ಗತಿಯಾಗುವುದು. [QE]
3. [QS]ಭೂಮಿಯು ಬಟ್ಟಬರಿದಾಗುವುದು, ಅದು ಸಂಪೂರ್ಣ ಸುಲಿಗೆಯಾಗುವುದು, [QE][QS]ಯೆಹೋವನೇ ಇದನ್ನು ನುಡಿದಿದ್ದಾನೆ. [QE]
4. [QS]ಭೂಮಿಯು ಪ್ರಲಾಪಿಸುತ್ತಾ ಬಳಲಿದೆ, ಲೋಕವು ಕುಗ್ಗಿಹೋಗಿದೆ, ಲೋಕದ ಉನ್ನತರು ಕಂಗೆಟ್ಟಿದ್ದಾರೆ. [QE]
5. [QS]ಭೂನಿವಾಸಿಗಳು ದೈವಾಜ್ಞೆಗಳನ್ನು ಮೀರಿ, ನಿಯಮಗಳನ್ನು ಬದಲಾಯಿಸಿ, [QE][QS]ಶಾಶ್ವತವಾದ ಒಡಂಬಡಿಕೆಯನ್ನು ಭಂಗಪಡಿಸಿದ್ದರಿಂದ ಭೂಮಿಯು ಅವರ ಹೆಜ್ಜೆಯಿಂದ ಅಪವಿತ್ರವಾಯಿತು. [QE]
6. [QS]ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ. [QE][QS]ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ. [QE]
7. [QS]ದ್ರಾಕ್ಷಾರಸವು ಬತ್ತಿ ಹೋಗುವುದು, ದ್ರಾಕ್ಷಿಯ ಬಳ್ಳಿಯು ಕ್ಷೀಣಿಸುವುದು, ಹರ್ಷ ಹೃದಯರೆಲ್ಲಾ ನರಳುತ್ತಾರೆ. [QE]
8. [QS]ದಮ್ಮಡಿಗಳ ಉತ್ಸಾಹವು ಮುಗಿದಿದೆ, ಉಲ್ಲಾಸಿಗಳ ಕೋಲಾಹಲವು ಕೊನೆಗೊಂಡಿದೆ, [QE][QS]ಕಿನ್ನರಿಯ ಆನಂದವು ಅಡಗಿದೆ. [QE]
9. [QS]ಇನ್ನು ಗಾನದೊಡನೆ ದ್ರಾಕ್ಷಾರಸವನ್ನು ಕುಡಿಯರು, ಮದ್ಯವು ಕುಡಿಯುವವರಿಗೆ ಕಹಿಯಾಗುವುದು. [QE]
10. [QS]ಹಾಳುಪಟ್ಟಣವು ಬಿದ್ದುಹೋಗಿದೆ, ಯಾರೂ ಹೋಗದಂತೆ ಪ್ರತಿಯೊಂದು ಮನೆಯೂ ಮುಚ್ಚಿದೆ. [QE]
11. [QS]ದ್ರಾಕ್ಷಾರಸದ ಕೊರತೆಯಿಂದ ಬೀದಿಗಳಲ್ಲಿ ಅರಚುತ್ತಾರೆ; ಉಲ್ಲಾಸವೆಲ್ಲಾ ಕೊನೆಗೊಂಡಿದೆ; ಲೋಕದ ಸಡಗರವು ಸೆರೆಯಾಗಿ ತೊಲಗಿದೆ. [QE]
12. [QS]ಪಟ್ಟಣಗಳು ಹಾಳೂರಾಗಿ ಉಳಿದಿದೆ; ನಾಶವು ಹೆಬ್ಬಾಗಿಲಿಗೆ ಬಡಿದಿದೆ. [QE]
13. [QS]ಎಣ್ಣೆಯ ಮರವನ್ನು ಕಡಿದ ಬಳಿಕ, [QE][QS]ದ್ರಾಕ್ಷಿಯ ಸುಗ್ಗಿಯು ತೀರಿದ ನಂತರ ಉಳಿದ ಕಾಯಿಗಳ ಹಾಗೆ ಭೂಮಂಡಲದಲ್ಲಿ ಜನಾಂಗಗಳೊಳಗೆ ಉಳಿದಿರುವುದು. [QE]
14. [QS]ಅವರು ತಮ್ಮ ಧ್ವನಿ ಎತ್ತಿ ಯೆಹೋವನ ಮಹಿಮೆಯನ್ನು ಕುರಿತು ಹಾಡುವರು. [QE][QS]ಸಮುದ್ರದ ಕಡೆಯಿಂದ ಆರ್ಭಟಿಸುವರು. [QE]
15. [QS]ಮೂಡಣದವರೇ, “ಯೆಹೋವನನ್ನು ಸನ್ಮಾನಿಸಿರಿ. [QE][QS]ದ್ವೀಪ ನಿವಾಸಿಗಳೇ, ಇಸ್ರಾಯೇಲರ ದೇವರಾದ ಯೆಹೋವನ ನಾಮವನ್ನು ಘನಪಡಿಸಿರಿ” ಎಂದು ಕೂಗುವರು. [QE]
16. [PS]ಭೂಮಂಡಲದ ಕಟ್ಟಕಡೆಯಿಂದ, “ನೀತಿವಂತರಿಗೆ ಮಹಿಮೆಯಾಗಲಿ” ಎಂಬ ಗೀತೆಗಳು ನಮಗೆ ಕೇಳಿ ಬಂದಿವೆ, ಆದರೆ “ನಾನಾದರೋ ಕ್ಷಯಿಸಿ ಹೋಗಿದ್ದೇನೆ, ನನ್ನ ಗತಿಯನ್ನು ಏನು ಹೇಳಲಿ! [PE][QS]ಬಾಧಕರು ಬಾಧಿಸುತ್ತಾರೆ, ಹೌದು, ಬಾಧಕರು ಬಾಧಿಸೇ ಬಾಧಿಸುತ್ತಾರೆ” ಎಂದುಕೊಂಡೆನು. [QE]
17. [QS]ಭೂನಿವಾಸಿಗಳೇ, ಭಯವೂ, ಗುಂಡಿಯೂ, ಬಲೆಯೂ ನಿಮಗೆ ಕಾದಿವೆ. [QE]
18. [QS]ಭಯದ ಸಪ್ಪಳದಿಂದ ಓಡಿ ಹೋಗುವವನು ಗುಂಡಿಯಲ್ಲಿ ಬೀಳುವನು, [QE][QS]ಗುಂಡಿಯನ್ನು ಹತ್ತಿ ಬರುವವನು ಬಲೆಗೆ ಸಿಕ್ಕುವನು. ನೋಡು, [QE][QS]ಆಕಾಶದ ದ್ವಾರಗಳು ತೆರೆದಿವೆ, ಭೂಮಿಯ ಅಸ್ತಿವಾರಗಳು ಕಂಪಿಸುತ್ತಿವೆ. [QE]
19. [QS]ಭೂಮಿಯು ಒಡೆದೇ ಇದೆ, ಬಿರಿದಿದೆ, [QE][QS]ಕದಲಿಯೇ ಹೋಗಿದೆ. [QE]
20. [QS]ಭೂಮಿಯು ಅಮಲೇರಿದವನ ಹಾಗೆ ಓಲಾಡುತ್ತದೆ, ಗುಡಿಸಲಂತೆ ತೂಗಾಡುತ್ತದೆ; [QE][QS]ಅದರ ದ್ರೋಹವು ಅದಕ್ಕೆ ಭಾರವಾಗಿದೆ, ಅದು ಬಿದ್ದು ಹೋಗುತ್ತಿದೆ, ತಿರುಗಿ ಏಳುವುದೇ ಇಲ್ಲ. [QE]
21. [PS]ಆ ದಿನದಲ್ಲಿ ಯೆಹೋವನು ಆಕಾಶಮಂಡಲದ ದೂತಸೈನ್ಯವನ್ನೂ, [PE][QS]ಭೂಮಂಡಲದ ಒಡೆಯರನ್ನೂ ದಂಡಿಸುವನು. [QE]
22. [QS]ಅವರು ಕೈದಿಗಳ ಗುಂಪಿನಂತೆ ನೆಲಮಾಳಿಗೆಯೊಳಕ್ಕೆ ಒಟ್ಟಿಗೆ ತಳ್ಳಲ್ಪಟ್ಟು ಅದರಲ್ಲಿ ಮುಚ್ಚಲ್ಪಡುವರು. [QE][QS]ಬಹಳ ದಿನಗಳ ನಂತರ ದಂಡನೆಗೆ ಗುರಿಯಾಗುವರು. [QE]
23. [QS]ಆಮೇಲೆ ಚಂದ್ರನು ನಾಚಿಕೆಪಡುವನು, ಸೂರ್ಯನು ಲಜ್ಜೆಗೊಳ್ಳುವನು; [QE][QS]ಸೇನಾಧೀಶ್ವರನಾದ ಯೆಹೋವನು ಚೀಯೋನ್ ಪರ್ವತದಲ್ಲಿ ಯೆರೂಸಲೇಮನ್ನು ಆಳುವನು. [QE][QS]ಆತನ ಪರಿವಾರದ ಹಿರಿಯರ ಮುಂದೆ ಪ್ರಭಾವವು ಪ್ರತ್ಯಕ್ಷವಾಗುವುದು. [QE]