1. {#1ನ್ಯಾಯತೀರ್ಪು ಮತ್ತು ರಕ್ಷಣೆಗಾಗಿ ಸ್ತುತಿ } [QS]ಯೆಹೋವನೇ, ನೀನೇ ನನ್ನ ದೇವರು; ನೀನು ಸತ್ಯ ಪ್ರಾಮಾಣಿಕತೆಗಳನ್ನು ಅನುಸರಿಸಿ, [QE][QS]ಆದಿ ಸಂಕಲ್ಪಗಳನ್ನು ನೆರವೇರಿಸುತ್ತಾ, ಅದ್ಭುತಗಳನ್ನು ನಡೆಸಿದ ಕಾರಣ ನಿನ್ನನ್ನು ಕೊಂಡಾಡುವೆನು, ನಿನ್ನ ನಾಮವನ್ನು ಮಹಿಮೆಪಡಿಸುವೆನು. [QE]
2. [QS]ಏಕೆಂದರೆ ನೀನು ದುರ್ಗವನ್ನು ನಾಶಪಡಿಸಿ, ಪಟ್ಟಣವನ್ನು ಹಾಳು ದಿಬ್ಬವನ್ನಾಗಿಯೂ, [QE][QS]ಅನ್ಯರ ಕೋಟೆಯನ್ನು ಯಾರೂ ಎಂದಿಗೂ ಕಟ್ಟಲಾರದ ಹಾಳು ಊರನ್ನಾಗಿಯೂ ಮಾಡಿದ್ದಿ. [QE]
3. [QS]ಆದಕಾರಣ ಬಲಿಷ್ಠವಾದ ಜನಾಂಗವು ನಿನ್ನನ್ನು ಘನಪಡಿಸುವುದು, ಭಯಂಕರವಾದ ಜನರ ಪಟ್ಟಣವು ನಿನಗೆ ಅಂಜುವುದು. [QE]
4. [QS]ನೀನು ದೀನರಿಗೆ ಕೋಟೆಯು, ಇಕ್ಕಟ್ಟಿನಲ್ಲಿ ದಿಕಿಲ್ಲದವರಿಗೆ ರಕ್ಷಣಾದುರ್ಗವೂ, [QE][QS]ಬಿಸಿಲಿಗೆ ನೆರಳೂ, ಭೀಕರರ ಶ್ವಾಸವು [QE][QS]ಗೋಡೆಗೆ ಬಡಿದುಬಿಡುವ ಬಿರುಗಾಳಿಯಂತಿರುವಾಗ ಆಶ್ರಯವೂ ಆಗಿದ್ದೀ. [QE]
5. [QS]ಮೋಡಗಳು ಒಣನೆಲದ ಕಾವನ್ನು ತಂಪಾಗಿಸುವಂತೆ [QE][QS]ನೀನು ಅನ್ಯರ ಗದ್ದಲವನ್ನು ತಗ್ಗಿಸುವಿ; [QE][QS]ಮೋಡದ ನೆರಳಿನಿಂದ ಬಿಸಿಲು ಹೇಗೆ ಕಡಿಮೆಯಾಗುವುದೋ ಹಾಗೆ ನಿನ್ನಿಂದ ಭೀಕರರ ಉತ್ಸಾಹ ಗಾನವು ಕ್ರಮೇಣ ನಿಂತುಹೋಗುವುದು. [QE]
6. [QS]ಇದಲ್ಲದೆ, ಸೇನಾಧೀಶ್ವರನಾದ ಯೆಹೋವನು ಈ ಪರ್ವತದಲ್ಲಿ ಸಕಲ ಜನಾಂಗಗಳಿಗೆ ಸಾರವತ್ತಾದ ಕೊಬ್ಬಿದ ಮೃಷ್ಟಾನ್ನದಿಂದಲೂ, [QE][QS]ಮಡ್ಡಿಗಟ್ಟಿದ ಮೇಲೆ ಶೋಧಿಸಿದ ದ್ರಾಕ್ಷಾರಸದಿಂದಲೂ ಕೂಡಿದ ಔತಣವನ್ನು ಸಿದ್ಧಮಾಡುವನು. [QE]
7. [QS]ಸಮಸ್ತ ಜನಾಂಗಗಳನ್ನು ಮುಚ್ಚಿರುವ ಮುಸುಕನ್ನೂ, [QE][QS]ಸಕಲ ದೇಶದವರ ಮೇಲೆ ಹಾಕಿರುವ ತೆರೆಯನ್ನೂ ಇದೇ ಪರ್ವತದಲ್ಲಿ ತೆಗೆದುಹಾಕುವನು. [QE]
8. [QS]ಮರಣವನ್ನು ಶಾಶ್ವತವಾಗಿ ನಿರ್ನಾಮ ಮಾಡುವನು; [QE][QS]ಕರ್ತನಾದ ಯೆಹೋವನು ಎಲ್ಲರ ಮುಖದಲ್ಲಿನ ಕಣ್ಣೀರನ್ನು ಒರೆಸಿಬಿಡುವನು; [QE][QS]ತನ್ನ ಪ್ರಜೆಯ ಅವಮಾನವನ್ನು ಭೂಮಂಡಲದಿಂದಲೇ ತೊಲಗಿಸುವನು; ಯೆಹೋವನೇ ಇದನ್ನು ನುಡಿದಿದ್ದಾನೆ. [QE]
9. [QS]ಆ ದಿನದಲ್ಲಿ ಜನರು, “ಆಹಾ, ಈತನೇ ನಮ್ಮ ದೇವರು, ನಮ್ಮನ್ನು ರಕ್ಷಿಸಲಿ ಎಂದು, [QE][QS]ಈತನನ್ನು ನಿರೀಕ್ಷಿಸಿಕೊಂಡಿದ್ದೇವೆ; ಈತನ ರಕ್ಷಣೆಯಲ್ಲಿ ಆನಂದಿಸಿ ಉಲ್ಲಾಸಪಡುವೆವು” ಎಂದು ಹೇಳಿಕೊಳ್ಳುವರು. [QE]
10. [QS]ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವುದು; [QE][QS]ಮೋವಾಬ್ಯರೋ ತಿಪ್ಪೆಗುಂಡಿಯ ಕೆಸರಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾವಿದ್ದಲ್ಲೇ ತುಳಿಯಲ್ಪಡುವರು. [QE]
11. [QS]ಈಜುವವನು ಕೈಯಾಡಿಸುವಂತೆ ಅವರು ಅದರಲ್ಲಿಯೇ ಕೈಯಾಡಿಸುವರು; ಆದರೆ ಯೆಹೋವನು ಅವರ ಗರ್ವವನ್ನೂ, ಕೈಯ ಚಮತ್ಕಾರವನ್ನೂ ತಗ್ಗಿಸಿಬಿಡುವನು. [QE]
12. [QS]ದುರ್ಗಮವಾಗಿಯೂ, ಎತ್ತರವಾಗಿಯೂ ಇರುವ ನಿನ್ನ ಕೋಟೆಗಳನ್ನು ಆತನು ಕೆಡವಿ, ತಗ್ಗಿಸಿ, ನೆಲ ಸಮಮಾಡಿ ಧೂಳಿಗೆ ತರುವನು. [QE]