1. [QS]ಆ ದಿನದಲ್ಲಿ ಯೆಹೋವನು ಕಠಿಣವೂ, ಮಹತ್ವವೂ, ಬಲವೂ ಆಗಿರುವ ತನ್ನ ಖಡ್ಗದಿಂದ [QE][QS]ವೇಗವಾಗಿ ಓಡುವ ಸರ್ಪವಾದ ಲೆವಿಯಾತಾನವನ್ನೂ, ಡೊಂಕಾಗಿ ಹರಿಯುವ ಸರ್ಪವಾದ ಲೆವಿಯಾತಾನವನ್ನೂ, [QE][QS]ಮತ್ತು ಮಹಾನದಿಯಲ್ಲಿ ಘಟಸರ್ಪವನ್ನೂ ಕೊಂದುಹಾಕುವನು. [QE]
2. {#1ಯೆಹೋವನ ದ್ರಾಕ್ಷಿ ತೋಟದ ಗೀತೆ } [QS]ಆ ದಿನದಲ್ಲಿ ಫಲಭರಿತ ದ್ರಾಕ್ಷಿಯ ತೋಟದ ವಿಷಯವಾಗಿ ಹಾಡಿರಿ, [QE]
3. [QS]“ಯೆಹೋವನಾದ ನಾನೇ ಅದನ್ನು ಕಾಯುತ್ತೇನೆ. ಪ್ರತಿ ಕ್ಷಣವೂ ಅದಕ್ಕೆ ನೀರು ಹೊಯ್ಯುತ್ತಿದ್ದೇನೆ; [QE][QS]ಯಾರೂ ಅದಕ್ಕೆ ಕೇಡು ಮಾಡದ ಹಾಗೆ ಹಗಲಿರುಳೂ ಕಾಯುತ್ತೇನೆ. [QE]
4. [QS]ರೌದ್ರವು ನನ್ನಲ್ಲಿಲ್ಲ; ದತ್ತೂರಿ ಮತ್ತು ಮುಳ್ಳು ನನಗೆ ಎದುರುಬಿದ್ದರೆ, [QE][QS]ಅವುಗಳಿಗೆ ವಿರುದ್ಧವಾಗಿ ಯುದ್ಧಮಾಡಿ, ಒಟ್ಟಿಗೆ ಸುಟ್ಟುಬಿಡುವೆನು. [QE]
5. [QS]ಇಲ್ಲದಿದ್ದರೆ ಅವರು ನನ್ನ ಸಂಗಡ ಸಮಾಧಾನ ಮಾಡಿಕೊಳ್ಳುವ ಹಾಗೆ ನನ್ನನ್ನು ಆಶ್ರಯಿಸಲಿ, ನನ್ನ ಸಂಗಡ ಸಮಾಧಾನ ಮಾಡಿಕೊಳ್ಳಲಿ. [QE]
6. [QS]ಮುಂದಿನ ಕಾಲದಲ್ಲಿ ಯಾಕೋಬು ಬೇರೂರುವುದು, ಇಸ್ರಾಯೇಲು ಹೂಬಿಟ್ಟು ಚಿಗುರುವುದು, [QE][QS]ಆ ವೃಕ್ಷವು ಭೂಮಂಡಲವನ್ನೆಲ್ಲಾ ಫಲದಿಂದ ತುಂಬಿಸುವುದು.” [QE]
7. {#1ಯೆಹೋವನು ಇಸ್ರಾಯೇಲನ್ನು ಶಿಕ್ಷಿಸುವುದು } [QS]ಯೆಹೋವನು ಬೇರೆ ದೇಶಗಳನ್ನು ಹೊಡೆದಂತೆ ತನ್ನ ಪ್ರಜೆಯಾದ ಯಾಕೋಬ ಮತ್ತು ಇಸ್ರಾಯೇಲರನ್ನು ಹೊಡೆದನೋ? ಇತರ ದೇಶದವರು ಸಂಹರಿಸಲ್ಪಟ್ಟಂತೆ ಯಾಕೋಬ ಮತ್ತು ಇಸ್ರಾಯೇಲರು ಸಂಹರಿಸಲ್ಪಟ್ಟರೋ? [QE]
8. [QS]ನಿನ್ನ ಪ್ರಜೆಯನ್ನು ಕಳುಹಿಸಿಬಿಡುವದರ ಮೂಲಕ ಅದರೊಡನೆ ಮಿತಿಮೀರದೆ ಹೋರಾಡುತ್ತಿದ್ದೀ[* ಹೋರಾಡುತ್ತಿದ್ದೀ ಆಳತೆಗಳಗನುಸಾರವಾಗಿ. ]; ಮೂಡಣದಿಂದ ಗಾಳಿಯು ಬೀಸುವ ದಿನದಲ್ಲಿ ಅದರ ಕ್ರೂರ ಹೊಡೆತದಿಂದ ನಿನ್ನ ಜನರನ್ನು ಹೊರಗೆ ಕಳುಹಿಸಿದೆ. [QE]
9. [QS]ಹೀಗಿರಲು ಯಾಕೋಬ್ಯರು ಯಜ್ಞವೇದಿಯ ಕಲ್ಲುಗಳನ್ನೆಲ್ಲಾ ಸುಣ್ಣದಂತೆ ಪುಡಿ ಪುಡಿ ಮಾಡಿ, [QE][QS]ಅಶೇರವೆಂಬ ವಿಗ್ರಹಸ್ತಂಭಗಳನ್ನೂ, ಸೂರ್ಯಸ್ತಂಭಗಳನ್ನೂ ಪ್ರತಿಷ್ಠಿಸದೆ ನಾಶಮಾಡಿ ಅದೇ ಅವರ ಅಧರ್ಮಕ್ಕೆ ಪ್ರಾಯಶ್ಚಿತ್ತವಾಗುವಂತೆ ಮಾಡಿದನು [QE][QS]ಮತ್ತು ಅವರ ಪಾಪ ಪರಿಹಾರಕ್ಕೆ ಗುರುತಾದ ಪೂರ್ಣಫಲವೂ ಇದಾಗಿದೆ. [QE]
10. [QS]ಕೋಟೆಕೊತ್ತಲದ ಪಟ್ಟಣವು ಹಾಳಾಗಿ, ಕಾಡಿನಂತೆ ಜನರಿಲ್ಲದೆ ಶೂನ್ಯ ನಿವಾಸ ಸ್ಥಾನವಾಗಿದೆ; [QE][QS]ಅಲ್ಲಿ ಕರುಗಳು ಮೇದು ಮಲಗುವುದು, ಅಲ್ಲಿನ ಚಿಗುರುಗಳನ್ನು ತಿಂದುಬಿಡುವುದು. [QE]
11. [QS]ಅಲ್ಲಿನ ರೆಂಬೆಗಳು ಒಣಗಿಹೋಗಿ ಮುರಿದುಹೋಗುವವು, ಹೆಂಗಸರು ಬಂದು ಅವುಗಳಿಗೆ ಬೆಂಕಿ ಹಚ್ಚಿ ಉರಿಸುವರು. [QE][QS]ಏಕೆಂದರೆ ಆ ಪ್ರಜೆಯು ಬುದ್ಧಿಹೀನವಾದವರೇ. ಆದಕಾರಣ ಸೃಷ್ಟಿಸಿದಾತನು ಅವರಿಗೆ ಕರುಣೆ ತೋರಿಸುವುದಿಲ್ಲ, ನಿರ್ಮಿಸಿದಾತನು ಅವರಿಗೆ ದಯೆತೋರಿಸುವುದಿಲ್ಲ. [QE]
12. {#1ಇಸ್ರಾಯೇಲರ ಪುನರಾಗಮನ } [PS]ಇಸ್ರಾಯೇಲರೇ, ತುಂಬಿತುಳುಕುವ ಯೂಫ್ರೆಟಿಸ್ ನದಿಯಿಂದ ಐಗುಪ್ತ ದೇಶದ ನದಿಯವರೆಗೆ [PE][QS]ಯೆಹೋವನು ತೆನೆಗಳನ್ನು ಒಕ್ಕುವ ದಿನವು ಬರುತ್ತದೆ; [QE][QS]ಆಗ ನಿಮ್ಮನ್ನು ಒಬ್ಬೊಬ್ಬರನ್ನಾಗಿ ಆರಿಸುವನು. [QE]
13. [QS]ಆ ದಿನದಲ್ಲಿ ದೊಡ್ಡ ಕೊಂಬನ್ನೂದಲು [QE][QS]ಅಶ್ಶೂರ ದೇಶದಲ್ಲಿ ಹಾಳಾದವರೂ, ಐಗುಪ್ತದಲ್ಲಿ ದೇಶಭ್ರಷ್ಟರಾದವರೂ ಬಂದು [QE][QS]ಪರಿಶುದ್ಧ ಪರ್ವತವಾದ ಯೆರೂಸಲೇಮಿನಲ್ಲಿ ಯೆಹೋವನನ್ನು ಆರಾಧಿಸುವರು. [QE]