1. {ಯೆರೂಸಲೇಮಿಗೆ ಎಚ್ಚರಿಕೆ} PS ಅಯ್ಯೋ, ಅರೀಯೇಲೇ, * ಅರೀಯೇಲೇ, ದೇವರ ಕ್ರೋಧ ಅಥವಾ ಯಜ್ಞವೇದಿಯ ಬೆಂಕಿ ಸ್ಥಳ ಅಥವಾ ಯೆರೂಸಲೇಮ್ ಅರೀಯೇಲೇ ದಾವೀದನು ಸೈನ್ಯಸಮೇತವಾಗಿ ವಾಸಿಸಿದ ಪಟ್ಟಣವೇ, ನಿನ್ನ ಗತಿಯನ್ನು ಏನು ಹೇಳಲಿ!
ಈ ವರ್ಷಕ್ಕೆ ಮುಂದಿನ ವರ್ಷವನ್ನು ಸೇರಿಸಿರಿ; ಹಬ್ಬಗಳು ಹೆಚ್ಚಾಗಿ ಬರಲಿ. |
2. ಆ ಮೇಲೆ ನಾನು ಅರೀಯೇಲನ್ನು ಬಾಧಿಸುವೆನು; ಅರಚಾಟ ಕಿರಿಚಾಟಗಳಿಂದ ತುಂಬುವುದು;
ಆ ಪಟ್ಟಣವು ನನಗೆ ಅರೀಯೇಲಾಗಿಯೇ ಪರಿಣಮಿಸುವುದು. |
4. ನೀನು ಕುಗ್ಗಿ ಭೂಮಿಯೊಳಗಿಂದ ಮಾತನಾಡುವಿ, ನಿನ್ನ ನುಡಿಯು ಮಣ್ಣಿನೊಳಗಿಂದ ಸಣ್ಣ ಸ್ವರವಾಗಿ ಹೊರಡುವುದು,
ನಿನ್ನ ಧ್ವನಿಯು ಪ್ರೇತದ ಧ್ವನಿಯಂತೆ ನೆಲದೊಳಗಿಂದ ಬರುವುದು, ನಿನ್ನ ನುಡಿಯು ಧೂಳಿನೊಳಗಿಂದ ಪಿಸುಗುಟ್ಟುವುದು. |
5. ಗುಂಪು ಗುಂಪಾಗಿ ಕೂಡಿರುವ ನಿನ್ನ ಶತ್ರುಗಳು ಸೂಕ್ಷ್ಮವಾದ ಧೂಳಿನಂತೆಯೂ, ಭಯಂಕರವಾದ ಸಮೂಹವು ಹಾರಿಹೋಗುವ ಹೊಟ್ಟಿನಂತೆಯೂ ಇರುವರು;
ಅವರು ಕ್ಷಣ ಮಾತ್ರದಲ್ಲಿ ಲಯಹೊಂದುವರು. |
6. ಸೇನಾಧೀಶ್ವರನಾದ ಯೆಹೋವನು ಗುಡುಗು, ಭೂಕಂಪ, ಮಹಾಶಬ್ದ, ಬಿರುಗಾಳಿ, ಚಂಡಮಾರುತ, ದಹಿಸುವ ಅಗ್ನಿಯ ಜ್ವಾಲೆ
ಇವುಗಳ ಮೂಲಕ ನಿನ್ನನ್ನು ಶಿಕ್ಷಿಸುವನು. |
7. ಅರೀಯೇಲಿನ ಮೇಲೆ ಹೋರಾಡಿ, ಅದಕ್ಕೂ ಅದರ ಕೋಟೆಗೂ ವಿರುದ್ಧವಾಗಿ ಯುದ್ಧಮಾಡಿ,
ಬಾಧಿಸುವ ಸಕಲ ಜನಾಂಗಗಳ ಗುಂಪು, ಕನಸಿನಂತೆ, ರಾತ್ರಿಯ ಸ್ವಪ್ನದ ಹಾಗೆ ಮಾಯವಾಗುವುದು. |
8. ಹಸಿದವನು ಕನಸು ಕಂಡು ಆಹಾ, ತಿನ್ನುತ್ತಿದ್ದೇನೆ ಎಂದುಕೊಂಡಂತಾಗುವುದು; ಎಚ್ಚೆತ್ತಾಗ ಅವನ ಹೊಟ್ಟೆ ಬರಿದಾಗಿಯೇ ಇರುವುದು.
ಬಾಯಾರಿದವನು ಸ್ವಪ್ನದಲ್ಲಿ ಇಗೋ ನೀರು ಕುಡಿಯುತ್ತಿದ್ದೇನೆ ಎಂದುಕೊಂಡಂತಾಗುವುದು; ನಿದ್ರೆಯಿಂದ ಎಚ್ಚೆತ್ತಾಗ ಬಲಹೀನನಾಗಿದ್ದು, ಬಳಲಿ ನೀರನ್ನು ಬಯಸುತ್ತಾ ಬಾಯಾರಿಕೆಯಿಂದ ಇರುವನು. ಚೀಯೋನ್ ಪರ್ವತಕ್ಕೆ ವಿರುದ್ಧವಾಗಿ ಹೋರಾಡುವ ಸಕಲ ಜನಾಂಗಗಳಿಗೂ ಇದೇ ಗತಿಯಾಗುವುದು. |
9. {ಯೆರೂಸಲೇಮಿನ ಮೂಢಭಕ್ತಿ} PS ನಿಮ್ಮನ್ನು ನೀವೇ ಬೆರಗು ಮಾಡಿಕೊಂಡು ಬೆರಗಾಗಿರಿ, ಕುರುಡು ಮಾಡಿಕೊಂಡು ಕುರುಡರಾಗಿರಿ!
ಇವರು ಅಮಲೇರಿದ್ದಾರೆ, ದ್ರಾಕ್ಷಾರಸದಿಂದಲ್ಲ; ಓಲಾಡುತ್ತಾರೆ ಮದ್ಯದಿಂದಲ್ಲ. |
10. ಯೆಹೋವನು ನಿಮ್ಮ ಮೇಲೆ ಗಾಢನಿದ್ರೆಯನ್ನು ಬರಮಾಡಿ,
ಪ್ರವಾದಿಗಳ ಕಣ್ಣುಗಳನ್ನು ಮುಚ್ಚಿ, ದಿವ್ಯದರ್ಶಿಗಳ ತಲೆಗಳಿಗೆ ಮುಸುಕು ಹಾಕಿದ್ದಾನೆ. PEPS |
11. ದೈವದರ್ಶನವೆಲ್ಲಾ ಮುದ್ರೆಹಾಕಿದ ಶಾಸ್ತ್ರದ ಮಾತಿನ ಹಾಗಿದೆ; ಅದನ್ನು ಅಕ್ಷರ ಬಲ್ಲವನಿಗೆ, “ಇದನ್ನು ಓದು” ಎಂದು ಹೇಳಿದರೆ ಅವನು, “ಮುದ್ರೆ ಹಾಕಿದೆಯಲ್ಲಾ, ಆಗುವುದಿಲ್ಲ” ಎಂದು ಹೇಳುವನು.
|
13. ಯೆಹೋವನು ಹೇಳುವುದೇನೆಂದರೆ, “ಈ ಜನರು ಮಾತಿನಿಂದ ನನ್ನನ್ನು ಸಮೀಪಿಸಿ,
ತುಟಿಯಿಂದ ನನ್ನನ್ನು ಸನ್ಮಾನಿಸುತ್ತಾರೆ, ಮನಸ್ಸನ್ನೋ ದೂರಮಾಡಿಕೊಂಡು, ಬಾಯಿಪಾಠವಾಗಿ ಕಲಿತಿರುವ ಮನುಷ್ಯರ ಆಜ್ಞೆಗೆ ಸರಿಯಾದ ಭಯಭಕ್ತಿಯನ್ನು ಮಾತ್ರ ನನ್ನಲ್ಲಿಟ್ಟಿದ್ದಾರೆ. |
14. ಹೀಗಿರುವುದರಿಂದ ನಾನು ಈ ಜನರ ಮಧ್ಯದಲ್ಲಿ ಅಧಿಕ ಆಶ್ಚರ್ಯವೂ, ಅದ್ಭುತವೂ ಆದ ಕಾರ್ಯವನ್ನು ಇನ್ನು ಮಾಡುವೆನು;
ಇವರ ಜ್ಞಾನಿಗಳ ಜ್ಞಾನವು ಅಳಿಯುವುದು, ವಿವೇಕಿಗಳ ವಿವೇಕವು ಅಡಗುವುದು” ಎಂದು ಹೇಳಿದನು. |
15. {ಭವ್ಯಭವಿಷ್ಯದ ಭರವಸೆ} PS ತಮ್ಮ ಆಲೋಚನೆಯನ್ನು ಯೆಹೋವನಿಗೆ ಮರೆಮಾಡುವುದಕ್ಕೆ, ಅಗಾಧಕ್ಕೆ
ಹೋಗಿ, “ನಮ್ಮನ್ನು ಯಾರು ನೋಡುವರು? ಯಾರು ತಿಳಿದಾರು?” ಅಂದುಕೊಂಡು ಕತ್ತಲಲ್ಲೇ ತಮ್ಮ ಕೆಲಸಗಳನ್ನು ನಡೆಸುವವರ ಗತಿಯನ್ನು ಏನು ಹೇಳಲಿ! |
16. ಅಯ್ಯೋ, ನೀವು ಎಂಥಾ ಮೂರ್ಖರು! ನೀವು ತಲೆಕೆಳಗೆ ಮಾಡುವ ಸಂಗತಿಗಳು ಕುಂಬಾರನ ಜೇಡಿಮಣ್ಣಿನಂತೆ ಪರಿಗಣಿಸಲಾಗುವುದು.
ಕೆಲಸ ಮಾಡಿದವನಿಗೆ ಮಾಡಲ್ಪಟ್ಟದ್ದು, “ಆತನು ಕೆಲಸ ಮಾಡಲಿಲ್ಲ” ಎಂದು ಹೇಳುವುದೋ? ಇಲ್ಲವೇ, ತನ್ನನ್ನು ನಿರ್ಮಿಸಿದವನಿಗೆ ನಿರ್ಮಿಸಲ್ಪಟ್ಟದ್ದು, “ಆತನಿಗೆ ವಿವೇಕವಿಲ್ಲ” ಎಂದು ಹೇಳುವುದೋ? |
21. ಸುಳ್ಳುಸಾಕ್ಷಿಯಿಂದ ತಪ್ಪು ಹೊರಿಸುವವರೂ, ಚಾವಡಿಯಲ್ಲಿ ದೋಷವನ್ನು ಖಂಡಿಸುವವನಿಗೆ ಉರುಲೊಡ್ಡುವವರೂ,
ನ್ಯಾಯವಂತನ ನ್ಯಾಯವನ್ನು ಸುಮ್ಮನೆ ತಪ್ಪಿಸುವವರೂ ಆಗಿರುವ ಅಧರ್ಮನಿರತರೆಲ್ಲರೂ ನಿರ್ಮೂಲವಾಗುವರು. |
22. ಹೀಗಿರಲು ಅಬ್ರಹಾಮನನ್ನು ಉದ್ಧರಿಸಿದ ಯೆಹೋವನು ಯಾಕೋಬನ ಮನೆತನದ ವಿಷಯವಾಗಿ,
“ಯಾಕೋಬ್ಯರು, ಇನ್ನು ನಾಚಿಕೆಪಡುವುದಿಲ್ಲ, ಅವರ ಮುಖವು ಇನ್ನು ಕಳೆಗುಂದುವುದಿಲ್ಲ. |
23. ಯಾಕೋಬ ವಂಶದವರು ತಮ್ಮ ಮಧ್ಯದಲ್ಲಿ ನಾನು ನಡೆಸುವ ಕೆಲಸವನ್ನು ನೋಡಿ,
ನನ್ನ ನಾಮವೇ ಆರಾಧನೆಗೆ ಅರ್ಹವೆಂದು ಪ್ರತಿಷ್ಠಿಸುವರು; ಹೌದು, ಯಾಕೋಬ್ಯರ ಸದಮಲಸ್ವಾಮಿಯನ್ನು ಪ್ರತಿಷ್ಠೆಪಡಿಸಿ ಇಸ್ರಾಯೇಲರ ದೇವರಿಗೆ ನಡುಗುವರು. |
24. ತಪ್ಪಿದ ಹೃದಯವುಳ್ಳವರೆಲ್ಲರೂ ವಿವೇಕಿಗಳಾಗುವರು, ಗುಣಗುಟ್ಟುವವರು ಉಪದೇಶವನ್ನು ಕೇಳಿ ನಡೆಯುವರು” ಎಂದು ಹೇಳುತ್ತಾನೆ. PE
|