1. {#1ಐಗುಪ್ತರೊಡನೆ ಸಂಧಾನ ವ್ಯರ್ಥ } [QS]ಯೆಹೋವನು ಹೀಗೆ ನುಡಿಯುತ್ತಾನೆ, “ದ್ರೋಹಿಗಳಾದ ನನ್ನ ಮಕ್ಕಳ ಗತಿಯನ್ನು ಏನು ಹೇಳಲಿ” [QE][QS]“ಇವರು ನನ್ನನ್ನು ಕೇಳದೆ ಒಂದು ಆಲೋಚನೆಯನ್ನು ಮಾಡಿ, ನನ್ನ ಆತ್ಮದಿಂದ ಪ್ರೇರಿತರಾಗದೆ ಕಪಟ ಉಪಾಯಗಳನ್ನು ಮಾಡಿ [QE][QS]ಪಾಪದ ಮೇಲೆ ಪಾಪವನ್ನು ಸೇರಿಸಿಕೊಂಡಿದ್ದಾರೆ. [QE]
2. [QS]ಫರೋಹನ ಆಶ್ರಯವನ್ನು ಪಡೆದು, ಐಗುಪ್ತವನ್ನು ಆಶ್ರಯ ಮಾಡಿಕೊಳ್ಳಬೇಕೆಂದು, [QE][QS]ನನ್ನ ಮಾತನ್ನು ಕೇಳದೆ ಐಗುಪ್ತಕ್ಕೆ ಪ್ರಯಾಣವಾಗಿ ಹೊರಟಿದ್ದಾರೆ. [QE]
3. [QS]ಆದುದರಿಂದ ಫರೋಹನ ಆಶ್ರಯದಿಂದ ನಿಮಗೆ ನಾಚಿಕೆಯು, [QE][QS]ಐಗುಪ್ತವನ್ನು ಆಶ್ರಯಿಸುವುದರಿಂದ ಅವಮಾನವು ಉಂಟಾಗುವುದು. [QE]
4. [QS]ಆ ಫರೋಹನ ಪ್ರಧಾನರು ಚೋವನಿನಲ್ಲಿದ್ದರೂ, ಅವನ ದೂತರು ಹಾನೇಸಿಗೆ ಬಂದಿದ್ದಾರೆ. [QE]
5. [QS]ತಮಗೆ ಸಹಾಯವನ್ನೂ, ಪ್ರಯೋಜನವನ್ನೂ ಮಾಡಲಾರದೆ ನಾಚಿಕೆಯನ್ನೂ, [QE][QS]ಅವಮಾನವನ್ನೂ ಉಂಟುಮಾಡುವ ವ್ಯರ್ಥವಾದ ಈ ಜನಾಂಗದ ವಿಷಯವಾಗಿ ಎಲ್ಲರೂ ಲಜ್ಜೆಪಡುವರು.” [QE]
6. [PS]ದಕ್ಷಿಣ ಸೀಮೆಯ[* ದಕ್ಷಿಣ ಸೀಮೆಯ ನೆಗೆವ್. ] ನೀರಾನೆಯ ವಿಷಯವಾದ ದೈವೋಕ್ತಿ. [PE][QS]ರಾಯಭಾರಿಗಳು ಗಂಡು ಕತ್ತೆಗಳ ಬೆನ್ನುಗಳ ಮೇಲೆ ತಮ್ಮ ಧನವನ್ನೂ, ಒಂಟೆಗಳ ಡುಬ್ಬಗಳ ಮೇಲೆ ತಮ್ಮ ದ್ರವ್ಯವನ್ನೂ ಹೊರಿಸಿಕೊಂಡು, [QE][QS]ಮೃಗೇಂದ್ರ, ಸಿಂಹ, ಸರ್ಪ, ಹಾರುವ ಉರಿಮಂಡಲ ಇವುಗಳಿಂದ ಭಯಂಕರವಾಗಿಯೂ, ಶ್ರಮಸಂಕಟಗಳನ್ನು ಉಂಟು ಮಾಡುವ ದೇಶದ ಮಾರ್ಗವಾಗಿ [QE][QS]ನಿಷ್ಪ್ರಯೋಜಕವಾದ ಜನಾಂಗದ ಬಳಿಗೆ ಹೋಗುತ್ತಾರೆ. [QE]
7. [QS]ಐಗುಪ್ತದ ಸಹಾಯವು ವ್ಯರ್ಥ ನಿರರ್ಥಕ; [QE][QS]ಆದುದರಿಂದ ನಾನು ಅದಕ್ಕೆ ಸುಮ್ಮನೆ ಬಿದ್ದಿರುವ ಜಂಬದ ಮೃಗವೆಂದು ಹೆಸರಿಟ್ಟಿದ್ದೇನೆ. [QE]
8. {#1ಐಗುಪ್ತದ ಆಶ್ರಯದಿಂದಾಗುವ ದುರ್ಗತಿ } [QS]ಯೆಹೋವನು ನನಗೆ ಹೀಗೆ ಹೇಳಿದನು ನೀನು ಈಗ ಹೋಗಿ, ಈ ಮಾತುಗಳು ಶಾಶ್ವತವಾಗಿರುವಂತೆ ಅವರೆದುರು ಹಲಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ, [QE][QS]ಈ ಮಾತು ಮುಂದಿನ ದಿನಗಳಲ್ಲಿ ಶಾಶ್ವತ ಸಾಕ್ಷಿಯಾಗಿರುವುದು. [QE]
9. [QS]ಇವರು ದ್ರೋಹದ ಜನಾಂಗದವರು, ಮೋಸದ ಸಂತಾನದವರು, [QE][QS]ಯೆಹೋವನ ಉಪದೇಶವನ್ನು ಕೇಳಲೊಲ್ಲದ ಸಂತತಿಯವರು. [QE]
10. [QS]ಇವರು ದಿವ್ಯದರ್ಶಿಗಳಿಗೆ, “ನಿಮಗೆ ದರ್ಶನವಾಗದಿರಲಿ” ಎನ್ನುತ್ತಾರೆ, [QE][QS]ಮತ್ತು ಪ್ರವಾದಿಗಳಿಗೆ, “ನಮಗಾಗಿ ನ್ಯಾಯವಾದವುಗಳನ್ನು ಪ್ರವಾದಿಸಬೇಡಿರಿ, [QE][QS]ನಯವಾದವುಗಳನ್ನು ನಮಗೆ ನುಡಿಯಿರಿ, ಮೋಸವಾದವುಗಳನ್ನೇ ಪ್ರವಾದಿಸಿರಿ ಎನ್ನುತ್ತಾರೆ. [QE]
11. [QS]ನೀವು ಹಿಡಿದಿರುವ ಮಾರ್ಗದಿಂದ ತೊಲಗಿರಿ; ನಿಮ್ಮ ದಾರಿಗೆ ಓರೆಯಾಗಿರಿ; [QE][QS]ಇಸ್ರಾಯೇಲರ ಸದಮಲಸ್ವಾಮಿಯನ್ನು ನಮ್ಮ ಮುಂದೆ ನಿಲ್ಲದ ಹಾಗೆ ಮಾಡಿರಿ” ಎಂದು ಹೇಳುತ್ತಾರೆ. [QE]
12. [QS]ಆದುದರಿಂದ ಇಸ್ರಾಯೇಲರ ಸದಮಲಸ್ವಾಮಿಯು ಹೀಗೆನ್ನುತ್ತಾನೆ, [QE][QS]“ನೀವು ಈ ನನ್ನ ಮಾತನ್ನು ಅಸಡ್ಡೆಮಾಡಿ, [QE][QS]ಬಲಾತ್ಕಾರ ಕುಯುಕ್ತಿಗಳನ್ನು ನಂಬಿ, [QE]
13. [QS]ಅವುಗಳನ್ನೇ ಆಧಾರ ಮಾಡಿಕೊಂಡಿದ್ದರಿಂದ ಎತ್ತರವಾದ ಗೋಡೆಯ ಒಂದು ಭಾಗವು ಬಾಗುತ್ತಾ, [QE][QS]ತಟ್ಟನೆ ಕ್ಷಣಮಾತ್ರದಲ್ಲಿ ಕಳಚಿಕೊಳ್ಳುವ ಹಾಗೆ, [QE][QS]ನಿಮ್ಮ ಅಪರಾಧವೂ ನಿಮಗೆ ಅಪಾಯಕರವಾಗುವುದು.” [QE]
14. [QS]ಉರಿಯಿಂದ ಕೆಂಡವನ್ನು ತೆಗೆಯುವುದಕ್ಕಾಗಲಿ, ಬಾವಿಯಿಂದ ನೀರನ್ನು ತೆಗೆಯುವುದಕ್ಕಾಗಲಿ, [QE][QS]ಬೋಕಿಯ ತುಂಡುಗಳಲ್ಲಿ ಒಂದೂ ಉಳಿಯದಂತೆ, [QE][QS]ಒಬ್ಬನು ಕುಂಬಾರನ ಗಡಿಗೆಯನ್ನು ಚೂರುಚೂರಾಗಿ ಒಡೆದು ಬಿಡುವ ರೀತಿಯಲ್ಲಿ ಆತನು ಆ ಗೋಡೆಯನ್ನು ನಾಶಮಾಡುವನು. [QE]
15. [QS]ಇಸ್ರಾಯೇಲರ ಸದಮಲಸ್ವಾಮಿಯಾಗಿರುವ ಕರ್ತನಾದ ಯೆಹೋವನು, [QE][QS]“ನೀವು ಪರಿವರ್ತನೆಗೊಂಡು ಸುಮ್ಮನಿದ್ದರೆ ನಿಮಗೆ ರಕ್ಷಣೆಯಾಗುವುದು; ಶಾಂತರಾಗಿ ಭರವಸದಿಂದಿರುವುದೇ ನಿಮಗೆ ಬಲ ಎಂದು ಹೇಳಿದ್ದರೂ, [QE][QS]ನೀವು ಒಪ್ಪಿಕೊಂಡಿಲ್ಲ. [QE]
16. [QS]ನೀವು, ‘ಬೇಡವೇ ಬೇಡ, [QE][QS]ಕುದುರೆಗಳ ಮೇಲೆ ಓಡುವೆವು’ ಎಂದುಕೊಂಡಿದ್ದರಿಂದ ನೀವು ಓಡಿಯೇ ಹೋಗುವಿರಿ, [QE][QS]ನೀವು, ‘ವೇಗವಾಗಿ ಸವಾರಿ ಮಾಡುವೆವು’ ಎಂದುಕೊಂಡಿದ್ದರಿಂದ ವೇಗಿಗಳೇ ನಿಮ್ಮನ್ನು ಅಟ್ಟಿಬಿಡುವರು. [QE]
17. [QS]ಒಬ್ಬನ ಬೆದರಿಕೆಗೆ ಒಂದು ಸಾವಿರ ಜನರು ಓಡುವರು; [QE][QS]ಐವರು ಬೆದರಿಸುವುದರಿಂದ ನೀವು ಓಡಿಹೋಗುವಿರಿ; [QE][QS]ಕಟ್ಟಕಡೆಗೆ ಬೆಟ್ಟದ ಶಿಖರದಲ್ಲಿನ ಸ್ತಂಭದ ಹಾಗೂ ಗುಡ್ಡದ ಮೇಲಿನ ಕಂಬದಂತೆಯೂ ಒಂಟಿಯಾಗಿ ಉಳಿಯುವಿರಿ.” [QE]
18. {#1ಯೆಹೂದ್ಯರ ಮುಂದಿನ ವಿಧೇಯತೆ ಮತ್ತು ಸುಸ್ಥಿತಿಯೂ } [QS]ಹೀಗಿರಲು ಯೆಹೋವನು ನಿಮಗೆ ಕೃಪೆತೋರಿಸಬೇಕೆಂದು ಕಾದಿರುವನು; ನಿಮ್ಮನ್ನು ಕರುಣಿಸಬೇಕೆಂದು ಉನ್ನತೋನ್ನತವಾಗಿ ಕಾಣಿಸಿಕೊಳ್ಳುವನು; [QE][QS]ಯೆಹೋವನು ನ್ಯಾಯಸ್ವರೂಪನಾದ ದೇವರು; ಆತನಿಗಾಗಿ ಕಾದಿರುವವರೆಲ್ಲರೂ ಧನ್ಯರು. [QE]
19. [QS]ಯೆರೂಸಲೇಮಿನಲ್ಲಿ ವಾಸಿಸುವ ಚೀಯೋನಿನ ಜನರೇ, ನೀವು ಇನ್ನು ಅಳುವುದೇ ಇಲ್ಲ; ನೀವು ಕೂಗಿ ದುಃಖಿಸಿದ ಶಬ್ದವನ್ನು ಆತನು ಕೇಳಿ, [QE][QS]ನಿಮಗೆ ಕೃಪೆ ತೋರಿಸೇ ತೋರಿಸುವನು; ಕೇಳಿದ ಕೂಡಲೆ ನಿಮಗೆ ಸದುತ್ತರವನ್ನು ದಯಪಾಲಿಸುವನು. [QE]
20. [QS]ಕರ್ತನು ಕಷ್ಟವನ್ನು, ಶ್ರಮೆಯನ್ನು ನಿಮಗೆ ಅನ್ನಪಾನಗಳನ್ನಾಗಿ ಕೊಟ್ಟರೂ, [QE][QS]ನಿಮ್ಮ ಬೋಧಕನು ಇನ್ನು ಮರೆಯಾಗಿರನು, [QE][QS]ನಿಮ್ಮ ಬೋಧಕನನ್ನು ಕಣ್ಣಾರೆ ಕಾಣುವಿರಿ. [QE]
21. [QS]ನೀವು ಬಲಕ್ಕಾಗಲಿ, ಎಡಕ್ಕಾಗಲಿ ತಿರುಗಿಕೊಳ್ಳುವಾಗ, [QE][QS]“ಇದೇ ಮಾರ್ಗ, ಇದರಲ್ಲೇ ನಡೆಯಿರಿ” ಎಂದು ನಿಮ್ಮ ಹಿಂದೆ ಆಡುವ ಮಾತು ನಿಮ್ಮ ಕಿವಿಗೆ ಬೀಳುವುದು. [QE]
22. [QS]ಕೆತ್ತಿದ ನಿಮ್ಮ ವಿಗ್ರಹಗಳ ಬೆಳ್ಳಿಯ ಕವಚಗಳನ್ನೂ, [QE][QS]ಎರಕದ ನಿಮ್ಮ ಬೊಂಬೆಗಳ ಬಂಗಾರದ ಹೊದಿಕೆಯನ್ನು ನೀವು ಹೊಲಸುಮಾಡಿ ಆ ವಿಗ್ರಹಗಳನ್ನು, “ತೊಲಗಿ ಹೋಗಿರಿ” ಎಂದು ಹೊಲೆಯಾದ ಬಟ್ಟೆಯಂತೆ ಬಿಸಾಡುವಿರಿ. [QE]
23. [QS]ಆಗ ನೀವು ಹೊಲದಲ್ಲಿ ಬೀಜ ಬಿತ್ತುವುದಕ್ಕೆ ಆತನು ಬಿತ್ತನೆಯ ಮಳೆಯನ್ನು ದಯಪಾಲಿಸುವನು; [QE][QS]ನೆಲದ ಬೆಳೆಯಿಂದ ಸಾರವಾದ ಆಹಾರವನ್ನು ಸಮೃದ್ಧಿಯಾಗಿ ಒದಗಿಸುವನು; [QE][QS]ಆ ದಿನದಲ್ಲಿ ನಿಮ್ಮ ಮಂದೆಗಳು ದೊಡ್ಡ ದೊಡ್ಡ ಕಾವಲುಗಳಲ್ಲಿ ಮೇಯುವವು. [QE]
24. [QS]ಹೊಲವನ್ನು ಊಳುವ ಎತ್ತು, ಗಂಡು ಕತ್ತೆಗಳು ಮೊರದಿಂದಲೂ, [QE][QS]ಕವೆಗೋಲಿನಿಂದಲೂ ತೂರಿದ ರುಚಿಕರವಾದ ಮೇವನ್ನು ತಿನ್ನುವವು. [QE]
25. [QS]ಗೋಪುರಗಳು ಬಿದ್ದು ಹೋಗುವ ಮಹಾಸಂಹಾರದ ದಿನದಲ್ಲಿ ಪ್ರತಿಯೊಂದು ಉನ್ನತ ಪರ್ವತದಲ್ಲಿಯೂ, [QE][QS]ಎತ್ತರವಾದ ಗುಡ್ಡದಲ್ಲಿಯೂ ತೊರೆಗಳು, ನೀರಿನ ಕಾಲುವೆಗಳು ಹರಿಯುತ್ತಿರುವವು. [QE]
26. [QS]ಇದಲ್ಲದೆ, ಯೆಹೋವನು ತನ್ನ ಜನರ ವ್ರಣವನ್ನು ಕಟ್ಟಿ, [QE][QS]ಅವರ ಪೆಟ್ಟಿನ ಗಾಯವನ್ನು ಗುಣ ಮಾಡುವ ದಿನದಲ್ಲಿ ಚಂದ್ರನ ಬೆಳಕು ಸೂರ್ಯನ ಬೆಳಕಿನ ಹಾಗೆಯೂ ಮತ್ತು ಸೂರ್ಯನ ಬೆಳಕು ಏಳರಷ್ಟು ಪ್ರಕಾಶಮಾನವಾಗಿತ್ತು. [QE]
27. {#1ಯೆಹೋವನಿಂದ ಅಶ್ಶೂರ್ಯರಿಗಾದ ವಿನಾಶ } [QS]ಇಗೋ, ಯೆಹೋವನ ನಾಮವು ದೂರದಿಂದ ಬರುತ್ತದೆ; ಆತನ ಕೋಪವು ಬೆಂಕಿಯಂತೆ ಉರಿಯುತ್ತದೆ, ಅದರಿಂದೇಳುವ ಹೊಗೆಯು ದಟ್ಟವಾಗಿದೆ; [QE][QS]ಆತನ ತುಟಿಗಳು ರೋಷದಿಂದ ತುಂಬಿವೆ, ಆತನ ನಾಲಿಗೆಯು ನುಂಗುವ ಅಗ್ನಿಯಂತಿದೆ. [QE]
28. [QS]ಆತನ ಶ್ವಾಸವು ತುಂಬಿ ತುಳುಕಿ ಕಂಠದವರೆಗೂ ಏರುವ ತೊರೆಯಂತಿದೆ. [QE][QS]ಜನಾಂಗಗಳನ್ನೂ ಸ್ವಲ್ಪವೂ ಉಳಿಸದೆ ಜರಡಿಯಿಂದ ಜಾಲಿಸುವುದಕ್ಕೆ ಬರುತ್ತಾನೆ. ದಾರಿತಪ್ಪಿಸುವ ಕಡಿವಾಣವು ಜನಗಳ ದವಡೆಗಳಲ್ಲಿರುವುದು. [QE]
29. [QS]ನೀವೋ, ಹಬ್ಬದ ಸೌರಣೆಯ ರಾತ್ರಿಯಲ್ಲೋ ಎಂಬಂತೆ ಹಾಡುವಿರಿ. [QE][QS]ಇಸ್ರಾಯೇಲರ ಶರಣನ ಸಾನ್ನಿಧ್ಯವನ್ನು ಬಯಸಿ, ಯೆಹೋವನ ಪರ್ವತಕ್ಕೆ ಕೊಳಲಿನ ನಾದದೊಡನೆ ಹೋಗುವವನಂತೆ ಹೃದಯಾನಂದಪಡುವಿರಿ. [QE]
30. [QS]ಆಗ ಯೆಹೋವನು ತನ್ನ ಗಂಭೀರವಾದ ಧ್ವನಿಯನ್ನು ಕೇಳಮಾಡಿ, [QE][QS]ತೀವ್ರಕೋಪ, ಕಬಳಿಸುವ ಅಗ್ನಿಜ್ವಾಲೆ, ಬಿರುಗಾಳಿ, ಅತಿವೃಷ್ಟಿ, ಕಲ್ಮಳೆ ಇವುಗಳಿಂದ ತನ್ನ ಶಿಕ್ಷಾಹಸ್ತವನ್ನು ತೋರ್ಪಡಿಸುವನು. [QE]
31. [QS]ಹೀಗೆ ಯೆಹೋವನು ದಂಡದಿಂದ ದಂಡಿಸುವಾಗ ಅಶ್ಶೂರ್ಯರು ಆತನ ಧ್ವನಿಯಿಂದಲೇ ನಾಶವಾಗುವರು. [QE]
32. [QS]ಮತ್ತು ಯೆಹೋವನು ಸಂಕಲ್ಪಿಸಿದ ದಂಡದ ಪ್ರತಿಯೊಂದು ಪೆಟ್ಟು, [QE][QS]ದಮ್ಮಡಿ, ಕಿನ್ನರಿಗಳ ನಾದದೊಡನೆ ಅವರ ಮೇಲೆ ಬೀಳುವುದು. ಆತನು ಅವರೊಂದಿಗೆ ಹೋರಾಡುತ್ತಾ ಯುದ್ಧಮಾಡುವನು. [QE]
33. [QS]ಪುರಾತನ ಕಾಲದಿಂದಲೂ ಅಗ್ನಿಕುಂಡವು ಸಿದ್ಧವಾಗಿದೆ. ಹೌದು, ರಾಜನಿಗೆ ಅದು ಸಿದ್ಧವಾಗಿದೆ. ಅದನ್ನು ಆಳವಾಗಿಯೂ, ಅಗಲವಾಗಿಯೂ ಮಾಡಿದ್ದಾನೆ. [QE][QS]ಅದರಲ್ಲಿನ ಚಿತೆಯೊಳಗೆ ಬೆಂಕಿಯೂ ಬೇಕಾದಷ್ಟು ಮರದಕೊರಡುಗಳೂ ಇವೆ; [QE][QS]ಯೆಹೋವನ ಶ್ವಾಸವು ಗಂಧಕದ ಪ್ರವಾಹದಂತೆ ಅದನ್ನು ಉರಿಸುವುದು. [QE]