1. {ಮುಂದಿನ ಧರ್ಮರಾಜ್ಯದ ಸುಲಕ್ಷಣ} PS ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು.
|
2. ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ,
ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು. |
4. ಆತುರಗಾರರ ಹೃದಯವು ತಿಳಿವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆಯು ಸ್ವಚ್ಛವಾಗಿಯೂ, ಶೀಘ್ರವಾಗಿಯೂ ಮಾತನಾಡುವುದು.
|
6. ಏಕೆಂದರೆ ನೀಚನು ನೀಚವಾಗಿ ಮಾತನಾಡುವನು.
ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು. |
7. ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ,
ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು. |
9. {ಯೆರೂಸಲೇಮಿನ ನಿಶ್ಚಿಂತ ಹೆಂಗಸರನ್ನು ಎಚ್ಚರಿಸಿದ್ದು} PS ನಿಶ್ಚಿಂತರಾದ ಸ್ತ್ರೀಯರೇ, ಏಳಿರಿ, ನನ್ನ ಧ್ವನಿಯನ್ನು ಕೇಳಿರಿ.
ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ! |
10. ನಿರ್ಭೀತರೇ, ಒಂದು ವರ್ಷದ ನಂತರ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ.
ಆಗ ದ್ರಾಕ್ಷಿಯ ಕೊಯ್ಲು ಇಲ್ಲದೆ ಹೋಗುವುದು, ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ. |
11. ನಿಶ್ಚಿಂತರಾದ ಸ್ತ್ರೀಯರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ!
ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. |
13. ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ.
ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ. |
14. ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ,
ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ, ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು. PEPS |
15. ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು,
ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು. |