1. {#1ಮುಂದಿನ ಧರ್ಮರಾಜ್ಯದ ಸುಲಕ್ಷಣ } [QS]ಇಗೋ, ಒಬ್ಬ ರಾಜನು ನೀತಿಗನುಸಾರವಾಗಿ ಆಳುವನು. ಅಧಿಪತಿಗಳು ನ್ಯಾಯದಿಂದ ದೊರೆತನ ಮಾಡುವರು. [QE]
2. [QS]ಆಗ ಪ್ರತಿ ಮನುಷ್ಯನು ಗಾಳಿಯಲ್ಲಿ ಅಡಗಿಕೊಳ್ಳುವಂತೆಯೂ, ಅತಿವೃಷ್ಟಿಯಲ್ಲಿ ಮರೆಮಾಡಿಕೊಳ್ಳುವಂತೆಯೂ, [QE][QS]ಅರಣ್ಯದಲ್ಲಿನ ನೀರಿನ ಕಾಲುವೆಗಳ ಹಾಗೂ, ಬೆಂಗಾಡಿನಲ್ಲಿ ದೊಡ್ಡ ಬಂಡೆಯ ನೆರಳಿನೋಪಾದಿಯಲ್ಲಿಯೂ ಇರುವನು. [QE]
3. [QS]ಆಗ ನೋಡುವವರ ಕಣ್ಣು ಮೊಬ್ಬಾಗದು, ಕೇಳುವವರ ಕಿವಿ ಮಂದವಾಗದು. [QE]
4. [QS]ಆತುರಗಾರರ ಹೃದಯವು ತಿಳಿವಳಿಕೆಯನ್ನು ಗ್ರಹಿಸುವುದು. ತೊದಲು ಮಾತನಾಡುವವರ ನಾಲಿಗೆಯು ಸ್ವಚ್ಛವಾಗಿಯೂ, ಶೀಘ್ರವಾಗಿಯೂ ಮಾತನಾಡುವುದು. [QE]
5. [QS]ಇನ್ನು ಮೇಲೆ ನೀಚನು ಘನವಂತನೆನಿಸಿಕೊಳ್ಳನು. ಕಳ್ಳನು ಮಹನೀಯನೆನಿಸಿಕೊಳ್ಳನು. [QE]
6. [QS]ಏಕೆಂದರೆ ನೀಚನು ನೀಚವಾಗಿ ಮಾತನಾಡುವನು. [QE][QS]ಅವನ ಹೃದಯವು ಕೇಡನ್ನು ಕಲ್ಪಿಸಿ, ನಡೆಯದೆ ಇರುವುದನ್ನು ನಡಿಸಿ ಯೆಹೋವನಿಗೆ ವಿರುದ್ಧವಾಗಿ ಅಸತ್ಯವನ್ನಾಡಿ, [QE][QS]ಹಸಿದವನ ಆಶೆಯನ್ನು ಬರಿದುಮಾಡಿ, ಬಾಯಾರಿದವನ ಪಾನವನ್ನು ತಪ್ಪಿಸುವುದು. [QE]
7. [QS]ಮೋಸಗಾರನ ಆಯುಧಗಳು ಕೆಟ್ಟವುಗಳೇ, ದೀನದರಿದ್ರನು ನ್ಯಾಯವಾದದ್ದನ್ನು ಮಾತನಾಡಿದರೂ, [QE][QS]ಅವರನ್ನು ಸುಳ್ಳುಮಾತುಗಳಿಂದ ಕೆಡಿಸುವುದಕ್ಕೆ ಕುಯುಕ್ತಿಗಳನ್ನು ಕಲ್ಪಿಸುವನು. [QE]
8. [QS]ಘನವಂತನಾದರೋ ಘನಕಾರ್ಯಗಳನ್ನು ಕಲ್ಪಿಸುವನು. ಘನವಾದವುಗಳಲ್ಲಿಯೇ ನಿರತನಾಗಿರುವನು. [QE]
9. {#1ಯೆರೂಸಲೇಮಿನ ನಿಶ್ಚಿಂತ ಹೆಂಗಸರನ್ನು ಎಚ್ಚರಿಸಿದ್ದು } [PS]ನಿಶ್ಚಿಂತರಾದ ಸ್ತ್ರೀಯರೇ, ಏಳಿರಿ, ನನ್ನ ಧ್ವನಿಯನ್ನು ಕೇಳಿರಿ. [PE][QS]ಭಯವಿಲ್ಲದ ಹೆಣ್ಣು ಮಕ್ಕಳೇ, ನನ್ನ ಮಾತಿಗೆ ಕಿವಿಗೊಡಿರಿ! [QE]
10. [QS]ನಿರ್ಭೀತರೇ, ಒಂದು ವರ್ಷದ ನಂತರ ಕೆಲವು ದಿನಗಳಲ್ಲಿ ಕಳವಳಗೊಳ್ಳುವಿರಿ. [QE][QS]ಆಗ ದ್ರಾಕ್ಷಿಯ ಕೊಯ್ಲು ಇಲ್ಲದೆ ಹೋಗುವುದು, ಯಾವ ಬೆಳೆಯೂ ನಿಮಗೆ ದೊರೆಯುವುದಿಲ್ಲ. [QE]
11. [QS]ನಿಶ್ಚಿಂತರಾದ ಸ್ತ್ರೀಯರೇ, ನಡುಗಿರಿ! ನಿರ್ಭೀತರೇ, ಕಳವಳಗೊಳ್ಳಿರಿ! [QE][QS]ನಿಮ್ಮ ಬಟ್ಟೆಯನ್ನು ಕಿತ್ತು ಹಾಕಿ ಬೆತ್ತಲೆಯಾಗಿ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಳ್ಳಿರಿ. [QE]
12. [QS]ಇಷ್ಟವಾದ ಹೊಲಗಳ ಮತ್ತು ಫಲವತ್ತಾದ ದ್ರಾಕ್ಷಾಲತೆಗಾಗಿ ಎದುರುನೋಡಿರಿ. [QE]
13. [QS]ನನ್ನ ಜನರ ಹೊಲಗದ್ದೆಗಳಲ್ಲಿ ಮುಳ್ಳುಪೊದೆಗಳು ಹುಟ್ಟಿಕೊಂಡಿವೆ. [QE][QS]ಉತ್ಸಾಹದಿಂದ ಕೂಡಿದ್ದ ಎಲ್ಲಾ ಮನೆಗಳ ಮತ್ತು ಪಟ್ಟಣಗಳಲ್ಲೂ ಮುಳ್ಳುಗಿಡಗಳು ಹುಟ್ಟಿಕೊಂಡಿವೆ. [QE]
14. [QS]ಅರಮನೆಯು ಪಾಳುಬೀಳುವುದು, ಗಿಜಿಗುಟ್ಟುವ ಪಟ್ಟಣವು ನಿರ್ಜನವಾಗುವುದು, ಓಫೆಲ್ ಗುಡ್ಡವೂ, [QE][QS]ಗೋಪುರವೂ ಶಾಶ್ವತವಾದ ಗುಹೆಗಳಾಗಿಯೂ, [QE][QS]ಕಾಡುಕತ್ತೆಗಳಿಗೆ ಉಲ್ಲಾಸಕರವಾದ ಸ್ಥಳವಾಗಿಯೂ, ದನಕುರಿಗಳ ಹಿಂಡುಗಳಿಗೆ ಹುಲ್ಲುಗಾವಲುಗಳಾಗಿಯೂ ಇರುವುದು. [QE]
15. [PS]ಬಳಿಕ ಉನ್ನತಲೋಕದಿಂದ ದಿವ್ಯಾತ್ಮಧಾರೆಯು ನಮ್ಮ ಮೇಲೆ ಸುರಿಸಲ್ಪಡುವುದು. ಆಗ ಅರಣ್ಯವು ತೋಟವಾಗುವುದು, [PE][QS]ಈಗಿನ ತೋಟವು (ಮುಂದೆ ಬರುವವರಿಗೆ) ಅರಣ್ಯವಾಗಿ ಕಾಣಿಸುವುದು. [QE]
16. [QS]ನ್ಯಾಯವು ಅಡವಿಯಲ್ಲಿ ನೆಲೆಗೊಳ್ಳುವುದು, ಧರ್ಮವು ತೋಟದಲ್ಲಿ ಇದ್ದೇ ಇರುವುದು. [QE]
17. [QS]ನೀತಿಯ ಪರಿಣಾಮ ಶಾಂತಿ; ನೀತಿಯ ಫಲವು, ನಿತ್ಯವಾದ ಸಮಾಧಾನ ಮತ್ತು ನಿತ್ಯವಾದ ಭರವಸೆ ಆಗಿರುವವು. [QE]
18. [QS]ನನ್ನ ಜನರು ಸಮಾಧಾನದ ನಿವಾಸದಲ್ಲಿಯೂ, ನಿರ್ಭಯವಾದ ನಿಲಯಗಳಲ್ಲಿಯೂ, ನೆಮ್ಮದಿಯ ಆಶ್ರಯಗಳಲ್ಲಿಯೂ ನೆಲೆಗೊಳ್ಳುವರು. [QE]
19. [QS]ಆದರೆ ಕಲ್ಮಳೆ ಸುರಿಯಲು ವನವು ಹಾಳಾಗುವುದು, ಪಟ್ಟಣವು ನೆಲಸಮವಾಗುವುದು.
20. ನೀರಾವರಿಗಳಲ್ಲೆಲ್ಲಾ ಬೀಜ ಬಿತ್ತುತ್ತಲೂ, ದನ ಕತ್ತೆಗಳನ್ನು ಮೇಯಲು ಬಿಡುತ್ತಲೂ ಇರುವ ನೀವು ಧನ್ಯರೇ ಸರಿ! [QE]