1. {#1ಅಪಾಯವೂ ಮುಂದಿನ ಸಂರಕ್ಷಣೆಯೂ } [QS]ಸೂರೆಯಾಗದಿದ್ದರೂ ಸೂರೆಮಾಡಿದಿ! [QE][QS2]ಬಾಧೆಪಡದಿದ್ದರೂ ಬಾಧಿಸಿದಿ! [QE][QS]ನಿನ್ನ ಗತಿಯನ್ನು ಏನು ಹೇಳಲಿ; ನೀನು ಸೂರೆಮಾಡಿ ಬಿಟ್ಟ ಮೇಲೆ ನೀನೂ ಸೂರೆಯಾಗುವಿ. [QE][QS2]ಬಾಧಿಸಿ ಬಿಟ್ಟ ಮೇಲೆ ನಿನ್ನನ್ನೂ ಬಾಧಿಸುವರು. [QE]
2. [QS]ಯೆಹೋವನೇ, ನಮ್ಮನ್ನು ಕರುಣಿಸು! ನಿನ್ನನ್ನೇ ನಿರೀಕ್ಷಿಸಿಕೊಂಡಿದ್ದೇವೆ. [QE][QS]ಪ್ರತಿಮುಂಜಾನೆಯೂ ನಮಗೆ ಭುಜಬಲವಾಗಿಯೂ, ಇಕ್ಕಟ್ಟಿನಲ್ಲಿ ನಮಗೆ ರಕ್ಷಣೆಯಾಗಿಯೂ ಇರು. [QE]
3. [QS]ಭೋರ್ಗರೆಯುವ ಶಬ್ದಕ್ಕೆ ಜನಾಂಗಗಳು ಓಡುವವು; ನೀನು ಏಳುವಾಗ ರಾಜ್ಯಗಳು ದಿಕ್ಕಾಪಾಲಾಗುವವು. [QE]
4. [QS]ನಿಮ್ಮ ಕೊಳ್ಳೆಯು ಮಿಡತೆಗಳು ಕೂಡಿಸುವ ಹಾಗೆ ಕೂಡಿಸಲ್ಪಡುವುದು, ಮಿಡತೆಗಳು ಓಡಾಡುವ ಹಾಗೆ ಮನುಷ್ಯರು ಅದರ ಮೇಲೆ ಓಡಾಡುವರು. [QE]
5. [QS]ಯೆಹೋವನು ಉನ್ನತೋನ್ನತನಾಗಿದ್ದಾನೆ. ಆತನು ಮೇಲಣ ಲೋಕದಲ್ಲಿ ವಾಸಿಸುತ್ತಾನೆ. ಚೀಯೋನನ್ನು ನೀತಿನ್ಯಾಯಗಳಿಂದ ತುಂಬಿಸಿದ್ದಾನೆ. [QE]
6. [QS]ಜ್ಞಾನವೂ, ತಿಳಿವಳಿಕೆಯೂ, [QE][QS]ರಕ್ಷಣಾಕಾರ್ಯದ ಸಮೃದ್ಧಿಯೂ ಇರುವುದರಿಂದ ನಿನ್ನ ಕಾಲದಲ್ಲಿ ಸ್ಥೈರ್ಯವಿರುವುದು; ಯೆಹೋವನ ಮೇಲಣ ಭಯಭಕ್ತಿಯು ನಿನಗೆ[* ನಿನಗೆ ಅಥವಾ ಚೀಯೋನಿಗೆ ] ನಿಧಿಯಾಗುವುದು. [QE]
7.
8. [PS]ಇಗೋ, ಅವರ ಸಿಂಹವೀರರು ಹೊರಗೆ ಹಾಹಾಕಾರ ಮಾಡುತ್ತಿದ್ದಾರೆ, ಸಮಾಧಾನದ ರಾಯಭಾರಿಗಳು ಘೋರವಾಗಿ ಅಳುತ್ತಿದ್ದಾರೆ. [PE][QS]ರಾಜಮಾರ್ಗಗಳು ಹಾಳಾಗಿವೆ. ಹಾದಿಯಲ್ಲಿ ಹೋಗುವವರು ಇಲ್ಲವೇ ಇಲ್ಲ; [QE][QS]ಶತ್ರುವು ಒಪ್ಪಂದವನ್ನು ಮೀರಿದ್ದಾನೆ, ಪಟ್ಟಣಗಳನ್ನು[† ಪಟ್ಟಣಗಳನ್ನು ಅಥವಾ ಸಾಕ್ಷಿಗಳನ್ನು. ] ತಿರಸ್ಕರಿಸಿದ್ದಾನೆ, ಯಾವ ಮನುಷ್ಯರನ್ನೂ ಗಣನೆಗೆ ತಾರನು. [QE]
9. [QS]ದೇಶವು ಪ್ರಲಾಪಿಸಿ ಕುಗ್ಗುತ್ತದೆ, ಲೆಬನೋನ್ ನಾಚಿಕೊಂಡು ಒಣಗುತ್ತದೆ, [QE][QS]ಶಾರೋನ್ ಬೆಂಗಾಡಾಗಿದೆ, ಬಾಷಾನ್ ಮತ್ತು ಕರ್ಮೆಲ್ ಎಲೆಗಳನ್ನು ಉದುರಿಸಿಬಿಟ್ಟಿವೆ. [QE]
10. [QS]ಯೆಹೋವನು ಹೀಗೆನ್ನುತ್ತಾನೆ, “ನಾನು ಈಗ ಏಳುವೆನು, ಈಗಲೇ ನನ್ನನ್ನು ಉನ್ನತಪಡಿಸಿಕೊಳ್ಳುವೆನು, ಈಗ ಉನ್ನತೋನ್ನತನಾಗುವೆನು. [QE]
11. [QS]ನೀವು ಹೊಟ್ಟನ್ನು ಗರ್ಭಧರಿಸಿ ಕೂಳೆಯನ್ನು ಹೆರುವಿರಿ. ನಿಮ್ಮ ಉಸಿರೇ ನಿಮ್ಮನ್ನು ನುಂಗುವ ಜ್ವಾಲೆಯಾಗುವುದು. [QE]
12. [QS]ಜನಾಂಗಗಳು ಸುಟ್ಟ ಸುಣ್ಣದ ಹಾಗಿರುವವು. ಕತ್ತರಿಸಿದ ಮುಳ್ಳುಕೊಂಪೆಗೆ ಬೆಂಕಿಹಚ್ಚಿದಂತಾಗುವುದು. [QE]
13. [QS]ದೂರದಲ್ಲಿರುವವರೇ, ನಾನು ಮಾಡಿದ್ದನ್ನು ಕೇಳಿರಿ. ಸಮೀಪದಲ್ಲಿರುವವರೇ, ನನ್ನ ಪರಾಕ್ರಮವನ್ನು ತಿಳಿದುಕೊಳ್ಳಿರಿ. [QE]
14. {#1ಯೆಹೋವನ ರಕ್ಷಣೆಯನ್ನು ಹೊಂದತಕ್ಕವರು } [PS]“ಚೀಯೋನಿನಲ್ಲಿರುವ ಪಾಪಿಗಳು ಹೆದರುತ್ತಾರೆ. ಆ ಭ್ರಷ್ಟರು ನಡುಕಕ್ಕೆ ಒಳಗಾಗಿ, [PE][QS]ನಮ್ಮಲ್ಲಿ ಯಾರು ನುಂಗುವ ಅಗ್ನಿಯ ಸಂಗಡ ವಾಸಿಸಬಲ್ಲರು? ನಮ್ಮಲ್ಲಿ ಯಾರು ಸದಾ ಉರಿಯುವ ಜ್ವಾಲೆಗಳೊಡನೆ ತಂಗುವರು” ಎಂದುಕೊಳ್ಳುತ್ತಾರೆ. [QE]
15. [QS]ಸನ್ಮಾರ್ಗದಲ್ಲಿ ನಡೆದು, ಯಥಾರ್ಥವಾಗಿ ನುಡಿದು, ದೋಚಿಕೊಂಡ ಲಾಭ ಬೇಡವೆಂದು, [QE][QS]ಲಂಚಮುಟ್ಟದಂತೆ ಕೈ ಒದರಿ, ಕೊಲೆಯ ಮಾತಿಗೆ ಕಿವಿಗೊಡದೆ, ಕೆಟ್ಟದ್ದನ್ನು ನೋಡದಂತೆ ಕಣ್ಣು ಮುಚ್ಚಿಕೊಳ್ಳುವವನೇ ಉನ್ನತಸನ್ನಿಧಾನದಲ್ಲಿ ವಾಸಿಸುವನು. [QE]
16. [QS]ಇವನಿಗೆ ಗಿರಿದುರ್ಗಗಳೇ, ಆಶ್ರಯ [QE][QS]ಅನ್ನವು ಉಚಿತವಾಗಿ ಒದಗುವುದು, ನೀರು ನಿಸ್ಸಂದೇಹವಾಗಿ ದೊರಕುವುದು. [QE]
17. {#1ಯೆರೂಸಲೇಮಿನ ಮುಂದಿನ ಸುಸ್ಥಿತಿ }
18. [PS]ನೀವು ಭೂಷಿತ ರಾಜನನ್ನು ಕಣ್ಣಾರೆ ದರ್ಶನ ಮಾಡುವಿರಿ. ಅತಿವಿಸ್ತಾರವಾದ ಸ್ವದೇಶವನ್ನು ನೀವು ಕಣ್ಣು ತುಂಬಾ ನೋಡುವಿರಿ. [PE][QS]ಆಗ ನೀವು ಹಿಂದಿನ ಭಯವನ್ನು ಮನಸ್ಸಿಗೆ ತಂದುಕೊಳ್ಳುತ್ತಾ, “ಕಪ್ಪವನ್ನು ಲೆಕ್ಕಿಸಿದವನು ಎಲ್ಲಿ? ತೂಕಮಾಡಿದವನು ಎಲ್ಲಿ? ಗೋಪುರಗಳನ್ನು ಎಣಿಸಿದವನು ಎಲ್ಲಿ?” ಎಂದುಕೊಳ್ಳುವಿರಿ. [QE]
19. [QS]ನಿಮಗೆ ತಿಳಿಯದ ಅನ್ಯಭಾಷೆಯನ್ನೂ, ನೀವು ಗ್ರಹಿಸಲಾರದ ತೊದಲು ಮಾತುಗಳನ್ನೂ ಆಡುವ ಆ ಕ್ರೂರ ಜನರನ್ನು ಇನ್ನು ಮುಂದೆ ನೋಡುವುದಿಲ್ಲ. [QE]
20. [QS]ನಮ್ಮ ಉತ್ಸವಗಳು ನಡೆಯುವ ಚೀಯೋನ್ ಪಟ್ಟಣವನ್ನು ದೃಷ್ಟಿಸಿರಿ, [QE][QS]ಯೆರೂಸಲೇಮ್ ನೆಮ್ಮದಿಯ ನಿವಾಸವಾಗಿಯೂ, [QE][QS]ಗೂಟಕೀಳದ, ಹಗ್ಗಹರಿಯದ ಒಂದೇ ಕಡೆ ಇರುವ ಗುಡಾರವಾಗಿಯೂ ಇರುವುದನ್ನು ನೀವು ಕಣ್ಣಾರೆ ಕಾಣುವಿರಿ. [QE]
21. [QS]ಅಲ್ಲಿ ಯೆಹೋವನು ಘನಹೊಂದಿದವನಾಗಿ ನದಿಸರೋವರಗಳಂತೆ ನಮ್ಮೊಂದಿಗಿರುವನು. [QE][QS]ಹುಟ್ಟುಗೋಲಿನ ದೋಣಿಯಾಗಲಿ, ದೊಡ್ಡ ಹಡಗಾಗಲಿ ಅದನ್ನು ದಾಟುವುದಿಲ್ಲ. [QE]
22. [QS]ಏಕೆಂದರೆ ಯೆಹೋವನು ನಮ್ಮ ನ್ಯಾಯಾಧಿಪತಿ, ಯೆಹೋವನು ನಮಗೆ ಆಜ್ಞೆಕೊಡುವಾತನು, ಯೆಹೋವನು ನಮ್ಮ ರಾಜನು, ಆತನೇ ನಮ್ಮನ್ನು ರಕ್ಷಿಸುವನು. [QE]
23. [QS]ನಿನ್ನ ಹಗ್ಗಗಳು ಸಡಿಲವಾಗಿ ಸ್ತಂಭದ ಪಾದವನ್ನು ಸ್ಥಿರಪಡಿಸಿಕೊಳ್ಳಲಾರದೆ ಹೋದವು, ಹಾಯಿಯನ್ನು ಮುದುರದಂತೆ ಹಿಡಿದಿರಲಿಕ್ಕೂ ಆಗಲಿಲ್ಲ. [QE][QS]ಆಗ ದೊಡ್ಡ ಸೂರೆಯು ಕೊಳ್ಳೆಯಾಗಿ ಹಂಚುವುದಕ್ಕೆ ಆಸ್ಪದವಾಯಿತು. ಕುಂಟರೂ ಸುಲಿಗೆ ಮಾಡಿದರು. [QE]
24. [QS]ಚೀಯೋನಿನ ಯಾವ ನಿವಾಸಿಯೂ “ನಾನು ಅಸ್ವಸ್ಥನು” ಎಂದು ಹೇಳುವುದಿಲ್ಲ. ಅಲ್ಲಿಯ ಜನರ ಪಾಪವು ಪರಿಹಾರವಾಗುವುದು. [QE]