ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆಶಾಯ
1. {ಬಾಬೆಲಿನ ಬಂದ ದೂತರು} [PS] ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬುವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.
2. ಹಿಜ್ಕೀಯನು ಬಂದ ದೂತರನ್ನು ಸಂತೋಷದಿಂದ ನೋಡಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದುದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ. [PE][PS]
3. ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹುದೂರ ದೇಶದಿಂದ ಬಾಬೆಲಿನಿಂದ ನನ್ನ ಬಳಿಗೆ ಬಂದವರು” ಎಂದು ಉತ್ತರಕೊಟ್ಟನು.
4. ಯೆಶಾಯನು ತಿರುಗಿ ಹಿಜ್ಕೀಯನಿಗೆ, “ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತು ಒಂದೂ ಇರುವುದಿಲ್ಲ” ಎಂದನು. [PE][PS]
5. ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನಿಗೆ, “ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳು.
6. ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲೇನೂ ಉಳಿಯುವುದಿಲ್ಲ. [PE][PS]
7. “ಬಾಬೆಲಿನ ಅರಸನು ಬಂದು, ನೀನು ಪಡೆದ ಮಕ್ಕಳನ್ನು ತೆಗೆದುಕೊಂಡು ಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಅನ್ನುತ್ತಾನೆ” ಎಂದು ಹೇಳಿದನು.
8. “ಹೇಗೂ ನನ್ನ ಜೀವಮಾನದಲ್ಲಿ ತಪ್ಪದೆ ಸೌಭಾಗ್ಯವಿರುವುದು” ಎಂದುಕೊಂಡು ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ” ಎಂದು ಉತ್ತರಕೊಟ್ಟನು. [PE]

Notes

No Verse Added

Total 66 Chapters, Current Chapter 39 of Total Chapters 66
ಯೆಶಾಯ 39
1. {ಬಾಬೆಲಿನ ಬಂದ ದೂತರು} PS ಅದೇ ಕಾಲದಲ್ಲಿ ಬಲದಾನನ ಮಗನೂ ಬಾಬೆಲಿನ ಅರಸನೂ ಆದ ಮೆರೋದಕ ಬಲದಾನನೆಂಬುವನು ಹಿಜ್ಕೀಯನು ಅಸ್ವಸ್ಥನಾಗಿದ್ದು ಗುಣಹೊಂದಿದನು ಎಂದು ಕೇಳಿ ಅವನಿಗೆ ಪತ್ರವನ್ನೂ, ಬಹುಮಾನವನ್ನೂ ಕಳುಹಿಸಿದನು.
2. ಹಿಜ್ಕೀಯನು ಬಂದ ದೂತರನ್ನು ಸಂತೋಷದಿಂದ ನೋಡಿ ಅವರಿಗೆ ಬೆಳ್ಳಿ, ಬಂಗಾರ, ಸುಗಂಧದ್ರವ್ಯ, ಪರಿಮಳತೈಲ ಮೊದಲಾದ ಪದಾರ್ಥಗಳಿರುವ ಮನೆಯನ್ನೂ, ಆಯುಧಶಾಲೆಯನ್ನೂ, ತನ್ನ ಭಂಡಾರದಲ್ಲಿದುದ್ದೆಲ್ಲವನ್ನೂ ತೋರಿಸಿದನು. ಅವನ ಅರಮನೆಯಲ್ಲಿಯೂ ರಾಜ್ಯದಲ್ಲಿಯೂ ಅವರಿಗೆ ತೋರಿಸದಿದ್ದ ವಸ್ತುವು ಒಂದೂ ಇರಲಿಲ್ಲ. PEPS
3. ಆಗ ಪ್ರವಾದಿಯಾದ ಯೆಶಾಯನು ಅರಸನಾದ ಹಿಜ್ಕೀಯನ ಬಳಿಗೆ ಬಂದು ಅವನಿಗೆ, “ಆ ಮನುಷ್ಯರು ಎಲ್ಲಿಯವರು? ಏನು ಹೇಳಿದರು?” ಎಂದು ಕೇಳಲು ಅವನು, “ಅವರು ಬಹುದೂರ ದೇಶದಿಂದ ಬಾಬೆಲಿನಿಂದ ನನ್ನ ಬಳಿಗೆ ಬಂದವರು” ಎಂದು ಉತ್ತರಕೊಟ್ಟನು.
4. ಯೆಶಾಯನು ತಿರುಗಿ ಹಿಜ್ಕೀಯನಿಗೆ, “ಅವರು ನಿನ್ನ ಅರಮನೆಯಲ್ಲಿ ಏನು ನೋಡಿದರು?” ಎಂದು ಕೇಳಲು ಅವನು, “ಅರಮನೆಯಲ್ಲಿರುವುದೆಲ್ಲವನ್ನೂ ನೋಡಿದರು. ನನ್ನ ಭಂಡಾರದಲ್ಲಿ ನಾನು ಅವರಿಗೆ ತೋರಿಸದಿದ್ದ ವಸ್ತು ಒಂದೂ ಇರುವುದಿಲ್ಲ” ಎಂದನು. PEPS
5. ಆಗ ಪ್ರವಾದಿಯಾದ ಯೆಶಾಯನು ಹಿಜ್ಕೀಯನಿಗೆ, “ಸೇನಾಧೀಶ್ವರನಾದ ಯೆಹೋವನ ಮಾತನ್ನು ಕೇಳು.
6. ಇಗೋ, ನಿನ್ನ ಪೂರ್ವಿಕರ ಕಾಲದಿಂದ ಇಂದಿನವರೆಗೂ ಅರಮನೆಯಲ್ಲಿ ಸಂಗ್ರಹವಾದದ್ದೆಲ್ಲವೂ ಬಾಬಿಲೋನಿಗೆ ಒಯ್ಯಲ್ಪಡುವ ದಿನವು ಬರುವುದು, ಇಲ್ಲೇನೂ ಉಳಿಯುವುದಿಲ್ಲ. PEPS
7. “ಬಾಬೆಲಿನ ಅರಸನು ಬಂದು, ನೀನು ಪಡೆದ ಮಕ್ಕಳನ್ನು ತೆಗೆದುಕೊಂಡು ಹೋಗಿ ಅವರನ್ನು ತಮ್ಮ ಅರಮನೆಯಲ್ಲಿ ಕಂಚುಕಿಗಳನ್ನಾಗಿ ನೇಮಿಸಿಕೊಳ್ಳುವರು ಅನ್ನುತ್ತಾನೆ” ಎಂದು ಹೇಳಿದನು.
8. “ಹೇಗೂ ನನ್ನ ಜೀವಮಾನದಲ್ಲಿ ತಪ್ಪದೆ ಸೌಭಾಗ್ಯವಿರುವುದು” ಎಂದುಕೊಂಡು ಹಿಜ್ಕೀಯನು ಯೆಶಾಯನಿಗೆ, “ನೀನು ತಿಳಿಸಿದ ಯೆಹೋವನ ಮಾತು ಒಳ್ಳೆಯದಾಗಿದೆ” ಎಂದು ಉತ್ತರಕೊಟ್ಟನು. PE
Total 66 Chapters, Current Chapter 39 of Total Chapters 66
×

Alert

×

kannada Letters Keypad References