1. {ದೇವಜನರಿಗೆ ಸಂತೈಯಿಸುವಿಕೆ} [PS] “ನನ್ನ ಸಂತೈಸಿರಿ, ಸಂತೈಸಿರಿ” ಎಂದು ನಿಮ್ಮ ದೇವರು ಹೇಳುತ್ತಾನೆ. [QBR]
2. ಯೆರೂಸಲೇಮಿನ ಸಂಗಡ ಹೃದಯಂಗಮವಾಗಿ ಮಾತನಾಡಿರಿ; [QBR] ಅದರ ಗಡು ತೀರಿತು, ವಿಧಿಸಿದ ದೋಷಫಲವೆಲ್ಲಾ ನೆರವೇರಿತು, [QBR] ಅದರ ಎಲ್ಲಾ ಪಾಪಗಳಿಗೂ ಯೆಹೋವನ ಕೈಯಿಂದ ಎರಡರಷ್ಟು ಶಿಕ್ಷೆಯಾಯಿತು ಎಂದು ಆ ನಗರಿಗೆ ಕೂಗಿ ಹೇಳಿರಿ; ಇದೇ ನಿಮ್ಮ ದೇವರ ಆಜ್ಞೆ. [QBR]
3. ಇಗೋ ಒಂದು ವಾಣಿ! [QBR] “ಅರಣ್ಯದಲ್ಲಿ ಯೆಹೋವನ ದಾರಿಯನ್ನು ಸರಿಪಡಿಸಿರಿ, [QBR] ಅಡವಿಯಲ್ಲಿ ನಮ್ಮ ದೇವರಿಗೆ ರಾಜಮಾರ್ಗವನ್ನು ಸರಿಪಡಿಸಿರಿ” [QBR]
4. ಎಲ್ಲಾ ಹಳ್ಳಕೊಳ್ಳಗಳು ಮುಚ್ಚಲ್ಪಡುವವು, ಎಲ್ಲಾ ಬೆಟ್ಟಗುಡ್ಡಗಳು ತಗ್ಗಿಸಲ್ಪಡುವವು, [QBR] ಮಲೆನಾಡು ಬಯಲು ಸೀಮೆಯಾಗುವುದು. ಒರಟಾದ ನೆಲವು ಸಮವಾಗುವುದು. [QBR]
5. ಯೆಹೋವನ ಮಹಿಮೆಯು ಗೋಚರವಾಗುವುದು. ಎಲ್ಲಾ ಮನುಷ್ಯರೂ ಒಟ್ಟಿಗೆ ಅದನ್ನು ಕಾಣುವರು, ಯೆಹೋವನ ಬಾಯೇ ಇದನ್ನು ನುಡಿದಿದೆ ಎಂದು ಒಬ್ಬನು ಕೂಗುತ್ತಾನೆ. [QBR]
6. ಆಹಾ, ವಾಣಿಯು ಮತ್ತೆ ಕೇಳಿಸಿ, “ಕೂಗು ಎನ್ನುತ್ತದೆ” ಅದಕ್ಕೆ ನಾನು, “ಏನು ಕೂಗಲಿ?” ಎಂದು ಕೇಳಲು, [QBR] “ನರಜಾತಿಯೆಲ್ಲಾ ಹುಲ್ಲಿನ ಹಾಗಿದೆ, ಅದರ ಲಾವಣ್ಯವೆಲ್ಲಾ ಅಡವಿಯ ಹೂವಿನಂತಿದೆ. [QBR]
7. ಯೆಹೋವನ ಶ್ವಾಸವು ಅದರ ಮೇಲೆ ಬೀಸುವುದರಿಂದ ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು. ನಿಶ್ಚಯವಾಗಿ ಜನರು ಹುಲ್ಲೇ ಹುಲ್ಲು! [QBR]
8. ಹುಲ್ಲು ಒಣಗಿ ಹೋಗುವುದು, ಹೂವು ಬಾಡಿ ಹೋಗುವುದು, ನಮ್ಮ ದೇವರ ಮಾತೋ ಸದಾಕಾಲವೂ ಇರುವುದು” ಎಂದು ಉತ್ತರವಾಯಿತು. [QBR]
9. ಶುಭಸಮಾಚಾರವನ್ನು ತಿಳಿಸಬಲ್ಲ ಚೀಯೋನೇ, [* ಚೀಯೋನೇ, ಚೀಯೋನಿಂದ.] ನೀನು ಉನ್ನತಪರ್ವತವನ್ನು ಏರು; [QBR] ಸುವರ್ತಮಾನವನ್ನು ಪ್ರಕಟಿಸಬಲ್ಲ ಯೆರೂಸಲೇಮೇ, [† ಯೆರೂಸಲೇಮೇ, ಯೆರೂಸಲೇಮಿನಿಂದ.] ನಿನ್ನ ಧ್ವನಿಯನ್ನು ಗಟ್ಟಿಯಾಗಿ ಎತ್ತು, ನಿರ್ಭಯವಾಗಿ ಎತ್ತಿ, [QBR] ಯೆಹೂದದ ಪಟ್ಟಣಗಳಿಗೆ, “ಇಗೋ, ನಿಮ್ಮ ದೇವರು! [QBR]
10. ಇಗೋ, ಕರ್ತನಾದ ಯೆಹೋವನು ಶೂರನಾಗಿ ಬರುವನು, ತನ್ನ ಭುಜಬಲದಿಂದಲೇ ಆಳುವನು. ಇಗೋ, [QBR] ಆತನ ಕ್ರಿಯಾಲಾಭವು ಆತನೊಂದಿಗಿದೆ, ಆತನ ಶ್ರಮದ ಫಲವು ಆತನ ಮುಂದೆಯೇ ಇದೆ. [QBR]
11. ಆತನು ಕುರುಬನಂತೆ ತನ್ನ ಮಂದೆಯನ್ನು ಮೇಯಿಸುವನು, [QBR] ಮರಿಗಳನ್ನು ಕೈಯಿಂದ ಕೂಡಿಸಿ ಎದೆಗಪ್ಪಿಕೊಳ್ಳುವನು. ಹಾಲು ಕುಡಿಸುವ ಕುರಿಮರಿಗಳನ್ನು ಮೆಲ್ಲನೆ ನಡೆಸುವನು” ಎಂದು ಸಾರು.
12. {ಯೆಹೋವನ ಅಸಮಾನವಾದ ಮಹಿಮೆ} [PS] ಯಾರು ಸಾಗರ ಸಮುದ್ರಗಳನ್ನು ಬರಿದಾದ ಕೈಯಿಂದ ಅಳತೆಮಾಡಿದವನು? ಯಾರು ಆಕಾಶಮಂಡಲದ ವ್ಯಾಪ್ತಿಯನ್ನು ಗೇಣಿನಿಂದ ನಿರ್ಣಯಿಸಿದವನು? [QBR] ಭೂಲೋಕದ ಮಣ್ಣನ್ನೆಲ್ಲಾ ಕೊಳಗಕ್ಕೆ ತುಂಬಿದವನು ಯಾರು? ಬೆಟ್ಟಗಳನ್ನು ತ್ರಾಸಿನಿಂದಲೂ, [QBR] ಗುಡ್ಡಗಳನ್ನು ತಕ್ಕಡಿಯಿಂದಲೂ ತೂಗಿದವನು ಯಾರು? [QBR]
13. ಯೆಹೋವನ ಆತ್ಮಕ್ಕೆ ಯಾರು ವಿಧಿಯನ್ನು ನೇಮಿಸಿದನು? ಆಲೋಚನಾ ಕರ್ತನಾಗಿ ಆತನಿಗೆ ಉಪದೇಶಿಸಿದವರು ಯಾರು? [QBR]
14. ಆತನು ಯಾರ ಆಲೋಚನೆಯನ್ನು ಕೇಳಿದನು? ಯಾರು ಆತನಿಗೆ ಬುದ್ಧಿಕಲಿಸಿ ಆತನನ್ನು ನ್ಯಾಯಮಾರ್ಗದಲ್ಲಿ ನಡೆಯಿಸಿದನು? [QBR] ಯಾರು ಆತನಿಗೆ ಜ್ಞಾನವನ್ನು ಬೋಧಿಸಿ ವಿವೇಕ ಮಾರ್ಗವನ್ನು ತೋರಿಸಿದವನು? [QBR]
15. ಆಹಾ, ಆತನ ಗಣನೆಯಲ್ಲಿ ಜನಾಂಗಗಳು ಕಪಿಲೆಯಿಂದ ಉದುರುವ ತುಂತುರಿನಂತೆಯೂ, ತಕ್ಕಡಿಯಲ್ಲಿನ ಧೂಳಿನ ಹಾಗೂ ಇರುತ್ತವೆ. [QBR] ಇಗೋ, ದ್ವೀಪಗಳನ್ನು ಅಣುರೇಣುವಿನಂತೆ ಎತ್ತುತ್ತಾನೆ. [QBR]
16. (ಆತನಿಗರ್ಪಿಸತಕ್ಕ) ಹೋಮಕ್ಕೆ ಲೆಬನೋನಿನ ಬೆಂಕಿಯು ಸಾಲದು, [QBR] ಅಲ್ಲಿನ ಪ್ರಾಣಿಗಳು ಸರ್ವಾಂಗಹೋಮಗಳಿಗೆ ಸಾಲದು. [QBR]
17. ಸಕಲ ಜನಾಂಗಗಳು ಆತನ ದೃಷ್ಟಿಯಲ್ಲಿ ಏನೂ ಇಲ್ಲದಂತಿವೆ, ಅವು ಆತನ ಎಣಿಕೆಯಲ್ಲಿ ಶುದ್ಧಶೂನ್ಯವೇ. [QBR]
18. ಹೀಗಿರಲು ದೇವರನ್ನು ಯಾರಿಗೆ ಹೋಲಿಸುವಿರಿ? ಅಥವಾ ಯಾವ ರೂಪವನ್ನು ಆತನಿಗೆ ಸಮಾನ ಮಾಡುವಿರಿ? [QBR]
19. ವಿಗ್ರಹವಾದರೋ, ಶಿಲ್ಪಿಯು ಅದನ್ನು ಎರಕಹೊಯ್ಯುವನು, ಅಕ್ಕಸಾಲಿಗನು ಅದಕ್ಕೆ ಚಿನ್ನದ ಕವಚವನ್ನು ಹೊದಿಸಿ, [QBR] ಬೆಳ್ಳಿಯ ಸರಪಣಿಗಳನ್ನು ಹಾಕುವನು. [QBR]
20. (ಇಂಥದನ್ನು ದೇವರಿಗೆ) ಕಾಣಿಕೆಯನ್ನಾಗಿ ಪ್ರತಿಷ್ಠಿಸಿಕೊಳ್ಳಲಾರದ ಬಡವನು, [QBR] ಹುಳಿತು ಹೋಗದ ಮರವನ್ನು ಹುಡುಕಿ ಚಲಿಸದ ವಿಗ್ರಹವನ್ನು ಮಾಡಿಸಲು ಶಿಲ್ಪಿಯನ್ನು ವಿಚಾರಿಸಿಕೊಳ್ಳುವನು. [QBR]
21. ನಿಮಗೆ ತಿಳಿದಿಲ್ಲವೋ? ನೀವು ಕೇಳಲಿಲ್ಲವೋ? ಆದಿಯಿಂದಲೇ ನಿಮಗೆ ಉಪದೇಶವಾಗಿ ಬಂದಿಲ್ಲವೋ? [QBR] ಭೂಮಿಯು ನಿರ್ಮಾಣವಾದ ದಿನದಿಂದ ನೀವು ಗ್ರಹಿಸುತ್ತಿಲ್ಲವೋ? [QBR]
22. ಭೂಮಂಡಲ ನಿವಾಸಿಗಳು ಮಿಡತೆಗಳಂತೆ ಸಣ್ಣಗೆ ಕಾಣಿಸುವಷ್ಟು ಉನ್ನತವಾದ ಆಕಾಶದಲ್ಲಿ ಆತನು ಆಸೀನನಾಗಿದ್ದಾನೆ; [QBR] ಆಕಾಶಮಂಡಲವನ್ನು ನಾರುಬಟ್ಟೆಯಂತೆ ಹರಡಿ ನಿವಾಸದ ಗುಡಾರದಂತೆ ಎತ್ತಿ ಕಟ್ಟಿದ್ದಾನೆ. [QBR]
23. ಪ್ರಭುಗಳನ್ನು ನಿರ್ನಾಮ ಮಾಡುತ್ತಾನೆ, ಭೂಪತಿಗಳನ್ನು ಶೂನ್ಯಗೊಳಿಸುತ್ತಾನೆ. [QBR]
24. ಇವರು ನೆಡಲ್ಪಟ್ಟ ಕೂಡಲೆ, ಬಿತ್ತಲ್ಪಟ್ಟ ಕ್ಷಣವೇ, ಇವರ ಸಂತಾನವು ಭೂಮಿಯಲ್ಲಿ ಬೇರೂರಿದಾಗಲೇ, [QBR] ಆತನ ಶ್ವಾಸದಿಂದ ಬಾಡುವರು, ಬಿರುಗಾಳಿಯು ಇವರನ್ನು ಒಣಹುಲ್ಲಿನಂತೆ ಬಡಿದುಕೊಂಡು ಹೋಗುವುದು. [QBR]
25. ಹೀಗಿರಲು, “ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನ ಮಾಡುತ್ತೀರಿ?” ಎಂದು ಸದಮಲಸ್ವಾಮಿಯು ಕೇಳುತ್ತಾನೆ. [QBR]
26. ನಿಮ್ಮ ಕಣ್ಣುಗಳನ್ನು ಮೇಲಕ್ಕೆತ್ತಿ ನೋಡಿರಿ! ಈ ನಕ್ಷತ್ರಗಳನ್ನು ಸೃಷ್ಟಿಸಿದಾತನು ಯಾರು? [QBR] ಈ ಸೈನ್ಯವನ್ನು ಲೆಕ್ಕಕ್ಕೆ ಸರಿಯಾಗಿ ಮುಂದುವರಿಸುತ್ತಾನೆ. ಎಲ್ಲವನ್ನೂ ಹೆಸರೆತ್ತಿ ಕರೆಯುತ್ತಾನೆ; [QBR] ಆತನು ಅತಿ ಬಲಾಢ್ಯನೂ, ಮಹಾಶಕ್ತನೂ ಆಗಿರುವುದರಿಂದ ಅವುಗಳೊಳಗೆ ಒಂದೂ ಕಡಿಮೆಯಾಗದು.
27. {ಯೆಹೋವನು ಬಳಲಿದವರನ್ನು ಬಲಪಡಿಸುವುದು} [PS] ಯಾಕೋಬೇ, ಇಸ್ರಾಯೇಲೇ, [QBR] “ನನ್ನ ಮಾರ್ಗವು ಯೆಹೋವನಿಗೆ ಮರೆಯಾಗಿದೆ, ನನಗೆ ಸಿಕ್ಕಬೇಕಾದ ನ್ಯಾಯವು ನನ್ನ ದೇವರ ಲಕ್ಷ್ಯಕ್ಕೆ ಬಿದ್ದಿಲ್ಲವಲ್ಲಾ” ಎಂದು ಏಕೆ ಅಂದುಕೊಳ್ಳುತ್ತೀ? [QBR]
28. ನೀನು ಗ್ರಹಿಸಲಿಲ್ಲವೋ? ಕೇಳಲಿಲ್ಲವೋ? [QBR] ಯೆಹೋವನು ನಿರಂತರ ದೇವರೂ, ಭೂಮಿಯ ಕಟ್ಟಕಡೆಗಳನ್ನು ನಿರ್ಮಿಸಿದವನೂ ಆಗಿದ್ದಾನೆ. [QBR] ಆತನು ದಣಿದು ಬಳಲುವುದಿಲ್ಲ, ಆತನ ವಿವೇಕವು ಪರಿಶೋಧನೆಗೆ ಅಗಮ್ಯ. [QBR]
29. ಸೋತವನಿಗೆ ತ್ರಾಣವನ್ನು ಅನುಗ್ರಹಿಸಿ, ಬಲಹೀನನಿಗೆ ಬಹು ಬಲವನ್ನು ದಯಪಾಲಿಸುತ್ತಾನೆ. [QBR]
30. ಯುವಕರೂ ದಣಿದು ಬಳಲುವರು, ತರುಣರೂ ಸೊರಗಿ ಮುಗ್ಗರಿಸುವರು. [QBR]
31. ಯೆಹೋವನನ್ನು ನಿರೀಕ್ಷಿಸುವವರೋ ಹೊಸ ಬಲವನ್ನು ಹೊಂದುವರು; ಅವರು ಹದ್ದುಗಳಂತೆ ರೆಕ್ಕೆಗಳನ್ನು ಚಾಚಿಕೊಂಡು ಏರುವರು; [QBR] ಅವರು ಓಡಿ ದಣಿಯರು, ನಡೆದು ಬಳಲರು. [PE]