1. {#1ಇಸ್ರಾಯೇಲರಿಗೆ ಯೆಹೋವನ ಸಹಾಯ } [QS]ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ. ಜನಾಂಗಗಳು ತಮ್ಮನ್ನು ಬಲಪಡಿಸಿಕೊಳ್ಳಲಿ; [QE][QS]ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗೋಣ. [QE]
2. [QS]ಮೂಡಣದಿಂದ ಒಬ್ಬನನ್ನು[* ಮೂಡಣದಿಂದ ಒಬ್ಬನನ್ನು ಇದು ಪಾರಸಿಯ ಚಕ್ರವರ್ತಿಯಾದ ಕೋರೆಷನು. ] ಎಬ್ಬಿಸಿ, ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು, [QE][QS]ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು, ಅವನನ್ನು ರಾಜರ ಮೇಲೆ ಆಳುವಂತೆ ಮಾಡಿ, [QE][QS]ಅವರ ಕತ್ತಿಯನ್ನು ಧೂಳನ್ನಾಗಿಯೂ, ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಹುಲ್ಲನ್ನಾಗಿಯೂ ಅವರನ್ನು ಮಾಡಿದನು. [QE]
3. [QS]ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಮುಂದೆ ಹಾದು ಹೋಗುವಂತೆ ಅವರನ್ನು ಹಿಂದಟ್ಟುತ್ತಾ ಹೋದನು. [QE]
4. [QS]ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ [QE][QS]ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ, ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ. [QE]
5. [QS]ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂಮಿಯ ಕಟ್ಟ ಕಡೆಯವರು ನಡುಗಿದರು, [QE][QS]ಎಲ್ಲರೂ ನೆರೆದು ಬಂದರು. [QE]
6. [QS]ಒಬ್ಬರಿಗೊಬ್ಬರು ಸಹಾಯಮಾಡಿದರು, ಪ್ರತಿಯೊಬ್ಬನು ತನ್ನ ಸಹೋದರನಿಗೆ, “ಧೈರ್ಯವಾಗಿರು” ಎಂದು ಹೇಳಿದನು. [QE]
7. [QS]ಹಾಗೆಯೇ ಶಿಲ್ಪಿಯು ಎರಕದವನನ್ನೂ, ಸುತ್ತಿಗೆಯಿಂದ ಸಮಮಾಡುವವನು ಅಡಿಗಲ್ಲಿನ ಮೇಲೆ ಕುಟ್ಟುವವನನ್ನೂ ಪ್ರೋತ್ಸಾಹಗೊಳಿಸಿದರು. [QE][QS]“ಬೆಸಿಗೆ ಚೆನ್ನಾಗಿದೆ” ಎಂದು ಹೇಳಿ ವಿಗ್ರಹವನ್ನು ಕದಲದಂತೆ ಮೊಳೆಗಳಿಂದ ಜಡಿದರು. [QE]
8. {#1ಇಸ್ರಾಯೇಲನ್ನು ಧೈರ್ಯಗೊಳಿಸುವ ವಾಗ್ದಾನಗಳು } [PS]ನನ್ನ ಸೇವಕನಾದ ಇಸ್ರಾಯೇಲೇ, ನಾನು ಆರಿಸಿಕೊಂಡ ಯಾಕೋಬೇ, [PE][QS]ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ, [QE]
9. [QS]ನಾನು ಭೂಮಿಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, “ನೀನು ನನ್ನ ಸೇವಕನು, [QE][QS]ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ” ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ, [QE]
10. [QS]ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. [QE][QS]ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ. [QE]
11. [QS]ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನಹೊಂದುವರು, [QE][QS]ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು. [QE]
12. [QS]ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು. [QE][QS]ನಿನ್ನ ವಿರುದ್ಧವಾಗಿ ಯುದ್ಧ ಮಾಡಿದವರು ನಿರ್ನಾಮವಾಗುವರು. [QE]
13. [QS]ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ. [QE][QS]“ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ. [QE]
14. [QS]ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, [QE][QS]ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ. [QE]
15. [QS]“ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, [QE][QS]ನೀನು ಬೆಟ್ಟಗಳನ್ನು ಒಡೆದು ಪುಡಿಪುಡಿಮಾಡಿ ಗುಡ್ಡಗಳನ್ನು ಹೊಟ್ಟು ಮಾಡುವಿ. [QE]
16. [QS]ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. [QE][QS]ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ. [QE]
17. [QS]ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, [QE][QS]ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು. [QE]
18. [QS]ಬೋಳುಗುಡ್ಡಗಳಲ್ಲಿ ನದಿಗಳನ್ನು, ಕಣಿವೆಗಳಲ್ಲಿ ಒರತೆಗಳನ್ನು ಹೊರಡಿಸಿ, [QE][QS]ಅರಣ್ಯವನ್ನು ಕೆರೆಯಾಗಿಯೂ, ಮರುಭೂಮಿಯನ್ನು ಬುಗ್ಗೆಗಳನ್ನಾಗಿಯೂ ಮಾಡುವೆನು. [QE]
19. [QS]ಮರುಭೂಮಿಯಲ್ಲಿ ದೇವದಾರು, ಜಾಲಿಮರ, ಸುಗಂಧ ಒಲೀವ್ ಮರಗಳನ್ನು ನಾನು ನೆಡುವೆನು. [QE][QS]ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು. [QE]
20. [QS]ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲಸ್ವಾಮಿಯೇ ಸೃಷ್ಟಿಸಿದ್ದಾನೆ” ಎಂದು [QE][QS]ಎಲ್ಲರೂ ಕಂಡು ತಿಳಿದು ಮನಸ್ಸಿಗೆ ತಂದು ಗ್ರಹಿಸಿಕೊಳ್ಳುವರು. [QE]
21. {#1ದೇವತೆಗಳಿಗೆ ಕಾಲಜ್ಞಾನವಿಲ್ಲದಿರುವುದು } [PS]ಯಾಕೋಬ್ಯರ ಅರಸನಾದ ಯೆಹೋವನು ಹೀಗೆನ್ನುತ್ತಾನೆ, [PE][QS]“ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ವಿಗ್ರಹಗಳಿಗಾಗಿ ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ” [QE]
22. [QS]ತಮ್ಮ ನ್ಯಾಯಗಳನ್ನು ಮುಂದಕ್ಕೆ ತರಲಿ, ಭವಿಷ್ಯತ್ತನ್ನು ನಮಗೆ ತಿಳಿಸಲಿ; [QE][QS]ನಡೆದ ಸಂಗತಿಗಳ ವಿಶೇಷವನ್ನು ಸೂಚಿಸಿರಿ, [QE][QS]ನಾವು ಅವುಗಳನ್ನು ಮನಸ್ಸಿಗೆ ತಂದು ಅವುಗಳ ಪರಿಣಾಮವನ್ನು ಇಲ್ಲವೇ ಭವಿಷ್ಯತ್ತನ್ನು ತಿಳಿಸಿದರೆ ಗ್ರಹಿಸುವೆವು. [QE]
23. [QS]ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದೆ ಆಗುವವುಗಳನ್ನು ತಿಳಿಸಿರಿ. [QE][QS]ನಾವು ಒಟ್ಟಿಗೆ ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ. [QE]
24. [QS]ಆಹಾ, ನೀವು ಶೂನ್ಯವೇ! ನಿಮ್ಮ ಕಾರ್ಯವು ಮಟ್ಟಮಾಯವೇ! ನಿಮ್ಮನ್ನು ಮೊರೆಹೋಗುವವರು ತುಚ್ಛರೇ ಸರಿ! [QE]
25. [QS]ನಾನು ಉತ್ತರ ದಿಕ್ಕಿನಿಂದ ಒಬ್ಬನನ್ನು ಎಬ್ಬಿಸಿ ಕರೆದು ತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿನಿಂದ ಬಂದಿದ್ದಾನೆ. [QE][QS]ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಅವರ ಮೇಲೆ ಬಿದ್ದು ಕುಂಬಾರನು ಜೇಡಿಮಣ್ಣನ್ನು ತುಳಿಯುವ ಹಾಗೆ ತುಳಿಯುವನು. [QE]
26. [QS]ಕಾರ್ಯವು ನಡೆಯುವುದಕ್ಕೆ ಮೊದಲು ಇವರಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಸಮಯಕ್ಕೆ ಮೊದಲೇ “ಅವನು ಸತ್ಯವಂತನು” ಎಂದು ಯಾರು ಮುಂತಿಳಿಸಿದ್ದಾರೆ? [QE][QS]ಯಾರೂ ಏನನ್ನೂ ತಿಳಿಸಬಲ್ಲವರಲ್ಲ, ಏನನ್ನೂ ಹೇಳತಕ್ಕವರಲ್ಲ, ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವುದಿಲ್ಲ. [QE]
27. [QS]ನಾನು ಮೊದಲನೆಯವನಾಗಿ ಚೀಯೋನಿಗೆ, “ಇಗೋ, ಅವರನ್ನು ನೋಡು” ಎಂದು ಹೇಳಿ ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು. [QE]
28. [QS]ನಾನು ನೋಡಿದಾಗ ಇವರಲ್ಲಿ ಸಮರ್ಥರು ಯಾರೂ ಇಲ್ಲ. [QE][QS]ನಾನು ಪ್ರಶ್ನೆ ಮಾಡಿದರೆ ಒಂದು ಮಾತನ್ನಾದರೂ ಹೇಳಬಲ್ಲ ಆಲೋಚಕನು ಇಲ್ಲವೇ ಇಲ್ಲ. [QE]
29. [QS]ಆಹಾ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ವ್ಯರ್ಥವೇ, [QE][QS]ಅವರ ಎರಕದ ಬೊಂಬೆಗಳು ಗಾಳಿ ಮತ್ತು ಶೂನ್ಯವೇ. [QE]