1. {ಇಸ್ರಾಯೇಲರಿಗೆ ಯೆಹೋವನ ಸಹಾಯ} [PS] ದ್ವೀಪನಿವಾಸಿಗಳೇ, ನನ್ನ ಕಡೆಗೆ ತಿರುಗಿ ಮೌನದಿಂದಿರಿ. ಜನಾಂಗಗಳು ತಮ್ಮನ್ನು ಬಲಪಡಿಸಿಕೊಳ್ಳಲಿ; [QBR] ಸಮೀಪಕ್ಕೆ ಬಂದು ಮಾತನಾಡಲಿ. ನ್ಯಾಯಸ್ಥಾನಕ್ಕೆ ಒಟ್ಟಿಗೆ ಹೋಗೋಣ. [QBR]
2. ಮೂಡಣದಿಂದ ಒಬ್ಬನನ್ನು [* ಮೂಡಣದಿಂದ ಒಬ್ಬನನ್ನು ಇದು ಪಾರಸಿಯ ಚಕ್ರವರ್ತಿಯಾದ ಕೋರೆಷನು.] ಎಬ್ಬಿಸಿ, ನ್ಯಾಯದ ಸಂಕಲ್ಪಾನುಸಾರವಾಗಿ ತನ್ನ ಪಾದಸನ್ನಿಧಿಗೆ ಕರೆದು, [QBR] ಜನಾಂಗಗಳನ್ನು ಅವನ ವಶಕ್ಕೆ ಕೊಟ್ಟು, ಅವನನ್ನು ರಾಜರ ಮೇಲೆ ಆಳುವಂತೆ ಮಾಡಿ, [QBR] ಅವರ ಕತ್ತಿಯನ್ನು ಧೂಳನ್ನಾಗಿಯೂ, ಬಿಲ್ಲನ್ನು ಗಾಳಿ ಬಡಿದುಕೊಂಡು ಹೋಗುವ ಹುಲ್ಲನ್ನಾಗಿಯೂ ಅವರನ್ನು ಮಾಡಿದನು. [QBR]
3. ತಾನು ಎಂದೂ ಹೆಜ್ಜೆಯಿಡದ ಮಾರ್ಗದಲ್ಲಿ ಸುರಕ್ಷಿತವಾಗಿ ಮುಂದೆ ಹಾದು ಹೋಗುವಂತೆ ಅವರನ್ನು ಹಿಂದಟ್ಟುತ್ತಾ ಹೋದನು. [QBR]
4. ಇದನ್ನೆಲ್ಲಾ ನಡೆಸಿ ನೆರವೇರಿಸಿದವನು ಯಾರು? ಆದಿಯಿಂದ ಈಗಿನವರೆಗೂ ತಲತಲಾಂತರಗಳನ್ನು ಬರಮಾಡುವವನಾದ [QBR] ಯೆಹೋವನೆಂಬ ನಾನೇ; ಹೌದು, ಆದಿಪುರುಷನೂ, ಅಂತ್ಯಕಾಲದವರ ಸಂಗಡಿಗನೂ ಆಗಿರುವ ನಾನೊಬ್ಬನೇ. [QBR]
5. ದ್ವೀಪ ನಿವಾಸಿಗಳು ಕಂಡು ಬೆರಗಾದರು, ಭೂಮಿಯ ಕಟ್ಟ ಕಡೆಯವರು ನಡುಗಿದರು, [QBR] ಎಲ್ಲರೂ ನೆರೆದು ಬಂದರು. [QBR]
6. ಒಬ್ಬರಿಗೊಬ್ಬರು ಸಹಾಯಮಾಡಿದರು, ಪ್ರತಿಯೊಬ್ಬನು ತನ್ನ ಸಹೋದರನಿಗೆ, “ಧೈರ್ಯವಾಗಿರು” ಎಂದು ಹೇಳಿದನು. [QBR]
7. ಹಾಗೆಯೇ ಶಿಲ್ಪಿಯು ಎರಕದವನನ್ನೂ, ಸುತ್ತಿಗೆಯಿಂದ ಸಮಮಾಡುವವನು ಅಡಿಗಲ್ಲಿನ ಮೇಲೆ ಕುಟ್ಟುವವನನ್ನೂ ಪ್ರೋತ್ಸಾಹಗೊಳಿಸಿದರು. [QBR] “ಬೆಸಿಗೆ ಚೆನ್ನಾಗಿದೆ” ಎಂದು ಹೇಳಿ ವಿಗ್ರಹವನ್ನು ಕದಲದಂತೆ ಮೊಳೆಗಳಿಂದ ಜಡಿದರು. [PS]
8. {ಇಸ್ರಾಯೇಲನ್ನು ಧೈರ್ಯಗೊಳಿಸುವ ವಾಗ್ದಾನಗಳು} [PS] ನನ್ನ ಸೇವಕನಾದ ಇಸ್ರಾಯೇಲೇ, ನಾನು ಆರಿಸಿಕೊಂಡ ಯಾಕೋಬೇ, [QBR] ನನ್ನ ಸ್ನೇಹಿತನಾದ ಅಬ್ರಹಾಮನ ಸಂತತಿಯೇ, [QBR]
9. ನಾನು ಭೂಮಿಯ ಕಟ್ಟಕಡೆಯಲ್ಲಿ ಹಿಡಿದು ದಿಗಂತಗಳಿಂದ ಕರೆದ ಜನವೇ, “ನೀನು ನನ್ನ ಸೇವಕನು, [QBR] ನಾನು ನಿನ್ನನ್ನು ಆರಿಸಿಕೊಂಡೆನು, ತಳ್ಳಲಿಲ್ಲ” ಎಂದು ನಾನು ಹೇಳಿ ಸಂಬೋಧಿಸಿದ ಪ್ರಜೆಯೇ, [QBR]
10. ನೀನಂತು ಹೆದರಬೇಡ, ನಾನೇ ನಿನ್ನೊಂದಿಗಿದ್ದೇನೆ, ದಿಗ್ಭ್ರಮೆಗೊಳ್ಳದಿರು, ನಾನೇ ನಿನ್ನ ದೇವರು. [QBR] ನಾನು ನಿನ್ನನ್ನು ಬಲಪಡಿಸುತ್ತೇನೆ. ಹೌದು, ನಿನಗೆ ಸಹಾಯಮಾಡುತ್ತೇನೆ. ನನ್ನ ಧರ್ಮದ ಬಲಗೈಯನ್ನು ನಿನಗೆ ಆಧಾರಮಾಡುತ್ತೇನೆ. [QBR]
11. ಆಹಾ, ನಿನ್ನ ಮೇಲೆ ಕಿಡಿಕಿಡಿಯಾದವರು ಆಶಾಭಂಗಪಟ್ಟು ಅವಮಾನಹೊಂದುವರು, [QBR] ನಿನ್ನ ಸಂಗಡ ವ್ಯಾಜ್ಯವಾಡಿದವರು ನಾಶವಾಗಿ ಇಲ್ಲದೆ ಹೋಗುವರು. [QBR]
12. ನಿನ್ನೊಡನೆ ಹೋರಾಡಿದವರನ್ನು ಹುಡುಕಿದರೂ ಅವರು ನಿನಗೆ ಕಾಣಿಸರು. [QBR] ನಿನ್ನ ವಿರುದ್ಧವಾಗಿ ಯುದ್ಧ ಮಾಡಿದವರು ನಿರ್ನಾಮವಾಗುವರು. [QBR]
13. ಏಕೆಂದರೆ ಯೆಹೋವನೆಂಬ ನಾನೇ ನಿನ್ನ ಕೈಹಿಡಿಯುತ್ತೇನೆ. [QBR] “ಭಯಪಡಬೇಡ, ನಿನಗೆ ಸಹಾಯಮಾಡುತ್ತೇನೆ. [QBR]
14. ಕ್ರಿಮಿಪ್ರಾಯದವನಾದ ಯಾಕೋಬೇ, ಇಸ್ರಾಯೇಲ್ ಜನವೇ, ಭಯಪಡಬೇಡ, [QBR] ನಾನೇ ನಿನಗೆ ಸಹಾಯಕನು, ಇಸ್ರಾಯೇಲಿನ ಸದಮಲಸ್ವಾಮಿಯು ನಿನಗೆ ವಿಮೋಚಕನು” ಎಂದು ಯೆಹೋವನು ಹೇಳುತ್ತಾನೆ. [QBR]
15. “ಇಗೋ, ನಾನು ನಿನ್ನನ್ನು ಮಸೆದ ಮೊನೆಹಲ್ಲಿನ ಹೊಸ ಹಂತಿಕುಂಟೆಯನ್ನಾಗಿ ಮಾಡಿದ್ದೇನೆ, [QBR] ನೀನು ಬೆಟ್ಟಗಳನ್ನು ಒಡೆದು ಪುಡಿಪುಡಿಮಾಡಿ ಗುಡ್ಡಗಳನ್ನು ಹೊಟ್ಟು ಮಾಡುವಿ. [QBR]
16. ನೀನು ತೂರಲು ಅವುಗಳನ್ನು ಗಾಳಿಯು ಬಡಿದುಕೊಂಡು ಹೋಗುವುದು, ಬಿರುಗಾಳಿಯು ಚೆಲ್ಲಾಪಿಲ್ಲಿ ಮಾಡುವುದು. [QBR] ನೀನಂತೂ ಯೆಹೋವನಲ್ಲಿ ಆನಂದಿಸುವಿ, ಇಸ್ರಾಯೇಲಿನ ಸದಮಲಸ್ವಾಮಿಯಲ್ಲಿ ಹೆಚ್ಚಳಪಡುವಿ. [QBR]
17. ಬಾಯಾರಿ ನಾಲಿಗೆ ಒಣಗಿ ನೀರನ್ನು ಹುಡುಕಿ ಹೊಂದದ ದೀನದರಿದ್ರರಿಗೆ ಯೆಹೋವನೆಂಬ ನಾನು ಪ್ರಸನ್ನನಾಗುವೆನು, [QBR] ಇಸ್ರಾಯೇಲಿನ ದೇವರಾದ ನಾನು ಅವರನ್ನು ಕೈಬಿಡೆನು. [QBR]
18. ಬೋಳುಗುಡ್ಡಗಳಲ್ಲಿ ನದಿಗಳನ್ನು, ಕಣಿವೆಗಳಲ್ಲಿ ಒರತೆಗಳನ್ನು ಹೊರಡಿಸಿ, [QBR] ಅರಣ್ಯವನ್ನು ಕೆರೆಯಾಗಿಯೂ, ಮರುಭೂಮಿಯನ್ನು ಬುಗ್ಗೆಗಳನ್ನಾಗಿಯೂ ಮಾಡುವೆನು. [QBR]
19. ಮರುಭೂಮಿಯಲ್ಲಿ ದೇವದಾರು, ಜಾಲಿಮರ, ಸುಗಂಧ ಒಲೀವ್ ಮರಗಳನ್ನು ನಾನು ನೆಡುವೆನು. [QBR] ಮರುಭೂಮಿಯಲ್ಲಿ ತುರಾಯಿ, ತಪಸಿ, ತಿಲಕ ವೃಕ್ಷಗಳನ್ನು ಒಟ್ಟಿಗೆ ಬೆಳೆಯಿಸುವೆನು. [QBR]
20. ಆಗ ಯೆಹೋವನ ಹಸ್ತವು ಇದನ್ನು ಮಾಡಿದೆ, ಹೌದು, ಇಸ್ರಾಯೇಲಿನ ಸದಮಲಸ್ವಾಮಿಯೇ ಸೃಷ್ಟಿಸಿದ್ದಾನೆ” ಎಂದು [QBR] ಎಲ್ಲರೂ ಕಂಡು ತಿಳಿದು ಮನಸ್ಸಿಗೆ ತಂದು ಗ್ರಹಿಸಿಕೊಳ್ಳುವರು. [PS]
21. {ದೇವತೆಗಳಿಗೆ ಕಾಲಜ್ಞಾನವಿಲ್ಲದಿರುವುದು} [PS] ಯಾಕೋಬ್ಯರ ಅರಸನಾದ ಯೆಹೋವನು ಹೀಗೆನ್ನುತ್ತಾನೆ, [QBR] “ನಿಮ್ಮ ವ್ಯಾಜ್ಯವು ಈಚೆಗೆ ಬರಲಿ, ನಿಮ್ಮ ವಿಗ್ರಹಗಳಿಗಾಗಿ ನಿಮ್ಮ ಬಲವಾದ ನ್ಯಾಯಗಳನ್ನು ತೋರ್ಪಡಿಸಿರಿ” [QBR]
22. ತಮ್ಮ ನ್ಯಾಯಗಳನ್ನು ಮುಂದಕ್ಕೆ ತರಲಿ, ಭವಿಷ್ಯತ್ತನ್ನು ನಮಗೆ ತಿಳಿಸಲಿ; [QBR] ನಡೆದ ಸಂಗತಿಗಳ ವಿಶೇಷವನ್ನು ಸೂಚಿಸಿರಿ, [QBR] ನಾವು ಅವುಗಳನ್ನು ಮನಸ್ಸಿಗೆ ತಂದು ಅವುಗಳ ಪರಿಣಾಮವನ್ನು ಇಲ್ಲವೇ ಭವಿಷ್ಯತ್ತನ್ನು ತಿಳಿಸಿದರೆ ಗ್ರಹಿಸುವೆವು. [QBR]
23. ನೀವು ದೇವರುಗಳೆಂದು ನಮಗೆ ಅರಿವು ಹುಟ್ಟುವಂತೆ ಮುಂದೆ ಆಗುವವುಗಳನ್ನು ತಿಳಿಸಿರಿ. [QBR] ನಾವು ಒಟ್ಟಿಗೆ ಗಾಬರಿಯಿಂದ ಭಯಪಡುವ ಹಾಗೆ ಒಳ್ಳೆಯದನ್ನಾಗಲಿ, ಕೆಟ್ಟದ್ದನ್ನಾಗಲಿ ಮಾಡಿರಿ. [QBR]
24. ಆಹಾ, ನೀವು ಶೂನ್ಯವೇ! ನಿಮ್ಮ ಕಾರ್ಯವು ಮಟ್ಟಮಾಯವೇ! ನಿಮ್ಮನ್ನು ಮೊರೆಹೋಗುವವರು ತುಚ್ಛರೇ ಸರಿ! [QBR]
25. ನಾನು ಉತ್ತರ ದಿಕ್ಕಿನಿಂದ ಒಬ್ಬನನ್ನು ಎಬ್ಬಿಸಿ ಕರೆದು ತಂದಿದ್ದೇನೆ, ನನ್ನ ನಾಮವನ್ನು ಪ್ರಚುರಪಡಿಸತಕ್ಕವನು ಮೂಡಲಿನಿಂದ ಬಂದಿದ್ದಾನೆ. [QBR] ಅವನು ಉಪರಾಜರನ್ನು ಮಣ್ಣೇ ಎಂದು ಭಾವಿಸಿ ಅವರ ಮೇಲೆ ಬಿದ್ದು ಕುಂಬಾರನು ಜೇಡಿಮಣ್ಣನ್ನು ತುಳಿಯುವ ಹಾಗೆ ತುಳಿಯುವನು. [QBR]
26. ಕಾರ್ಯವು ನಡೆಯುವುದಕ್ಕೆ ಮೊದಲು ಇವರಲ್ಲಿ ಯಾರು ಅದನ್ನು ತಿಳಿಸಿದ್ದಾರೆ? ಸಮಯಕ್ಕೆ ಮೊದಲೇ “ಅವನು ಸತ್ಯವಂತನು” ಎಂದು ಯಾರು ಮುಂತಿಳಿಸಿದ್ದಾರೆ? [QBR] ಯಾರೂ ಏನನ್ನೂ ತಿಳಿಸಬಲ್ಲವರಲ್ಲ, ಏನನ್ನೂ ಹೇಳತಕ್ಕವರಲ್ಲ, ನಿಮ್ಮ ಮಾತುಗಳು ಯಾರ ಕಿವಿಗೂ ಬೀಳುವುದಿಲ್ಲ. [QBR]
27. ನಾನು ಮೊದಲನೆಯವನಾಗಿ ಚೀಯೋನಿಗೆ, “ಇಗೋ, ಅವರನ್ನು ನೋಡು” ಎಂದು ಹೇಳಿ ಶುಭಸಮಾಚಾರ ತರತಕ್ಕವನನ್ನು ಯೆರೂಸಲೇಮಿಗೆ ಅನುಗ್ರಹಿಸುವೆನು. [QBR]
28. ನಾನು ನೋಡಿದಾಗ ಇವರಲ್ಲಿ ಸಮರ್ಥರು ಯಾರೂ ಇಲ್ಲ. [QBR] ನಾನು ಪ್ರಶ್ನೆ ಮಾಡಿದರೆ ಒಂದು ಮಾತನ್ನಾದರೂ ಹೇಳಬಲ್ಲ ಆಲೋಚಕನು ಇಲ್ಲವೇ ಇಲ್ಲ. [QBR]
29. ಆಹಾ, ಅವರೆಲ್ಲಾ ವ್ಯರ್ಥವೇ, ಅವರ ಕಾರ್ಯಗಳು ವ್ಯರ್ಥವೇ, [QBR] ಅವರ ಎರಕದ ಬೊಂಬೆಗಳು ಗಾಳಿ ಮತ್ತು ಶೂನ್ಯವೇ. [PE]