1. {ಯೆಹೋವನ ಸೇವಕನ ಗುಣಲಕ್ಷಣಗಳೂ ಕರ್ತವ್ಯವೊ} PS ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು.
ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು. |
3. ಜಜ್ಜಿದ ದಂಟನ್ನು ಮುರಿದು ಹಾಕದೆ, ಕಳೆಗುಂದಿದ ದೀಪವನ್ನು ನಂದಿಸದೆ,
ಸದ್ಧರ್ಮವನ್ನು ಪ್ರಚುರಪಡಿಸಿ ಸಿದ್ಧಿಗೆ ತರುವನು. |
4. ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ,
ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು. |
5. ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ,
ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ, |
6. “ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು,
ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ. |
7. ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ,
ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ. |
8. ನಾನೇ ಯೆಹೋವನು; ಇದೇ ನನ್ನ ನಾಮವು;
ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು. |
9. ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ,
ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.” |
10. {ಯೆಹೋವನ ರಕ್ಷಣಾಸಂಕಲ್ಪ} PS ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ,
ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ. |
11. ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ,
ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ. |
13. ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು.
ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು. |
14. ನಾನು ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿ ಹಿಡಿದಿದ್ದೆನು.
ಈಗ ಹೆರುವವಳಂತೆ ಕೂಗುವೆನು. ನಿಟ್ಟುಸಿರಿನೊಡನೆ ಏದುವೆನು. |
15. ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ಒಣಗಿಸಿ,
ನದಿಗಳನ್ನು ಒಣ ದಿಣ್ಣೆಮಾಡಿ ಕೆರೆಗಳನ್ನು ಬತ್ತಿಸುವೆನು. |
16. ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು,
ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ. |
17. ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, “ನೀವೇ ನಮ್ಮ ದೇವರುಗಳು” ಎಂದು
ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು. |
18. {ಯೆಹೋವನ ಸೇವಕನ ಈಗಿನ ದುಸ್ಥಿತಿ ಹಾಗು ಮುಂದಿನ ಉದ್ಧಾರ} PS ಕಿವುಡರೇ, ಕೇಳಿರಿ! ಕುರುಡರೇ, ನೀವು ಕಣ್ಣಿಟ್ಟು ನೋಡಿರಿ!
|
19. ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು?
ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧರು ಯಾರು? |
22. ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ.
ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ. |
24. ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು?
ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಆ ಯೆಹೋವನಲ್ಲವೆ. ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ |
25. ಆದುದರಿಂದ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ, ಯುದ್ಧದ ರೌದ್ರವನ್ನೂ ಸುರಿಸಿದನು.
ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹೊತ್ತಿಕೊಂಡಿತು, ಆದರೆ ಅವರು ತಿಳಿಯಲಿಲ್ಲ. ದಹಿಸಿತು, ಆದರೆ ಅವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ. PE |