1. {#1ಯೆಹೋವನ ಸೇವಕನ ಗುಣಲಕ್ಷಣಗಳೂ ಕರ್ತವ್ಯವೊ } [QS]ಇಗೋ, ನನ್ನ ಸೇವಕನು! ಇವನಿಗೆ ನಾನೇ ಆಧಾರ. ಇವನು ನನಗೆ ಇಷ್ಟನು, ನನ್ನ ಪ್ರಾಣಪ್ರಿಯನು. [QE][QS]ಇವನಲ್ಲಿ ನನ್ನ ಆತ್ಮವನ್ನು ಇರಿಸಿದ್ದೇನೆ. ಇವನು ಅನ್ಯಜನಗಳಲ್ಲಿಯೂ ಸದ್ಧರ್ಮವನ್ನು ಪ್ರಚುರಪಡಿಸುವನು. [QE]
2. [QS]ಇವನು ಕೂಗಾಡುವುದಿಲ್ಲ, ಆರ್ಭಟಿಸುವುದಿಲ್ಲ, ಬೀದಿಗಳಲ್ಲಿ ಇವನ ಧ್ವನಿಯೇ ಕೇಳಿಸುವುದಿಲ್ಲ. [QE]
3. [QS]ಜಜ್ಜಿದ ದಂಟನ್ನು ಮುರಿದು ಹಾಕದೆ, ಕಳೆಗುಂದಿದ ದೀಪವನ್ನು ನಂದಿಸದೆ, [QE][QS]ಸದ್ಧರ್ಮವನ್ನು ಪ್ರಚುರಪಡಿಸಿ ಸಿದ್ಧಿಗೆ ತರುವನು. [QE]
4. [QS]ಲೋಕದಲ್ಲಿ ಸದ್ಧರ್ಮವನ್ನು ಸ್ಥಾಪಿಸುವ ತನಕ ಇವನು ಕಳೆಗುಂದದೆಯೂ, [QE][QS]ಜಜ್ಜಿಹೋಗದೆಯೂ ತನ್ನ ಕಾರ್ಯದಲ್ಲಿ ನಿರತನಾಗಿರುವನು. [QE][QS]ದ್ವೀಪಗಳು ಇವನ ಧರ್ಮಪ್ರಮಾಣಕ್ಕೆ ಕಾದಿರುವವು. [QE]
5. [QS]ಆಕಾಶಮಂಡಲವನ್ನು ಉಂಟುಮಾಡಿ ಹರಡಿ ಭೂಮಂಡಲವನ್ನೂ, [QE][QS]ಅದರಲ್ಲಿನ ಉತ್ಪತ್ತಿಯನ್ನೂ ವಿಸ್ತರಿಸಿ ಲೋಕದ ಜನರಿಗೆ ಪ್ರಾಣವನ್ನು, ಹೌದು, [QE][QS]ಭೂಜನರಿಗೆ ಜೀವಾತ್ಮವನ್ನೂ ದಯಪಾಲಿಸುವ ಯೆಹೋವನೆಂಬ ದೇವರು ಹೀಗೆನ್ನುತ್ತಾನೆ, [QE]
6. [QS]“ಯೆಹೋವನೆಂಬ ನಾನು ನನ್ನ ಧರ್ಮದ ಸಂಕಲ್ಪಾನುಸಾರವಾಗಿ ನಿನ್ನನ್ನು ಕೈಹಿಡಿದು, [QE][QS]ಕಾಪಾಡಿ ನನ್ನ ಜನರಿಗೆ ಒಡಂಬಡಿಕೆಯ ಆಧಾರವನ್ನಾಗಿಯೂ, ಅನ್ಯಜನಗಳಿಗೆ ಬೆಳಕನ್ನಾಗಿಯೂ ನೇಮಿಸಿದ್ದೇನೆ. [QE]
7. [QS]ನೀನು ಕುರುಡರಿಗೆ ಕಣ್ಣುಕೊಟ್ಟು, ಬಂದಿಗಳನ್ನು ಸೆರೆಯಿಂದಲೂ, [QE][QS]ಕತ್ತಲಲ್ಲಿ ಬಿದ್ದವರನ್ನು ಕಾರಾಗೃಹದಿಂದಲೂ ಹೊರಗೆ ತರುವಿ. [QE]
8. [QS]ನಾನೇ ಯೆಹೋವನು; ಇದೇ ನನ್ನ ನಾಮವು; [QE][QS]ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು, ನನ್ನ ಸ್ತೋತ್ರವನ್ನು ವಿಗ್ರಹಗಳ ಪಾಲು ಮಾಡೆನು. [QE]
9. [QS]ಇಗೋ ಮೊದಲನೆಯ ಸಂಗತಿಗಳು ನೆರವೇರಿವೆ, [QE][QS]ಹೊಸ ಸಂಗತಿಗಳನ್ನು ಪ್ರಕಟಿಸುತ್ತೇನೆ. [QE][QS]ಅವು ತಲೆದೋರುವುದಕ್ಕೆ ಮೊದಲು ಅವುಗಳನ್ನು ನಿಮಗೆ ತಿಳಿಸುತ್ತೇನೆ.” [QE]
10. {#1ಯೆಹೋವನ ರಕ್ಷಣಾಸಂಕಲ್ಪ } [QS]ಸಮುದ್ರಪ್ರಯಾಣಿಕರೇ, ಸಕಲಜಲಚರಗಳೇ, ದ್ವೀಪಾಂತರಗಳೇ, ದ್ವೀಪಾಂತರವಾಸಿಗಳೇ, [QE][QS]ಯೆಹೋವನ ಘನತೆಗಾಗಿ ನೂತನ ಗೀತೆಯನ್ನು ಹಾಡಿ ದಿಗಂತಗಳಲ್ಲಿಯೂ ಆತನನ್ನು ಕೀರ್ತಿಸಿರಿ. [QE]
11. [QS]ಅರಣ್ಯವೂ, ಅಲ್ಲಿನ ಊರುಗಳೂ, ಕೇದಾರಿನವರು ವಾಸಿಸುವ ಗ್ರಾಮಗಳೂ ಆರ್ಭಟಿಸಲಿ, [QE][QS]ಸೆಲ ಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಜಯಘೋಷ ಮಾಡಿರಿ. [QE]
12. [QS]ಯೆಹೋವನನ್ನು ಘನಪಡಿಸಿ ದ್ವೀಪಾಂತರಗಳಲ್ಲಿ ಆತನ ಸ್ತೋತ್ರವನ್ನು ಹಬ್ಬಿಸಲಿ. [QE]
13. [QS]ಯೆಹೋವನು ಶೂರನಂತೆ ಹೊರಟು, ಯುದ್ಧವೀರನ ಹಾಗೆ ತನ್ನ ರೌದ್ರವನ್ನು ಎಬ್ಬಿಸುವನು. [QE][QS]ಆರ್ಭಟಿಸಿ ಗರ್ಜಿಸಿ ಶತ್ರುಗಳ ಮೇಲೆ ಬಿದ್ದು ತನ್ನ ಪರಾಕ್ರಮವನ್ನು ತೋರ್ಪಡಿಸುವನು. [QE]
14. [QS]ನಾನು ಬಹುಕಾಲದಿಂದ ಸುಮ್ಮನೆ ಮೌನವಾಗಿ ನನ್ನನ್ನು ಬಿಗಿ ಹಿಡಿದಿದ್ದೆನು. [QE][QS]ಈಗ ಹೆರುವವಳಂತೆ ಕೂಗುವೆನು. ನಿಟ್ಟುಸಿರಿನೊಡನೆ ಏದುವೆನು. [QE]
15. [QS]ಬೆಟ್ಟಗುಡ್ಡಗಳನ್ನು ನಾಶಪಡಿಸಿ ಅಲ್ಲಿಯ ಮೇವನ್ನೆಲ್ಲಾ ಒಣಗಿಸಿ, [QE][QS]ನದಿಗಳನ್ನು ಒಣ ದಿಣ್ಣೆಮಾಡಿ ಕೆರೆಗಳನ್ನು ಬತ್ತಿಸುವೆನು. [QE]
16. [QS]ಕುರುಡರನ್ನು ತಿಳಿಯದ ಮಾರ್ಗದಲ್ಲಿ ಬರಮಾಡುವೆನು, ಅವರಿಗೆ ಗೊತ್ತಿಲ್ಲದ ದಾರಿಗಳಲ್ಲಿ ಅವರನ್ನು ನಡೆಸುವೆನು, [QE][QS]ಅವರೆದುರಿಗೆ ಕತ್ತಲನ್ನು ಬೆಳಕುಮಾಡಿ, ಡೊಂಕನ್ನು ಸರಿಪಡಿಸುವೆನು. [QE][QS]ಈ ಕಾರ್ಯಗಳನ್ನು ಬಿಡದೆ ಮಾಡುವೆನು. ನಾನು ಅವರನ್ನು ಕೈ ಬಿಡುವುದಿಲ್ಲ. [QE]
17. [QS]ಕೆತ್ತಿದ ವಿಗ್ರಹಗಳಲ್ಲಿ ಭರವಸವಿಟ್ಟು, “ನೀವೇ ನಮ್ಮ ದೇವರುಗಳು” ಎಂದು [QE][QS]ಎರಕದ ಬೊಂಬೆಗಳಿಗೆ ಅರಿಕೆಮಾಡುವವರು ಹಿಂದೆ ಬಿದ್ದು ಕೇವಲ ಅವಮಾನಕ್ಕೆ ಈಡಾಗುವರು. [QE]
18. {#1ಯೆಹೋವನ ಸೇವಕನ ಈಗಿನ ದುಸ್ಥಿತಿ ಹಾಗು ಮುಂದಿನ ಉದ್ಧಾರ } [QS]ಕಿವುಡರೇ, ಕೇಳಿರಿ! ಕುರುಡರೇ, ನೀವು ಕಣ್ಣಿಟ್ಟು ನೋಡಿರಿ! [QE]
19. [QS]ನನ್ನ ಸೇವಕನ ಹೊರತು ಯಾರು ಕುರುಡರು? ನಾನು ಕಳುಹಿಸುವ ದೂತನಂತೆ ಯಾರು ಕಿವುಡರು? [QE][QS]ನನ್ನ ಭಕ್ತನ ಹಾಗೆ ಯಾರು ಕುರುಡರು? ಯೆಹೋವನ ಸೇವಕನ ಪ್ರಕಾರ ಅಂಧರು ಯಾರು? [QE]
20. [QS]ನೀನು ಬಹು ವಿಷಯಗಳನ್ನು ಕಂಡಿದ್ದರೂ ನಿನಗೆ ಗಮನವಿಲ್ಲ, ಇವನ ಕಿವಿ ತೆರೆದಿದ್ದರೂ ಕೇಳನು. [QE]
21. [QS]ಯೆಹೋವನು ಧರ್ಮಸ್ವರೂಪನಾಗಿರುವುದರಿಂದ ಧರ್ಮೋಪದೇಶವನ್ನು ಘನಪಡಿಸಿ ಮಹತ್ತಿಗೆ ತರಬೇಕೆಂದು ಇಷ್ಟಪಟ್ಟನು. [QE]
22. [QS]ಈ ಜನರೇ ಕೊಳ್ಳೆಗೆ ಈಡಾಗಿ ಸೂರೆಹೋಗಿದ್ದಾರೆ. ಎಲ್ಲರೂ ಹಳ್ಳಕೊಳ್ಳಗಳಿಗೆ ಸಿಕ್ಕಿಬಿದ್ದಿದ್ದಾರೆ, ಸೆರೆಮನೆಗಳಲ್ಲಿ ಮುಚ್ಚಲ್ಪಟ್ಟಿದ್ದಾರೆ. [QE][QS]ಅವರು ಸುಲಿಗೆಯಾಗಿದ್ದರೂ ಯಾರೂ ಬಿಡಿಸರು, [QE][QS]ಸೂರೆಯಾಗಿದ್ದರೂ ಯಾರೂ ಹಿಂದಕ್ಕೆ ಬಿಡು ಎನ್ನುವುದಿಲ್ಲ. [QE]
23. [QS]ನಿಮ್ಮಲ್ಲಿ ಯಾರು ಈ ಮಾತಿಗೆ ಕಿವಿಗೊಡುವರು? ಯಾರು ಇನ್ನು ಮುಂದೆ ಆಲಿಸಿ ಕೇಳುವರು? [QE]
24. [QS]ಯಾಕೋಬನ್ನು ಸುಲಿಗೆಗೂ, ಇಸ್ರಾಯೇಲನ್ನು ಕೊಳ್ಳೆಗೂ ಕೊಟ್ಟವನು ಯಾರು? [QE][QS]ಯಾರ ವಿರುದ್ಧವಾಗಿ ನಾವು ದ್ರೋಹಮಾಡಿದೆವೋ ಆ ಯೆಹೋವನಲ್ಲವೆ. [QE][QS]ಅವರು ಆತನ ಮಾರ್ಗದಲ್ಲಿ ನಡೆಯಲಿಲ್ಲ. ಆತನ ಉಪದೇಶವನ್ನು ಕೇಳಲಿಲ್ಲ [QE]
25. [QS]ಆದುದರಿಂದ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ, ಯುದ್ಧದ ರೌದ್ರವನ್ನೂ ಸುರಿಸಿದನು. [QE][QS]ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹೊತ್ತಿಕೊಂಡಿತು, ಆದರೆ ಅವರು ತಿಳಿಯಲಿಲ್ಲ. ದಹಿಸಿತು, ಆದರೆ ಅವರು ಲಕ್ಷ್ಯಕ್ಕೆ ತಂದುಕೊಳ್ಳಲಿಲ್ಲ. [QE]