1. {ಇಸ್ರಾಯೇಲರ ರಕ್ಷಕನು} PS ಈಗಲಾದರೋ, ಯಾಕೋಬನ ವಂಶವೇ, ಇಸ್ರಾಯೇಲ್ ಸಂತಾನವೇ, ನಿನ್ನನ್ನು ಸೃಷ್ಟಿಸಿ ರೂಪಿಸಿದವನಾದ ಯೆಹೋವನು ಹೀಗೆನ್ನುತ್ತಾನೆ,
“ಭಯಪಡಬೇಡ, ನಾನು ನಿನ್ನನ್ನು ವಿಮೋಚಿಸಿದೆನಲ್ಲಾ, ನಿನ್ನ ಹೆಸರು ಹಿಡಿದು ಕರೆದೆನಲ್ಲಾ, ನೀನು ನನ್ನವನೇ. |
2. ನೀನು ಜಲರಾಶಿಯನ್ನು ಹಾದು ಹೋಗುವಾಗ ನಾನು ನಿನ್ನ ಸಂಗಡ ಇರುವೆನು,
ನದಿಗಳನ್ನು ದಾಟುವಾಗ ಅವು ನಿನ್ನನ್ನು ಮುಳುಗಿಸುವುದಿಲ್ಲ, ಬೆಂಕಿಯಲ್ಲಿ ನಡೆಯುವಾಗ ನೀನು ಸುಟ್ಟುಹೋಗುವುದಿಲ್ಲ, ಜ್ವಾಲೆಯು ನಿನ್ನನ್ನು ದಹಿಸದು. |
3. ಏಕೆಂದರೆ ಯೆಹೋವನೆಂಬ ನಾನು ನಿನ್ನ ದೇವರು, ಇಸ್ರಾಯೇಲರ ಸದಮಲಸ್ವಾಮಿಯಾದ ನಾನು ನಿನ್ನ ರಕ್ಷಕನು.
ಐಗುಪ್ತವನ್ನು ನಿನ್ನ ವಿಮೋಚನೆಗೆ ಈಡುಮಾಡಿದ್ದೇನೆ. ನಿನ್ನ ಬದಲಾಗಿ ಕೂಷ್ ಮತ್ತು ಸೆಬಾ ಸೀಮೆಗಳನ್ನು ಕೊಟ್ಟಿದ್ದೇನೆ. |
4. ನೀನು ನನ್ನ ದೃಷ್ಟಿಯಲ್ಲಿ ಅಮೂಲ್ಯನೂ, ಮಾನ್ಯನೂ, ಪ್ರಿಯನೂ ಆಗಿರುವುದರಿಂದ,
ನಾನು ನಿನ್ನ ಬದಲಾಗಿ ಮನುಷ್ಯರನ್ನೂ, ನಿನ್ನ ಪ್ರಾಣಕ್ಕೆ ಪ್ರತಿಯಾಗಿ ಜನಾಂಗಗಳನ್ನೂ ಕೊಡುವೆನು. |
5. ಭಯಪಡಬೇಡ, ನಾನು ನಿನ್ನ ಸಂಗಡ ಇದ್ದೇನೆ;
ನಿನ್ನ ಸಂತತಿಯವರನ್ನು ಪೂರ್ವದಿಂದ ತರುವೆನು, ನಿನ್ನವರನ್ನು ಪಶ್ಚಿಮದಿಂದ ಕೂಡಿಸುವೆನು. |
6. ‘ಅವರನ್ನು ಒಪ್ಪಿಸಿಬಿಡು’ ಎಂದು ಉತ್ತರದಿಕ್ಕಿಗೂ ‘ತಡೆಯಬೇಡ’ ಎಂದು ದಕ್ಷಿಣಕ್ಕೂ ಹೇಳಿ,
ದೂರದಲ್ಲಿರುವ ನನ್ನ ಕುಮಾರರನ್ನೂ, ದಿಗಂತಗಳಲ್ಲಿರುವ ನನ್ನ ಕುಮಾರಿಯರನ್ನೂ, |
7. ನನ್ನ ಮಹಿಮೆಗಾಗಿ ನಾನು ಸೃಷ್ಟಿಸಿ ರೂಪಿಸಿ ಉಂಟುಮಾಡಿದ ನನ್ನ ಹೆಸರಿನವರೆಲ್ಲರನ್ನೂ ಬರಮಾಡಬೇಕೆಂದು ಅಪ್ಪಣೆಕೊಡುವೆನು.
|
9. ಎಲ್ಲಾ ಜನಾಂಗಗಳು ಒಟ್ಟಿಗೆ ಬರಲಿ, ಸಕಲದೇಶೀಯರು ನೆರೆಯಲಿ, ಇವರ ದೇವರುಗಳಲ್ಲಿ ಯಾರು ಈ ಸಂಗತಿಯನ್ನು ಮುಂತಿಳಿಸಬಲ್ಲರು?
ನಡೆದ ಸಂಗತಿಗಳನ್ನು ಯಾರು ವಿವರಿಸಾರು? ತಾವು ಸತ್ಯವಂತರೆಂದು ಸ್ಥಾಪಿಸಿಕೊಳ್ಳುವುದಕ್ಕೆ ಸಾಕ್ಷಿಗಳನ್ನು ಕರೆದುತರಲಿ. ಆ ಸಾಕ್ಷಿಗಳು ಇವರ ಮಾತನ್ನು ಕೇಳಿ ‘ಇದು ನಿಜ’ ಎಂದು ಹೇಳಲಿ. |
10. ಯೆಹೋವನ ಮಾತೇನೆಂದರೆ, ‘ನೀವು ನನ್ನ ಸಾಕ್ಷಿ, ನಾನು ಆರಿಸಿಕೊಂಡಿರುವ ಸೇವಕನು.
ನೀವು ನನ್ನನ್ನು ತಿಳಿದು ನಂಬಿ, ನನ್ನನ್ನೇ ದೇವರು ಎಂದು ಗ್ರಹಿಸುವ ಹಾಗೆ ಇದನ್ನು ನಡೆಸಿದೆನು. ನನಗಿಂತ ಮೊದಲು ಯಾವ ದೇವರೂ ಇರಲಿಲ್ಲ, ನನ್ನ ಅನಂತರದಲ್ಲಿಯೂ ಇರುವುದಿಲ್ಲ. |
12. ನಾನೇ ರಕ್ಷಣೆಯನ್ನು ಮುಂತಿಳಿಸಿ ನೆರವೇರಿಸಿ ಪ್ರಕಟಿಸಿದ್ದೇನೆ, ನಿಮ್ಮಲ್ಲಿ ಅನ್ಯದೇವರು ಯಾರೂ ಇರಲಿಲ್ಲವಲ್ಲ;
ನೀವೇ ನನ್ನ ಸಾಕ್ಷಿಗಳು, ನಾನೊಬ್ಬನೇ ದೇವರು. |
13. ಹೌದು, ಇಂದಿನಿಂದ ನಾನೇ ದೇವರು. ನನ್ನ ಕೈಯಿಂದ ಬಿಡಿಸಬಲ್ಲವರು ಯಾರೂ ಇಲ್ಲ.
ನನ್ನ ಕೆಲಸಕ್ಕೆ ಯಾರು ಅಡ್ಡಿ ಬರುವರು?’ ” ಎಂಬುದೇ ಯೆಹೋವನ ಮಾತು. |
14. {ಬಾಬಿಲೋನಿಗೆ ಸಮೀಪಿಸಿರುವ ನಾಶನ} PS ನಿಮ್ಮ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ,
“ನಾನು ನಿಮಗೋಸ್ಕರ ದೂತನನ್ನು ಬಾಬಿಲೋನಿಗೆ ಕಳುಹಿಸಿ, ಕಸ್ದೀಯರನ್ನೆಲ್ಲಾ ತಮ್ಮ ವಿನೋದದ ಹಡಗುಗಳ ಮೇಲೆ ಪಲಾಯನ ಮಾಡುವಂತೆ ಅಟ್ಟಿಬಿಡುವೆನು. |
17. ಯಾರು ರಥಗಳನ್ನು, ಕುದರೆಗಳನ್ನು, ಸೈನ್ಯಗಳನ್ನು, ಪರಾಕ್ರಮಶಾಲಿಗಳನ್ನು ಹೊರಡಿಸಿ,
ಅವು ಬಿದ್ದು ಏಳಲಾರದಂತೆಯೂ, ದೀಪದೋಪಾದಿಯಲ್ಲಿ ನಂದಿ ಆರಿಹೋಗುವಂತೆಯೂ ಮಾಡಿದವನು” ಯೆಹೋವನು ಹೀಗೆನ್ನುತ್ತಾನೆ, |
19. ಇಗೋ, ಹೊಸ ಕಾರ್ಯವನ್ನು ಮಾಡುವೆನು, ಈಗ ತಲೆದೋರುತ್ತಲಿದೆ. ಇದು ನಿಮಗೆ ಕಾಣುವುದಿಲ್ಲವೋ?
ನಾನು ಅರಣ್ಯದಲ್ಲಿ ಮಾರ್ಗವನ್ನು ಏರ್ಪಡಿಸಿ, ಅರಣ್ಯದಲ್ಲಿ ನದಿಗಳನ್ನು ಹರಿಸುವೆನು. |
20. ಬಯಲಿನ ಮೃಗಗಳು, ನರಿಗಳು, ಗೂಬೆಗಳು ನನ್ನನ್ನು ಸನ್ಮಾನಿಸುತ್ತವೆ.
ಅರಣ್ಯದಲ್ಲಿ ನೀರನ್ನು, ಮರುಭೂಮಿಯಲ್ಲಿ ನದಿಗಳನ್ನು ನಾನು ಆರಿಸಿಕೊಂಡ ನನ್ನ ಪ್ರಜೆಗಳಿಗೆ ಕುಡಿಯುವುದಕ್ಕೆ ಕೊಟ್ಟೆನು. ನಾನು ಸೃಷ್ಟಿಸಿಕೊಂಡ ಆಪ್ತಜನರ ಜಲಪಾನಕ್ಕಾಗಿ, |
22. {ಇಸ್ರಾಯೇಲಿನ ಉದಾಸೀನತೆ} PS “ಯಾಕೋಬೇ, ನೀನಾದರೋ ನನ್ನನ್ನು ಪ್ರಾರ್ಥಿಸಲಿಲ್ಲ, ಇಸ್ರಾಯೇಲೇ, ನೀನು ನನ್ನ ವಿಷಯದಲ್ಲಿ ಬೇಸರಗೊಂಡಿದ್ದಿ.
|
23. ನೀನು ನನಗೆ ಹೋಮಕ್ಕಾಗಿ ಕುರಿ ಮೇಕೆಗಳನ್ನು ತಂದು ಯಜ್ಞಗಳಿಂದ ನನ್ನನ್ನು ಘನಪಡಿಸಲಿಲ್ಲ. ಕಾಣಿಕೆಗಳನ್ನು ಕೇಳಿ ನಿನ್ನನ್ನು ನಾನು ತೊಂದರೆಪಡಿಸಲಿಲ್ಲ, ಧೂಪಕ್ಕಾಗಿ ನಿನ್ನನ್ನು ಬೇಸರಗೊಳಿಸಲಿಲ್ಲ.
|
24. ನೀನು ನನಗೋಸ್ಕರ ಹಣಕೊಟ್ಟು ತೈಲವನ್ನು ತರಲಿಲ್ಲ, ಯಜ್ಞಪಶುಗಳ ಕೊಬ್ಬಿನಿಂದ ನನ್ನನ್ನು ತೃಪ್ತಿಪಡಿಸಲಿಲ್ಲ. ಆದರೆ ನಿನ್ನ ಪಾಪಗಳಿಂದ ನನ್ನನ್ನು ನೀನು ತೊಂದರೆಗೆ ಗುರಿಮಾಡಿರುವೆ. ನಿನ್ನ ದೋಷಗಳಿಂದ ನನ್ನನ್ನು ಬೇಸರಗೊಳಿಸಿದ್ದೀ.
|
25. ನಾನಾಗಿ ನಾನೇ ನನಗೋಸ್ಕರ ನಿನ್ನ ದ್ರೋಹಗಳನ್ನು ಅಳಿಸಿ ಬಿಡುತ್ತೇನೆ. ನಿನ್ನ ಪಾಪಗಳನ್ನು ನನ್ನ ನೆನಪಿನಲ್ಲಿಡುವುದಿಲ್ಲ.
|
26. ನನಗೆ ನನ್ನ ಪಾಪಗಳನ್ನು ಜ್ಞಾಪಕಪಡಿಸು, ನಾವಿಬ್ಬರೂ ನಿನ್ನ ಅಪಾರಾಧ ಕುರಿತು ವಾದಿಸುವ, ನಿನ್ನ ಸದ್ಧರ್ಮವು ಗೊತ್ತಾಗುವಂತೆ ನಿನ್ನ ನ್ಯಾಯವನ್ನು ತೋರ್ಪಡಿಸು.
|
27. ನಿನ್ನ ಮೂಲಪಿತೃ * ಮೂಲಪಿತೃ ಯಾಕೋಬ. ಧರ್ಮೋ 26:5, ಹೋಶೇಯ 12:2-4, 12. ಪಾಪಮಾಡಿದ್ದಾನೆ, ನಿನ್ನ ಬೋಧಕರು ನನಗೆ ದ್ರೋಹಮಾಡಿದ್ದಾರೆ.
|
28. ಆದಕಾರಣ ನಾನು ಪವಿತ್ರಾಲಯದ ಪ್ರಧಾನರನ್ನು ಹೊಲಸಿಗೆ ತಂದು ಯಾಕೋಬನ್ನು ಶಾಪಕ್ಕೂ, ಇಸ್ರಾಯೇಲನ್ನು ದೂಷಣೆಗೂ ಒಪ್ಪಿಸಿಬಿಟ್ಟಿದ್ದೇನೆ.” PE
|