ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯೆಶಾಯ
1. {#1ಇಸ್ರಾಯೇಲಿನ ಮುಂದಿನ ವೃದ್ಧಿ } [QS]ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಇಸ್ರಾಯೇಲೇ, ಈಗ ಕೇಳು: [QE]
2. [QS]ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ, [QE][QS]“ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ,[* ಯೆಶುರೂನೇ, ಇಸ್ರಾಯೇಲ್ ] ಭಯಪಡಬೇಡ! [QE]
3. [QS]ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, [QE][QS]ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. [QE]
4. [QS]ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು. [QE]
5. [QS](ಅನ್ಯಜನರಲ್ಲಿ) ಒಬ್ಬನು, ‘ನಾನು ಯೆಹೋವನ ಭಕ್ತನು’ ಎಂದು ಹೇಳಿಕೊಳ್ಳುವನು. [QE][QS]ಇನ್ನೊಬ್ಬನು, ‘ನಾನು ಯಾಕೋಬ್ಯನ ಹೆಸರಿನವನು’ ಮತ್ತೊಬ್ಬನು ತನ್ನ ಕೈಯ ಮೇಲೆ, ‘ದಾಸನು’ ಎಂದು ಬರೆದುಕೊಂಡು ಇಸ್ರಾಯೇಲ್ ಎಂಬ ಬಿರುದನ್ನು ಧರಿಸಿಕೊಳ್ಳುವನು.” [QE]
6. {#1ಯೆಹೋವನು ಇಸ್ರಾಯೇಲಿನ ರಕ್ಷಕ } [QS]ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, [QE][QS]“ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ. [QE]
7. [QS]ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ? [QE][QS]ಅಂಥವರಿದ್ದರೆ ನನ್ನೆದುರಿಗೆ ಹೇಳಿ ಸ್ಥಾಪಿಸಲಿ. ಇಲ್ಲವೆ ಮುಂದಿನವುಗಳನ್ನು ಈಗ ತಿಳಿಸಲಿ, ಭವಿಷ್ಯತ್ತುಗಳನ್ನು ಹೇಳಲಿ. [QE]
8. [QS]ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. [QE][QS]ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ [† ಕೀರ್ತನೆ 18:2 ಅನ್ನು ನೋಡಿರಿ. ]ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.” [QE]
9. {#1ವಿಗ್ರಹಾರಾಧನೆಯ ಮೂಢತನ } [QS]ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, [QE][QS]ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು. [QE]
10. [QS]ದೇವತೆಯನ್ನು ರೂಪಿಸುವವರೂ, ವ್ಯರ್ಥವಿಗ್ರಹವನ್ನು ಎರಕ ಹೊಯ್ಯುವವರೂ ಎಂಥವರು? [QE]
11. [QS]ವಿಗ್ರಹ ಶರಣರೆಲ್ಲಾ ಆಶಾಭಂಗಪಡುವರು, ಅದನ್ನು ಕೆತ್ತಿದವರು ಮನುಷ್ಯಮಾತ್ರದವರೇ. [QE][QS]ಅವರೆಲ್ಲರು ಒಟ್ಟುಗೂಡಿಕೊಂಡು ನಿಲ್ಲಲಿ. ಅವರು ಒಟ್ಟಿಗೆ ಹೆದರಿಕೊಂಡು ಲಜ್ಜೆಪಡುವರು. [QE]
12. [QS]ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ, [QE][QS]ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು. [QE][QS]ಅವನು ಹಸಿದು ಬಳಲುವನು, ನೀರಿಲ್ಲದೆ ದಣಿಯುವನು. [QE]
13. [QS]ಬಡಗಿಯು ಮರಕ್ಕೆ ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು [QE][QS]ಬಾಚಿಗಳಿಂದ ಕೆತ್ತಿ, ಕೈವಾರದಿಂದ ಗುರುತಿಸಿ, [QE][QS]ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ಮನುಷ್ಯನ ಅಂದದಂತೆ ರೂಪಿಸುವನು. [QE]
14. [QS]ಅವನು ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುವನು, ತುರಾಯಿ, ಅಲ್ಲೋನ್ ಮರಗಳನ್ನು ತೆಗೆದುಕೊಳ್ಳುವನು. [QE][QS]ವನವೃಕ್ಷಗಳನ್ನು ತನಗೋಸ್ಕರ ಬೆಳೆಯುವನು. ಅವನು ಪೀತದಾರವನ್ನು ನೆಡಲು, ಮಳೆಯು ಅದನ್ನು ಬೆಳೆಸುವುದು. [QE]
15. [QS]ಅದು ಸೌದೆಗಾಗುವುದು. ಅದರಿಂದ ಬೆಂಕಿಯನ್ನು ಉರಿಸಿ ಚಳಿಕಾಯಿಸಿಕೊಳ್ಳುವನು. ಅವನು ಬೆಂಕಿಯನ್ನು ಹಚ್ಚಿ ರೊಟ್ಟಿಯನ್ನು ಸುಡುವನು. [QE][QS]ಅದರಲ್ಲೇ ಒಂದು ದೇವರನ್ನು ಮಾಡಿಕೊಂಡು ಪೂಜಿಸುವನು, ವಿಗ್ರಹವನ್ನು ಮಾಡಿ ಅದಕ್ಕೆ ಅಡ್ಡಬೀಳುವನು. [QE]
16. [QS]ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು, ಅದರ ಮೇಲೆ ಮಾಂಸವನ್ನು ಸುಡುವನು. ಅದನ್ನು ತಿಂದು ತೃಪ್ತನಾಗುವನು. [QE][QS]ತನ್ನನ್ನು ಕಾಯಿಸಿಕೊಳ್ಳುತ್ತಾ, “ಆಹಾ, ಬೆಂಕಿಯನ್ನು ಕಂಡೆ, ಬೆಚ್ಚಗಾಯಿತು” ಎಂದುಕೊಳ್ಳುವನು. [QE]
17. [QS]ಅದರಲ್ಲಿ ಉಳಿದ ಭಾಗವನ್ನು ತನ್ನ ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, [QE][QS]“ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಪ್ರಾರ್ಥಿಸುವನು. [QE]
18. [QS]ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ. [QE]
19. [QS]“ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ, [QE][QS]ಉಳಿದ ಭಾಗದಿಂದ ಅಸಹ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” [QE][QS]ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು. [QE]
20. [QS]ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು. [QE]
21. [QS]ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ. [QE][QS]ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು. [QE]
22. [QS]ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, [QE][QS]ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ. [QE]
23. [QS]ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. [QE][QS]ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. [QE][QS]ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು. [QE]
24. {#1ಯೆಹೋವನ ಸರ್ವಾಧಿಕಾರ } [QS]ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, [QE][QS]“ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, [QE][QS]ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ. [QE]
25. [QS]ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, [QE][QS]ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು. [QE]
26. [QS]ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. [QE][QS]ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ [QE]
27. [QS]ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ. [QE]
28. [QS]ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’ ” ಎಂಬುದಾಗಿ ಮಾತನಾಡುವವನು ನಾನೇ. [QE]
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 44 / 66
ಇಸ್ರಾಯೇಲಿನ ಮುಂದಿನ ವೃದ್ಧಿ 1 ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಇಸ್ರಾಯೇಲೇ, ಈಗ ಕೇಳು: 2 ನಿನ್ನನ್ನು ನಿರ್ಮಾಣಮಾಡಿ, ಗರ್ಭದಿಂದಲೂ ರೂಪಿಸುತ್ತಾ ಬಂದು ನಿನಗೆ ಸಹಾಯ ಮಾಡುವವನಾದ ಯೆಹೋವನು ಹೀಗೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ನಾನು ಆದುಕೊಂಡ ಯೆಶುರೂನೇ,* ಯೆಶುರೂನೇ, ಇಸ್ರಾಯೇಲ್ ಭಯಪಡಬೇಡ! 3 ಏಕೆಂದರೆ ಬತ್ತಿದ ಭೂಮಿಯಲ್ಲಿ ಮಳೆಗರೆದು ಒಣನೆಲದಲ್ಲಿ ಕಾಲುವೆಗಳನ್ನು ಹರಿಸುವೆನು, ನಿನ್ನ ಸಂತಾನದವರಲ್ಲಿ ನನ್ನ ಆತ್ಮವನ್ನು, ನಿನ್ನ ಸಂತತಿಯವರ ಮೇಲೆ ನನ್ನ ಆಶೀರ್ವಾದವನ್ನು ಸುರಿಸುವೆನು. 4 ನೀರಿನ ಕಾಲುವೆಗಳ ಬಳಿಯಲ್ಲಿ ಹಸಿರು ಹುಲ್ಲಿನ ನಡುವೆ ಬೆಳೆಯುವ ನೀರವಂಜಿಗಳಂತೆ ವೃದ್ಧಿಯಾಗುವರು. 5 (ಅನ್ಯಜನರಲ್ಲಿ) ಒಬ್ಬನು, ‘ನಾನು ಯೆಹೋವನ ಭಕ್ತನು’ ಎಂದು ಹೇಳಿಕೊಳ್ಳುವನು. ಇನ್ನೊಬ್ಬನು, ‘ನಾನು ಯಾಕೋಬ್ಯನ ಹೆಸರಿನವನು’ ಮತ್ತೊಬ್ಬನು ತನ್ನ ಕೈಯ ಮೇಲೆ, ‘ದಾಸನು’ ಎಂದು ಬರೆದುಕೊಂಡು ಇಸ್ರಾಯೇಲ್ ಎಂಬ ಬಿರುದನ್ನು ಧರಿಸಿಕೊಳ್ಳುವನು.” ಯೆಹೋವನು ಇಸ್ರಾಯೇಲಿನ ರಕ್ಷಕ 6 ಇಸ್ರಾಯೇಲರ ಅರಸನೂ, ವಿಮೋಚಕನೂ ಆಗಿರುವ ಸೇನಾಧೀಶ್ವರನಾದ ಯೆಹೋವನು ಹೀಗೆನ್ನುತ್ತಾನೆ, “ನಾನೇ ಆದಿಯೂ, ನಾನೇ ಅಂತ್ಯವೂ. ನನ್ನ ಹೊರತು ಬೇರೆ ಯಾವ ದೇವರೂ ಇಲ್ಲ. 7 ನಾನು ಪುರಾತನ ಕಾಲದವರನ್ನು ಸೃಷ್ಟಿಸಿದಂದಿನಿಂದ ನನ್ನ ಹಾಗೆ ಯಾರು ಪ್ರಕಟಿಸಿಕೊಂಡಿದ್ದಾರೆ? ಅಂಥವರಿದ್ದರೆ ನನ್ನೆದುರಿಗೆ ಹೇಳಿ ಸ್ಥಾಪಿಸಲಿ. ಇಲ್ಲವೆ ಮುಂದಿನವುಗಳನ್ನು ಈಗ ತಿಳಿಸಲಿ, ಭವಿಷ್ಯತ್ತುಗಳನ್ನು ಹೇಳಲಿ. 8 ಹೆದರಬೇಡಿರಿ, ಭಯಪಡಬೇಡಿರಿ! ನಾನು ಪೂರ್ವದಿಂದಲೂ ನಿಮಗೆ ಹೇಳಿ ಪ್ರಕಟಿಸಿಕೊಂಡೆನಷ್ಟೆ. ನೀವೇ ನನ್ನ ಸಾಕ್ಷಿಗಳು. ನಾನಲ್ಲದೆ ಇನ್ನೊಬ್ಬ ದೇವರಿದ್ದಾನೋ? ಇನ್ನು ಯಾವ ಕೀರ್ತನೆ 18:2 ಅನ್ನು ನೋಡಿರಿ. ಶರಣನೂ ಇಲ್ಲ, ಯಾರೂ ನನಗೆ ಗೊತ್ತಿಲ್ಲ.” ವಿಗ್ರಹಾರಾಧನೆಯ ಮೂಢತನ 9 ವಿಗ್ರಹ ಕೆತ್ತುವವರೆಲ್ಲಾ ನಿರರ್ಥಕರು, ಅವರ ಇಷ್ಟದ ವಿಗ್ರಹಗಳು ಯಾವುದಕ್ಕೂ ಉಪಯೋಗವಿಲ್ಲ, ವಿಗ್ರಹಗಳ ಪಕ್ಷದ ಸಾಕ್ಷಿಗಾರರು ನೋಡುವವರಲ್ಲ, ಗ್ರಹಿಸುವವರಲ್ಲ, ಅವರು ನಾಚಿಕೆಗೆ ಗುರಿಯಾಗುವರು. 10 ದೇವತೆಯನ್ನು ರೂಪಿಸುವವರೂ, ವ್ಯರ್ಥವಿಗ್ರಹವನ್ನು ಎರಕ ಹೊಯ್ಯುವವರೂ ಎಂಥವರು? 11 ವಿಗ್ರಹ ಶರಣರೆಲ್ಲಾ ಆಶಾಭಂಗಪಡುವರು, ಅದನ್ನು ಕೆತ್ತಿದವರು ಮನುಷ್ಯಮಾತ್ರದವರೇ. ಅವರೆಲ್ಲರು ಒಟ್ಟುಗೂಡಿಕೊಂಡು ನಿಲ್ಲಲಿ. ಅವರು ಒಟ್ಟಿಗೆ ಹೆದರಿಕೊಂಡು ಲಜ್ಜೆಪಡುವರು. 12 ಕಮ್ಮಾರನು ತನ್ನ ಸಲಕರಣೆಗಳನ್ನು ತೆಗೆದುಕೊಂಡು ಕೆಂಡದಲ್ಲಿ ಕೆಲಸಮಾಡುತ್ತಾ, ಚಮಟಿಕೆಗಳಿಂದ ಬಡಿದು ತೋಳಿನ ಬಲದಿಂದ ವಿಗ್ರಹವನ್ನು ರೂಪಿಸುವನು. ಅವನು ಹಸಿದು ಬಳಲುವನು, ನೀರಿಲ್ಲದೆ ದಣಿಯುವನು. 13 ಬಡಗಿಯು ಮರಕ್ಕೆ ನೂಲು ಹಾಕಿ ಮೊಳೆಯಿಂದ ಗೆರೆಯೆಳೆದು ಬಾಚಿಗಳಿಂದ ಕೆತ್ತಿ, ಕೈವಾರದಿಂದ ಗುರುತಿಸಿ, ಅದು ಮನೆಯಲ್ಲಿ ವಾಸಿಸತಕ್ಕದ್ದಾಗಲೆಂದು ಮನುಷ್ಯನ ಆಕಾರಕ್ಕೆ ತಂದು ಮನುಷ್ಯನ ಅಂದದಂತೆ ರೂಪಿಸುವನು. 14 ಅವನು ತನ್ನ ಕೆಲಸಕ್ಕಾಗಿ ದೇವದಾರುಗಳನ್ನು ಕಡಿಯುವನು, ತುರಾಯಿ, ಅಲ್ಲೋನ್ ಮರಗಳನ್ನು ತೆಗೆದುಕೊಳ್ಳುವನು. ವನವೃಕ್ಷಗಳನ್ನು ತನಗೋಸ್ಕರ ಬೆಳೆಯುವನು. ಅವನು ಪೀತದಾರವನ್ನು ನೆಡಲು, ಮಳೆಯು ಅದನ್ನು ಬೆಳೆಸುವುದು. 15 ಅದು ಸೌದೆಗಾಗುವುದು. ಅದರಿಂದ ಬೆಂಕಿಯನ್ನು ಉರಿಸಿ ಚಳಿಕಾಯಿಸಿಕೊಳ್ಳುವನು. ಅವನು ಬೆಂಕಿಯನ್ನು ಹಚ್ಚಿ ರೊಟ್ಟಿಯನ್ನು ಸುಡುವನು. ಅದರಲ್ಲೇ ಒಂದು ದೇವರನ್ನು ಮಾಡಿಕೊಂಡು ಪೂಜಿಸುವನು, ವಿಗ್ರಹವನ್ನು ಮಾಡಿ ಅದಕ್ಕೆ ಅಡ್ಡಬೀಳುವನು. 16 ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸುವನು, ಅದರ ಮೇಲೆ ಮಾಂಸವನ್ನು ಸುಡುವನು. ಅದನ್ನು ತಿಂದು ತೃಪ್ತನಾಗುವನು. ತನ್ನನ್ನು ಕಾಯಿಸಿಕೊಳ್ಳುತ್ತಾ, “ಆಹಾ, ಬೆಂಕಿಯನ್ನು ಕಂಡೆ, ಬೆಚ್ಚಗಾಯಿತು” ಎಂದುಕೊಳ್ಳುವನು. 17 ಅದರಲ್ಲಿ ಉಳಿದ ಭಾಗವನ್ನು ತನ್ನ ದೇವರನ್ನಾಗಿಯೂ, ಕೆತ್ತಿದ ವಿಗ್ರಹವನ್ನಾಗಿಯೂ ಮಾಡಿ ಅದಕ್ಕೆ ಅಡ್ಡಬಿದ್ದು ನಮಸ್ಕರಿಸಿ, “ನೀನೇ ನನ್ನ ದೇವರು, ನನ್ನನ್ನು ರಕ್ಷಿಸು” ಎಂದು ಪ್ರಾರ್ಥಿಸುವನು. 18 ಇಂಥವರು ಏನೂ ತಿಳಿಯದವರು, ಏನೂ ಗ್ರಹಿಸಲಾರದವರು ಏಕೆಂದರೆ ಅವರ ಕಣ್ಣು ಕಾಣದಂತೆಯೂ, ಹೃದಯ ಗ್ರಹಿಸದಂತೆಯೂ ಯೆಹೋವನು ಮುಚ್ಚಿಬಿಟ್ಟಿದ್ದಾನೆ. 19 “ನಾನು ಒಂದು ಭಾಗವನ್ನು ಬೆಂಕಿಯಲ್ಲಿ ಉರಿಸಿದೆನು. ಹೌದು, ಅದರ ಕೆಂಡದಲ್ಲಿ ರೊಟ್ಟಿ ಮಾಡಿ ಮಾಂಸವನ್ನು ಸುಟ್ಟು ತಿಂದೆನಲ್ಲಾ, ಉಳಿದ ಭಾಗದಿಂದ ಅಸಹ್ಯವಾದ ವಿಗ್ರಹವನ್ನು ನಾನು ಮಾಡಲೋ? ಮರದ ತುಂಡಿಗೆ ಅಡ್ಡಬೀಳಬಹುದೋ?” ಎಂದುಕೊಳ್ಳುವಷ್ಟು ಜ್ಞಾನ ವಿವೇಕಗಳು ಯಾರಿಗೂ ಇಲ್ಲ, ಯಾರೂ ಇದನ್ನು ಮನಸ್ಸಿಗೆ ತಾರರು. 20 ಅವನು ತಿನ್ನುವುದು ಬೂದಿಯೇ; ಮೋಸಕ್ಕೊಳಗಾದ ಹೃದಯವು ಅವನಿಗೆ ದಾರಿತಪ್ಪಿಸಿದ ಕಾರಣ, “ನನ್ನ ಕೈ ಸುಳ್ಳನ್ನು ಹಿಡಿದಿದೆಯಲ್ಲಾ” ಎಂದುಕೊಳ್ಳಲೂ ಆಗದು. ತನ್ನನ್ನು ರಕ್ಷಿಸಿಕೊಳ್ಳಲೂ ಆಗದು. 21 ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ. ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು. 22 ನಿನ್ನ ದ್ರೋಹಗಳನ್ನು ಮೋಡದಂತೆ ನಿವಾರಿಸಿದ್ದೇನೆ. ನಿನ್ನ ಪಾಪಗಳನ್ನು ಮಂಜಿನಂತೆ ಕರಗಿಸಿದ್ದೇನೆ, ನಿನ್ನನ್ನು ವಿಮೋಚಿಸಿದ್ದೇನೆ, ನನ್ನ ಕಡೆಗೆ ತಿರುಗಿಕೋ. 23 ಆಕಾಶವೇ, ಹರ್ಷಧ್ವನಿಗೈ, ಯೆಹೋವನು ತನ್ನ ಕಾರ್ಯವನ್ನು ನೆರವೇರಿಸಿದ್ದಾನೆ. ಭೂಮಿಯ ಅಧೋಭಾಗವೇ, ಆರ್ಭಟಿಸು. ಪರ್ವತಗಳೇ, ವನವೇ, ಸಕಲವನವೃಕ್ಷಗಳೇ, ಉತ್ಸಾಹಧ್ವನಿಮಾಡಿರಿ. ಏಕೆಂದರೆ ಯೆಹೋವನು ಯಾಕೋಬನ್ನು ವಿಮೋಚಿಸಿದ್ದಾನೆ. ಇಸ್ರಾಯೇಲಿನ ರಕ್ಷಣೆಯಿಂದ ತನ್ನ ಮಹಿಮೆಯನ್ನು ಪ್ರಚುರಗೊಳಿಸುವನು. ಯೆಹೋವನ ಸರ್ವಾಧಿಕಾರ 24 ನಿನ್ನನ್ನು ಗರ್ಭದಿಂದಲೂ ರೂಪಿಸುತ್ತಾ ಬಂದಿರುವ ನಿನ್ನ ವಿಮೋಚಕನಾದ ಯೆಹೋವನು ಹೀಗೆನ್ನುತ್ತಾನೆ, “ಸರ್ವವನ್ನು ಉಂಟುಮಾಡಿದ ಕರ್ತನಾದ ಯೆಹೋವನು ನಾನೇ, ನಾನೊಬ್ಬನೇ ಗಗನಮಂಡಲವನ್ನು ಹರಡಿ, ಭೂಮಂಡಲವನ್ನು ವಿಸ್ತರಿಸಿದ್ದೇನೆ. 25 ನಾನು ಕೊಚ್ಚಿಕೊಳ್ಳುವವರ ಶಕುನಗಳನ್ನು ನಿರರ್ಥಕಪಡಿಸಿ, ಕಣಿಹೇಳುವವರನ್ನು ಮರುಳುಗೊಳಿಸಿ, ಜ್ಞಾನಿಗಳನ್ನು ಹಿಂದಕ್ಕೆ ತಳ್ಳಿ ಅವರ ತಿಳಿವಳಿಕೆಯನ್ನು ಹುಚ್ಚುತನವಾಗ ಮಾಡುವೆನು. 26 ನನ್ನ ಸೇವಕನ ಮಾತನ್ನು ಸ್ಥಾಪಿಸಿ ನನ್ನ ದೂತರ ಮಂತ್ರಾಲೋಚನೆಯನ್ನು ನೆರವೇರಿಸುವವನಾಗಿದ್ದೇನೆ. ಯೆರೂಸಲೇಮಿಗೆ, ‘ನೀನು ಜನ ನಿವಾಸವಾಗುವಿ’ ಎಂದು ಯೆಹೂದದ ಪಟ್ಟಣಗಳಿಗೆ, ‘ಅವು ತಿರುಗಿ ಕಟ್ಟಲ್ಪಡುವವು, ಅಲ್ಲಿನ ಹಾಳು ಸ್ಥಳಗಳನ್ನು ನೆಟ್ಟಗೆ ಮಾಡುವೆನು’ ಎಂದು ಮುಂತಿಳಿಸಿ 27 ಜಲರಾಶಿಗೆ, ‘ಬತ್ತಿಹೋಗು, ನಿನ್ನಲ್ಲಿ ಸೇರುವ ನದಿಗಳನ್ನು ಒಣಗಿಸುವೆನು’ ಎಂದು ನಾನು ಅಪ್ಪಣೆ ಕೊಡುವವನಾಗಿದ್ದೇನೆ. 28 ಕೋರೆಷನ ವಿಷಯವಾಗಿ, ‘ಅವನು ನನ್ನ ಮಂದೆಯನ್ನು ಕಾಯುವವನು, ಯೆರೂಸಲೇಮು ಕಟ್ಟಲ್ಪಡಲಿ, ದೇವಸ್ಥಾನದ ಅಸ್ತಿವಾರವು ಹಾಕಲ್ಪಡಲಿ’ ಎಂದು ಹೇಳಿ, ‘ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸತಕ್ಕವನು’ ” ಎಂಬುದಾಗಿ ಮಾತನಾಡುವವನು ನಾನೇ.
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 44 / 66
×

Alert

×

Kannada Letters Keypad References