1. {#1ಬಾಬೆಲಿನ ಅಶಕ್ತ ದೇವತೆಗಳು ಮತ್ತು ಸರ್ವಶಕ್ತ ಯೆಹೋವ } [QS]ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ,[* ಬೇಲ್ ದೇವತೆಯು ಬಾಗಿದೆ, ನೆಬೋ ದೇವತೆಯು ಕುಗ್ಗಿದೆ, ಮರ್ದುಕ್ ಎಂದೂ ಕರೆಯಲ್ಪಡುವ ಬೇಲ್, ಬಾಬೆಲಿನ ಮುಖ್ಯ ದೇವರುಗಳಲ್ಲಿ ಒಬ್ಬನಾಗಿದ್ದಾನೆ. ನೆಬೋ ಸಹ ಮತ್ತೊಬ್ಬನಾಗಿದ್ದಾನೆ; ಇವನು ಮರ್ದುಕ್ ನ ಮಗನು. ] [QE][QS]ಅವುಗಳ ವಿಗ್ರಹಗಳು ಪಶುಗಳ ಮೇಲೆ ಹೊರಿಸಲ್ಪಟ್ಟಿವೆ, ನೀವು ಮೆರವಣಿಗೆಯಾಗಿ ಹೊರುತ್ತಿದ್ದವುಗಳು ಪಶುಗಳಿಗೆ ಭಾರವಾದ ಹೊರೆಯಾಗಿ ಅವುಗಳು ಬಳಲಿದವು. [QE]
2. [QS]ಒಟ್ಟಿಗೆ ಕುಗ್ಗಿ, ಬಗ್ಗಿವೆ, ತಮ್ಮ ಮೇಲೆ ಬಿದ್ದ ಭಾರವನ್ನು ಹೊತ್ತು ನಿರ್ವಹಿಸಲಾರದೆ, [QE][QS]ಬಂಧನಕ್ಕೆ ಸ್ವಇಚ್ಛೆಯಿಂದ ಒಳಗಾದವು. [QE]
3. [QS]ಯಾಕೋಬವಂಶವೇ, ಇಸ್ರಾಯೇಲ್ ಮನೆತೆನದವರಲ್ಲಿ ಉಳಿದ ಸಂತಾನವೇ, [QE][QS]ನಿಮ್ಮನ್ನು ಗರ್ಭದಿಂದ ಹೊತ್ತು, ಹುಟ್ಟಿದಂದಿನಿಂದ ಪಾಲಿಸುತ್ತಿದ್ದ ನನ್ನ ಮಾತಿಗೆ ಕಿವಿಗೊಡಿರಿ. [QE]
4. [QS]ನಿಮ್ಮ ಮುಪ್ಪಿನ ತನಕ ನಾನೇ ಆಧಾರ, ನರೆ ಬಂದಾಗಲೂ ನಿಮ್ಮನ್ನು ಹೊತ್ತು ಸಹಿಸುವೆನು. [QE][QS]ನಾನೇ ಉಂಟುಮಾಡಿದೆನು, ನಾನೇ ಹೊರುವೆನು. ಹೌದು, ನಿಮ್ಮನ್ನು ಹೊತ್ತು ಸಹಿಸಿ ನಿರ್ವಹಿಸುವೆನು. [QE]
5. [QS]ನನ್ನನ್ನು ಯಾರಿಗೆ ಸಮಾನ ಎಂದು ತಿಳಿದಿದ್ದೀರಿ? ನಾನು ಯಾರಿಗೆ ಸಮಾನನೆಂದು, ನನ್ನನ್ನು ಯಾರೊಡನೆ ಹೊಲಿಸುತ್ತೀರಿ? [QE]
6. [QS]ಚೀಲದಿಂದ ಚಿನ್ನವನ್ನು ಸುರಿದು, ತಕ್ಕಡಿಯಲ್ಲಿ ಬೆಳ್ಳಿಯನ್ನು ತೂಗಿ, [QE][QS]ಅಕ್ಕಸಾಲಿಗನಿಗೆ ಕೊಟ್ಟು ಕೂಲಿಯನ್ನು ಗೊತ್ತುಮಾಡಿದಾಗ, ಅವನು ಅದನ್ನು ದೇವರನ್ನಾಗಿ ಮಾಡಲು, ಅವರು ಅದಕ್ಕೆ ಎರಗಿ ಪೂಜೆಮಾಡುವರು. [QE]
7. [QS]ಅವರು ಅದನ್ನು ಹೆಗಲ ಮೇಲೆ ಹೊತ್ತುಕೊಂಡು ಮೆರವಣಿಗೆ ಮಾಡಿ, ಪೀಠದ ಮೇಲೆ ಇಳಿಸಿ ನಿಲ್ಲಿಸುವರು. ಅದು ಅಲ್ಲಿಂದ ಜರುಗದು. [QE][QS]ಒಬ್ಬನು ಕೂಗಿಕೊಂಡರೂ ಅದು ಅವನಿಗೆ ಉತ್ತರಕೊಡಲಾರದು. ಇಲ್ಲವೆ ಅವನನ್ನು ಕಷ್ಟದಿಂದ ಬಿಡಿಸಲಾರದು. [QE]
8. [QS]“ದ್ರೋಹಿಗಳೇ, ಇದನ್ನು ಜ್ಞಾಪಕದಲ್ಲಿಟ್ಟುಕೊಂಡು ಗಮನಿಸಿ ಮನುಷ್ಯರಿಗೆ ತಕ್ಕಂತೆ ನಡೆಯಿರಿ! [QE]
9. [QS]ಪುರಾತನವಾದ ಹಳೆಯ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; [QE][QS]ನಾನೇ ದೇವರು, ಇನ್ನು ಯಾರೂ ಇಲ್ಲ; ನಾನೇ ದೇವರು, ನನಗೆ ಸರಿಸಮಾನನು ಇಲ್ಲ. [QE]
10. [QS]ಆರಂಭದಲ್ಲಿಯೇ ಅಂತ್ಯವನ್ನು ತಿಳಿಸಿದ್ದೇನೆ. ‘ನನ್ನ ಸಂಕಲ್ಪವು ನಿಲ್ಲುವುದು, [QE][QS]ನನ್ನ ಇಷ್ಟಾರ್ಥವನ್ನೆಲ್ಲಾ ನೆರವೇರಿಸುವೆನು’ ಎಂದು ಹೇಳಿ ಇನ್ನೂ ನಡೆಯದಿರುವ ಕಾರ್ಯಗಳನ್ನು ಪುರಾತನಕಾಲದಲ್ಲಿಯೇ ಅರುಹಿದ್ದೇನೆ. [QE]
11. [QS]ಮೂಡಲಿಂದ ಒಂದು ಪಕ್ಷಿಯನ್ನು ಬರಮಾಡು, ದೂರದೇಶದಿಂದ ನನ್ನ ಸಂಕಲ್ಪವನ್ನು ನೆರವೇರಿಸುವ ಮನುಷ್ಯನು ಬರಲಿ ಎಂದು ಕರೆದಿದ್ದೇನೆ. [QE][QS]ಎಂದು ನಾನೇ ನುಡಿದಿದ್ದೇನೆ, ನಾನು ಅದನ್ನು ಈಡೇರಿಸುವೆನು. ಆಲೋಚಿಸಿದ್ದೇನೆ, ನಾನು ಅದನ್ನು ಸಾಧಿಸುವೆನು. [QE]
12. [QS]ಕಠಿಣ ಹೃದಯದವರೇ, ನೀತಿಗೆ ದೂರವಾದವರೇ, ನನ್ನ ಮಾತಿಗೆ ಕಿವಿಗೊಡಿರಿ. [QE]
13. [QS]ನನ್ನ ನೀತಿಯನ್ನು ಹತ್ತಿರಕ್ಕೆ ಬರ ಮಾಡುವೆನು. ಅದು ಇನ್ನು ದೂರವಾಗಿರದು, ನನ್ನ ರಕ್ಷಣೆಯು ತಡವಾಗದು, [QE][QS]ಚೀಯೋನಿನಲ್ಲಿ ರಕ್ಷಣಾ ಕಾರ್ಯವನ್ನು ನಡೆಸಿ ಇಸ್ರಾಯೇಲಿಗೆ ನನ್ನ ಮಹಿಮೆಯನ್ನು ದಯಪಾಲಿಸುವೆನು.” [QE]