1. {ಮೊಂಡರಾದ ಇಸ್ರಾಯೇಲರು} PS ಇಸ್ರಾಯೇಲೆಂಬ ಹೆಸರಿನವರೂ, ಯೆಹೂದ ವಂಶೋತ್ಪನ್ನರೂ ಆದ ಯಾಕೋಬನ ಮನೆತನದವರೇ,
ನೀವು ಯೆಹೋವನ ನಾಮದ ಮೇಲೆ ಆಣೆಯಿಟ್ಟು, ಇಸ್ರಾಯೇಲಿನ ದೇವರನ್ನು ಸ್ಮರಿಸುತ್ತೀರಿ, ನಿಜ. ಆದರೆ ಈ ನಿಮ್ಮ ಕಾರ್ಯಗಳು ಸತ್ಯಕ್ಕೂ, ಧರ್ಮಕ್ಕೂ ಅನುಸಾರವಾಗಿಲ್ಲ. |
2. ಇವರು ತಮ್ಮನ್ನು ಪರಿಶುದ್ಧ ಪಟ್ಟಣದವರು ಎಂದುಕೊಂಡು,
ದೇವರು ಇಸ್ರಾಯೇಲಿನವನೇ ಎಂದು ಆತನ ಮೇಲೆ ಭರವಸವಿಟ್ಟುಕೊಂಡಿರುತ್ತಾರೆ. ಆತನ ಹೆಸರೋ ಸಕಲ ಸೈನ್ಯಗಳ ಸರ್ವಶಕ್ತನಾದ ಯೆಹೋವನು ಎಂಬುದು. |
3. ಯಾಕೋಬನ ಮನೆತನವೇ, ಕೇಳು, ಈವರೆಗೂ ನಡೆದ ಸಂಗತಿಗಳನ್ನು ಪುರಾತನಕಾಲದಲ್ಲಿಯೇ ತಿಳಿಸಿದೆನು. ಹೌದು, ನನ್ನ ಬಾಯಿಂದ ಹೊರಟವು, ನಾನು ಅವುಗಳನ್ನು ಪ್ರಕಟಿಸಿದೆನು.
ನಾನು ತಟ್ಟನೆ ನಡೆಸಲು ಅವು ನೆರವೇರಿದವು. |
5. ಆದುದರಿಂದಲೇ, “ಈ ಕಾರ್ಯಗಳನ್ನು ನನ್ನ ವಿಗ್ರಹವು ನಡೆಸಿದೆ, ನನ್ನ ಕೆತ್ತಿದ ವಿಗ್ರಹ ಮತ್ತು ಎರಕದ ವಿಗ್ರಹ ಇವುಗಳನ್ನು ವಿಧಿಸಿದೆ” ಎಂದು
ನೀನು ಹೇಳಿಕೊಳ್ಳದಂತೆ ನಾನು ಪುರಾತನಕಾಲದಲ್ಲಿಯೇ ತಿಳಿಸಿದೆನು. ನಡೆಯುವುದಕ್ಕೆ ಮೊದಲೇ ಪ್ರಕಟಿಸಿದೆನು. |
6. ನಡೆದ ಸಂಗತಿಗಳನ್ನು ನೀನು ಕೇಳಿದಿಯಲ್ಲಾ, ನಡೆದದ್ದನ್ನೆಲ್ಲಾ ನೋಡು, ನಿನ್ನವರೇ ಪ್ರಸಿದ್ಧಿಪಡಿಸಲಿ. ಇಂದಿನಿಂದ ಹೊಸ ಸಂಗತಿಗಳನ್ನು, ನೀನು ತಿಳಿಯದಿದ್ದ ಗುಪ್ತವಿಷಯಗಳನ್ನು ನಿನಗೆ ತಿಳಿಸುತ್ತೇನೆ.
|
7. ಈಗಲೇ ಉಂಟಾಗುತ್ತಿವೆ, ಪುರಾತನಕಾಲದಲ್ಲಿ ಆಗಿಲ್ಲ, “ಮೊದಲೇ ನಾನು ತಿಳಿದುಕೊಂಡಿದ್ದೆನು” ಎಂದು,
ನೀನು ಅಂದುಕೊಳ್ಳದ ಹಾಗೆ ಈ ದಿನಕ್ಕೆ ಮೊದಲು ನಾನು ನಿನಗೆ ಕೇಳಗೊಡಿಸಲಿಲ್ಲ. |
8. ನೀನು ಕೇಳಿಲ್ಲ, ತಿಳಿದೂ ಇಲ್ಲ, ಪುರಾತನಕಾಲದಿಂದ ನಿನ್ನ ಕಿವಿಯು ತೆರೆದೇ ಇಲ್ಲ;
ನೀನು ದೊಡ್ಡ ವಂಚಕನೆಂದೂ, ಗರ್ಭದಿಂದಲೇ ದ್ರೋಹಿಯೆಂದು ನಾನು ತಿಳಿದುಕೊಂಡಿದ್ದೇನೆ. |
9. ನನ್ನ ಹೆಸರು ಕೆಡದಂತೆ ನಿನ್ನ ಮೇಲಣ ಕೋಪವನ್ನು ತಡೆದು, ನನ್ನ ಕೀರ್ತಿಗೆ ಕಳಂಕ ಬಾರದಂತೆ ನಿನ್ನನ್ನು ನಿರ್ಮೂಲಮಾಡದೆ ಸಹಿಸಿಕೊಳ್ಳುವೆನು.
|
10. ನೋಡು, ನಿನ್ನನ್ನು ಶೋಧಿಸಿದ್ದೇನೆ, ಆದರೆ ಬೆಳ್ಳಿಯಷ್ಟು ಶೋಧಿಸಲಿಲ್ಲ, ಸಂಕಟವೆಂಬ ಪುಟಕ್ಕೆ ಹಾಕಿ ನಿನ್ನನ್ನು ಪರೀಕ್ಷಿಸಿದ್ದೇನೆ.
|
11. ನನಗಾಗಿ, ನನಗೋಸ್ಕರವೇ, ಇದನ್ನು ಮಾಡುವೆನು. ಏಕೆಂದರೆ ನನ್ನ ಹೆಸರು ಹೇಗೆ ಅಪವಿತ್ರವಾಗುವುದು?
ನನ್ನ ಮಹಿಮೆಯನ್ನು ಮತ್ತೊಬ್ಬನಿಗೆ ಸಲ್ಲಗೊಡಿಸೆನು. |
12. {ಬಾಬೆಲಿನಿಂದ ಬಿಡುಗಡೆ} PS ಯಾಕೋಬೇ, ನಾನು ಕರೆದ ಇಸ್ರಾಯೇಲೇ, ನನ್ನ ಕಡೆಗೆ ಕಿವಿಗೊಡು. ನಾನೇ ಪರಮಾತ್ಮನು,
ನಾನೇ ಆದಿಯೂ, ನಾನೇ ಅಂತ್ಯ |
13. ನನ್ನ ಕೈ ಭೂಮಿಗೆ ಅಸ್ತಿವಾರವನ್ನು ಹಾಕಿತು, ನನ್ನ ಬಲಗೈ ಆಕಾಶವನ್ನು ಹರಡಿತು,
ನಾನು ಕರೆದ ಕೂಡಲೆ ಅವೆರಡೂ ಒಟ್ಟಾಗಿ ನಿಲ್ಲುವವು. |
14. ನೀವೆಲ್ಲರು ಕೂಡಿಕೊಂಡು ಕೇಳಿರಿ! ಅವುಗಳ ಮಧ್ಯದಲ್ಲಿ ಈ ಸಂಗತಿಗಳನ್ನು ಪ್ರಕಟಿಸಿದವನು ಯಾರು?
ಯೆಹೋವನ ಪ್ರೀತಿಪಾತ್ರನು, ಬಾಬೆಲಿನಲ್ಲಿ ಆತನ ಇಷ್ಟವನ್ನು ನೆರವೇರಿಸುವನು. ಕಸ್ದೀಯರ ಮೇಲೆ ಕೈಮಾಡುವನು. |
16. ನನ್ನ ಬಳಿಗೆ ಬಂದು ಇದನ್ನು ಕೇಳಿರಿ,
ಆದಿಯಿಂದಲೂ ನಾನು ಗುಟ್ಟಾಗಿ ಮಾತನಾಡಲಿಲ್ಲ, ಭೂಮಿಯು ಉಂಟಾದಂದಿನಿಂದ ನಾನು ಅಲ್ಲಿ ಇದ್ದೇನೆ. ಈಗ ಯೆಹೋವನೆಂಬ ದೇವರು ತನ್ನ ಆತ್ಮದೊಡನೆ ನನ್ನನ್ನು ಕಳುಹಿಸಿದ್ದಾನೆ. |
17. ನಿನ್ನ ವಿಮೋಚಕನೂ, ಇಸ್ರಾಯೇಲರ ಸದಮಲಸ್ವಾಮಿಯೂ ಆದ ಯೆಹೋವನು ಹೀಗೆನ್ನುತ್ತಾನೆ,
“ನಾನೇ ನಿನ್ನ ದೇವರಾದ ಯೆಹೋವನು, ನಿನಗೆ ವೃದ್ಧಿಮಾರ್ಗವನ್ನು ಬೋಧಿಸಿ, ನೀನು ನಡೆಯಬೇಕಾದ ದಾರಿಯಲ್ಲಿ ನಿನ್ನನ್ನು ನಡೆಸುವೆನು. |
18. ನೀನು ನನ್ನ ಆಜ್ಞೆಗಳನ್ನು ಕೇಳಿದ್ದರೆ ಎಷ್ಟೋ ಚೆನ್ನಾಗಿತ್ತು!
ನಿನ್ನ ಸುಖವು ದೊಡ್ಡ ನದಿಯಂತೆಯೂ, ನಿನ್ನ ಕ್ಷೇಮವು ಸಮುದ್ರದ ಅಲೆಗಳ ಹಾಗೂ ಇರುತ್ತಿದ್ದವು. |
19. ನಿನ್ನ ಸಂತತಿಯವರು ಮರಳಿನೋಪಾದಿಯಲ್ಲಿಯೂ, ನಿನ್ನ ಹೊಟ್ಟೆಯಲ್ಲಿ ಹುಟ್ಟಿದವರು ಉಸುಬಿನ ಅಣುರೇಣುಗಳಂತೆ ಅಸಂಖ್ಯಾತರಾಗುತ್ತಿದ್ದರು.
ಅವರ ಹೆಸರು ನನ್ನ ಮುಂದೆ ನಿರ್ಮೂಲವಾಗಿ ಹಾಳಾಗುತ್ತಿರಲಿಲ್ಲ. |
20. ಬಾಬೆಲಿನಿಂದ ಹೊರಡಿರಿ! ಕಸ್ದೀಯರ ಕಡೆಯಿಂದ ಹಾರಿಹೋಗಿರಿ!
ಹರ್ಷಧ್ವನಿಯಿಂದ ಇದನ್ನು ತಿಳಿಸಿರಿ, ಪ್ರಕಟಿಸಿರಿ. ಭೂಮಿಯ ಕಟ್ಟಕಡೆಯವರೆಗೂ ಪ್ರಚಾರಪಡಿಸಿರಿ. ‘ಯೆಹೋವನು ತನ್ನ ಸೇವಕನಾದ ಯಾಕೋಬನ್ನು ವಿಮೋಚಿಸಿದ್ದಾನೆ’ ” ಎಂದು ಹೇಳಿರಿ. |
21. ಆತನು ಅವರನ್ನು ಮರುಭೂಮಿಯಲ್ಲಿ ನಡೆಸಿದಾಗ ಅವರು ದಾಹಗೊಳ್ಳಲಿಲ್ಲ;
ಅವರಿಗಾಗಿ ನೀರನ್ನು ಕಲ್ಲಿನೊಳಗಿಂದ ಹರಿಸಿದನು; ಆತನು ಬಂಡೆಯನ್ನು ಸೀಳಲು ಜಲಪಾತವಾಯಿತು. |