1. {#1ಯೆಹೋವನ ದ್ರಾಕ್ಷಿಯ ತೋಟದ ಗೀತೆ } [QS]ನನ್ನ ಪ್ರಿಯನಾದವನ ಬಗ್ಗೆ ಮತ್ತು ಅವನ ತೋಟವನ್ನೂ ಕುರಿತು [QE][QS]ಒಂದು ಗೀತೆಯನ್ನು ಹಾಡುವೆನು. ಕೇಳಿರಿ, ಫಲವತ್ತಾದ ಗುಡ್ಡದ ಮೇಲೆ ನನ್ನ ಅತಿಪ್ರಿಯನಿಗೆ ದ್ರಾಕ್ಷಿಯ ತೋಟವಿತ್ತು. [QE]
2. [QS]ಅವನು ಅದನ್ನು ಅಗೆದು, ಕಲ್ಲುಗಳನ್ನು ತೆಗೆದುಹಾಕಿ, ಒಳ್ಳೆಯ ದ್ರಾಕ್ಷಿಯ ಸಸಿಗಳನ್ನು ನೆಟ್ಟು, [QE][QS]ಮಧ್ಯದಲ್ಲಿ ಗೋಪುರವನ್ನು ಕಟ್ಟಿ, ದ್ರಾಕ್ಷಿಯ ತೊಟ್ಟಿಯನ್ನು ಕೊರೆಯಿಸಿ, [QE][QS]ತೋಟವು ಒಳ್ಳೆಯ ಸಿಹಿ ದ್ರಾಕ್ಷಿಯ ಹಣ್ಣನ್ನು ಕೊಡುವುದೆಂದು ಎದುರುನೋಡುತ್ತಿರಲು, ಅದು ಹುಳಿ ಹಣ್ಣನ್ನು ಕೊಟ್ಟಿತು. [QE]
3. [QS]ಯೆರೂಸಲೇಮಿನ ನಿವಾಸಿಗಳೇ, ಯೆಹೂದದ ಜನರೇ, [QE][QS]ಈಗ ನನಗೂ, ನನ್ನ ದ್ರಾಕ್ಷಿಯ ತೋಟಕ್ಕೂ ನ್ಯಾಯತೀರಿಸಿರಿ. [QE]
4. [QS]ನನ್ನ ದ್ರಾಕ್ಷಿಯ ತೋಟದಲ್ಲಿ ಹಿಂದೆ ನಾನು ಮಾಡಿದ್ದಕ್ಕಿಂತಲೂ ಇನ್ನೂ ಹೆಚ್ಚಾಗಿ ಇನ್ನೇನು ಮಾಡಬೇಕಾಗಿತ್ತು? [QE][QS]ಅದು ಒಳ್ಳೆಯ ದ್ರಾಕ್ಷಿಯ ಫಲವನ್ನು ಕೊಡುವುದೆಂದು ನಾನು ನಿರೀಕ್ಷಿಸುತ್ತಿರಲು, ಅದು ಹುಳಿ ಹಣ್ಣನ್ನು ಏಕೆ ಕೊಟ್ಟಿತು? [QE]
5. [QS]ನನ್ನ ದ್ರಾಕ್ಷಿಯ ತೋಟವನ್ನು ಏನು ಮಾಡುವೆನು ಎಂದು ಈಗ ನಿಮಗೆ ತಿಳಿಸುತ್ತೇನೆ. [QE][QS]ಅದರ ಮುಳ್ಳು ಬೇಲಿಯನ್ನು ಕೀಳುವೆನು. ದನಗಳು ಅದನ್ನು ಮೇಯ್ದುಬಿಡುವುದು. ಅದರ ಗೋಡೆಯನ್ನು ಕೆಡವಿ ಹಾಕುವೆನು. ಅದು ಜನರ ತುಳಿದಾಟಕ್ಕೆ ಈಡಾಗುವುದು. [QE]
6. [QS]ಅದನ್ನು ಹಾಳುಮಾಡುವೆನು. ದ್ರಾಕ್ಷಿಯ ತೋಟವನ್ನು ಯಾರೂ ಕುಡಿ ಕತ್ತರಿಸಿ ಅಗೆಯುವುದಿಲ್ಲ. ಅದರಲ್ಲಿ ಮುಳ್ಳುಕಳೆ ಬೆಳೆಯುವುದು. [QE][QS]ಅದರ ಮೇಲೆ ಮಳೆ ಸುರಿಸಬಾರದೆಂದು ಮೋಡಗಳಿಗೆ ಅಪ್ಪಣೆ ಕೊಡುವೆನು. [QE]
7. [QS]ಸೇನಾಧೀಶ್ವರನಾದ ಯೆಹೋವನ ದ್ರಾಕ್ಷಿಯ ತೋಟವು ಇಸ್ರಾಯೇಲರ ಮನೆಯೇ, [QE][QS]ಯೆಹೂದದ ಜನವೇ, ಆತನ ಇಷ್ಟದ ಗಿಡ. [QE][QS]ಆತನು ನ್ಯಾಯವನ್ನು ನಿರೀಕ್ಷಿಸಲು ನರಹತ್ಯೆ, ನೀತಿಯನ್ನು ನಿರೀಕ್ಷಿಸಿಲು ಗೋಳಾಟವೂ ಸಿಕ್ಕಿತ್ತು. [QE]
8. {#1ಬರಲಿರುವ ಅಪತ್ತು } [QS]ಅಯ್ಯೋ, ಮನೆಗೆ ಮನೆಯನ್ನೂ, ಹೊಲಕ್ಕೆ ಹೊಲವನ್ನೂ ಸೇರಿಸಿಕೊಳ್ಳುತ್ತಾ ಬಂದು, [QE][QS]ಇತರರಿಗೆ ಸ್ವಲ್ಪ ಸ್ಥಳವನ್ನೂ ಬಿಡದೆ ದೇಶದ ಮಧ್ಯದಲ್ಲಿ ತಾವೇ ತಾವಾಗಿ ವಾಸಿಸುವವರ ಗತಿಯನ್ನು ಏನು ಹೇಳಲಿ! [QE]
9. [QS]ನನ್ನ ಕಿವಿಯಲ್ಲಿ ಸೇನಾಧೀಶ್ವರನಾದ ಯೆಹೋವನು ಹೇಳುವುದೇನೆಂದರೆ, [QE][QS]ಸೊಗಸಾದ ಅನೇಕ ದೊಡ್ಡ ಮನೆಗಳಲ್ಲಿ ಜನರು ವಾಸಮಾಡದೆ ಅವು ಖಂಡಿತವಾಗಿ ಹಾಳು ಬೀಳುವುವು. [QE]
10. [QS]ಏಕೆಂದರೆ ಹತ್ತು ಎಕರೆ[* ಎಕರೆ ಎಕರೆ ಎಂದು ಭಾಷಾಂತರಿಸಲ್ಪಟ್ಟಿರುವ ಹೀಬ್ರೂ ಪದದ ಅಕ್ಷರಶಃವಾದ ಅರ್ಥವು ಒಂದು ದಿನದಲ್ಲಿ ಒಂದು ಜೋಡಿ ಎತ್ತುಗಳು ಉಳುವಷ್ಟು ಪ್ರದೇಶವಾಗಿದೆ. ಇದು ಆಧುನಿಕ ಕಾಲದ ಎಕರೆಯ ಅಳತೆ ಅಲ್ಲ. ] ಭಾಗವಾಯಿತು. ಭೂಮಿಯು ನಾಲ್ಕು ಕೊಳಗದಷ್ಟೇ [† ಕೊಳಗದಷ್ಟೇ ಬತ್ ಅಂದರೆ 22 ಲೀಟರ್. ] ದ್ರಾಕ್ಷಾರಸವನ್ನಿಯುವುದು. ಬಿತ್ತಿದ ಒಂದು ಖಂಡುಗ [‡ ಖಂಡುಗ ಹೋಮೆರ್ 220 ಲೀಟರ್ ಏಫಾ 22 ಲೀಟರ್ ]ಬೀಜದಿಂದ ಕಡಿಮೆ ದವಸವು ಬರುವುದು. [QE]
11. [QS]ಅಯ್ಯೋ, ಮದ್ಯದ ಗೀಳಿನಿಂದಲೇ ಮುಂಜಾನೆ ಎದ್ದು, [QE][QS]ಸಂಜೆಯಾದ ಮೇಲೂ ದ್ರಾಕ್ಷಾರಸದಿಂದ ಅಮಲೇರಿದವರಾಗಿ ಕಾಲ ಕಳೆಯುವವರ ಗತಿಯನ್ನು ಏನೆಂದು ಹೇಳಲಿ! [QE]
12. [QS]ಕಿನ್ನರಿ, ವೀಣೆ, ದಮ್ಮಡಿ, ಕೊಳಲು ದ್ರಾಕ್ಷಾರಸ ಇವುಗಳೇ ಅವರ ಔತಣಗಳ ಸೊಬಗು. [QE][QS]ಯೆಹೋವನ ಕೆಲಸವನ್ನೋ ಅವರು ಲಕ್ಷಿಸುವುದಿಲ್ಲ. ಆತನ ಕೈಕೆಲಸವನ್ನು ಆಲೋಚಿಸುವುದಿಲ್ಲ. [QE]
13. [QS]ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವುದು ಖಂಡಿತ. [QE][QS]ಘನವಂತರು ಹಸಿಯುವರು ಮತ್ತು ಜನಸಮೂಹವು ಬಾಯಾರಿಕೆಯಿಂದ ಒಣಗುವುದು. [QE]
14. [QS]ಹೀಗಿರುವುದರಿಂದ ಪಾತಾಳವು ಹೆಚ್ಚು ಆತುರದಿಂದ ಅಗಾಧವಾಗಿ ಬಾಯಿ ತೆರೆಯಲು, [QE][QS]ಅವರ ಮಹಿಮೆ, ಕೋಲಾಹಲ, ಗದ್ದಲ, ಉಲ್ಲಾಸ ಇವೆಲ್ಲವುಗಳು ಅದರೊಳಗೆ ಬಿದ್ದುಹೋಗುವವು. [QE]
15. [QS]ಮನುಷ್ಯನು ಕುಗ್ಗಿಸಲ್ಪಡುವನು. ಅಹಂಭಾವದ ಕಣ್ಣುಗಳು ಕಂಗೆಡುವವು. [QE]
16. [QS]ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವುದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು. ಪರಿಶುದ್ಧನಾದ ದೇವರು ಧರ್ಮವನ್ನು ನಡೆಸುವುದರಲ್ಲಿ ಪರಿಶುದ್ಧನು ಎಂದು ಅನಿಸಿಕೊಳ್ಳುವನು. [QE]
17. [QS]ಪಟ್ಟಣ ಪ್ರದೇಶಗಳು ಹಾಳಾಗಿ ಪಶುಪಾಲಕರಿಗೆ ಹುಲ್ಲುಗಾವಲುಗಳಾಗುವವು. ಕುರಿಮರಿಗಳು ಅಲ್ಲಿ ಮೇಯುವವು.[§ ಕುರಿಮರಿಗಳು ಅಲ್ಲಿ ಮೇಯುವವು. ಅಂದರೆ ಇತರ ಜನರು ತಿನ್ನುವರು. ] [QE]
18. [QS]ಅಯ್ಯೋ, ವ್ಯರ್ಥವಾದ ಹಗ್ಗಗಳಿಂದ ಅಪರಾಧ ದಂಡನೆಯನ್ನು, ರಥವನ್ನು ಹಗ್ಗಗಳಿಂದಲೋ ಎಂಬಂತೆ ಪಾಪವನ್ನು ಎಳೆದುಕೊಳ್ಳುತ್ತಾ, [QE]
19. [QS]ನಾವು ಆತನ ಕೆಲಸವನ್ನು ನೋಡುವಂತೆ ಆತನು ತ್ವರೆಯಾಗಿ ಅದನ್ನು ನಡೆಸಲಿ. [QE][QS]ಇಸ್ರಾಯೇಲರ ಸದಮಲಸ್ವಾಮಿಯ ಉದ್ದೇಶವನ್ನು ನಾವು ತಿಳಿಯಬೇಕು. ಅದು ಆದಷ್ಟು ಬೇಗ ಬರಲಿ ಎಂದು ನುಡಿಯುವವರ ದುರವಸ್ಥೆಯನ್ನು ಏನು ಹೇಳಲಿ! [QE]
20. [QS]ಅಯ್ಯೋ, ಕೆಟ್ಟದ್ದನ್ನು ಒಳ್ಳೆಯದೆಂದೂ, ಒಳ್ಳೆಯದನ್ನು ಕೆಟ್ಟದೆಂದೂ ಬೋಧಿಸಿ; [QE][QS]ಕತ್ತಲನ್ನು ಬೆಳಕೆಂದೂ, ಬೆಳಕನ್ನು ಕತ್ತಲೆಂದೂ ಸಾಧಿಸಿ; ಕಹಿಯನ್ನು ಸಿಹಿಯೆಂದು, [QE][QS]ಸಿಹಿಯನ್ನು ಕಹಿ ಎಂದು ಎಣಿಸುವವರ ಗತಿಯನ್ನು ಏನೆಂದು ಹೇಳಲಿ! [QE]
21. [QS]ಅಯ್ಯೋ, ತಮ್ಮನ್ನು ತಾವೇ ಜ್ಞಾನಿಗಳೆಂದೂ, ಸ್ವಂತ ದೃಷ್ಟಿಯಲ್ಲಿ ವಿವೇಕಿಗಳೆಂದೂ ಭಾವಿಸಿಕೊಳ್ಳುವವರ ಗತಿಯನ್ನು ಏನು ಹೇಳಲಿ!. [QE]
22. [QS]ಅಯ್ಯೋ, ಸುರಾಪಾನದಲ್ಲಿ ಶೂರರೂ, ಮದ್ಯಮಿಶ್ರಣದಲ್ಲಿ ಸಾಹಸಿಗಳೂ; [QE]
23. [QS]ಲಂಚಕ್ಕೋಸ್ಕರ ದೋಷಿಗಳನ್ನು ನಿರ್ದೋಷಿಗಳೆಂದು ತೀರ್ಪುಮಾಡಿ, ನ್ಯಾಯವಂತರ ನ್ಯಾಯವನ್ನು ಹಾಳುಮಾಡುವವರ ಗತಿಯನ್ನು ಏನು ಹೇಳಲಿ! [QE]
24. [QS]ಅವರು ಸೇನಾಧೀಶ್ವರನಾದ ಯೆಹೋವನ ಉಪದೇಶವನ್ನು ನಿರಾಕರಿಸಿ, [QE][QS]ಇಸ್ರಾಯೇಲರ ಸದಮಲಸ್ವಾಮಿಯ ವಾಕ್ಯವನ್ನು ಅಸಡ್ಡೆ ಮಾಡಿದ್ದರಿಂದ ಅಗ್ನಿಯ ನಾಲಿಗೆಗಳು ಒಣಕೊಳೆಯನ್ನು ನುಂಗಿಬಿಡುವಂತೆಯೂ, [QE][QS]ಒಣಹುಲ್ಲು ಬೆಂಕಿಯಲ್ಲಿ ಸುಟ್ಟುಬಿಡುವಂತೆಯೂ, ಅದರ ಬೇರು ಕೊಳೆತು ಹೋಗುವಂತೆಯೂ, ಅದರ ಚಿಗುರು ಧೂಳಿನಂತೆಯೂ ತೂರಿ ಹೋಗುವುದು. [QE]
25. [QS]ಹೀಗಿರಲು ಯೆಹೋವನು ತನ್ನ ಜನರ ಮೇಲೆ ಕೋಪಗೊಂಡು, ಅವರ ಮೇಲೆ ಕೈಯೆತ್ತಿ, ಅವರನ್ನು ಹೊಡೆದುಬಿಡುವನು. [QE][QS]ಆಗ ಬೆಟ್ಟಗಳು ನಡಗುವವು. ಹೆಣಗಳು ಬೀದಿಗಳಲ್ಲಿ ಕಸವಾಗಿ ಬಿದ್ದಿರುವವು. [QE][QS]ಇಷ್ಟೆಲ್ಲಾ ನಡೆದರೂ ಆತನ ಕೋಪವು ತೀರದೇ ಕೈಯೆತ್ತಿಯೇ ಇರುವುದು. [QE]
26. [QS]ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ, ಅವರನ್ನು ಭೂಲೋಕದ ಅಂಚಿನಿಂದ ಸಿಳ್ಳು ಹಾಕಿ ಕರೆಯುವನು. [QE][QS]ಇಗೋ ಅವರೆಲ್ಲ ತ್ವರೆಪಟ್ಟು ವೇಗವಾಗಿ ಬರುತ್ತಾರೆ. [QE]
27. [QS]ಅವರಲ್ಲಿ ಯಾರೂ ಬಳಲಿ ಮುಗ್ಗರಿಸುವುದಿಲ್ಲ. ಯಾರೂ ತೂಕಡಿಸಿ ನಿದ್ರಿಸುವುದಿಲ್ಲ. [QE][QS]ಅವರ ನಡುಕಟ್ಟು ಬಿಚ್ಚಿಲ್ಲ. ಅವರ ಕೆರದ ಬಾರು ಹರಿಯುವುದಿಲ್ಲ. [QE]
28. [QS]ಅವರ ಬಾಣಗಳು ಹದವಾಗಿವೆ. ಅವರ ಬಿಲ್ಲುಗಳು ಬಿಗಿದಿವೆ. [QE][QS]ಅವರ ಕುದುರೆಗಳ ಗೊರಸುಗಳು ಕಲ್ಲಿನಂತೆಯೂ, ಚಕ್ರಗಳು ಬಿರುಗಾಳಿಯಂತೆಯೂ ರಭಸವಾಗಿವೆ. [QE]
29. [QS]ಅವರು ಸಿಂಹದಂತೆ ಘರ್ಜಿಸುತ್ತಾರೆ. ಪ್ರಾಯದ ಸಿಂಹಗಳ ಹಾಗೆ ಆರ್ಭಟಿಸುತ್ತಾರೆ. [QE][QS]ಗುರುಗುಟ್ಟುತ್ತಾ ಬೇಟೆ ಹಿಡಿದು ಹೊತ್ತುಕೊಂಡು ಹೋಗುತ್ತಾರೆ. ರಕ್ಷಿಸುವವರು ಯಾರೂ ಇಲ್ಲ. [QE]
30. [QS]ಸಮುದ್ರವು ಭೋರ್ಗರೆಯುವಂತೆ ಆ ದಿನದಲ್ಲಿ ಇವರು ಯೆಹೂದ್ಯರನ್ನು ಕಂಡು ಗರ್ಜಿಸುವರು. [QE][QS]ಭೂಮಿಯನ್ನು ದೃಷ್ಟಿಸಿದರೆ ಅಂಧಕಾರವೂ, ವ್ಯಾಕುಲವೂ ತುಂಬಿರುವುದು. ಮೋಡ ಕವಿದು ಬೆಳಕು ಕತ್ತಲಾಗುವುದು. [QE]