1. [QS]ಯೆಹೋವನು ಹೀಗೆನ್ನುತ್ತಾನೆ, [QE][QS]“ನಾನು ನಿಮ್ಮ ತಾಯಿಯನ್ನು ತ್ಯಜಿಸಿದ ತ್ಯಾಗಪತ್ರವು ಎಲ್ಲಿ? [QE][QS]ನನ್ನ ಸಾಲಗಾರರಲ್ಲಿ ಯಾರಿಗೆ ನಿಮ್ಮನ್ನು ಮಾರಿಬಿಟ್ಟಿದ್ದೇನೆ? [QE][QS]ನೋಡಿರಿ, ನಿಮ್ಮ ದೋಷಗಳ ನಿಮಿತ್ತ ನಿಮ್ಮನ್ನು ಮಾರಿದೆನು, ನಿಮ್ಮ ದ್ರೋಹಗಳಿಗಾಗಿ ನಿಮ್ಮ ತಾಯಿಯನ್ನು ಬಿಟ್ಟೆನು. [QE]
2. [QS]ನಾನು ಬಂದಾಗ ಏಕೆ ಯಾರೂ ಕಾದಿರಲಿಲ್ಲ? ನಾನು ಕರೆದಾಗ ಏಕೆ ಯಾರೂ ಉತ್ತರಕೊಡಲಿಲ್ಲ? [QE][QS]ನನ್ನ ಹಸ್ತವು ರಕ್ಷಿಸಲಾರದ ಮೋಟುಗೈಯೋ? ಉದ್ಧರಿಸುವ ಶಕ್ತಿಯು ನನ್ನಲ್ಲಿಲ್ಲವೋ? [QE][QS]ಇಗೋ, ನನ್ನ ಗದರಿಕೆಯಿಂದಲೇ ನಾನು ಸಮುದ್ರವನ್ನು ಬತ್ತಿಸಿ ನದಿಗಳನ್ನು ಒಣಕಾಡನ್ನಾಗಿ ಮಾಡುತ್ತೇನೆ. [QE][QS]ನೀರಿಲ್ಲದೆ ಅಲ್ಲಿನ ಮೀನುಗಳು ಬಾಯಾರಿ ಸತ್ತು ನಾರುವವು. [QE]
3. [QS]ನಾನು ಆಕಾಶಕ್ಕೆ ಅಂಧಕಾರವನ್ನು ಹೊದಿಸಿ, ಗೋಣಿತಟ್ಟಿನ ಮುಸುಕನ್ನು ಹಾಕುತ್ತೇನೆ.” [QE]
4. {#1ಯೆಹೋವನ ಸೇವಕನ ಭರವಸೆ } [QS]ಬಳಲಿಹೋದವರನ್ನು ಮಾತುಗಳಿಂದ ಸುಧಾರಿಸುವುದಕ್ಕೆ ನಾನು ಬಲ್ಲವನಾಗುವಂತೆ [QE][QS]ಕರ್ತನಾದ ಯೆಹೋವನು ಶಿಕ್ಷಿತರ ನಾಲಿಗೆಯನ್ನು ನನಗೆ ದಯಪಾಲಿಸಿದ್ದಾನೆ. [QE][QS]ಮುಂಜಾನೆಯಿಂದ ಮುಂಜಾನೆಗೆ ನನ್ನನ್ನು ಎಚ್ಚರಿಸಿ ಶಿಕ್ಷಿತರಂತೆ ನಾನು ಕೇಳುವ ಹಾಗೆ ನನ್ನ ಕಿವಿಯನ್ನು ಎಚ್ಚರಗೊಳಿಸುತ್ತಾನೆ. [QE]
5. [QS]ಕರ್ತನಾದ ಯೆಹೋವನು ನನ್ನ ಕಿವಿಯನ್ನು ತೆರೆದಿದ್ದಾನೆ. [QE][QS]ನಾನು ಎದುರು ಬೀಳಲಿಲ್ಲ, ವಿಮುಖನಾಗಲೂ ಇಲ್ಲ. [QE]
6. [QS]ನಾನು ಹೊಡೆಯುವವರಿಗೆ ಬೆನ್ನುಕೊಟ್ಟು, ಕೂದಲು ಕೀಳುವವರಿಗೆ ಗಡ್ಡವನ್ನು ಒಡ್ಡಿದೆನು. [QE][QS]ಉಗುಳಿಸಿಕೊಳ್ಳುವ ಅವಮಾನಕ್ಕೆ ನನ್ನ ಮುಖವನ್ನು ಮರೆಮಾಡಿಕೊಳ್ಳಲಿಲ್ಲ. [QE]
7. [QS]ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ಆದಕಾರಣ ನಾನು ನಾಚಿಕೆಯಿಂದ ಕೊರಗಲಿಲ್ಲ; [QE][QS]ನನ್ನ ಮುಖವನ್ನು ಕಗ್ಗಲ್ಲಿನಂತೆ ಗಟ್ಟಿಮಾಡಿಕೊಂಡಿದ್ದೇನೆ. ಆಶಾಭಂಗಪಡಲಾರನೆಂದು ನನಗೆ ಗೊತ್ತು. [QE]
8. [QS]ನನ್ನ ನೀತಿ ನಿರ್ಣಯಿಸುವಾತನು ಸಮೀಪದಲ್ಲಿದ್ದಾನೆ. ನನ್ನೊಡನೆ ಯಾರು ವ್ಯಾಜ್ಯವಾಡುವರು? ನಾವಿಬ್ಬರು ನ್ಯಾಯಾಸನದ ಮುಂದೆ ನಿಂತುಕೊಳ್ಳುವ. [QE][QS]ನನಗೆ ಪ್ರತಿಕಕ್ಷಿಯು ಯಾರು? ಅವನು ನನ್ನ ಬಳಿಗೆ ಬರಲಿ. [QE]
9. [QS]ಆಹಾ, ಕರ್ತನಾದ ಯೆಹೋವನು ನನಗೆ ಸಹಾಯಮಾಡುವನು. ನನ್ನನ್ನು ಅಪರಾಧಿ ಎಂದು ನಿರ್ಣಯಿಸುವವನು ಯಾರು? [QE][QS]ಇಗೋ, ಅವರೆಲ್ಲರೂ ಹಳೆಯ ವಸ್ತ್ರದಂತಾಗುವರು. ಅವರನ್ನು ನುಸಿಯು ತಿಂದುಬಿಡುವುದು. [QE]
10. [QS]ನಿಮ್ಮೊಳಗೆ ಯಾರು ಯೆಹೋವನಲ್ಲಿ ಭಯಭಕ್ತಿಯಿಟ್ಟು ಆತನ ಸೇವಕನ ಮಾತನ್ನು ಕೇಳುವರು? [QE][QS]ಬೆಳಕಿಲ್ಲದೇ ಕತ್ತಲೆಯಲ್ಲಿ ನಡೆಯುವವನು ಯಾರು? [QE][QS]ಅವನು ಯೆಹೋವನ ನಾಮದಲ್ಲಿ ಭರವಸವಿಟ್ಟು ತನ್ನ ದೇವರನ್ನು ಆಧಾರಮಾಡಿಕೊಳ್ಳಲಿ. [QE]
11. [QS]ಓಹೋ, ಬೆಂಕಿಹಚ್ಚಿ ಸುತ್ತಮುತ್ತಲು ಉರಿಯನ್ನು ಹತ್ತಿಸಿಕೊಂಡಿರುವವರೇ, [QE][QS]ನಿಮ್ಮ ಬೆಂಕಿಯ ಬೆಳಕಿನಲ್ಲಿಯೂ, ನೀವು ಹತ್ತಿಸಿದ ಕೊಳ್ಳಿಗಳ ನಡುವೆ ನಡೆದರೂ ನಡೆಯಿರಿ. [QE][QS]ಇಗೋ, “ನನ್ನ ಹಸ್ತದಿಂದ ನಿಮಗಾಗುವ ಗತಿಯು ಇದೇ, ದುಃಖಕ್ಕೆ ಒಳಗಾಗಿ ಸಾಯುವಿರಿ.” [QE]