1. {ಯೆರೂಸಲೇಮಿನ ಬಿಡುಗಡೆ} PS ಚೀಯೋನೇ, ಎಚ್ಚರಗೊಳ್ಳು, ಎಚ್ಚರಗೊಳ್ಳು, ನಿನ್ನ ಪ್ರತಾಪವನ್ನು ಧರಿಸಿಕೋ!
ಯೆರೂಸಲೇಮೇ ಪರಿಶುದ್ಧ ಪಟ್ಟಣವೇ, ನಿನ್ನ ಸುಂದರವಾದ ಉಡುಪನ್ನು ಹಾಕಿಕೋ! ಇಂದಿನಿಂದ ಅಶುದ್ಧರೂ, ಸುನ್ನತಿಯಿಲ್ಲದವರೂ ನಿನ್ನೊಳಗೆ ಪ್ರವೇಶಮಾಡುವುದಿಲ್ಲ. |
2. ಯೆರೂಸಲೇಮೇ, ಧೂಳನ್ನು ಝಾಡಿಸಿಕೋ! ಎದ್ದು ಆಸನದ ಮೇಲೆ ಕುಳಿತುಕೋ!
ಸೆರೆಯಲ್ಲಿ ಬಿದ್ದ ಚೀಯೋನ್ ಪುತ್ರಿಯೇ, ನಿನ್ನ ಕುತ್ತಿಗೆಯ ಬಂಧನವನ್ನು ಬಿಚ್ಚಿಕೋ! |
4. ಕರ್ತನಾದ ಯೆಹೋವನು ಹೀಗೆಂದುಕೊಳ್ಳುತ್ತಾನೆ, “ನನ್ನ ಜನರು ಮೊಟ್ಟಮೊದಲು ಐಗುಪ್ತದಲ್ಲಿ ಇಳಿದುಕೊಳ್ಳಬೇಕೆಂದು ಹೋಗಿ ಅಲ್ಲಿ ಸೆರೆಯಾದರು.
ಅಶ್ಶೂರ್ಯರು ಕಾರಣವಿಲ್ಲದೆ ಅವರನ್ನು ಬಾಧೆಪಡಿಸಿದರು.” |
5. ಕರ್ತನಾದ ಯೆಹೋವನು ಹೇಳುವುದೇನೆಂದರೆ, “ಈಗಲೂ ಅನ್ಯರು ನನ್ನ ಜನರನ್ನು ಕಾರಣವಿಲ್ಲದೆ ಸೆರೆತೆಗೆದುಕೊಂಡು ಹೋಗಿರುವಾಗ
ನಾನು ಇಲ್ಲಿ ಸುಮ್ಮನಿರುವುದು ಹೇಗೆ? ನನ್ನ ಪ್ರಜೆಯನ್ನು ಆಳುವವರು ರೌದ್ರದಿಂದ ಅರಚುತ್ತಾರೆ. * ಅರಚುತ್ತಾರೆ. ಅಥವಾ ಪರಿಹಾಸ್ಯ ಮಾಡುತ್ತಾರೆ. ನನ್ನ ನಾಮವು ದಿನವೆಲ್ಲಾ ಎಡೆಬಿಡದೆ ದೂಷಣೆಗೆ ಗುರಿಯಾಗಿದೆ. |
6. ಹೀಗಿರಲು ನನ್ನ ಜನರು ನನ್ನ ನಾಮದ ಮಹತ್ತನ್ನು ತಿಳಿದುಕೊಳ್ಳುವರು.
ಹೀಗೆ ಆ ದಿನದಲ್ಲಿ ಅವರ ಸಂಗಡ ಮಾತನಾಡಿದವನು ನಾನೇ. ಹೌದು ನಾನೇ” ಎಂದು ಗ್ರಹಿಸಿಕೊಳ್ಳುವ ಹಾಗೆ ಮಾಡುವೆನು. |
7. ಪರ್ವತಗಳ ಮೇಲೆ ತ್ವರೆಪಡುತ್ತಾ, ಶುಭಸಮಾಚಾರವನ್ನು ತಂದು, ಸಮಾಧಾನವನ್ನು ಸಾರುವ ದೂತನ ಪಾದಗಳು ಎಷ್ಟೋ ಅಂದವಾಗಿವೆ!
ಶುಭವರ್ತಮಾನವನ್ನು, ಶುಭದ ಸುವಾರ್ತೆಯನ್ನು ತಂದು, ರಕ್ಷಣೆಯನ್ನು ಪ್ರಕಟಿಸುತ್ತಾ, “ನಿನ್ನ ದೇವರು ರಾಜ್ಯಭಾರವನ್ನು ವಹಿಸಿದ್ದಾನೆ” ಎಂದು ಚೀಯೋನಿಗೆ ತಿಳಿಸುವವನಾಗಿದ್ದಾನೆ. |
8. ಇಗೋ, ನಿನ್ನ ಕಾವಲುಗಾರರ ಕೂಗು! ಸ್ವರವೆತ್ತಿ ಒಟ್ಟಿಗೆ ಹರ್ಷಧ್ವನಿಗೈಯುತ್ತಾರೆ. ಯೆಹೋವನು ಚೀಯೋನಿಗೆ ತಿರುಗಿ ಬರುವುದನ್ನು ಪ್ರತ್ಯಕ್ಷವಾಗಿ ನೋಡುವರು.
|
9. ಯೆರೂಸಲೇಮಿನ ಹಾಳುಪ್ರದೇಶಗಳೇ, ತಟ್ಟನೆ ಜಯಘೋಷಮಾಡಿ ಒಟ್ಟಿಗೆ ಹರ್ಷಧ್ವನಿಗೈಯಿರಿ!
ಯೆಹೋವನು ಯೆರೂಸಲೇಮನ್ನು ವಿಮೋಚಿಸಿ ತನ್ನ ಜನರನ್ನು ಸಂತೈಸಿದ್ದಾನೆ. |
10. ಯೆಹೋವನು ಸಕಲ ಜನಾಂಗಗಳ ಕಣ್ಣೆದುರಿನಲ್ಲಿ ತನ್ನ ದಿವ್ಯಬಾಹುವನ್ನು ತೆರೆದು ತೋರಿಸಿದ್ದಾನೆ.
ಭೂಮಿಯ ಎಲ್ಲಾ ದಿಕ್ಕಿನವರೂ ನಮ್ಮ ದೇವರ ರಕ್ಷಣಾಕಾರ್ಯವನ್ನು ನೋಡುವರು. |
11. ತೊಲಗಿರಿ, ತೊಲಗಿರಿ, ಬಾಬೆಲಿನಿಂದ ಹೊರಡಿರಿ, ಅಶುದ್ಧವಾದ ಯಾವುದನ್ನೂ ಮುಟ್ಟದಿರಿ,
ಅದರಿಂದ ದೂರ ಹೋಗಿ, ಯೆಹೋವನ ಆರಾಧನೆಯ ಉಪಕರಣಗಳನ್ನು ಹೊರುವವರೇ, ಶುದ್ಧರಾಗಿರಿ! |
12. ನೀವು ಅವಸರದಿಂದ ಹೊರಡಬೇಕಾಗಿಲ್ಲ, ಓಡಿಹೋಗಬೇಕಾಗಿಲ್ಲ.
ಯೆಹೋವನು ನಿಮಗೆ ಮುಂಬಲವಾಗಿ ಮುಂದೆ ಹೋಗುವನು. ಇಸ್ರಾಯೇಲಿನ ದೇವರು ನಿಮಗೆ ಹಿಂಬಲವಾಗಿಯೂ ಕಾಯುವನು. ಯೆಹೋವನ ಸೇವಕನ ಶ್ರಮೆ, ಪ್ರಾಣತ್ಯಾಗ ಅದರ ಪ್ರತಿಫಲ |
14. ಅವನ ಮುಖವು ಸಕಲ ಮನುಷ್ಯರ ಮುಖಕ್ಕಿಂತಲೂ,
ಅವನ ರೂಪವು ಎಲ್ಲಾ ನರಜನ್ಮದವರ ರೂಪಕ್ಕಿಂತಲೂ ವಿಕಾರವಾಗಿರುವುದನ್ನು ನೋಡಿ, ಅನೇಕರು ಹೇಗೆ ಹೆದರಿದರೋ, |
15. ಹಾಗೆಯೇ ಅನೇಕ ಜನಾಂಗಗಳವರು ಅವನನ್ನು ಕಂಡು ವಿಸ್ಮಯದಿಂದ ಚಕಿತರಾಗುವರು.
ಅರಸರೂ ಅವನ ಮುಂದೆ ಬಾಯಿಮುಚ್ಚಿಕೊಳ್ಳುವರು. ಏಕೆಂದರೆ ಸುದ್ದಿಯೇ ಇಲ್ಲದ ಸಂಗತಿಯನ್ನು ನೋಡುವರು, ಎಂದೂ ಕೇಳದೇ ಇರುವ ವಿಷಯವನ್ನು ಗ್ರಹಿಸಿಕೊಳ್ಳುವರು. PE |