1. [QS]ನಾವು ಕೇಳಿದ ಸಂಗತಿಯನ್ನು ನಮ್ಮಲ್ಲಿ ಯಾರು ನಂಬಿದ್ದರು? ಯೆಹೋವನ ಬಾಹುವು ಯಾರಿಗೆ ಗೋಚರವಾಗಿತ್ತು? [QE]
2. [QS]ಒಣನೆಲದೊಳಗೆ ಬೇರಿನಿಂದ ಹೊರಡುವ ಸಸಿಯಂತೆಯೂ, ಬುಡದಿಂದ ಒಡೆಯುವ ಚಿಗುರಿನ ಹಾಗೂ ಅವನು ಯೆಹೋವನ ದೃಷ್ಟಿಯಲ್ಲಿ ಬೆಳೆದನು. [QE][QS]ಅವನಲ್ಲಿ ಯಾವ ಅಂದಚಂದಗಳೂ ಇರಲಿಲ್ಲ; ನಾವು ಅವನನ್ನು ನೋಡಿದಾಗ ನೋಡತಕ್ಕ ಯಾವ ಲಕ್ಷಣವೂ ಕಾಣಲಿಲ್ಲ. [QE]
3. [QS]ಅವನು ಧಿಕ್ಕರಿಸಲ್ಪಟ್ಟವನು, ಮನುಷ್ಯರು ಸೇರಿಸಿಕೊಳ್ಳದವನು, [QE][QS]ಸಂಕಟಪಡುವವನು, ವ್ಯಾಧಿಪೀಡಿತನು, ಜನರು ಮುಖವನ್ನು ಓರೆಮಾಡಿಕೊಳ್ಳುವ ಧಿಕ್ಕಾರಕ್ಕೆ ಒಳಗಾದವನೂ ಆಗಿದ್ದನು. [QE]
4. [QS]ನಿಜವಾಗಿಯೂ ನಮ್ಮ ವ್ಯಾಧಿಗಳನ್ನು ಸಂಕಷ್ಟವನ್ನು ಅನುಭವಿಸಿದನು; ಅವನು ಹೊತ್ತ ಹೊರೆಯು ನಮ್ಮ ಸಂಕಟವೇ ಹೌದು, [QE][QS]ನಾವಾದರೋ ಅವನು ದೇವರಿಂದ ಬಾಧಿತನು, ಪೆಟ್ಟು ತಿಂದವನು, ಕುಗ್ಗಿಸಲ್ಪಟ್ಟವನು ಎಂದು ಭಾವಿಸಿಕೊಂಡೆವು. [QE]
5. [QS]ನಮ್ಮ ದ್ರೋಹಗಳ ದೆಸೆಯಿಂದ ಅವನಿಗೆ ಗಾಯವಾಯಿತು, ನಮ್ಮ ಅಪರಾಧಗಳ ನಿಮಿತ್ತ ಅವನು ಜಜ್ಜಲ್ಪಟ್ಟನು; [QE][QS]ನಮಗೆ ಸುಕ್ಷೇಮವನ್ನು ಉಂಟುಮಾಡುವ ದಂಡನೆಯನ್ನು ಅವನು ಅನುಭವಿಸಿದನು; ಅವನ ಬಾಸುಂಡೆಗಳಿಂದ ನಮಗೆ ಗುಣವಾಯಿತು. [QE]
6. [QS]ನಾವೆಲ್ಲರೂ ಕುರಿಗಳಂತೆ ದಾರಿತಪ್ಪಿ ಹೋಗಿದ್ದೆವು, ಪ್ರತಿಯೊಬ್ಬನೂ ತನ್ನ ತನ್ನ ದಾರಿಯನ್ನು ಹಿಡಿಯುತ್ತಿದ್ದನು; [QE][QS]ನಮ್ಮೆಲ್ಲರ ದೋಷಫಲವನ್ನೂ ಯೆಹೋವನು ಅವನ ಮೇಲೆ ಹಾಕಿದನು. [QE]
7. [QS]ಅವನು ಬಾಧೆಗೆ ಒಳಗಾಗಿ ತನ್ನನ್ನು ತಗ್ಗಿಸಿಕೊಂಡನು, ಬಾಯಿ ತೆರೆಯಲಿಲ್ಲ; [QE][QS]ವಧ್ಯಸ್ಥಾನಕ್ಕೆ ಒಯ್ಯಲ್ಪಡುವ ಕುರಿಯಂತೆಯೂ, ಉಣ್ಣೆ ಕತ್ತರಿಸುವವರ ಮುಂದೆ ಮೌನವಾಗಿರುವ ಕುರಿಯ ಹಾಗೂ ಇದ್ದನು, [QE][QS]ಬಾಯಿ ತೆರೆಯಲೇ ಇಲ್ಲ. [QE]
8. [QS]ಹಿಂಸೆಯ ನ್ಯಾಯದಿಂದ ಕೊಲ್ಲಲ್ಪಟ್ಟನು, ಆಹಾ, ಇವನು ಜೀವಲೋಕದಿಂದ ತೆಗೆದುಹಾಕಲ್ಪಟ್ಟಿದ್ದಾನೆ. [QE][QS]ನಮ್ಮ ಜನಗಳ ದ್ರೋಹಗಳ ದೆಸೆಯಿಂದ ಈ ಪೆಟ್ಟು ಅವನ ಮೇಲೆ ಬಿತ್ತಲ್ಲಾ ಎಂದು ಅವನ ಕಾಲದವರಲ್ಲಿ ಯಾರು ಮನಮುಟ್ಟಿ ಮರುಗಿದರು? [QE]
9. [QS]ಅವನು ಯಾವ ಅನ್ಯಾಯವನ್ನು ಮಾಡದಿದ್ದರೂ, ಅವನ ಬಾಯಲ್ಲಿ ಯಾವ ವಂಚನೆಯು ಇಲ್ಲದಿದ್ದರೂ, [QE][QS]ಅವನು ಸತ್ತಾಗ ದುಷ್ಟರ ಮಧ್ಯೆ ಪುಷ್ಟರ ನಡುವೆ ಅವನನ್ನು ಹೂಣಿಟ್ಟರು. [QE]
10. [QS]ಅವನನ್ನು ಜಜ್ಜುವುದು ಯೆಹೋವನ ಸಂಕಲ್ಪವಾಗಿತ್ತು. ಆತನು ಅವನನ್ನು ವ್ಯಾಧಿಯಿಂದ ಬಾಧಿಸಿ ಹೀಗೆಂದುಕೊಂಡನು, [QE][QS]ಇವನು ತನ್ನ ಆತ್ಮವನ್ನು ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಪ್ಪಿಸಿದ ಮೇಲೆ ತನ್ನ ಸಂತಾನವನ್ನು ನೋಡುವನು, ಚಿರಂಜೀವಿಯಾಗುವನು, [QE][QS]ನನ್ನ ಸಂಕಲ್ಪವು ಇವನ ಕೈಯಿಂದ ನೆರವೇರುವುದು; [QE]
11. [QS]ತನ್ನ ಆತ್ಮವು ಅನುಭವಿಸಿದ ಶ್ರಮೆಯ ಫಲವನ್ನು ಕಂಡು ತೃಪ್ತನಾಗುವನು; ಧರ್ಮಾತ್ಮನಾದ ನನ್ನ ಸೇವಕನು ತನ್ನ ಜ್ಞಾನದ ಮೂಲಕ ಬಹು ಜನರನ್ನು ಧರ್ಮಮಾರ್ಗಕ್ಕೆ ತರುವನು; [QE][QS]ಅವರ ಅಪರಾಧಗಳನ್ನು ಹೊತ್ತುಕೊಂಡು ಹೋಗುವನು. [QE]
12. [QS]ಇವನು ಇಂಥವನಾಗಿರುವುದರಿಂದ ನಾನು ಇವನಿಗೆ ದೊಡ್ಡವರ ಸಂಗಡ ಪಾಲು ಕೊಡುವೆನು, [QE][QS]ಇವನು ಬಲಿಷ್ಠರೊಡನೆ ಸೂರೆಯನ್ನು ಹಂಚಿಕೊಳ್ಳುವನು; ತನ್ನ ಪ್ರಾಣವನ್ನು ಧಾರೆಯೆರೆದು, ಮರಣಹೊಂದಿ, ದ್ರೋಹಿಗಳೊಂದಿಗೆ ತನ್ನನ್ನೂ ಎಣಿಸಿಕೊಂಡು, [QE][QS]ಬಹು ಜನ ದ್ರೋಹಿಗಳ ಪಾಪವನ್ನು ಹೊರುತ್ತಾ ಅವರಿಗಾಗಿ ವಿಜ್ಞಾಪನೆ ಮಾಡಿದನು. [QE]