1. {#1ಚೀಯೋನಿನ ಮುಂದಿನ ವೃದ್ಧಿಯೂ ವೈಭವವೂ } [QS]“ಹೆರದವಳೇ, ಬಂಜೆಯೇ, ಹರ್ಷಧ್ವನಿಗೈ! ಪ್ರಸವ ವೇದನೆಯನ್ನು ಅನುಭವಿಸದವಳೇ, ಆನಂದ ಸ್ವರವೆತ್ತಿ ಕೂಗು! [QE][QS]ಗಂಡನುಳ್ಳವಳಿಗಿಂತ ಗಂಡಬಿಟ್ಟವಳಿಗೆ ಮಕ್ಕಳು ಹೆಚ್ಚು” ಎಂದು ಯೆಹೋವನು ಹೇಳುತ್ತಾನೆ. [QE]
2. [QS]ನಿನ್ನ ಗುಡಾರದ ಸ್ಥಳವನ್ನು ವಿಸ್ತರಿಸು, ನಿನ್ನ ನಿವಾಸದ ಪರದೆಗಳು ಹರಡಲಿ, ಸಂಕೋಚಪಡಬೇಡ; [QE][QS]ನಿನ್ನ ಹಗ್ಗಗಳನ್ನು ಉದ್ದಮಾಡಿ ಗೂಟಗಳನ್ನು ಬಲಪಡಿಸು. [QE]
3. [QS]ನೀನು ಎಲ್ಲಾ ಕಡೆಗಳಲ್ಲಿಯೂ ಹಬ್ಬಿಕೊಳ್ಳುವಿ; ನಿನ್ನ ಸಂತಾನದವರು ಜನಾಂಗಗಳನ್ನು ವಶಮಾಡಿಕೊಂಡು ಹಾಳು ಪಟ್ಟಣಗಳನ್ನು ಜನಭರಿತವಾಗುವಂತೆ ಮಾಡುವರು. [QE]
4. [QS]“ಹೆದರಬೇಡ, ನಿನಗೆ ಅವಮಾನವಾಗುವುದಿಲ್ಲ, ನಾಚಿಕೆಪಡದಿರು, ನಿನಗೆ ಆಶಾಭಂಗವಾಗದು; [QE][QS]ಯೌವನದಲ್ಲಿ ನಿನಗಾದ ಅವಮಾನವನ್ನು ಮರೆತುಬಿಡುವಿ, ವೈಧವ್ಯದಲ್ಲಿ ನಿನಗೆ ಸಂಭವಿಸಿದ ನಿಂದೆಯು ಇನ್ನು ನಿನ್ನ ನೆನಪಿಗೆ ಬಾರದು. [QE]
5. [PS]“ನಿನ್ನ ಸೃಷ್ಟಿಕರ್ತನೇ ನಿನ್ನ ಪತಿ, ಆತನ ಹೆಸರು ಸೇನಾಧೀಶ್ವರನಾದ ಯೆಹೋವ; [PE][QS]ಇಸ್ರಾಯೇಲಿನ ಸದಮಲಸ್ವಾಮಿಯು ನಿನ್ನ ನ್ಯಾಯಸ್ಥಾಪಕನಾಗಿದ್ದಾನೆ; ಸರ್ವಲೋಕದ ದೇವರೆಂಬ ನಾಮಧೇಯವನ್ನು ಹೊಂದಿರುವನು. [QE]
6. [QS]ನೀನು ತ್ಯಜಿಸಿದ ಮನನೊಂದ ಹೆಂಡತಿ, ಹೌದು, ತ್ಯಜಿಸಲ್ಪಟ್ಟವಳಾದ ನನ್ನ ಯೌವನಕಾಲದ ಪತ್ನಿ ಎಂದು ಯೆಹೋವನು ನಿನ್ನನ್ನು ಕನಿಕರಿಸಿ ಕರೆದಿದ್ದಾನೆ” ಎಂಬುದು ನಿನ್ನ ದೇವರ ನುಡಿ. [QE]
7. [QS]“ಕ್ಷಣಮಾತ್ರ ನಿನ್ನನ್ನು ಬಿಟ್ಟಿದ್ದೆನು, ಮಹಾ ಕೃಪೆಯಿಂದ ಸೇರಿಸಿಕೊಳ್ಳುವೆನು. [QE]
8. [QS]ತಟ್ಟನೆ ಉಬ್ಬಿ ಹರಿಯುವ ಕೋಪದಿಂದ ಒಂದು ಕ್ಷಣ ಮಾತ್ರ ನನ್ನ ಮುಖವನ್ನು ನಿನಗೆ ಮರೆಮಾಡಿಕೊಂಡಿದ್ದೆನು, [QE][QS]ಶಾಶ್ವತ ಕೃಪೆಯಿಂದ ನಿನ್ನನ್ನು ಕರುಣಿಸುವೆನು” ಎಂದು ನಿನ್ನ ವಿಮೋಚಕನಾದ ಯೆಹೋವನು ಅನ್ನುತ್ತಾನೆ. [QE]
9. [QS]“ನಿನ್ನನ್ನು ತ್ಯಜಿಸಿದ್ದು ನನಗೆ ನೋಹನ ಕಾಲದ ಜಲಪ್ರಳಯದಂತಿದೆ; ಇಂತಹ ಜಲಪ್ರಳಯವು ಭೂಮಿಯನ್ನು ಪುನಃ ಆವರಿಸುವುದಿಲ್ಲ ಎಂದು ನಾನು ಹೇಗೆ ಪ್ರಮಾಣಮಾಡಿದೆನೋ ಹಾಗೆಯೇ ನಾನು ನಿನ್ನ ಮೇಲೆ ಇನ್ನು ಕೋಪಮಾಡುವುದಿಲ್ಲ, ಗದರಿಸುವುದಿಲ್ಲ ಎಂದು ಈಗ ಪ್ರಮಾಣಮಾಡಿದ್ದೇನೆ. [QE]
10. [QS]ಬೆಟ್ಟಗಳು ಸ್ಥಳವನ್ನು ಬಿಟ್ಟುಹೋದಾವು, ಗುಡ್ಡಗಳು ಕದಲಿಯಾವು; ಆದರೆ ನನ್ನ ಕೃಪೆಯು ನಿನ್ನನ್ನು ಬಿಟ್ಟುಹೋಗದು, ಸಮಾಧಾನದ ನನ್ನ ಒಪ್ಪಂದವು ಕದಲದು ಎಂದು ನಿನ್ನನ್ನು ಕರುಣಿಸುವ ಯೆಹೋವನು ಅನ್ನುತ್ತಾನೆ. [QE]
11. [QS]ಕುಗ್ಗಿದವಳೇ, ಗಾಳಿಯ ಬಡಿತಕ್ಕೆ ಗುರಿಯಾದವಳೇ, ಯಾರೂ ಸಂತೈಸದವಳೇ, [QE][QS]ಇಗೋ, ಇಂದ್ರನೀಲಮಣಿಗಳಿಂದ ನಿನಗೆ ಅಸ್ತಿವಾರವನ್ನು ಹಾಕಿ, ನಿನ್ನ ಕಲ್ಲುಗಳನ್ನು ನೀಲಾಂಜನದ ಗಾರೆಯಿಂದ ಕಟ್ಟುವೆನು. [QE]
12. [QS]ನಿನ್ನ ಶಿಖರಗಳನ್ನು ಮಾಣಿಕ್ಯಗಳಿಂದ, ನಿನ್ನ ಬಾಗಿಲುಗಳನ್ನು ಪದ್ಮರಾಗಗಳಿಂದ, [QE][QS]ನಿನ್ನ ಪೌಳಿಗೋಡೆಯನ್ನು ಮನೋಹರ ರತ್ನಗಳಿಂದ ನಿರ್ಮಿಸುವೆನು. [QE]
13. [QS]ನಿನ್ನ ಮಕ್ಕಳೆಲ್ಲರೂ ಯೆಹೋವನಿಂದ ಶಿಕ್ಷಿತರಾಗಿರುವರು, ಅವರಿಗೆ ಅಧಿಕ ಸುಕ್ಷೇಮವಾಗುವುದು. [QE]
14. [QS]ಧರ್ಮವೇ ನಿನಗೆ ಆಧಾರ; ನೀನು ಹಿಂಸೆಗೆ ದೂರವಾಗಿರುವಿ, ನಿನಗೆ ಹೆದರಿಕೆ ಇರುವುದಿಲ್ಲ, ನಾಶನವು ದೂರವಾಗಿರುವುದು, ನಿನ್ನ ಹತ್ತಿರಕ್ಕೆ ಬಾರದು. [QE]
15. [QS]ನೋಡು, ಯಾರಾದರೂ ನಿನ್ನ ಸಂಗಡ ವ್ಯಾಜ್ಯವಾಡಿದರೆ ಅದು ನನ್ನ ಅಪ್ಪಣೆಯಿಂದ ಅಲ್ಲ; [QE][QS]ಯಾರು ನಿನ್ನ ಮೇಲೆ ವ್ಯಾಜ್ಯವಾಡುತ್ತಾರೋ ಅವರು ನಿನ್ನ ನಿಮಿತ್ತ ಕೆಡವಲ್ಪಡುವರು. [QE]
16. [QS]ಕೇಳು, ಕೆಂಡವನ್ನು ಊದುತ್ತಾ ಉಪಯುಕ್ತವಾದ ಆಯುಧವನ್ನು ಉಂಟುಮಾಡುವ ಕಮ್ಮಾರನನ್ನು ಸೃಷ್ಟಿಸಿದವನು ನಾನೇ, [QE][QS]ಹಾಳುಮಾಡುವ ಕೆಡುಕನನ್ನು ನಿರ್ಮಿಸಿದವನೂ ನಾನೇ. [QE]
17. [QS]ನಿನ್ನನ್ನು ಎದುರಿಸಲು ಕಲ್ಪಿಸಿದ ಯಾವ ಆಯುಧವೂ ಜಯಿಸದು; ನ್ಯಾಯವಿಚಾರಣೆಯಲ್ಲಿ ನಿನಗೆ ವಿರುದ್ಧವಾಗಿ ಏಳುವ ಪ್ರತಿಯೊಂದು ನಾಲಿಗೆಯನ್ನು ದೋಷಿಯೆಂದು ನೀನು ಖಂಡಿಸುವಿ. [QE][QS]ಈ ಸ್ಥಿತಿಯೇ ಯೆಹೋವನ ಸೇವಕರ ಸ್ವಾಸ್ತ್ಯವೂ, ನಾನು ದಯಪಾಲಿಸುವ ಸದ್ಧರ್ಮಫಲವೂ ಆಗಿದೆ” ಎಂದು ಯೆಹೋವನು ಅನ್ನುತ್ತಾನೆ. [QE]