1. {#1ಸಕಲ ಜನಾಂಗಗಳಿಗೂ ದೇವರ ಆಶೀರ್ವಾದ } [QS]ಯೆಹೋವನು ಹೀಗೆನ್ನುತ್ತಾನೆ, “ನ್ಯಾಯವನ್ನು ಅನುಸರಿಸಿ, ಧರ್ಮವನ್ನು ಆಚರಿಸಿರಿ; [QE][QS]ಏಕೆಂದರೆ ನನ್ನ ವಿಮೋಚನಕ್ರಿಯೆಯು ಬೇಗನೆ ಬರುವುದು, ನನ್ನ ರಕ್ಷಣಾಧರ್ಮದ ಕಾರ್ಯವು ಶೀಘ್ರವಾಗಿ ವ್ಯಕ್ತವಾಗುವುದು. [QE]
2. [QS]ಈ ವಿಧಿಯನ್ನು ಕೈಕೊಳ್ಳುವ ಮನುಷ್ಯನು ಧನ್ಯನು; ಇದನ್ನೇ ಭದ್ರವಾಗಿ ಹಿಡಿದು, [QE][QS]ಸಬ್ಬತ್ ದಿನವನ್ನು ಹೊಲೆಮಾಡದೆ ದೇವರ ದಿನವೆಂದು ಆಚರಿಸುತ್ತಾ ಯಾವ ಕೇಡಿಗೂ ಕೈಹಾಕದ ಮಾನವನು ಭಾಗ್ಯವಂತನು. [QE]
3. [QS]ಯೆಹೋವನನ್ನು ಅವಲಂಬಿಸಿದ ವಿದೇಶೀಯನು, ‘ಯೆಹೋವನು ತನ್ನ ಜನರಿಂದ ನನ್ನನ್ನು ಖಂಡಿತವಾಗಿ ಅಗಲಿಸುವನು’ ಎಂದು ಮಾತನಾಡದಿರಲಿ; [QE][QS]ಮತ್ತು ನಪುಂಸಕನು, ‘ಅಯ್ಯೋ, ನಾನು ಗೊಡ್ಡುಮರ’ ” ಎಂದು ಅಂದುಕೊಳ್ಳದಿರಲಿ. [QE]
4. [QS]ಯೆಹೋವನು ಹೀಗೆನ್ನುತ್ತಾನೆ, “ಸಬ್ಬತ್ ದಿನಗಳನ್ನು ನನ್ನ ದಿನಗಳೆಂದು ಆಚರಿಸಿ ನನಗೆ ಮೆಚ್ಚಿಕೆಯಾದುದನ್ನು ಕೈಕೊಂಡು ನನ್ನ ಒಡಂಬಡಿಕೆಯನ್ನು ಭದ್ರವಾಗಿ [QE]
5. [QS]ಹಿಡಿದುಕೊಂಡಿರುವ ಮಂಗಳಮುಖಿಯರಿಗೆ ನನ್ನ ಪ್ರಾಕಾರಗಳೊಳಗೆ ನನ್ನ ಆಲಯದಲ್ಲಿ ಅವರ ಜ್ಞಾಪಕಾರ್ಥವಾಗಿ ಶಿಲೆಯನ್ನಿಟ್ಟು [QE][QS]ಹೆಣ್ಣುಗಂಡು ಮಕ್ಕಳಿಗಿಂತ ಮೇಲಾದ ಹೆಸರನ್ನು ದಯಪಾಲಿಸುವೆನು; [QE][QS]ಹೌದು, ಎಂದಿಗೂ ಅಳಿಯದ ಶಾಶ್ವತನಾಮವನ್ನು ಅನುಗ್ರಹಿಸುವೆನು. [QE]
6. [QS]ಅನ್ಯದೇಶೀಯರಲ್ಲಿ ಯಾರು ಯೆಹೋವನೆಂಬ ನನ್ನನ್ನು ಅವಲಂಬಿಸಿ ಸೇವಿಸಿ [QE][QS]ನನ್ನ ನಾಮವನ್ನು ಪ್ರೀತಿಸಿ ನನಗೆ ದಾಸರಾಗಿ ಸಬ್ಬತ್ ದಿನವನ್ನು ಹೊಲೆಮಾಡದೆ [QE][QS]ನನ್ನ ದಿನವೆಂದು ಆಚರಿಸಿ ನನ್ನ ಒಡಂಬಡಿಕೆಯನ್ನು ಭದ್ರವಾಗಿ ಹಿಡಿಯುತ್ತಾರೋ [QE]
7. [QS]ಅವರೆಲ್ಲರನ್ನೂ ನಾನು ನನ್ನ ಪವಿತ್ರಪರ್ವತಕ್ಕೆ ಬರಮಾಡಿ ನನ್ನ ಪ್ರಾರ್ಥನಾಲಯದಲ್ಲಿ ಉಲ್ಲಾಸಗೊಳಿಸುವೆನು; [QE][QS]ನನ್ನ ಯಜ್ಞವೇದಿಯಲ್ಲಿ ಅವರು ಅರ್ಪಿಸುವ ಸರ್ವಾಂಗಹೋಮಗಳೂ, ಯಜ್ಞಗಳೂ ನನಗೆ ಮೆಚ್ಚಿಗೆಯಾಗುವವು; [QE][QS]ನನ್ನ ಆಲಯವು ಎಲ್ಲಾ ಜನಾಂಗಗಳಿಗೂ ಪ್ರಾರ್ಥನಾಲಯ ಎನಿಸಿಕೊಳ್ಳುವುದು. [QE]
8. [QS]ಇಸ್ರಾಯೇಲಿನ ದೇಶಭ್ರಷ್ಟರನ್ನು ಕೂಡಿಸಿಕೊಳ್ಳುವ ಕರ್ತನಾದ ಯೆಹೋವನ ನುಡಿಯೇನೆಂದರೆ, [QE][QS]‘ನಾನು ಕೂಡಿಸಿದ ಇಸ್ರಾಯೇಲರೊಂದಿಗೆ ಇನ್ನೂ ಹಲವರನ್ನು ಕೂಡಿಸುವೆನು’ ” ಎಂಬುದೇ. [QE]
9. {#1ಅಧಿಪತಿಗಳ ಅತ್ಯಾಶೆ, ಜನರ ದೇವದ್ರೋಹ, ಇವುಗಳ ಖಂಡನೆ } [QS]ಅರಣ್ಯದ ಸಕಲ ಮೃಗಗಳೇ, ಕಾಡಿನ ಎಲ್ಲಾ ಜಂತುಗಳೇ, ನುಂಗಿಬಿಡುವುದಕ್ಕೆ ಬನ್ನಿರಿ! [QE]
10. [QS]ಇವರ ಕಾವಲುಗಾರರು ಕುರುಡರು, ಇವರಲ್ಲಿ ಯಾರಿಗೂ ತಿಳಿವಳಿಕೆಯಿಲ್ಲ; [QE][QS]ಇವರೆಲ್ಲರೂ ಬೊಗಳಲಾರದ ಮೂಕ ನಾಯಿಗಳು, ನಿದ್ರೆಯನ್ನಾಶಿಸಿ ಮಲಗಿಕೊಂಡು ಕನವರಿಸುವ ನಾಯಿಗಳು. [QE]
11. [QS]ಇವು ಹೊಟ್ಟೆಬಾಕ ನಾಯಿಗಳು, ಇವುಗಳಿಗೆ ಎಂದಿಗೂ ಸಾಕು ಎನಿಸದು. [QE][QS]ಇಂಥವರು ಕುರಿಗಳನ್ನು ಕಾಯತಕ್ಕವರೋ! ಬುದ್ಧಿಹೀನರಾಗಿದ್ದಾರೆ, [QE][QS]ಇವರಲ್ಲಿ ಯಾರೂ ತಪ್ಪದೆ ಪ್ರತಿಯೊಬ್ಬನೂ ಕೊಳ್ಳೆಹೊಡೆಯಬೇಕೆಂದು ತನ್ನ ತನ್ನ ಮಾರ್ಗಕ್ಕೆ ತಿರುಗಿಕೊಂಡಿದ್ದಾನೆ. [QE]
12. [QS]“ಬನ್ನಿರಿ, ನಾನು ದ್ರಾಕ್ಷಾರಸವನ್ನು ತರಿಸುವೆನು, ಬೇಕಾದಷ್ಟು ಮದ್ಯವನ್ನು ಕುಡಿಯುವ; [QE][QS]ನಾಳೆಯೂ ಈ ದಿನದಂತೆ ಕೇವಲ ಅತ್ಯಂತ ವಿಶೇಷ ದಿನವಾಗಿರುವುದು” ಎಂದು ಹರಟೆ ಕೊಚ್ಚಿಕೊಳ್ಳುವರು. [QE]