1. ಸಜ್ಜನರು ನಾಶವಾಗುತ್ತಾರೆ, ಯಾರೂ ಮನಸ್ಸಿಗೆ ತಾರರು; ಸದ್ಭಕ್ತರು ಗತಿಸುತ್ತಾರೆ,
ಆಹಾ, ಶಿಷ್ಟರು ಕೇಡಿನಿಂದ ಪಾರಾಗಿದ್ದಾರೆ ಎಂದು ಯಾರೂ ಯೋಚಿಸರು. |
2. ಇವರು ಸಮಾಧಾನದಲ್ಲಿ ಸೇರಿದ್ದಾರಲ್ಲಾ;
ನೀತಿಯುಳ್ಳವನಾಗಿ ನಡೆಯುವ ಪ್ರತಿಯೊಬ್ಬನು ತನ್ನ ತನ್ನ ದೀರ್ಘನಿದ್ರಾಸ್ಥಾನದಲ್ಲಿ ವಿಶ್ರಮಿಸಿಕೊಳ್ಳುತ್ತಿದ್ದಾನೆ. |
3. {ಇಸ್ರಾಯೇಲಿನ ವಿಗ್ರಹಾರಾಧನೆಯನ್ನು ಖಂಡಿಸಿದ್ದು} PS ಮಾಟಗಾತಿಯ ಮಕ್ಕಳೇ,
ವ್ಯಭಿಚಾರ ಮತ್ತು ವ್ಯಭಿಚಾರಿಯ ಸಂತಾನದವರೇ, ನೀವು ಇಲ್ಲಿಗೆ ಬನ್ನಿರಿ! |
5. ಏಲಾ ಮರಗಳ ತೋಪುಗಳಲ್ಲಿಯೂ, ಸೊಂಪಾಗಿ ಬೆಳೆದಿರುವ ಪ್ರತಿಯೊಂದು ಮರದ ನೆರಳಿನಲ್ಲಿಯೂ ಮದವೇರಿಸಿಕೊಂಡು,
ಕಣಿವೆಗಳಲ್ಲಿಯೂ, ಬೆಟ್ಟದ ಗವಿಗಳಲ್ಲಿಯೂ ಮಕ್ಕಳನ್ನು ಕೊಂದುಹಾಕುವ ನೀವು ದ್ರೋಹದ ಸಂತಾನವೂ, ಸುಳ್ಳಿನ ಸಂತತಿಯೂ ಆಗಿದ್ದೀರಿ. |
6. ಕೆಟ್ಟ ಸಂತಾನವೇ, ಹೊಳೆಯ ನುಣುಪಾದ ಕಲ್ಲುಗಳೇ ನಿನಗೆ ಗತಿ, ಅವುಗಳೇ ನಿನ್ನ ಪಾಲು;
ಅವುಗಳಿಗೆ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು, ಧಾನ್ಯದ್ರವ್ಯವನ್ನು ಅರ್ಪಿಸಿದ್ದಿ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಡಗಿಸಿಕೊಳ್ಳಲು ಆಗುವುದೇ? |
8. ಬಾಗಿಲಿನ ಮತ್ತು ನಿಲುವಿನ ಹಿಂಭಾಗದಲ್ಲಿ ನೀನು ವಿಗ್ರಹವನ್ನು ಇಟ್ಟುಕೊಂಡಿದ್ದಿ;
ನನ್ನನ್ನು ಬಿಟ್ಟುಬಿಟ್ಟು, ನಿನ್ನ ಮಂಚದ ಗವಸಣಿಗೆಯನ್ನು ತೆಗೆದು, ಅದನ್ನು ಹತ್ತಿ ಅದರಲ್ಲಿ ಅನ್ಯರಿಗೆ ಸ್ಥಳಕೊಟ್ಟು ಅವರೊಂದಿಗೆ ಒಪ್ಪಂದ ಮಾಡಿಕೊಂಡಿದ್ದಿ. ಅವರ ಸಂಗಮವನ್ನು ಆಶಿಸಿ, ನಿನ್ನನ್ನು ತೋರ್ಪಡಿಸಿಕೊಂಡಿದ್ದಿ. |
9. ಬಹು ಸುಗಂಧದ್ರವ್ಯಗಳನ್ನು ಕೂಡಿಸಿ, ತೈಲವನ್ನೂ ತೆಗೆದುಕೊಂಡು, ಪರರಾಜನ * ಪರರಾಜನ ಅಥವಾ ಮೊಲೆಕೆಂಬ ವಿಗ್ರಹ. ಬಳಿಗೆ ಪ್ರಯಾಣಮಾಡಿದ್ದಿ;
ನಿನ್ನ ರಾಯಭಾರಿಗಳನ್ನು ದೂರ ದೂರ ಕಳುಹಿಸಿದ್ದಿ; ನಿನ್ನನ್ನು ಪಾತಾಳದವರೆಗೂ ತಗ್ಗಿಸಿಕೊಂಡಿದ್ದಿ. |
10. ನೀನು ನಡೆದು ನಡೆದು ಆಯಾಸಗೊಂಡರೂ ದಿಕ್ಕಿಲ್ಲವಲ್ಲಾ ಅಂದುಕೊಳ್ಳಲಿಲ್ಲ;
ಹೊಸ ಬಲವನ್ನು ತಂದುಕೊಂಡಿ; ಆದುದರಿಂದ ನೀನು ಸೋತುಹೋಗಲಿಲ್ಲ. |
11. ನೀನು ಯಾರಿಗೆ ಹೆದರಿ ನನ್ನನ್ನು ಮರೆತು ನನಗೆ ಮೋಸಮಾಡಿದಿ?
ಈ ದ್ರೋಹಕ್ಕೂ ಹಿಂದೆಗೆಯಲಿಲ್ಲವಲ್ಲಾ! ನೀನು ನನಗೆ ಅಂಜದೆ ಇರುವುದಕ್ಕೆ ನಾನು ಬಹುಕಾಲದಿಂದ ಸುಮ್ಮನೆ ಇದ್ದದ್ದೇ ಕಾರಣವಲ್ಲವೇ?. |
13. ನೀನು ಕೂಗಿಕೊಳ್ಳುವಾಗ ನೀನು ಕೂಡಿಹಾಕಿಕೊಂಡಿರುವ ವಿಗ್ರಹಗಳು ನಿನ್ನನ್ನುದ್ಧರಿಸಲಿ.
ಆದರೆ ಇವುಗಳನ್ನೆಲ್ಲಾ ಗಾಳಿಯು ಬಡಿದುಕೊಂಡು ಹೋಗುವುದು, ಉಸಿರು ಅದನ್ನು ಒಯ್ಯುವುದು. ನನ್ನನ್ನು ಆಶ್ರಯಿಸುವವನೋ ದೇಶವನ್ನು ಅನುಭವಿಸಿ ನನ್ನ ಪರಿಶುದ್ಧ ಪರ್ವತವನ್ನು ಬಾಧ್ಯವಾಗಿ ಹೊಂದುವನು. |
14. {ಪಶ್ಚಾತ್ತಾಪ ಪಡುವವರಿಗೆ ಕ್ಷಮಾಪಣೆ} PS “ಮಣ್ಣು ಹಾಕಿರಿ, ಹಾಕಿರಿ, ಮಾರ್ಗವನ್ನು ಸರಿಮಾಡಿರಿ;
ನನ್ನ ಜನರ ದಾರಿಯೊಳಗಿಂದ ಅಡಚಣೆಗಳನ್ನು ನಿರ್ಮೂಲಮಾಡಿರಿ” ಎಂದು ಒಂದು ವಾಣಿಯು ನುಡಿಯುತ್ತದೆ. |
15. ಸದಮಲನೆನಿಸಿಕೊಂಡು ಶಾಶ್ವತಲೋಕದಲ್ಲಿ ನಿತ್ಯನಿವಾಸಿಯಾದ ಮಹೋನ್ನತನು ಹೀಗೆನ್ನುತ್ತಾನೆ,
“ಉನ್ನತಲೋಕವೆಂಬ ಪವಿತ್ರಾಲಯದಲ್ಲಿ ವಾಸಿಸುವ ನಾನು, ಜಜ್ಜಿಹೋದ ದೀನಮನದೊಂದಿಗೆ ಇದ್ದುಕೊಂಡು, ದೀನನ ಆತ್ಮವನ್ನೂ ಜಜ್ಜಿಹೋದವನ ಮನಸ್ಸನ್ನೂ ಉಜ್ಜೀವಿಸುವವನಾಗಿದ್ದೇನೆ. |
16. ನಾನು ಸರ್ವದಾ ವ್ಯಾಜ್ಯವಾಡುವುದಿಲ್ಲ, ಕಡೆಯ ತನಕ ಕೋಪಿಸಿಕೊಳ್ಳೆನು,
ಹೀಗೆ ಮಾಡಿದರೆ ಮನುಷ್ಯನ ಆತ್ಮವೂ, ನಾನು ಸೃಷ್ಟಿಸಿದ ಜೀವವೂ ನನ್ನಿಂದ ಕುಂದಿಹೋದಾವು. |
17. ನನ್ನ ಜನರು ಲಾಭವನ್ನು ದೋಚಿಕೊಂಡ ಅನ್ಯಾಯವನ್ನು ನಾನು ನೋಡಿ ಕೋಪಗೊಂಡು ಅವರನ್ನು ಹೊಡೆದೆನು,
ನನ್ನ ಮುಖವನ್ನು ಮುಚ್ಚಿಕೊಂಡು ರೋಷಭರಿತನಾಗಿದ್ದೆನು; ಅವರೋ ತಿರುಗಿಕೊಂಡು ಮನಸ್ಸಿಗೆ ತೋರಿದ ಹಾಗೆಯೇ ನಡೆಯುತ್ತಾ ಬಂದಿದ್ದಾರೆ. |
18. ಅವರ ಮಾರ್ಗಗಳನ್ನು ನೋಡಿದ್ದೇನೆ, ಅವರನ್ನು ಸ್ವಸ್ಥಮಾಡಿ ನಡೆಸುತ್ತಾ ಅವರಿಗೆ,
ಅವರಲ್ಲಿನ ದುಃಖಿತರಿಗೆ, ಆದರಣೆಯನ್ನು ಪ್ರತಿಫಲವಾಗಿ ಕೊಡುವೆನು.” |
19. ಯೆಹೋವನು ಮನುಷ್ಯರ ಬಾಯಿಯ ಯೋಗ್ಯಫಲವಾಗಿರುವ ಸ್ತೋತ್ರವನ್ನು ಉಂಟುಮಾಡುವವನಾಗಿ, “ದೂರದವನಿಗೂ ಸಮೀಪದವನಿಗೂ ಕ್ಷೇಮವಿರಲಿ,
ಸುಕ್ಷೇಮವಿರಲಿ, ನಾನು ಅವರನ್ನು ಸ್ವಸ್ಥಮಾಡುವೆನು” ಎಂದು ಹೇಳುತ್ತಾನೆ. |
20. ದುಷ್ಟರಾದರೋ ಅಲ್ಲೋಲಕಲ್ಲೋಲವಾದ ಸಮುದ್ರದಂತಿದ್ದಾರೆ;
ಅದು ಸುಮ್ಮನಿರದು, ಅದರ ತೆರೆಗಳು ಕೆಸರನ್ನೂ, ಹೊಲಸನ್ನೂ ಕಾರುತ್ತಲಿರುತ್ತವೆ. |