1. {#1ನಿಜವಾದ ಉಪವಾಸ } [QS]ಸ್ವರವೆತ್ತಿ ಕೂಗು, ಸಂಕೋಚಪಡಬೇಡ, [QE][QS]ಕೊಂಬಿನಂತೆ ಧ್ವನಿಗೈದು ನನ್ನ ಜನರಿಗೆ ಅವರ ದ್ರೋಹಗಳನ್ನು ತಿಳಿಯಪಡಿಸು. ಯಾಕೋಬ ವಂಶದವರಿಗೆ ಅವರ ಪಾಪಗಳನ್ನು ತಿಳಿಸು. [QE]
2. [QS]ಅವರಂತು ದಿನದಿನವೂ ನನ್ನ ದರ್ಶನಕ್ಕಾಗಿ ಬಂದು, ನನ್ನ ಮಾರ್ಗವನ್ನು ತಿಳಿದುಕೊಳ್ಳುವುದರಲ್ಲಿ ಹೆಚ್ಚಳಪಡುತ್ತಾರೆ; [QE][QS]ತನ್ನ ದೇವರ ನಿಯಮಗಳನ್ನು ಬಿಡದೆ ಧರ್ಮವನ್ನಾಚರಿಸುವ ಜನಾಂಗವೋ ಎಂಬಂತೆ, [QE][QS]ಧೈರ್ಯವಾಗಿ ನನ್ನಿಂದ ನ್ಯಾಯವಿಧಿಗಳನ್ನು ಕೇಳಿಕೊಂಡು ದೇವದರ್ಶನದಲ್ಲಿ ಆನಂದಿಸುತ್ತಾರೆ. [QE]
3. [QS]“ನಾವು ಉಪವಾಸಮಾಡಿದ್ದೇವೆ, ನೀನು ಏಕೆ ಕಟಾಕ್ಷಿಸುವುದಿಲ್ಲ; ನಮ್ಮ ಆತ್ಮವನ್ನು ಕುಂದಿಸಿಕೊಂಡಿದ್ದೇವೆ, [QE][QS]ನೀನು ಗಮನಿಸದಿರುವುದೇಕೆ” ಅಂದುಕೊಳ್ಳುತ್ತಾರೆ. [QE][QS]ಇಗೋ, ನಿಮ್ಮ ಉಪವಾಸದ ದಿನದಲ್ಲಿಯೂ ನಿಮ್ಮ ನಿತ್ಯದ ಕೆಲಸವನ್ನು ನಡೆಸಿ ನಿಮ್ಮ ಆಳುಗಳನ್ನು ದುಡಿತಕ್ಕೆ ಎಳೆಯುತ್ತೀರಿ. [QE]
4. [QS]ನೋಡಿರಿ, ನಿಮ್ಮ ಉಪವಾಸದ ಫಲವೇನೆಂದರೆ, ವ್ಯಾಜ್ಯ, ಕಲಹ, ಕೇಡಿನ ಗುದ್ದು ಇವುಗಳೇ. ನೀವು ಈಗ ಮಾಡುವ ಉಪವಾಸವು ನಿಮ್ಮ ಪ್ರಾರ್ಥನೆಯನ್ನು ಉನ್ನತಲೋಕಕ್ಕೆ ಮುಟ್ಟಿಸತಕ್ಕದ್ದಲ್ಲ. [QE]
5. [QS]ಮನುಷ್ಯನು ತನ್ನ ಆತ್ಮವನ್ನು ಕುಂದಿಸಿಕೊಳ್ಳುವುದಕ್ಕಾಗಿ ನಾನು ನೇಮಿಸಿದ ಉಪವಾಸದಿನವು ಇಂಥದ್ದೋ,? [QE][QS]ಒಬ್ಬನು ಜೊಂಡಿನಂತೆ ತಲೆಯನ್ನು ಬೊಗ್ಗಿಸಿಕೊಂಡು ಗೋಣಿತಟ್ಟನ್ನೂ ಮತ್ತು ಬೂದಿಯನ್ನೂ ಆಸನಮಾಡಿಕೊಳ್ಳುವುದು [QE][QS]ಯೆಹೋವನಿಗೆ ಸಮರ್ಪಕವಾದ ಉಪವಾಸ ಎನ್ನುತ್ತೀರೋ? [QE]
6. [QS]ನೋಡಿರಿ, ಕೇಡಿನ ಬಂಧನಗಳನ್ನು ಬಿಚ್ಚುವುದು, ನೊಗಹೊರಿಸುವ ಹುರಿಯನ್ನು ಕಳಚುವುದು, [QE][QS]ಜಜ್ಜಿ ಹೋದವರನ್ನು ಬಿಡುಗಡೆ ಮಾಡುವುದು, ನೊಗಗಳನ್ನೆಲ್ಲಾ ಮುರಿಯುವುದು, [QE]
7. [QS]ಹಸಿದವರಿಗೆ ಅನ್ನವನ್ನು ಹಂಚುವುದು, ಅಲೆಯುತ್ತಿರುವ ಬಡವರನ್ನು ಮನೆಗೆ ಬರಮಾಡಿಕೊಳ್ಳುವುದು, [QE][QS]ಬೆತ್ತಲೆಯವರನ್ನು ಕಂಡಾಗೆಲ್ಲಾ ಅವರಿಗೆ ಹೊದಿಸುವುದು, ನಿನ್ನಂತೆ ಮನುಷ್ಯನಾಗಿರುವ ಯಾರಿಗೇ ಆಗಲಿ ಮುಖತಪ್ಪಿಸಿಕೊಳ್ಳದಿರುವುದು, [QE][QS]ಇವುಗಳೇ ನನಗೆ ಇಷ್ಟವಾದ ಉಪವಾಸ ವ್ರತವಲ್ಲವೇ. [QE]
8. [QS]ಇದನ್ನು ಆಚರಿಸುವಾಗ ನಿಮಗೆ ಬೆಳಕು ಉದಯದಂತೆ ಮೂಡಿ ಬರುವುದು, [QE][QS]ನಿಮ್ಮ ಕ್ಷೇಮವು ಬೇಗನೆ ಬೆಳೆಯುವುದು; ನಿಮ್ಮ ಧರ್ಮವು ನಿಮಗೆ ಮುಂಬಲವಾಗಿರುವುದು, [QE][QS]ಯೆಹೋವನ ಮಹಿಮೆಯು ನಿಮಗೆ ಹಿಂಬಲವಾಗಿರುವುದು. [QE]
9. [QS]ಆಗ ನೀವು ಕೂಗಿದರೆ ಯೆಹೋವನು ಉತ್ತರಕೊಡುವನು, ಮೊರೆಯಿಟ್ಟು ಕರೆದರೆ, “ಇಗೋ, ಇದ್ದೇನೆ” ಅನ್ನುವನು. [QE][QS]ನೀವು ನಿಮ್ಮ ಮಧ್ಯದೊಳಗಿಂದ ನೊಗವನ್ನು, ಇನ್ನೊಬ್ಬರನ್ನು ದೂಷಣೆಗೆ ಗುರಿಮಾಡಿ ತೋರುವ ಬೆರಳನ್ನು, ಕೆಡುಕಿನ ನುಡಿಯನ್ನು ಬಿಟ್ಟು, [QE]
10. [QS]ನಿಮಗೆ ಪ್ರಿಯವಾದದ್ದನ್ನು ಹಸಿದವರಿಗೆ ಒದಗಿಸಿ, ಕುಗ್ಗಿದವರ ಆಶೆಯನ್ನು ನೆರವೇರಿಸಿದರೆ, [QE][QS]ಆಗ ನಿಮಗೆ ಕತ್ತಲಲ್ಲಿ ಬೆಳಕು ಉದಯಿಸುವುದು, ನಿಮ್ಮ ಅಂಧಕಾರವು ಪರಿಹಾರವಾಗಿ ಮಧ್ಯಾಹ್ನವಾಗುವುದು. [QE]
11. [QS]ಮತ್ತು ಯೆಹೋವನು ನಿಮ್ಮನ್ನು ನಿತ್ಯವೂ ನಡೆಸುತ್ತಾ, [QE][QS]ಮರುಭೂಮಿಯಲ್ಲಿಯೂ ನಿಮ್ಮ ಆತ್ಮವನ್ನು ತೃಪ್ತಿಗೊಳಿಸಿ, ನಿಮ್ಮ ಎಲುಬುಗಳನ್ನು ಬಲಗೊಳಿಸುವನು; [QE][QS]ನೀವು ತಂಪಾದ ತೋಟಕ್ಕೂ, ನೀರಿಗೆ ಮೋಸವಿಲ್ಲದ ಬುಗ್ಗೆಗೂ ಸಮಾನವಾಗುವಿರಿ. [QE]
12. [QS]ನಿಮ್ಮ ಸಂತಾನದವರು ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ಪುನಃ ಕಟ್ಟುವರು. [QE][QS]ನೀವು ತಲತಲಾಂತರಗಳಿಂದ ಹಾಳುಬಿದ್ದಿರುವ ಅಸ್ತಿವಾರಗಳ ಮೇಲೆ ಕಟ್ಟಡಗಳನ್ನು ಎಬ್ಬಿಸುವಿರಿ; [QE][QS]“ಬಿದ್ದ ಗೋಡೆಯನ್ನು ಕಟ್ಟುವ ಜನಾಂಗ, ಹಾದಿಗಳನ್ನು ತಿರುಗಾಡುವ ಸ್ಥಿತಿಗೆ ತರುವ ಜನಾಂಗ” [QE][QS]ಎಂಬ ಬಿರುದುಗಳು ನಿಮಗುಂಟಾಗುವವು. [QE]
13. {#1ಸಬ್ಬತ್ ದಿನದ ಆಚರಣೆ } [QS]ನೀವು ಸಬ್ಬತ್ ದಿನವನ್ನು ಅಗಮ್ಯವಾದದ್ದೆಂದು ತಿಳಿದು, ಆ ನನ್ನ ಪರಿಶುದ್ಧ ದಿನದಲ್ಲಿ ನಿಮ್ಮ ನಿತ್ಯದ ಕೆಲಸವನ್ನು ಮಾಡದೆ, [QE][QS]ಸ್ವಇಚ್ಛೆಯಂತೆ ನಡೆಯದೆ, ಸ್ವಕಾರ್ಯದಲ್ಲಿ ನಿರತರಾಗದೆ, ಹರಟೆಹರಟದೆ, [QE][QS]ಯೆಹೋವನ ಸಬ್ಬತ್ ಎಂಬ ಪರಿಶುದ್ಧದಿನವು ಉಲ್ಲಾಸಕರವೂ, ಮಾನ್ಯವೂ ಆದದ್ದೆಂದು ಘನಪಡಿಸಿದರೆ, [QE]
14. [QS]ಆಗ ನೀವು ಯೆಹೋವನಲ್ಲಿ ಉಲ್ಲಾಸಪಡುವಿರಿ ಮತ್ತು ನಾನು ನಿಮ್ಮನ್ನು ಭೂಮಿಯ ಉನ್ನತವಾದ ಪ್ರದೇಶಗಳ ಮೇಲೆ ಹತ್ತಿಸಿ, [QE][QS]ನಿಮ್ಮ ಪಿತೃವಾದ ಯಾಕೋಬನ ಸ್ವತ್ತನ್ನು ನೀವು ಅನುಭವಿಸುವಂತೆ ಮಾಡುವೆನು. [QE][QS]ಯೆಹೋವನೇ ಇದನ್ನು ನುಡಿದಿದ್ದಾನೆ. [QE]