1. {#1ರಕ್ಷಣೆಗೆ ಪಾಪವೇ ಅಡ್ಡಿ } [QS]ಇಗೋ, ಯೆಹೋವನ ಹಸ್ತವು ರಕ್ಷಿಸಲಾರದಂತಹ ಮೋಟುಗೈಯಲ್ಲ; ಆತನ ಕಿವಿಯು ಕೇಳಲಾರದ ಹಾಗೆ ಕಿವುಡಲ್ಲ. [QE]
2. [QS]ಆದರೆ ನಿಮ್ಮ ಅಪರಾಧಗಳೇ ನಿಮ್ಮ ದೇವರಿಂದ ನಿಮ್ಮನ್ನು ಅಗಲಿಸುತ್ತಾ ಬಂದಿವೆ; [QE][QS]ನಿಮ್ಮ ಪಾಪಗಳೇ ಆತನು ಕೇಳಲಾರದಂತೆ ಆತನ ಮುಖಕ್ಕೆ ಅಡ್ಡವಾಗಿವೆ. [QE]
3. [QS]ನಿಮ್ಮ ಕೈಗಳು ರಕ್ತದಿಂದ ಹೊಲಸಾಗಿವೆ, ನಿಮ್ಮ ಬೆರಳುಗಳು ಅಪರಾಧದಿಂದ ಅಶುದ್ಧವಾಗಿವೆ; [QE][QS]ನಿಮ್ಮ ತುಟಿಗಳು ಸುಳ್ಳಾಡುತ್ತವೆ, ನಿಮ್ಮ ನಾಲಿಗೆಯು ಕೆಡುಕನ್ನು ನುಡಿಯುತ್ತದೆ. [QE]
4. [QS]ಇವರಲ್ಲಿ ಯಾರೂ ನ್ಯಾಯಸ್ಥಾನಕ್ಕೆ ನ್ಯಾಯವಾಗಿ ಹೋಗುವುದಿಲ್ಲ, ಯಾರೂ ಸತ್ಯವಾಗಿ ವಾದಿಸುವುದಿಲ್ಲ; [QE][QS]ಇವರು ಶೂನ್ಯವಾಗಿರುವುದನ್ನು ನಂಬಿಕೊಂಡು ಸುಳ್ಳನ್ನಾಡುತ್ತಾರೆ; ಹಿಂಸೆಯನ್ನು ಗರ್ಭಧರಿಸಿ ಶ್ರಮೆಯನ್ನು ಹೆರುತ್ತಾರೆ. [QE]
5. [QS]ಹಾವಿನಂತೆ ಕೇಡಿನ ಮೊಟ್ಟೆಗಳನ್ನು ಮರಿಮಾಡುತ್ತಾರೆ, ಜೇಡರ ಹುಳದಂತೆ ಬಲೆಯನ್ನು ನೇಯುತ್ತಾರೆ; [QE][QS]ಆ ಮೊಟ್ಟೆಗಳನ್ನು ತಿನ್ನುವವನಿಗೆ ಮರಣ ಉಂಟಾಗುವುದು, ಅದನ್ನು ಒಡೆದುಬಿಡುವುದರಿಂದ ವಿಷದ ಮರಿ ಹೊರಡುವುದು. [QE]
6. [QS]ಇವರ ಬಲೆಯ ದಾರವು ಬಟ್ಟೆಯಾಗದು, ಇವರು ನೇಯ್ದದ್ದು ಹೊದಿಕೆಯಾಗದು; [QE][QS]ಇವರ ಕಾರ್ಯಗಳು ಅಧರ್ಮಕಾರ್ಯಗಳು, ಇವರ ಕೈಯಲ್ಲಿ ಬಲಾತ್ಕಾರವೇ ತುಂಬಿದೆ. [QE]
7. [QS]ಇವರ ಕಾಲುಗಳು ಕೇಡನ್ನು ಹಿಂಬಾಲಿಸಿ ಓಡುತ್ತವೆ, ಇವರು ನಿರಪರಾಧಿಯ ರಕ್ತವನ್ನು ಸುರಿಸಲು ಆತುರಪಡುತ್ತಾರೆ, [QE][QS]ಇವರ ಯೋಚನೆಗಳು ಅಧರ್ಮದ ಯೋಚನೆಗಳೇ, ಇವರು ಹೋದ ದಾರಿಗಳಲ್ಲಿ ನಷ್ಟವೂ, ನಾಶನವೂ ಉಂಟಾಗುತ್ತವೆ; [QE]
8. [QS]ಇವರು ಸಮಾಧಾನದ ಮಾರ್ಗವನ್ನೇ ಅರಿಯರು, ಇವರ ಹಾದಿಗಳಲ್ಲಿ ಯಾವ ನ್ಯಾಯವೂ ಇಲ್ಲ, [QE][QS]ತಮ್ಮ ಮಾರ್ಗಗಳನ್ನು ಡೊಂಕು ಮಾಡಿಕೊಂಡಿದ್ದಾರೆ, ಅವುಗಳಲ್ಲಿ ನಡೆಯುವವರು ಸಮಾಧಾನವನ್ನು ಅರಿಯರು. [QE]
9. [QS]ಆದಕಾರಣ ಯೆಹೋವನ ನ್ಯಾಯನಿರ್ಣಯವು ನಮಗೆ ದೂರವಾಗಿದೆ. ಆತನ ರಕ್ಷಣಾಧರ್ಮದ ಕಾರ್ಯವು ನಮಗೆ ಲಭಿಸುವುದಿಲ್ಲ; [QE][QS]ಬೆಳಕನ್ನು ಎದುರುನೋಡುತ್ತಿರುವ ನಮ್ಮನ್ನು ಕತ್ತಲೆಯೇ ಆವರಿಸಿದೆ, ಜ್ಯೋತಿಯನ್ನು ನಿರೀಕ್ಷಿಸುತ್ತಿರುವ ನಾವು ಅಂಧಕಾರದಲ್ಲೇ ನಡೆಯುತ್ತೇವೆ. [QE]
10. [QS]ಕುರುಡರಂತೆ ಗೋಡೆಯನ್ನು ತಡವರಿಸಿ ನಡೆಯುತ್ತೇವೆ, ಹೌದು, ಕಣ್ಣಿಲ್ಲದವರ ಹಾಗೆ ತಡಕಾಡುತ್ತೇವೆ, [QE][QS]ಮಧ್ಯಾಹ್ನದಲ್ಲಿ ಸಂಜೆಯಂತೆ ಎಡವುತ್ತೇವೆ, ಪುಷ್ಟರ[* ಪುಷ್ಟರ ಅಥವಾ ನಿರ್ಜನ್ಯ ಸ್ಥಳ. ] ನಡುವೆ ಸತ್ತವರ ಹಾಗಿದ್ದೇವೆ. [QE]
11. [QS]ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮುಲುಗುತ್ತಲೇ ಇದ್ದೇವೆ; [QE][QS]ನಾವು ಯೆಹೋವನ ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ನಮಗೆ ಸಿಕ್ಕದು, [QE][QS]ಆತನ ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರವಾಗಿರುವುದು. [QE]
12. [QS]ಏಕೆಂದರೆ ನಮ್ಮ ತಪ್ಪುಗಳು ನಿನ್ನ ದೃಷ್ಟಿಗೆ ಹೆಚ್ಚಾಗಿ ಬಿದ್ದಿವೆ, ನಮ್ಮ ಪಾಪಗಳು ನಮ್ಮ ವಿರುದ್ಧವಾಗಿ ಸಾಕ್ಷಿಕೊಡುತ್ತವೆ; [QE][QS]ನಮ್ಮ ತಪ್ಪುಗಳು ನಮ್ಮ ಸಂಗಡಲೇ ಇವೆ, ನಮ್ಮ ಅಪರಾಧಗಳನ್ನು ನಾವೇ ಬಲ್ಲೆವು. [QE]
13. [QS]ಹೌದು, ಯೆಹೋವನಿಗೆ ತಪ್ಪಿ ನಡೆದು ಆತನನ್ನು ಅಲ್ಲಗಳೆದಿದ್ದೇವೆ, ನಮ್ಮ ದೇವರನ್ನು ಹಿಂಬಾಲಿಸುವುದನ್ನು ಬಿಟ್ಟು ಅವನಿಂದ ದೂರವಾಗಿದ್ದೇವೆ. [QE][QS]ಅನ್ಯಾಯವನ್ನೂ ದ್ರೋಹವನ್ನೂ ನುಡಿದಿದ್ದೇವೆ, ಹೃದಯಪೂರ್ವಕವಾಗಿ ಸುಳ್ಳುಮಾತುಗಳನ್ನು ಕಲ್ಪಿಸಿ ಆಡಿದ್ದೇವೆ. [QE]
14. [QS]ನ್ಯಾಯವು ಹಿಂದಕ್ಕೆ ತಳ್ಳಲ್ಪಟ್ಟಿದೆ, ಧರ್ಮವು ದೂರದಲ್ಲಿ ನಿಂತಿದೆ, [QE][QS]ಸತ್ಯವು ಚಾವಡಿಯಲ್ಲಿ ಬಿದ್ದುಹೋಗಿದೆ, ಯಥಾರ್ಥತ್ವವು ಪ್ರವೇಶಿಸಲಾರದು. [QE]
15. [QS]ಸತ್ಯವು ಇಲ್ಲವೇ ಇಲ್ಲ, ಕೇಡನ್ನು ಬಿಟ್ಟವನು ಸೂರೆಯಾಗುತ್ತಾನೆ. [QE]
16. {#1ತನ್ನ ಜನರನ್ನು ರಕ್ಷಿಸಲು ಯೆಹೋವನು ಕ್ರಮ ಕೈಗೊಂಡದ್ದು } [QS]ಯೆಹೋವನು ಇವುಗಳನ್ನು ನೋಡಿ ನ್ಯಾಯವಿಲ್ಲವಲ್ಲಾ ಎಂದು ವ್ಯಸನಗೊಂಡನು; ಉದ್ಧಾರಕನಾದ ಯಾವ ಪುರುಷನೂ ಇಲ್ಲವೆಂದು ಕಂಡು ಸ್ತಬ್ಧನಾದನು; [QE][QS]ಆಗ ಆತನ ಸ್ವಹಸ್ತವೇ ಆತನಿಗೆ ರಕ್ಷಣಾ ಸಾಧನವಾಯಿತು, ಆತನ ಧರ್ಮವೇ ಆತನಿಗೆ ಆಧಾರವಾಯಿತು. [QE]
17. [QS]ಅವನು ನೀತಿಯನ್ನು ವಜ್ರಕವಚವನ್ನಾಗಿ ಹಾಕಿಕೊಂಡು, ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; [QE][QS]ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು, ಸೇಡನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು. [QE]
18. [QS]ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ, ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ, [QE][QS]ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯಲ್ಲಿರುವವರಿಗೂ ತಕ್ಕ ಪ್ರತಿಫಲವನ್ನು ನೀಡುವನು. [QE]
19. [QS]ಹೀಗಿರಲು ಪಶ್ಚಿಮದವರು ಯೆಹೋವನ ನಾಮಕ್ಕೆ ಹೆದರುವರು, ಪೂರ್ವ ದಿಕ್ಕಿನವರು ಆತನ ಮಹಿಮೆಗೆ ಅಂಜುವರು; [QE][QS][† ಯೆಹೋವನ ಆತ್ಮವು ಅವನಿಗೆ ವಿರುದ್ಧವಾಗಿ ಧ್ವಜವನ್ನು ಎತ್ತುವನು. ]ಬಿರುಗಾಳಿಯಿಂದ ಹೊಡೆಯಲ್ಪಟ್ಟು ಇಕ್ಕಟ್ಟಿನಲ್ಲಿ ಹರಿಯುವ ತೊರೆಯ ಹಾಗೆ ಆತನು ರಭಸದಿಂದ ಬರುವನಷ್ಟೆ. [QE]
20. [QS]“ಒಬ್ಬ ವಿಮೋಚಕನು ಚೀಯೋನಿಗೂ, ದ್ರೋಹವನ್ನು ಬಿಟ್ಟುಬಿಟ್ಟ ಯಾಕೋಬ್ಯರ ಬಳಿಗೂ ಬರುವನು”, ಯೆಹೋವನೇ ಇದನ್ನು ನುಡಿದಿದ್ದಾನೆ. [QE]
21. [PS]ನಾನಂತೂ ಅವರೊಂದಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು, ನೋಡಿರಿ; [PE][QS]“ನಿಮ್ಮಲ್ಲಿ ಪ್ರವೇಶಿಸಿರುವ ನನ್ನ ಆತ್ಮವೂ, ನಿಮ್ಮ ಬಾಯಿಗೆ ನಾನು ಕೊಟ್ಟಿರುವ ಮಾತುಗಳೂ, [QE][QS]ನಿಮ್ಮ ಬಾಯಿಂದಾಗಲಿ, ನಿಮ್ಮ ಸಂತತಿಯ ಬಾಯಿಂದಾಗಲಿ ಅಥವಾ ನಿಮ್ಮ ಸಂತತಿಯ ಸಂತಾನದ ಬಾಯಿಂದಾಗಲಿ ಇಂದಿನಿಂದ ಎಂದಿಗೂ ತೊಲಗುವುದಿಲ್ಲ” ಎಂದು ಯೆಹೋವನು ಹೇಳುತ್ತಾನೆ. [QE]