1. {ಯೆಶಾಯನಿಗೆ ಯೆಹೋವನ ಕರೆ} PS ಅರಸನಾದ ಉಜ್ಜೀಯನು ಮರಣಹೊಂದಿದ ವರ್ಷದಲ್ಲಿ ಕರ್ತನು ಉನ್ನತೋನ್ನತವಾಗಿ ಸಿಂಹಾಸನಾರೂಢನಾಗಿರುವುದನ್ನು ಕಂಡೆನು. ಆತನ ವಸ್ತ್ರದ ನೆರಿಗೆಯು ಆಲಯದಲ್ಲೆಲ್ಲಾ ಹರಡಿತ್ತು.
|
2. ಆತನ ಸುತ್ತಲು ಸೆರಾಫಿಯರು ಇದ್ದರು. ಪ್ರತಿಯೊಬ್ಬನು ಆರಾರು ರೆಕ್ಕೆಯುಳ್ಳವನಾಗಿ, ಎರಡರಿಂದ ತನ್ನ ಮುಖವನ್ನು, ಎರಡರಿಂದ ತನ್ನ ಕಾಲುಗಳನ್ನು ಮುಚ್ಚಿಕೊಂಡು, ಇನ್ನೆರಡು ರೆಕ್ಕೆಗಳಿಂದ ಹಾರುತ್ತಿದ್ದನು. PEPS
|
3. ಆಗ ಒಬ್ಬನು ಮತ್ತೊಬ್ಬನಿಗೆ,
“ಸೇನಾಧೀಶ್ವರನಾದ ಯೆಹೋವನು ಪರಿಶುದ್ಧನು, ಪರಿಶುದ್ಧನು, ಪರಿಶುದ್ಧನು, ಭೂಮಂಡಲವೆಲ್ಲಾ ಆತನ ಪ್ರಭಾವದಿಂದ ತುಂಬಿದೆ” ಎಂದು ಕೂಗಿ ಹೇಳಿದನು. PEPS |
5. ಆಗ ನಾನು,
“ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ ನಾಶವಾದೆನಲ್ಲಾ! ನಾನು ಹೊಲಸು ತುಟಿಯವನು. ಹೊಲಸು ತುಟಿಯವರ ಮಧ್ಯದಲ್ಲಿ ವಾಸಿಸುವವನು. ಇಂಥ ನನ್ನ ಕಣ್ಣುಗಳು ರಾಜಾಧಿರಾಜನನ್ನು, ಸೇನಾಧೀಶ್ವರನಾದ ಯೆಹೋವನನ್ನು ಕಂಡೆವಲ್ಲಾ!” ಎಂದು ಕೂಗಿಕೊಳ್ಳಲು, PEPS |
6. ಆಗ ಸೆರಾಫಿಯರಲ್ಲಿ ಒಬ್ಬನು ಯಜ್ಞವೇದಿಯಿಂದ ತಾನು ಉರಿಯುವ ಕೆಂಡವನ್ನು ಕೈಯಲ್ಲಿ ಹಿಡಿದುಕೊಂಡು ನನ್ನ ಬಳಿಗೆ ಹಾರಿ ಬಂದು,
|
7. ನನ್ನ ಬಾಯಿಗೆ ಮುಟ್ಟಿಸಿ,
“ಇಗೋ, ಇದು ನಿನ್ನ ತುಟಿಗಳಿಗೆ ತಗಲಿತು. ನಿನ್ನ ದೋಷವು ನೀಗಿತು. ನಿನ್ನ ಪಾಪಕ್ಕೆ ಪ್ರಾಯಶ್ಚಿತ್ತವಾಯಿತು” ಎಂದನು. PEPS |
8. ಆಗ, “ಯಾರನ್ನು ಕಳುಹಿಸಲಿ? ಯಾರು ನಮಗೋಸ್ಕರ ಹೋಗುವನು?” ಎಂಬ ಕರ್ತನ ನುಡಿಯನ್ನು ಕೇಳಿ, “ಇಗೋ, ನಾನಿದ್ದೇನೆ, ನನ್ನನ್ನು ಕಳುಹಿಸು” ಎಂದೆನು.
|
9. ಅದಕ್ಕೆ ಆತನು, “ನೀನು ಈ ಜನರ ಬಳಿಗೆ ಹೋಗಿ,
ನೀವು ಕಿವಿಯಾರೆ ಕೇಳಿದರೂ ತಿಳಿಯಬಾರದು, ಕಣ್ಣಾರೆ ಕಂಡರೂ ಗ್ರಹಿಸಬಾರದು ಎಂದು ತಿಳಿಸಿ, |
10. ಕಣ್ಣಿನಿಂದ ನೋಡದಂತೆಯೂ, ಕಿವಿಯಿಂದ ಕೇಳದಂತೆಯೂ, ತಮ್ಮ ಹೃದಯದಿಂದ ಗ್ರಹಿಸಿ ನನ್ನ ಕಡೆಗೆ ತಿರಿಗಿಕೊಂಡು ನನ್ನಿಂದ ಸ್ವಸ್ಥತೆಯನ್ನು ಹೊಂದದಂತೆ ಈ ಜನರ ಹೃದಯವನ್ನು ಕೊಬ್ಬಿಸಿ,
ಕಿವಿಯನ್ನು ಮಂದಗೊಳಿಸಿ, ಅವರ ಕಣ್ಣಿಗೆ ಅಂಟು ಬಳಿ” ಎಂದು ನನಗೆ ಹೇಳಿದನು. PEPS |
11. ಅದಕ್ಕೆ ನಾನು, “ಕರ್ತನೇ, ಇದು ಎಷ್ಟರವರೆಗೆ?” ಎಂದು ಕೇಳಲು ಅದಕ್ಕೆ ಆತನು,
“ಯೆಹೋವನು ಜನರನ್ನು ದೂರ ತೊಲಗಿಸಿ ದೇಶದಲ್ಲಿ ನಾಶ ಹೆಚ್ಚಾಗಿ ಪಟ್ಟಣಗಳು ನಿವಾಸಿಗಳಿಲ್ಲದೆ, ಮನೆಗಳು ಜನರಿಲ್ಲದೆ, ದೇಶವು ಸಂಪೂರ್ಣವಾಗಿ ಹಾಳಾಗುವವರೆಗೂ ಇದೇ ರೀತಿ ಇರುವುದು. |
13. ಆಗ ದೇಶದಲ್ಲಿ ಹತ್ತನೆಯ ಒಂದು ಭಾಗ ಉಳಿದಿದ್ದರೂ, ಅದೂ ಸಹ ನಾಶವಾಗುವುದು.
ಏಲಾ ಮರವನ್ನಾಗಲೀ, ಅಲ್ಲೋನ್ ಮರವನ್ನಾಗಲೀ ಕಡಿದ ಮೇಲೆ, ಉಳಿಯುವುದು ಬುಡ ಮಾತ್ರ” ಎಂದು ಉತ್ತರಕೊಟ್ಟನು. PE |