ಪವಿತ್ರ ಬೈಬಲ್

ದೇವರ ಕೃಪೆಯ ಉಡುಗೊರೆ
ಯೆಶಾಯ
1. {ಚೀಯೋನಿಗೆ ರಕ್ಷಣೆಯ ವಾಗ್ದಾನಗಳು} [PS] ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು; [QBR] ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ, [QBR]
2. ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ, [QBR]
3. ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ, [QBR] ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ. [QBR] ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು. [QBR]
4. ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರುಗಿ ಕಟ್ಟುವರು, [QBR] ಪೂರ್ವದಲ್ಲಿ ಹಾಳುಬಿದ್ದದ್ದನ್ನು ಪುನಃ ಎಬ್ಬಿಸುವರು, ತಲತಲಾಂತರಗಳಿಂದ ಹಾಳಾದ ಪಟ್ಟಣಗಳನ್ನು ಜೀರ್ಣೋದ್ಧಾರ ಮಾಡುವರು. [QBR]
5. ಆಗ ವಿದೇಶೀಯರು ನಿಂತುಕೊಂಡು ನಿಮ್ಮ ಮಂದೆಗಳನ್ನು ಮೇಯಿಸುವರು, ಅನ್ಯರು ನಿಮಗೆ ಉಳುವವರೂ ಮತ್ತು ತೋಟಗಾರರೂ ಆಗುವರು. [QBR]
6. ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು; [QBR] ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ. [QBR]
7. ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವತ್ತಿನಲ್ಲಿ ಹಿಗ್ಗುವರು; [QBR] ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವುದು. [QBR]
8. ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. [* ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ಅಥವಾ ಕೊಳ್ಳೆ ಹೊಡೆದ ವಸ್ತುಗಳೊಂದಿಗೆ ಅರ್ಪಿಸುವ ಯಜ್ಞವನ್ನು ದ್ವೇಷಿಸುತ್ತೇನೆ] [QBR] ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು. [QBR]
9. ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು. [QBR] ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು. [QBR]
10. ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು. [QBR] ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ, [QBR] ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ. [QBR]
11. ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ, [QBR] ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು. [PE]

Notes

No Verse Added

Total 66 Chapters, Current Chapter 61 of Total Chapters 66
ಯೆಶಾಯ 61:7
1. {ಚೀಯೋನಿಗೆ ರಕ್ಷಣೆಯ ವಾಗ್ದಾನಗಳು} PS ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಇದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವುದಕ್ಕೆ ಅಭಿಷೇಕಿಸಿದನು;
ಮನಮುರಿದವರನ್ನು ಕಟ್ಟಿ ವಾಸಿಮಾಡುವುದಕ್ಕೂ, ಸೆರೆಯವರಿಗೆ ಬಿಡುಗಡೆಯಾಗುವುದನ್ನು, ಬಂದಿಗಳಿಗೆ ಕದ ತೆರೆಯುವುದನ್ನು ಪ್ರಸಿದ್ಧಿಪಡಿಸುವುದಕ್ಕೂ,
2. ಯೆಹೋವನು ನೇಮಿಸಿರುವ ಶುಭವರ್ಷ, ನಮ್ಮ ದೇವರು ಮುಯ್ಯಿತೀರಿಸುವ ದಿನ ಇವುಗಳನ್ನು ಪ್ರಚುರಗೊಳಿಸುವುದಕ್ಕೂ,
3. ದುಃಖಿತರೆಲ್ಲರನ್ನು ಸಂತೈಸುವುದಕ್ಕೂ, ಚೀಯೋನಿನಲ್ಲಿ ಶೋಕಿಸುವವರಿಗೆ ಬೂದಿಗೆ ಬದಲಾಗಿ ಶಿರೋಭೂಷಣ,
ದುಃಖವಿದ್ದಲ್ಲಿ ಆನಂದತೈಲ, ಕುಂದಿದ ಮನಕ್ಕೆ ಪ್ರತಿಯಾಗಿ ಉತ್ಸಾಹ ಸ್ತೋತ್ರದ ವಸ್ತ್ರ ಇವುಗಳನ್ನು ಒದಗಿಸಿಕೊಡುವುದಕ್ಕೂ ಆತನು ನನ್ನನ್ನು ಕಳುಹಿಸಿದ್ದಾನೆ.
ಯೆಹೋವನು ತನ್ನ ಪ್ರಭಾವಕ್ಕೋಸ್ಕರ ಹಾಕಿದ ನೀತಿವೃಕ್ಷಗಳು ಎಂಬ ಬಿರುದು ಇವರಿಗಾಗುವುದು.
4. ಪುರಾತನಕಾಲದಲ್ಲಿ ಹಾಳಾದ ನಿವೇಶನಗಳನ್ನು ತಿರುಗಿ ಕಟ್ಟುವರು,
ಪೂರ್ವದಲ್ಲಿ ಹಾಳುಬಿದ್ದದ್ದನ್ನು ಪುನಃ ಎಬ್ಬಿಸುವರು, ತಲತಲಾಂತರಗಳಿಂದ ಹಾಳಾದ ಪಟ್ಟಣಗಳನ್ನು ಜೀರ್ಣೋದ್ಧಾರ ಮಾಡುವರು.
5. ಆಗ ವಿದೇಶೀಯರು ನಿಂತುಕೊಂಡು ನಿಮ್ಮ ಮಂದೆಗಳನ್ನು ಮೇಯಿಸುವರು, ಅನ್ಯರು ನಿಮಗೆ ಉಳುವವರೂ ಮತ್ತು ತೋಟಗಾರರೂ ಆಗುವರು.
6. ನೀವೋ ಯೆಹೋವನ ಯಾಜಕರೆಂಬ ಬಿರುದನ್ನು ಹೊಂದುವಿರಿ, ಜನರು ನಿಮ್ಮನ್ನು ನಮ್ಮ ದೇವರ ಸೇವಕರು ಎಂದು ಕರೆಯುವರು;
ಜನಾಂಗಗಳ ಆಸ್ತಿಯನ್ನು ಅನುಭವಿಸುವಿರಿ, ಅವುಗಳ ವೈಭವವನ್ನು ಪಡೆದು ಹೊಗಳಿಕೊಳ್ಳುವಿರಿ.
7. ನಿಮಗಾದ ಅವಮಾನಕ್ಕೆ ಬದಲಾಗಿ ಎರಡರಷ್ಟು ಮಾನವನ್ನು ಹೊಂದುವಿರಿ; ನಾಚಿಕೆಪಟ್ಟದ್ದಕ್ಕೆ ಪ್ರತಿಯಾಗಿ ಇವರು ತಮ್ಮ ಸ್ವತ್ತಿನಲ್ಲಿ ಹಿಗ್ಗುವರು;
ಹೀಗೆ ತಮ್ಮ ದೇಶದಲ್ಲಿ ಎರಡರಷ್ಟನ್ನು ಅನುಭವಿಸುವರು; ಇವರಿಗೆ ಶಾಶ್ವತ ಸಂತೋಷವಾಗುವುದು.
8. ಯೆಹೋವನೆಂಬ ನಾನು ನ್ಯಾಯವನ್ನು ಪ್ರೀತಿಸುತ್ತೇನೆ. ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. * ಕೊಳ್ಳೆಯನ್ನೂ, ಅನ್ಯಾಯವನ್ನೂ ದ್ವೇಷಿಸುತ್ತೇನೆ. ಅಥವಾ ಕೊಳ್ಳೆ ಹೊಡೆದ ವಸ್ತುಗಳೊಂದಿಗೆ ಅರ್ಪಿಸುವ ಯಜ್ಞವನ್ನು ದ್ವೇಷಿಸುತ್ತೇನೆ
ನಾನು ಇವರ ನಷ್ಟಕ್ಕೆ ಬದಲಾಗಿ ಪ್ರತಿಫಲವನ್ನು ಪ್ರಾಮಾಣಿಕವಾಗಿ ಕೊಟ್ಟು, ಇವರೊಂದಿಗೆ ನಿತ್ಯವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವೆನು.
9. ಇವರ ಸಂತಾನವು ಜನಾಂಗಗಳಲ್ಲಿ ಪ್ರಖ್ಯಾತವಾಗುವುದು, ಇವರ ಸಂತತಿಯು ಅನ್ಯದೇಶೀಯರಲ್ಲಿ ಹೆಸರುಗೊಳ್ಳುವುದು.
ಇವರನ್ನು ನೋಡುವವರೆಲ್ಲರು ಯೆಹೋವನು ಆಶೀರ್ವದಿಸಿದ ವಂಶವು ಇದೇ ಎಂದು ಒಪ್ಪಿಕೊಳ್ಳುವರು.
10. ನಾನು ಯೆಹೋವನಲ್ಲಿ ಪರಮಾನಂದಪಡುವೆನು, ನನ್ನ ಆತ್ಮವು ನನ್ನ ದೇವರಲ್ಲಿ ಹಿಗ್ಗುವುದು.
ವರನು ಬಾಸಿಂಗವನ್ನು ಧರಿಸಿಕೊಳ್ಳುವಂತೆಯೂ, ವಧುವು ತನ್ನನ್ನು ಆಭರಣಗಳಿಂದ ಅಲಂಕರಿಸಿಕೊಳ್ಳುವ ಹಾಗೂ,
ಆತನು ನನಗೆ ರಕ್ಷಣೆಯೆಂಬ ವಸ್ತ್ರವನ್ನು ಹೊದಿಸಿ, ಧರ್ಮವೆಂಬ ನಿಲುವಂಗಿಯನ್ನು ತೊಡಿಸಿದ್ದಾನೆ.
11. ಭೂಮಿಯು ತನ್ನೊಳಗಿಂದ ಮೊಳಕೆಯನ್ನು ಹೊರಡಿಸುವಂತೆ, ತೋಟವು ತನ್ನಲ್ಲಿ ಬಿತ್ತಿದ್ದನ್ನು ಮೊಳೆಯಿಸುವ ಹಾಗೆ,
ಕರ್ತನಾದ ಯೆಹೋವನು ಎಲ್ಲಾ ಜನಾಂಗಗಳ ಎದುರಿನಲ್ಲಿ ಧರ್ಮವನ್ನೂ ಮತ್ತು ಸ್ತೋತ್ರವನ್ನೂ ಮೊಳೆತು ಅಭಿವೃದ್ಧಿ ಹೊಂದುವಂತೆ ಮಾಡುವನು. PE
Total 66 Chapters, Current Chapter 61 of Total Chapters 66
×

Alert

×

kannada Letters Keypad References