1. {ಯೆರೂಸಲೇಮಿಗಾಗಿ ಯೆಶಾಯನ ಪ್ರಾರ್ಥನೆ} PS ಚೀಯೋನಿನ ಧರ್ಮವು ಪ್ರಕಾಶಗೊಳ್ಳುವ ತನಕ, ಯೆರೂಸಲೇಮಿನ ರಕ್ಷಣೆಯು ದೀವಿಟಿಗೆಯಂತೆ ಪ್ರಜ್ವಲಿಸುವವರೆಗೆ,
ನಾನು ಮೌನವಾಗಿರದೆ ಚೀಯೋನಿನ ಹಿತವನ್ನು ಲಕ್ಷಿಸುತ್ತಿರುವೆನು; ಮೌನವಾಗಿರದೆ ಯೆರೂಸಲೇಮಿನ ಕ್ಷೇಮವನ್ನು ಚಿಂತಿಸುತ್ತಿರುವೆನು. |
2. ಜನಾಂಗಗಳು ನಿನ್ನ ಧರ್ಮವನ್ನು, ಸಕಲ ರಾಜರು ನಿನ್ನ ವೈಭವವನ್ನು ನೋಡುವರು;
ಯೆಹೋವನ ಬಾಯಿ ನೇಮಿಸಿದ ಹೊಸ ಹೆಸರು ನಿನಗೆ ದೊರೆಯುವುದು. |
4. ನೀನು ಇನ್ನು ಮೇಲೆ “ತ್ಯಜಿಸಲ್ಪಟ್ಟವಳು” ಎನಿಸಿಕೊಳ್ಳುವುದಿಲ್ಲ, ನಿನ್ನ ಸೀಮೆಗೆ “ನಿರ್ಜನ ಪ್ರದೇಶ” ಎಂಬ ಹೆಸರು ಇನ್ನು ಇರದು;
ನೀನು “ನನ್ನ ಉಲ್ಲಾಸಿನಿ * ಉಲ್ಲಾಸಿನಿ ಎಫ್ಸಿಬ್. ” ಎನಿಸಿಕೊಳ್ಳುವಿ, ನಿನ್ನ ಸೀಮೆಗೆ “ವಿವಾಹಿತೆ † ವಿವಾಹಿತೆ ಬ್ಯೂಲ್. ” ಎಂಬ ಹೆಸರಾಗುವುದು; ಏಕೆಂದರೆ ಯೆಹೋವನು ನಿನ್ನಲ್ಲಿ ಉಲ್ಲಾಸಗೊಳ್ಳುತ್ತಾನೆ, ನಿನ್ನ ಸೀಮೆಗೆ ವಿವಾಹವಾಗುವುದು. ‡ ನಿನ್ನ ಸೀಮೆಗೆ ವಿವಾಹವಾಗುವುದು. ನೀನು ನಿನ್ನ ದೇಶಕ್ಕೆ ಮದಲಿಂಗಿತ್ತಿಯಂತೆ ಇರುವಿ. |
5. ಯುವಕನು ಯುವತಿಯನ್ನು ವರಿಸುವಂತೆ, ನಿನ್ನ ಮಕ್ಕಳು § ಮಕ್ಕಳು ನಿನ್ನನ್ನು ಉಂಟುಮಾಡಿದವನು. ನಿನ್ನನ್ನು ವರಿಸುವರು;
ವರನು ವಧುವಿನಲ್ಲಿ ಆನಂದಿಸುವ ಹಾಗೆ ನಿನ್ನ ದೇವರು ನಿನ್ನಲ್ಲಿ ಆನಂದಿಸುವನು. |
6. ಯೆರೂಸಲೇಮೇ, ನಾನು ನಿನ್ನ ಪೌಳಿಗೋಡೆಗಳಲ್ಲಿ ಕಾವಲುಗಾರರನ್ನು ನೇಮಿಸಿದ್ದೇನೆ;
ಅವರು ಹಗಲೂ, ಇರುಳೂ ಮೌನವಾಗಿರರು. ಯೆಹೋವನನ್ನು ಸ್ಮರಿಸುವವರೇ, |
7. ಆತನು ಯೆರೂಸಲೇಮನ್ನು ಭದ್ರಪಡಿಸಿ, ಲೋಕಪ್ರಸಿದ್ಧಿಗೆ ತರುವ ತನಕ ನಿಮಗೂ ವಿರಾಮ ಇಲ್ಲದಿರಲಿ, ಅತನಿಗೂ ವಿರಾಮ ಇಲ್ಲದಿರಲಿ.
|
8. ಯೆಹೋವನು ತನ್ನ ಬಲಗೈಯ ಮೇಲೆಯೂ, ತನ್ನ ಭುಜಬಲದ ಮೇಲೆಯೂ ಆಣೆಯಿಟ್ಟು,
“ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡುವುದೇ ಇಲ್ಲ. ನೀನು ಶ್ರಮಿಸಿ ಪಡೆದು ದ್ರಾಕ್ಷಾರಸವನ್ನು ಅನ್ಯರು ಕುಡಿಯುವುದೇ ಇಲ್ಲ; |
9. ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆಹಾಕಿದವರೇ ಅದನ್ನು ಊಟಮಾಡಿ ಯೆಹೋವನನ್ನು ಸ್ತುತಿಸುವರು.
ನಿನ್ನ ದ್ರಾಕ್ಷಿಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು” ಎಂದು ಹೇಳಿದ್ದಾನೆ. |
10. ಊರ ಬಾಗಿಲುಗಳಲ್ಲಿ ಹಾದು ಬನ್ನಿರಿ, ಹಾದು ಬನ್ನಿರಿ,
ಜನರಿಗೆ ದಾರಿಯನ್ನು ಸರಿಮಾಡಿರಿ, ರಾಜಮಾರ್ಗವನ್ನು ಎತ್ತರಿಸಿರಿ, ಸರಿಪಡಿಸಿರಿ. ಕಲ್ಲುಗಳನ್ನು ತೆಗೆದುಹಾಕಿರಿ, ಜನಾಂಗಗಳಲ್ಲಿ ಧ್ವಜವನ್ನೆತ್ತಿರಿ! |
11. “ಇಗೋ, ನಿನ್ನ ರಕ್ಷಣೆಯು ಸಮೀಪವಾಯಿತು, ಯೆಹೋವನು ದಯಪಾಲಿಸುವ ಬಹುಮಾನವು ಆತನ ಮುಂದಿದೆ ಎಂದು ಚೀಯೋನೆಂಬಾಕೆಗೆ ಹೇಳಿರಿ”
ಎಂಬುದಾಗಿ ಯೆಹೋವನು ಭೂಮಿಯ ಕಟ್ಟಕಡೆಯವರೆಗೂ ಅಪ್ಪಣೆಮಾಡಿದ್ದಾನೆ. |
12. ನಿನ್ನ ಜನರು, “ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು” ಎಂದು ಅನ್ನಿಸಿಕೊಳ್ಳುವರು, ನಿನಗೋ, “ಪತಿಯು ವರಿಸಿ, * ವರಿಸಿ, ಅಥವಾ ಪ್ರೀತಿಸಿ. ತ್ಯಜಿಸದ ಪಟ್ಟಣ” ಎಂದು ಹೆಸರು ಬರುವುದು. PE
|