1. {ಯೆಹೋವನು ಶತ್ರುಗಳನ್ನು ಧ್ವಂಸಮಾಡುವುದು} [PS] ಆಹಾ, ರಕ್ತವರ್ಣದ ಉಡುಪನ್ನಿಟ್ಟು, ಘನವಸ್ತ್ರಗಳನ್ನು ಧರಿಸಿಕೊಂಡು, ಮಹಾಶೌರ್ಯಯುಕ್ತನಾಗಿ ಮೆರೆಯುತ್ತಾ, [QBR] ಎದೋಮಿನ ಬೊಚ್ರದಿಂದ ಬರುವ ಇವನು ಯಾರು? [QBR] ಸತ್ಯಾನುಸಾರವಾಗಿ ಮಾತನಾಡುವವನು, ರಕ್ಷಿಸಲು ಸಮರ್ಥನು ಆದ ನಾನೇ. [QBR]
2. ನಿನ್ನ ಉಡುಪು ಏಕೆ ಕೆಂಪಾಗಿದೆ, ನಿನ್ನ ವಸ್ತ್ರಗಳು ದ್ರಾಕ್ಷಿಯನ್ನು ತುಳಿಯುವವನ ಬಟ್ಟೆಯ ಹಾಗಿರುವುದು ಏಕೆ? [QBR]
3. ನಾನೊಬ್ಬನೇ ದ್ರಾಕ್ಷಿಯನ್ನು ತೊಟ್ಟಿಯಲ್ಲಿ ತುಳಿದಿದ್ದೇನೆ, ಜನಾಂಗದವರಲ್ಲಿ ಯಾರೂ ನನ್ನೊಂದಿಗಿರಲಿಲ್ಲ. [QBR] ನನ್ನ ಕೋಪದಿಂದ ಶತ್ರುಗಳನ್ನು ತುಳಿದೆನು, ರೋಷವೇರಿದವನಾಗಿ ಅವರನ್ನು ತುಳಿದುಹಾಕಿದೆನು; [QBR] ಅವರ ಜೀವಸತ್ವ ನನ್ನ ವಸ್ತ್ರಗಳ ಮೇಲೆ ಸಿಡಿದಿದೆ, ನನ್ನ ಉಡುಪನ್ನೆಲ್ಲಾ ಮಲಿನ ಮಾಡಿಕೊಂಡೆನು. [QBR]
4. ಏಕೆಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರ್ಷವು ಒದಗಿತ್ತು. [QBR]
5. ನಾನು ನೋಡಲು ಸಹಾಯಕರು ಯಾರೂ ಇರಲಿಲ್ಲ, ಯಾವ ಬೆಂಬಲವೂ ಇಲ್ಲದ್ದನ್ನು ಕಂಡು ಸ್ತಬ್ಧನಾದೆನು; [QBR] ಆಗ ನನ್ನ ಸ್ವಹಸ್ತವೇ ನನಗೆ ರಕ್ಷಣಾಸಾಧನವಾಯಿತು, ನನ್ನ ರೌದ್ರವೇ ನನಗೆ ಆಧಾರವಾಯಿತು. [QBR]
6. ನನ್ನ ಕೋಪದಿಂದ ಜನಾಂಗಗಳನ್ನು ತುಳಿದು ರೋಷವೇರಿದವನಾಗಿ, [QBR] ಅವುಗಳನ್ನು ಚೂರುಚೂರು ಮಾಡಿ ನೆಲದ ಮೇಲೆ ಅವುಗಳ ಸಾರವನ್ನು ಸುರಿಸಿದೆನು.
7. {ಕೃಪಾಕಾರ್ಯಗಳಿಗೆ ಪ್ರಾರ್ಥನೆ} [PS] ಯೆಹೋವನು ನಮಗೆ ಅನುಗ್ರಹಿಸಿದ್ದನ್ನೆಲ್ಲಾ ಸ್ಮರಿಸಿ ಆತನ ಕೃಪಾಕಾರ್ಯಗಳನ್ನು ಮತ್ತು ಸ್ತುತ್ಯಕೃತ್ಯಗಳನ್ನು, [QBR] ಆತನು ಕನಿಕರದಿಂದಲೂ, ಕೃಪಾತಿಶಯದಿಂದಲೂ ಇಸ್ರಾಯೇಲ್ ವಂಶದವರಿಗೆ ದಯಪಾಲಿಸಿರುವ ಮಹೋಪಕಾರವನ್ನೂ ಪ್ರಸಿದ್ಧಿಪಡಿಸುವೆನು. [QBR]
8. “ನಿಜವಾಗಿ ಇವರು ನನ್ನ ಜನರು, ನನ್ನ ಮಕ್ಕಳು, ಮೋಸ ಮಾಡಲಾರರು” ಎಂದು ಆತನು ಅಂದುಕೊಂಡು ಅವರಿಗೆ ರಕ್ಷಕನಾದನು. [QBR]
9. ಅವರು ಶ್ರಮೆಪಡುತ್ತಿರುವಾಗೆಲ್ಲಾ ಆತನೂ ಶ್ರಮೆಪಟ್ಟನು; ಆತನ ಸಮ್ಮುಖದ ದೂತನು ಅವರನ್ನು ರಕ್ಷಿಸಿದನು; [QBR] ತನ್ನಲ್ಲಿನ ಮಮತೆಯಿಂದಲೂ ತಾಳ್ಮೆಯಿಂದಲೂ ಅವರನ್ನು ವಿಮೋಚಿಸಿ, ಪುರಾತನ ಕಾಲದಲ್ಲೆಲ್ಲಾ ಎತ್ತಿಕೊಂಡು ಹೊರುತ್ತಾ ಬಂದನು. [QBR]
10. ಅವರಾದರೋ ಎದುರುಬಿದ್ದು ಆತನ ಪವಿತ್ರಾತ್ಮವನ್ನು ದುಃಖಪಡಿಸಿದರು; ಆದುದರಿಂದ ಆತನು ಮಾರ್ಪಟ್ಟು ಅವರಿಗೆ ಶತ್ರುವಾಗಿ ತಾನೇ ಅವರೊಡನೆ ಹೋರಾಡಿದನು. [QBR]
11. ಆಗ ಆತನ ಜನರು [* ಆತನ ಜನರು ಆತನು ಅಥವಾ ದೇವರು] ಪುರಾತನವಾದ ಮೋಶೆಯ ಕಾಲವನ್ನು ಜ್ಞಾಪಕಮಾಡಿಕೊಂಡು ಹೀಗೆಂದರು, “ತನ್ನ ಜನವೆಂಬ ಮಂದೆಯನ್ನು ಕುರುಬರ ಸಹಿತ ಸಮುದ್ರದೊಳಗಿಂದ ಮೇಲಕ್ಕೆ ಬರಮಾಡಿದಾತನು ಎಲ್ಲಿ? [QBR]
12. ಅವರ ಮಧ್ಯದಲ್ಲಿ ತನ್ನ ಪವಿತ್ರಾತ್ಮವನ್ನಿರಿಸಿ, ಮೋಶೆಯ ಬಲಗೈಯೊಂದಿಗೆ ತನ್ನ ಘನಹಸ್ತವನ್ನೂ ಮುಂದುವರೆಸುತ್ತಾ [QBR] ತನ್ನ ಹೆಸರು ಶಾಶ್ವತವಾಗಿರಬೇಕೆಂದು ಅವರೆದುರಿಗೆ ಜಲರಾಶಿಯನ್ನು ಇಬ್ಭಾಗ ಮಾಡಿದಾತನು ಎಲ್ಲಿ? [QBR]
13. ಸಾಗರದ ತಳಕ್ಕೆ ಅವರನ್ನು ನಡೆಸಿದಾತನು ಎಲ್ಲಿ? ಕುದುರೆಯು ಮೈದಾನದಲ್ಲಿ ನಡೆಯುವ ಪ್ರಕಾರ ಅವರು ಮುಗ್ಗರಿಸಲಿಲ್ಲ. [QBR]
14. ತಗ್ಗಿಗೆ ಇಳಿಯುವ ದನಗಳೋಪಾದಿಯಲ್ಲಿ ಯೆಹೋವನ ಆತ್ಮವು ಅವರನ್ನು ವಿಶ್ರಾಂತಿಯ ಸ್ಥಾನಕ್ಕೆ ಕರೆತಂದಿತು; [QBR] ನಿನ್ನ ನಾಮವನ್ನು ಘನಪಡಿಸಿಕೊಳ್ಳುವುದಕ್ಕಾಗಿ ನಿನ್ನ ಜನರನ್ನು ಹೀಗೆ ನಡೆಸಿದಿ. [QBR]
15. ಆಕಾಶದಿಂದ ನೋಡು, ಪರಿಶುದ್ಧವೂ, ಘನವೂ ಆದ ನಿನ್ನ ಉನ್ನತಸ್ಥಾನದಿಂದ ಲಕ್ಷಿಸು; [QBR] ನಿನ್ನ ಉತ್ಸಾಹವೆಲ್ಲಿ, ನಿನ್ನ ಸಾಹಸ ಕಾರ್ಯಗಳೆಲ್ಲಿ? [QBR] ನಿನ್ನ ಕರುಳ ಮರುಗಾಟವನ್ನೂ, ನಿನ್ನ ಕನಿಕರವನ್ನೂ ನಮ್ಮ ಕಡೆಗೆ ಬಿಗಿ ಹಿಡಿದಿದ್ದಿ. [QBR]
16. ನೀನೇ ನಮ್ಮ ಪಿತೃವಾಗಿದ್ದೀಯಲ್ಲಾ; [QBR] ಅಬ್ರಹಾಮನು ನಮ್ಮನ್ನರಿಯನು, ಇಸ್ರಾಯೇಲನು ನಮ್ಮನ್ನು ಗುರುತಿಸನು; [QBR] ಯೆಹೋವನೇ, ನೀನೇ ನಮ್ಮ ಪಿತೃ; ನೀನು ಆದಿಯಿಂದಲೂ ‘ನಮ್ಮ ವಿಮೋಚಕನು’ ಅನ್ನಿಸಿಕೊಂಡಿದ್ದಿ. [QBR]
17. ಯೆಹೋವನೇ, ನಾವು ನಿನ್ನ ಮಾರ್ಗದಿಂದ ತಪ್ಪಿ ಅಲೆಯುವಂತೆ ಏಕೆ ಮಾಡುತ್ತೀ? [QBR] ನಾವು ನಿನಗೆ ಭಯಪಡದ ಹಾಗೆ ನಮ್ಮ ಹೃದಯವನ್ನು ಕಠಿನಪಡಿಸುವುದೇಕೆ? ನಿನ್ನ ಸೇವಕರ ನಿಮಿತ್ತ ನಿನ್ನ ಬಾಧ್ಯವಾದ ಕುಲಗಳಿಗಾಗಿ ತಿರುಗಿ ಪ್ರಸನ್ನನಾಗು. [QBR]
18. ನಿನ್ನ ಸ್ವಕೀಯಜನರು ಸ್ವಲ್ಪಕಾಲ ಮಾತ್ರ ನಿನ್ನ ಸ್ವತ್ತಾದ ಪವಿತ್ರಸ್ಥಳವನ್ನು ಅನುಭವಿಸುತ್ತಿದ್ದರು; [QBR] ಈಗ ನಮ್ಮ ವೈರಿಗಳು ಅದನ್ನು ತುಳಿದುಬಿಟ್ಟಿದ್ದಾರೆ. [QBR]
19. ನಿನ್ನ ದೊರೆತನಕ್ಕೆ ಎಂದಿಗೂ ಒಳಪಡದೆ, ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ. [† ನಿನ್ನ ನಾಮವನ್ನು ಧರಿಸದೆ ಇರುವ ಜನರ ಹಾಗಿದ್ದೇವೆ. ಪುರಾತನ ಕಾಲದಿಂದಲೂ ನಾವು ನಿನ್ನ ಜನರಾಗಿದ್ದೇವೆ.] [PE]