ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯೆಶಾಯ
1. ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! [QBR] ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಗಲಿದರೆ ಎಷ್ಟೋ ಒಳ್ಳೆಯದು! [QBR]
2. ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ, [QBR] ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ, ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ! [QBR]
3. ಹೌದು, ನೀನು ಮೊದಲಿನಂತೆ ನಮ್ಮ ನಿರೀಕ್ಷೆಗೆ ಮೀರಿದ ಭಯಂಕರ ಕೃತ್ಯಗಳನ್ನು ನಡೆಸಿ ಇಳಿದು ಬಂದು, ಪರ್ವತಗಳು ನಿನ್ನ ದರ್ಶನದಿಂದ ನಡುಗಿದರೆ ಎಷ್ಟೋ ಲೇಸು! [QBR]
4. ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, [QBR] ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ. [QBR]
5. ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ; [QBR] ನಮ್ಮ ಮೇಲಾದರೋ ರೋಷಗೊಂಡಿದ್ದಿ; ಆದರೂ ಪಾಪದಲ್ಲಿ ಮುಳುಗಿರುವ ನಮಗೆ ರಕ್ಷಣೆಯಾದೀತೇ? [QBR]
6. ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; [QBR] ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ. [QBR]
7. ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; [QBR] ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ. [QBR]
8. ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; [QBR] ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ. [QBR]
9. ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ. [QBR]
10. ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ. [QBR]
11. ನಮ್ಮ ಪೂರ್ವಿಕರು ನಿನ್ನನ್ನು ಕೀರ್ತಿಸುತ್ತಿದ್ದ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, [QBR] ನಮ್ಮ ಅಮೂಲ್ಯ ವಸ್ತುಗಳೆಲ್ಲಾ ನಾಶವಾಗಿವೆ. [QBR]
12. ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ? [QBR] ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ?” [PE]

ಟಿಪ್ಪಣಿಗಳು

No Verse Added

ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 64 / 66
ಯೆಶಾಯ 64:11
1 ಆಹಾ, ನೀನು ಆಕಾಶವನ್ನು ಸೀಳಿ ಇಳಿದು ಬರಬಾರದೇ! ನಿನ್ನ ದರ್ಶನವು ಉಂಟಾಗಿ ಪರ್ವತಗಳು ಅಗಲಿದರೆ ಎಷ್ಟೋ ಒಳ್ಳೆಯದು! 2 ಒಣಗಿಡಕ್ಕೆ ಹತ್ತುವ ಕಿಚ್ಚಿನ ಪ್ರಕಾರ, ನೀರನ್ನು ಕುದಿಸುವ ಬೆಂಕಿಯೋಪಾದಿಯಲ್ಲಿಯೂ ನೀನು ಪ್ರತ್ಯಕ್ಷನಾಗಿ, ನಿನ್ನ ನಾಮಮಹತ್ತನ್ನು ನಿನ್ನ ಶತ್ರುಗಳಿಗೆ ತಿಳಿಯಪಡಿಸಿ, ಜನಾಂಗಗಳನ್ನು ನಿನ್ನ ದರ್ಶನದಿಂದ ನಡುಗಿಸಬಾರದೇ! 3 ಹೌದು, ನೀನು ಮೊದಲಿನಂತೆ ನಮ್ಮ ನಿರೀಕ್ಷೆಗೆ ಮೀರಿದ ಭಯಂಕರ ಕೃತ್ಯಗಳನ್ನು ನಡೆಸಿ ಇಳಿದು ಬಂದು, ಪರ್ವತಗಳು ನಿನ್ನ ದರ್ಶನದಿಂದ ನಡುಗಿದರೆ ಎಷ್ಟೋ ಲೇಸು! 4 ನಿನ್ನನ್ನು ಬಿಟ್ಟರೆ ನಿರೀಕ್ಷಿಸುವವನಿಗೆ ಕಾರ್ಯಕರ್ತನಾದ ಯಾವ ದೇವರನ್ನೂ ಆದಿಯಿಂದ ಯಾರೂ ಕೇಳಲಿಲ್ಲ, ಯಾರ ಕಿವಿಗೂ ಬೀಳಲಿಲ್ಲ, ಯಾರ ಕಣ್ಣೂ ಕಾಣಲಿಲ್ಲ. 5 ಧರ್ಮವನ್ನು ಅನುಸರಿಸಲು ಸಂತೋಷಪಟ್ಟು ನಿನ್ನ ಮಾರ್ಗದಲ್ಲಿ ನಡೆಯುತ್ತಾ ನಿನ್ನನ್ನು ಸ್ಮರಿಸುವವರಿಗೆ ಪ್ರಸನ್ನನಾಗಿದ್ದಿ; ನಮ್ಮ ಮೇಲಾದರೋ ರೋಷಗೊಂಡಿದ್ದಿ; ಆದರೂ ಪಾಪದಲ್ಲಿ ಮುಳುಗಿರುವ ನಮಗೆ ರಕ್ಷಣೆಯಾದೀತೇ? 6 ನಾವೆಲ್ಲರು ಅಶುದ್ಧನ ಹಾಗಿದ್ದೇವೆ, ನಮ್ಮ ಧರ್ಮಕಾರ್ಯಗಳೆಲ್ಲಾ ಹೊಲೆಯ ಬಟ್ಟೆಯಂತಿವೆ; ನಾವೆಲ್ಲರೂ ಎಲೆಗಳೋಪಾದಿಯಲ್ಲಿ ಒಣಗಿಹೋಗಿದ್ದೇವೆ; ನಮ್ಮ ಅಪರಾಧಗಳು ಬಿರುಗಾಳಿಯ ಪ್ರಕಾರ ನಮ್ಮನ್ನು ಬಡಿದುಕೊಂಡು ಹೋಗಿವೆ. 7 ಈಗ ನಿನ್ನ ಹೆಸರೆತ್ತಿ ಪ್ರಾರ್ಥಿಸಿ, ನಿನ್ನನ್ನು ಆಶ್ರಯಿಸಲು ತ್ರಾಣ ತಂದುಕೊಳ್ಳುವವನು ಎಲ್ಲಿಯೂ ಇಲ್ಲ; ನೀನು ನಮಗೆ ವಿಮುಖನಾಗಿ ನಮ್ಮನ್ನು ನಮ್ಮ ಅಪರಾಧಗಳಿಗೆ ವಶಮಾಡಿದ್ದಿಯಲ್ಲಾ. 8 ಈಗಲಾದರೋ ಯೆಹೋವನೇ, ನೀನು ನಮ್ಮ ತಂದೆಯಾಗಿದ್ದಿ; ನೀನು ಕುಂಬಾರನು, ನಾವು ಜೇಡಿಮಣ್ಣು, ನಾವೆಲ್ಲರೂ ನಿನ್ನ ಕೈಕೆಲಸವೇ. 9 ಯೆಹೋವನೇ, ಅತಿರೋಷಗೊಳ್ಳದಿರು, ನಮ್ಮ ಅಧರ್ಮವನ್ನು ಕಡೆಯವರೆಗೂ ಜ್ಞಾಪಕದಲ್ಲಿಡಬೇಡ; ಎಲೈ, ಕರ್ತನೇ, ಕಟಾಕ್ಷಿಸು, ನಾವೆಲ್ಲರೂ ನಿನ್ನ ಜನರಾಗಿದ್ದೇವೆ. 10 ನಿನ್ನ ಪರಿಶುದ್ಧ ಪಟ್ಟಣಗಳು ಕಾಡಾಗಿವೆ, ಚೀಯೋನು ಬೀಡಾಗಿದೆ, ಯೆರೂಸಲೇಮು ಹಾಳಾಗಿ ಹೋಗಿದೆ. 11 ನಮ್ಮ ಪೂರ್ವಿಕರು ನಿನ್ನನ್ನು ಕೀರ್ತಿಸುತ್ತಿದ್ದ ಸುಂದರ ಪವಿತ್ರಾಲಯವನ್ನು ಬೆಂಕಿಯು ಸುಟ್ಟುಬಿಟ್ಟಿದೆ, ನಮ್ಮ ಅಮೂಲ್ಯ ವಸ್ತುಗಳೆಲ್ಲಾ ನಾಶವಾಗಿವೆ. 12 ಯೆಹೋವನೇ, ಇವುಗಳನ್ನು ನೋಡಿಯೂ ನಿನ್ನನ್ನು ಬಿಗಿಹಿಡಿಯುವಿಯೋ? ಸುಮ್ಮನಿರುವಿಯೋ? ನಮ್ಮನ್ನು ಹೆಚ್ಚಾಗಿ ಕುಗ್ಗಿಸುವಿಯೋ?”
ಒಟ್ಟು 66 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 64 / 66
Common Bible Languages
West Indian Languages
×

Alert

×

kannada Letters Keypad References