1. {#1ನ್ಯಾಯತೀರ್ಪು ಮತ್ತು ನಿರೀಕ್ಷೆ } [QS]ಯೆಹೋವನು ಹೀಗೆನ್ನುತ್ತಾನೆ: [QE][QS]“ಆಕಾಶವು ನನಗೆ ಸಿಂಹಾಸನ, ಭೂಮಿಯು ನನಗೆ ಪಾದಪೀಠ. ನೀವು ನನಗೆ ಇನ್ನೆಂಥಾ, ಮನೆಯನ್ನು ಕಟ್ಟಿಕೊಡುವಿರಿ? [QE][QS]ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಎಂಥದು? [QE]
2. [QS]ಇವುಗಳನ್ನೆಲ್ಲಾ ನನ್ನ ಕೈಯೇ ನಿರ್ಮಿಸಿತು, ಹೌದು, ನನ್ನ ಕೈಯಿಂದಲೇ ಇವುಗಳೆಲ್ಲಾ ಉಂಟಾದವು. [QE][QS]ನಾನು ಕಟಾಕ್ಷಿಸುವವನು ಎಂಥವನೆಂದರೆ ದೀನನೂ, ಮನಮುರಿದವನೂ ನನ್ನ ಮಾತಿಗೆ ಭಯಪಡುವವನೂ ಆಗಿರುವವನೇ. [QE]
3. [QS]ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; [QE][QS]ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; [QE][QS]ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ; [QE]
4. [QS]ಅದಕ್ಕೆ ತಕ್ಕಂತೆ ನಾನು ಇವರಿಗೋಸ್ಕರ ಕುತಂತ್ರಗಳನ್ನು ಆರಿಸಿಕೊಂಡು ಇವರು ಅಂಜುತ್ತಿದ್ದ ವಿಪತ್ತುಗಳನ್ನು ಬರಮಾಡುವೆನು; [QE][QS]ಏಕೆಂದರೆ ನಾನು ಕೂಗಿದಾಗ ಯಾರೂ ಉತ್ತರಕೊಡಲಿಲ್ಲ, ನಾನು ಹೇಳಿದಾಗ ಇವರು ಕೇಳಲಿಲ್ಲ; [QE][QS]ನನ್ನ ಚಿತ್ತಕ್ಕೆ ವಿರುದ್ಧವಾದದ್ದನ್ನು ನಡೆಸಿ ನನಗೆ ಇಷ್ಟವಿಲ್ಲದ್ದನ್ನು ಆರಿಸಿಕೊಂಡರು.” [QE]
5. [QS]ಯೆಹೋವನ ಮಾತಿಗೆ ಭಯಪಡುವವರೇ, ಆತನ ಮಾತನ್ನು ಕೇಳಿರಿ! [QE][QS]ನನ್ನ ಹೆಸರಿನ ನಿಮಿತ್ತ ನಿಮ್ಮನ್ನು ದ್ವೇಷಿಸಿ ಬಹಿಷ್ಕರಿಸಿದ ನಿಮ್ಮ ಸಂಬಂಧಿಗಳು, [QE][QS]“ಯೆಹೋವನು ಮಹಿಮೆಪಡಲಿ, ನಿಮಗಾಗುವ ಉತ್ಸಾಹವನ್ನು ನೋಡೋಣ” ಎಂದು ಹೇಳಿದ್ದಾರಲ್ಲಾ; [QE][QS]ಅವರಿಗಂತು ಅವಮಾನವಾಗುವುದು. [QE]
6. [QS]ಇಗೋ, ಪಟ್ಟಣದ ಕಡೆಯಿಂದ ಗದ್ದಲದ ಶಬ್ದ! ದೇವಾಲಯದಲ್ಲಿ ಶಬ್ದ! [QE][QS]ಯೆಹೋವನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ಶಬ್ದ! [QE]
7. [QS]ಆಹಾ, ಬೇನೆ ತಿನ್ನುವುದರೊಳಗೆ ಹೆರಿಗೆಯಾಯಿತು, ಪ್ರಸವವೇದನೆ ಇನ್ನು ಕಾಣದಿರುವಲ್ಲಿ ಗಂಡು ಮಗುವನ್ನು ಹೆತ್ತಳು. [QE]
8. [QS]ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ? ಇಂಥಾ ಸಂಗತಿಯನ್ನು ಕಂಡವರಾರು? [QE][QS]ಒಂದು ದಿನದಲ್ಲಿ ರಾಷ್ಟ್ರವು ಹುಟ್ಟೀತೇ? ಕ್ಷಣಮಾತ್ರದಲ್ಲಿ ಜನಾಂಗವನ್ನು ಹೆರಲಿಕ್ಕಾದೀತೇ? [QE][QS]ಹೌದು, ಚೀಯೋನೆಂಬಾಕೆಯು ಬೇನೆತಿಂದು ತನಗಾಗಿ ಮಕ್ಕಳನ್ನು ಹೆತ್ತಿದ್ದಾಳೆ. [QE]
9. [PS]“ನಾನು ಗರ್ಭದ್ವಾರವನ್ನು ತೆರೆದ ಮೇಲೆ ಪ್ರಸವವಾಗದೆ ಇರಲು ಬಿಡುವೆನೆ?” ಎಂದು ಯೆಹೋವನು ಹೇಳುತ್ತಾನೆ. [PE][QS]“ಪ್ರಸವಮಾಡಿಸುವವನಾದ ನಾನು ಗರ್ಭವನ್ನು ಮುಚ್ಚೇನೋ?” ಎಂದು ನಿನ್ನ ದೇವರು ನುಡಿಯುತ್ತಾನೆ. [QE]
10. [QS]ಯೆರೂಸಲೇಮ್ ನಗರವನ್ನು ಪ್ರೀತಿಸುವವರೇ, ನೀವೆಲ್ಲರೂ ಆಕೆಯೊಂದಿಗೆ ಆನಂದಿಸಿರಿ, [QE][QS]ಆಕೆಯ ವಿಷಯದಲ್ಲಿ ಹರ್ಷಗೊಳ್ಳಿರಿ! [QE]
11. [QS]ಆಕೆಯ ನಿಮಿತ್ತ ದುಃಖಿಸುವವರೇ, ನೀವೆಲ್ಲರೂ, ಆಕೆಯ ಸಮಾಧಾನದ ಸ್ತನ್ಯವನ್ನು ಕುಡಿದು ತೃಪ್ತಿಗೊಳ್ಳುವೆವು ಎಂದುಕೊಳ್ಳುವಿರಿ. [QE][QS]ಹೌದು, ಆಕೆಯ ವೈಭವದ ಸಮೃದ್ಧಿಯನ್ನು ಹೀರುತ್ತಾ ಹಿಗ್ಗುವೆವು ಎಂದು ಆಕೆಯೊಂದಿಗೆ ಉತ್ಸಾಹದಿಂದ ಉಲ್ಲಾಸಿಸಿರಿ. [QE]
12. [QS]ಯೆಹೋವನು ಹೀಗೆನ್ನುತ್ತಾನೆ, “ಇಗೋ, ನಾನು ಆಕೆಗೆ ಸುಖವನ್ನು ನದಿಯಂತೆ ದಯಪಾಲಿಸಿ, [QE][QS]ತುಂಬಿ ತುಳುಕುವ ತೊರೆಯನ್ನೋ ಎಂಬಂತೆ ಜನಾಂಗಗಳ ವೈಭವವನ್ನು ನೀಡುವೆನು; [QE][QS]ನೀವು ಪಾನಮಾಡುವಿರಿ; ನಿಮ್ಮನ್ನು ಕಂಕುಳಲ್ಲಿ ಎತ್ತಿಕೊಂಡು ಹೋಗುವರು, ತೊಡೆಯ ಮೇಲೆ ನಲಿದಾಡಿಸುವರು. [QE]
13. [QS]ತಾಯಿ ಮಗನನ್ನು ಸಂತೈಸುವ ಪ್ರಕಾರ ನಾನು ನಿಮ್ಮನ್ನು ಸಂತೈಸುವೆನು; [QE][QS]ಯೆರೂಸಲೇಮಿನಲ್ಲೇ ನಿಮಗೆ ದುಃಖಶಮನವಾಗುವುದು. [QE]
14. [QS]ನೀವು ಇದನ್ನು ಕಣ್ಣಾರೆ ಕಾಣುವಿರಿ, ನಿಮ್ಮ ಹೃದಯವು ಉಲ್ಲಾಸಿಸುವುದು, ನಿಮ್ಮ ಎಲುಬುಗಳು ಹಸಿ ಹುಲ್ಲಿನಂತೆ ರಸವತ್ತಾಗುವವು; [QE][QS]ಆಗ ಯೆಹೋವನು ತನ್ನ ಸೇವಕರ ಮೇಲೆ ಕೃಪಾಹಸ್ತವನ್ನು ವ್ಯಕ್ತಪಡಿಸಿ ತನ್ನ ಶತ್ರುಗಳ ಮೇಲೆ ರೋಷಗೊಳ್ಳುವನು. [QE]
15. [QS]ಆಹಾ, ಯೆಹೋವನು ಬೆಂಕಿಯನ್ನು ಕಟ್ಟಿಕೊಂಡು ಬರುವನು; ಆತನ ರಥಗಳು ಬಿರುಗಾಳಿಯಂತಿರುವವು; [QE][QS]ರೌದ್ರಾವೇಶದಿಂದ ತನ್ನ ಸಿಟ್ಟನ್ನು ತೀರಿಸುವನು, ಅಗ್ನಿ ಜ್ವಾಲೆಯಿಂದ ಖಂಡಿಸುವನು. [QE]
16. [QS]ಯೆಹೋವನು ಅಗ್ನಿಯಿಂದಲೂ ಮತ್ತು ತನ್ನ ಖಡ್ಗದಿಂದಲೂ ಎಲ್ಲಾ ನರಜನ್ಮದವರಿಗೂ ನ್ಯಾಯತೀರಿಸುವನು; [QE][QS]ಆಗ ಆತನಿಂದ ಹತರಾಗುವವರು ಬಹು ಜನರು. [QE]
17. [QS]ತಮ್ಮ ಮಧ್ಯದಲ್ಲಿನ ಒಬ್ಬನನ್ನು ಅನುಸರಿಸಿ, ತೋಟಗಳೊಳಗೆ ಪ್ರವೇಶಿಸುವುದಕ್ಕೆ ತಮ್ಮನ್ನು ಪವಿತ್ರಮಾಡಿಕೊಂಡು, [QE][QS]ಹಂದಿಯ ಮಾಂಸವನ್ನು, ಅಶುದ್ಧಪದಾರ್ಥವನ್ನೂ, [QE][QS]ಇಲಿಯನ್ನೂ ತಿನ್ನುವವರು ಒಟ್ಟಿಗೆ ಅಂತ್ಯ ಕಾಣುವರು” ಎಂದು ಯೆಹೋವನು ನುಡಿಯುತ್ತಾನೆ. [QE]
18. [PS]“ಅವರ ಕೃತ್ಯಗಳಿಗೂ, ಆಲೋಚನೆಗಳಿಗೂ ತಕ್ಕದ್ದನ್ನು ಮಾಡುವೆನು; ನಾನು ಇನ್ನು ಮುಂದೆ ಸಮಸ್ತ ಜನಾಂಗಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು; ಅವರು ಬಂದು ನನ್ನ ಮಹಿಮೆಯನ್ನು ನೋಡುವರು.
19. ಅವರ ಮಧ್ಯದಲ್ಲಿ ಒಂದು ಸೂಚಕಕಾರ್ಯವನ್ನು ಮಾಡುವೆನು; ನನ್ನ ಸುದ್ದಿಯನ್ನು ಕೇಳದೆಯೂ, ನನ್ನ ಮಹಿಮೆಯನ್ನು ನೋಡದೆಯೂ ಇರುವ ತಾರ್ಷೀಷ್, ಪೂಲ್, ಬಿಲ್ಲುಗಾರರಿಗೆ ಪ್ರಸಿದ್ಧಸ್ಥಳವಾದ ಲೂದ್, ತೂಬಲ್, ಯಾವಾನ್ ಎಂಬ ಜನಾಂಗಗಳು ಮತ್ತು ದೂರವಾದ ದ್ವೀಪನಿವಾಸಿಗಳು ಇವರೆಲ್ಲರ ಬಳಿಗೆ ಹತಶೇಷರನ್ನು ಕಳುಹಿಸುವೆನು; ಇವರು ಜನಾಂಗಗಳಲ್ಲಿ ನನ್ನ ಮಹಿಮೆಯನ್ನು ಪ್ರಕಟಿಸುವರು.” [PE]
20.
21. [PS]ಯೆಹೋವನು ಹೀಗೆನ್ನುತ್ತಾನೆ, “ಇಸ್ರಾಯೇಲರು ಯೆಹೋವನ ಆಲಯಕ್ಕೆ ಶುದ್ಧಪಾತ್ರೆಯಲ್ಲಿ ನೈವೇದ್ಯವನ್ನು ತೆಗೆದುಕೊಂಡು ಬರುವ ಪ್ರಕಾರ ಸಮಸ್ತ ಜನಾಂಗಗಳಲ್ಲಿ ಚದರಿಹೋಗಿರುವ ನಮ್ಮ ಸಹೋದರರನ್ನು ಕುದುರೆ, ತೇರು, ಪಲ್ಲಕಿ, ಹೇಸರಗತ್ತೆ, ಒಂಟೆ ಇವುಗಳ ಮೇಲೆ ಯೆಹೋವನ ನೈವೇದ್ಯಕ್ಕಾಗಿ ಯೆರೂಸಲೇಮೆಂಬ ನನ್ನ ಪರಿಶುದ್ಧಪರ್ವತಕ್ಕೆ ಕರೆತರುವರು. [PE][QS]ಇದಲ್ಲದೆ ಇವರಲ್ಲಿ ಯಾಜಕರು ಮತ್ತು ಲೇವಿಯರು ಆಗತಕ್ಕವರನ್ನು ಆರಿಸಿಕೊಳ್ಳುವೆನು” ಎಂದು ಯೆಹೋವನು ಹೇಳುತ್ತಾನೆ. [QE]
22. [QS]“ನಾನು ಸೃಷ್ಟಿಸಿದ ನೂತನ ಆಕಾಶಮಂಡಲವೂ ಮತ್ತು ನೂತನ ಭೂಮಂಡಲವೂ ನನ್ನ ಮುಂದೆ ಸ್ಥಿರವಾಗಿ ನಿಲ್ಲುವ ಪ್ರಕಾರ ನಿಮ್ಮ ಸಂತತಿಯೂ ಹಾಗು ನಿಮ್ಮ ಹೆಸರೂ ಸ್ಥಿರವಾಗಿ ನಿಲ್ಲುವವು. [QE]
23. [QS]ಪ್ರತಿಯೊಂದು ಅಮಾವಾಸ್ಯೆಯಲ್ಲಿಯೂ, ಒಂದೊಂದು ಸಬ್ಬತ್ ದಿನದಲ್ಲಿಯೂ, [QE][QS]ಸಕಲ ನರಜನ್ಮದವರೂ ನನ್ನ ಸನ್ನಿಧಿಯಲ್ಲಿ ಆರಾಧಿಸುವುದಕ್ಕೆ ಬರುವರು” ಇದು ಯೆಹೋವನ ನುಡಿ. [QE]
24. [QS]“ಅವರು ಹೊರಗೆ ಹೋಗಿ ನನಗೆ ದ್ರೋಹ ಮಾಡಿದವರ ಹೆಣಗಳನ್ನು ನೋಡುವರು; [QE][QS]ಅವುಗಳನ್ನು ಕಡಿಯುವ ಹುಳವು ಸಾಯುವುದಿಲ್ಲ, ಸುಡುವ ಬೆಂಕಿಯು ಆರುವುದಿಲ್ಲ; [QE][QS]ಅವುಗಳು ಲೋಕದವರಿಗೆಲ್ಲಾ ಅಸಹ್ಯವಾಗಿರುವವು.”[QE]