1. {ಅಶ್ಶೂರದ ಆಕ್ರಮಣದ ಕುರಿತು ಮುನ್ನೆಚ್ಚರಿಕೆ} PS ಆ ಮೇಲೆ ಯೆಹೋವನು ನನಗೆ, “ದೊಡ್ಡ ಹಲಗೆಯನ್ನು ತೆಗೆದುಕೊಂಡು ಸಾಧಾರಣ ಲೇಖನಿಯಿಂದಲೇ ವಿಷಯ ಸೂಚಕವಾದ ಈ ಪದವನ್ನು ಬರೆ, ‘ಮಹೇರ್ ಶಾಲಾಲ್ ಹಾಷ್ ಬಜ್ * ಮಹೇರ್ ಶಾಲಾಲ್ ಹಾಷ್ ಬಜ್ ಅಂದರೆ ಸೂರೆಗ ಅತುರ ಕೊಳ್ಳೆಗೆ ಅವಸರ. ’ ಅಂದರೆ ಸೂರೆಗೆ ಅತುರ, ಕೊಳ್ಳೆಗೆ ಅವಸರ.
|
2. ನೀನು ಹೀಗೆ ಬರೆದದ್ದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಯನ ಮಗನಾದ ಜೆಕರ್ಯ ಈ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು” ಎಂದು ಹೇಳಿದನು. PEPS
|
3. ಅನಂತರ, “ನಾನು ನನ್ನ ಹೆಂಡತಿಯೊಡನೆ ಸಂಗಮಿಸಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ, ಅದಕ್ಕೆ ‘ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು’ ಎಂದು ಹೇಳಿದನು.
|
4. ಆ ಮಗುವು, ‘ಅಪ್ಪಾ, ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮೊದಲೇ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ, ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದು ಹೇಳಿದನು. PEPS
|
7. ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು.
ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ, |
8. ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು.
ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶವನ್ನೆಲ್ಲಾ ಆವರಿಸಿಕೊಳ್ಳುವುದು.” |
9. ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ;
ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ. |
10. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ.
ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ. PS |
11. {ದೇವರಿಗೆ ಭಯಪಡಿರಿ} PS ಯೆಹೋವನು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು, ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ನನಗೆ ಉಪದೇಶಿಸುತ್ತಾ ಹೀಗೆಂದನು,
|
12. “ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ;
ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ. |
14. ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ † ಎರಡು ಮನೆತನಕ್ಕೆ ಇಸ್ರಾಯೇಲ್ ಮತ್ತು ಯೆಹೂದ. ಎಡವುವ ಕಲ್ಲೂ,
ಮುಗ್ಗರಿಸುವ ಬಂಡೆಯೂ ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಪಂಜರವಾಗುವುದು. |
16. ‡ ಕಟ್ಟಿಡು ಎಂಬುದು ಸುರುಳಿಯನ್ನು ಸುತ್ತಿಡುವ ಮತ್ತು ಕಟ್ಟಿಡುವ ಕ್ರಿಯೆಯನ್ನು ವಿವರಿಸುತ್ತದೆ. ಉಪದೇಶವು ಪ್ರಾಯಶಃ, ಸುರುಳಿಯಲ್ಲಿ ಬರೆದಿಟ್ಟಿರುವ ಯೆಶಾಯನ ಮುಂಚಿನ ಮಾತುಗಳನ್ನು ಸೂಚಿಸುತ್ತದೆ. ಬೋಧನೆಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು.
|
18. ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ
ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ. PEPS |
19. “ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?
|
21. ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು
ತಮ್ಮ ಅರಸನನ್ನೂ, ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು. |
22. ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ,
ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು. PE |