1. {ಅಶ್ಶೂರದ ಆಕ್ರಮಣದ ಕುರಿತು ಮುನ್ನೆಚ್ಚರಿಕೆ} [PS] ಆ ಮೇಲೆ ಯೆಹೋವನು ನನಗೆ, “ದೊಡ್ಡ ಹಲಗೆಯನ್ನು ತೆಗೆದುಕೊಂಡು ಸಾಧಾರಣ ಲೇಖನಿಯಿಂದಲೇ ವಿಷಯ ಸೂಚಕವಾದ ಈ ಪದವನ್ನು ಬರೆ, ‘ಮಹೇರ್ ಶಾಲಾಲ್ ಹಾಷ್ ಬಜ್ [* ಮಹೇರ್ ಶಾಲಾಲ್ ಹಾಷ್ ಬಜ್ ಅಂದರೆ ಸೂರೆಗ ಅತುರ ಕೊಳ್ಳೆಗೆ ಅವಸರ. ] ’ ಅಂದರೆ ಸೂರೆಗೆ ಅತುರ, ಕೊಳ್ಳೆಗೆ ಅವಸರ.
2. ನೀನು ಹೀಗೆ ಬರೆದದ್ದಕ್ಕೆ ಯಾಜಕನಾದ ಊರೀಯ, ಯೆಬೆರೆಕ್ಯನ ಮಗನಾದ ಜೆಕರ್ಯ ಈ ನಂಬಿಗಸ್ತರಾದ ಸಾಕ್ಷಿಗಳನ್ನು ಕರೆಯುವೆನು” ಎಂದು ಹೇಳಿದನು. [PE][PS]
3. ಅನಂತರ, “ನಾನು ನನ್ನ ಹೆಂಡತಿಯೊಡನೆ ಸಂಗಮಿಸಲು ಆಕೆಯು ಬಸುರಾಗಿ ಗಂಡು ಮಗುವನ್ನು ಹೆತ್ತಳು. ಆಗ ಯೆಹೋವನು ನನಗೆ, ಅದಕ್ಕೆ ‘ಮಹೇರ್ ಶಾಲಾಲ್ ಹಾಷ್ ಬಜ್ ಎಂದು ಹೆಸರಿಡು’ ಎಂದು ಹೇಳಿದನು.
4. ಆ ಮಗುವು, ‘ಅಪ್ಪಾ, ಅಮ್ಮಾ’ ಎಂದು ಕೂಗಬಲ್ಲವನಾಗುವುದಕ್ಕಿಂತ ಮೊದಲೇ ಅಶ್ಶೂರದ ಅರಸನು ದಮಸ್ಕದ ಆಸ್ತಿಯನ್ನೂ, ಸಮಾರ್ಯದ ಸೂರೆಯನ್ನೂ ತೆಗೆದುಕೊಂಡು ಹೋಗುವನು” ಎಂದು ಹೇಳಿದನು. [PE][PS]
5. ಯೆಹೋವನು ಮತ್ತೊಂದಾವರ್ತಿ ನನಗೆ ಹೀಗೆ ನುಡಿದನು, [QBR]
6. “ಈ ಜನರು ನಿಧಾನವಾಗಿ ಹರಿಯುವ ಸಿಲೋವದ ನೀರನ್ನು ತ್ಯಜಿಸಿ, ರೆಚೀನನನ್ನೂ, [QBR] ರೆಮಲ್ಯನ ಮಗನನ್ನೂ ನಂಬಿ ಮೆರೆದಿದ್ದರಿಂದ, [QBR]
7. ಇಗೋ ಕರ್ತನು ಪೂರ್ಣ ಪ್ರತಾಪದಿಂದ ಕೂಡಿದ ಅಶ್ಶೂರದ ಅರಸನೆಂಬ ಮಹಾನದಿಯ ರಭಸವಾದ ದೊಡ್ಡ ಪ್ರವಾಹವನ್ನು ಇವರ ಮೇಲೆ ಬರಮಾಡುವನು. [QBR] ಅದು ತನ್ನ ಕಾಲುವೆಗಳನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ, [QBR]
8. ಯೆಹೂದದಲ್ಲಿಯೂ ನುಗ್ಗಿ, ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವುದು. [QBR] ಇಮ್ಮಾನುವೇಲನೇ, ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶವನ್ನೆಲ್ಲಾ ಆವರಿಸಿಕೊಳ್ಳುವುದು.” [QBR]
9. ಜನಾಂಗಗಳೇ, ನೀವು ಒಟ್ಟಾಗಿ ಸೇರಿಕೊಳ್ಳಿರಿ, ಇಲ್ಲದಿದ್ದರೆ ನೀವು ಒಡೆದು ತುಂಡಾಗುವಿರಿ; ದೂರದೇಶಿಯರೇ, ಕಿವಿಗೊಡಿರಿ; [QBR] ನಡುಕಟ್ಟಿರಿ, ಭಂಗಪಡುವಿರಿ; ಹೌದು ನಡುಕಟ್ಟಿರಿ, ಭಂಗಪಡುವಿರಿ. [QBR]
10. ಆಲೋಚನೆ ಮಾಡಿಕೊಳ್ಳಿರಿ, ಅದು ಮುರಿದುಹೋಗುವುದು. ಅಪ್ಪಣೆ ಮಾಡಿರಿ, ಅದು ನಿಲ್ಲುವುದಿಲ್ಲ. [QBR] ಏಕೆಂದರೆ ದೇವರು ನಮ್ಮ ಕೂಡ ಇದ್ದಾನಷ್ಟೆ. [PS]
11. {ದೇವರಿಗೆ ಭಯಪಡಿರಿ} [PS] ಯೆಹೋವನು ನನ್ನ ಮೇಲೆ ಬಲವಾಗಿ ಕೈಯನ್ನಿಟ್ಟು, ಈ ಜನರ ಮಾರ್ಗದಲ್ಲಿ ನಡೆಯಬಾರದೆಂದು ನನಗೆ ಉಪದೇಶಿಸುತ್ತಾ ಹೀಗೆಂದನು, [QBR]
12. “ಇವರು ಯಾವುದನ್ನು ಒಪ್ಪಂದವೆನ್ನುತ್ತಾರೋ ನೀವು ಅದನ್ನು ಒಪ್ಪಂದವೆನ್ನಬೇಡಿರಿ; [QBR] ಇವರು ಯಾವುದಕ್ಕೆ ಹೆದರುತ್ತಾರೋ ನೀವು ಅದಕ್ಕೆ ಹೆದರಬೇಡಿರಿ, ನಡುಗಬೇಡಿರಿ. [QBR]
13. ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೆ ಹೆದರಿಕೊಳ್ಳಿರಿ, ನಡುಗಿರಿ. [QBR]
14. ಆತನು ಆಶ್ರಯವಾಗುವನು; ಆದರೆ ಇಸ್ರಾಯೇಲಿನ ಎರಡು ಮನೆತನಕ್ಕೆ [† ಎರಡು ಮನೆತನಕ್ಕೆ ಇಸ್ರಾಯೇಲ್ ಮತ್ತು ಯೆಹೂದ.] ಎಡವುವ ಕಲ್ಲೂ, [QBR] ಮುಗ್ಗರಿಸುವ ಬಂಡೆಯೂ ಯೆರೂಸಲೇಮಿನ ನಿವಾಸಿಗಳಿಗೆ ಬಲೆಯೂ, ಪಂಜರವಾಗುವುದು. [QBR]
15. ಅವರಲ್ಲಿ ಅನೇಕರು ಎಡವಿ ಬಿದ್ದು ಭಂಗಪಡುವರು, ಬಲೆಗೆ ಸಿಕ್ಕಿ ವಶವಾಗುವರು.” [PE][PS]
16. [‡ ಕಟ್ಟಿಡು ಎಂಬುದು ಸುರುಳಿಯನ್ನು ಸುತ್ತಿಡುವ ಮತ್ತು ಕಟ್ಟಿಡುವ ಕ್ರಿಯೆಯನ್ನು ವಿವರಿಸುತ್ತದೆ. ಉಪದೇಶವು ಪ್ರಾಯಶಃ, ಸುರುಳಿಯಲ್ಲಿ ಬರೆದಿಟ್ಟಿರುವ ಯೆಶಾಯನ ಮುಂಚಿನ ಮಾತುಗಳನ್ನು ಸೂಚಿಸುತ್ತದೆ.] ಬೋಧನೆಯನ್ನು ಕಟ್ಟಿಡು, ನನ್ನ ಶಿಷ್ಯರೊಳಗೆ ಉಪದೇಶವನ್ನು ಮುಚ್ಚಿ ಮುದ್ರಿಸು. [QBR]
17. ಯಾಕೋಬಿನ ಮನೆತನದವರಿಗೆ ಮುಖವನ್ನು ಮರೆಮಾಡಿಕೊಂಡಿರುವ ಯೆಹೋವನಿಗಾಗಿ ನಾನು ಕಾದುಕೊಂಡು ಎದುರು ನೋಡುತ್ತಿರುವೆನು. [QBR]
18. ಆಹಾ, ನಾನೂ, ನನಗೆ ಯೆಹೋವನು ದಯಪಾಲಿಸಿರುವ ಮಕ್ಕಳೂ ಚೀಯೋನ್ ಪರ್ವತದಲ್ಲಿ ವಾಸವಾಗಿರುವ [QBR] ಸೇನಾಧೀಶ್ವರನಾದ ಯೆಹೋವನಿಂದ ಉಂಟಾದ ಗುರುತುಗಳಾಗಿಯೂ, ಅದ್ಭುತಗಳಾಗಿಯೂ ಇಸ್ರಾಯೇಲರ ಮಧ್ಯದಲ್ಲಿದ್ದೇವೆ. [PE][PS]
19. “ಗುಣಗುಟ್ಟುವ, ಪಿಸುಮಾತನಾಡುವ, ಪ್ರೇತವಿಚಾರಕರನ್ನೂ, ಬೇತಾಳಿಕರನ್ನೂ ಆಶ್ರಯಿಸಿರಿ” ಎಂದು ಒಂದು ವೇಳೆ ನಿಮಗೆ ಹೇಳಾರು, “ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವುದು ಯುಕ್ತವೋ?
20. ದೇವರ ಉಪದೇಶವನ್ನೂ, ದೇವರ ಸಾಕ್ಷಿಯನ್ನೂ ವಿಚಾರಿಸುವ” ಎಂದು ಅವರು ಹೇಳದಿದ್ದರೆ ಅವರಿಗೆ ಎಂದಿಗೂ ಬೆಳಗಾಗುವುದಿಲ್ಲ. [QBR]
21. ಅವರು ಘೋರ ಕಷ್ಟಕ್ಕೊಳಗಾಗಿ ಹಸಿವೆಯಿಂದ ದೇಶದಲ್ಲಿ ಅಲೆಯುವರು. ಅವರು ಹಸಿದಾಗ ಸಿಟ್ಟುಗೊಂಡು [QBR] ತಮ್ಮ ಅರಸನನ್ನೂ, ತಮ್ಮ ದೇವರನ್ನೂ ಶಪಿಸಿ ಮೇಲಕ್ಕೆ ನೋಡುವರು. [QBR]
22. ಮೇಲಕ್ಕೆ ಕಣ್ಣೆತ್ತಿದ್ದರೂ, ಭೂಮಿಯನ್ನು ದೃಷ್ಟಿಸಿದರೂ ಇಗೋ, [QBR] ಇಕ್ಕಟ್ಟೆಂಬ ಕತ್ತಲೂ, ಸಂಕಟವೆಂಬ ಅಂಧಕಾರವೂ ಕವಿದುಕೊಂಡಿರುವುದು. ಕಾರ್ಗತ್ತಲೆಗೆ ತಳ್ಳಲ್ಪಡುವರು. [PE]