1. {ಪೀಠಿಕೆ} PS ಬೆನ್ಯಾಮೀನ್ ಸೀಮೆಗೆ ಸೇರಿದ ಅನಾತೋತ್ ಊರಿನ ಯಾಜಕ ವರ್ಗದವನೂ, ಹಿಲ್ಕೀಯನ ಮಗನೂ ಆದ ಯೆರೆಮೀಯನ ಪ್ರವಾದನೆಗಳು.
|
3. ಇದಲ್ಲದೆ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಯೆಹೋಯಾಕೀಮನ ಕಾಲದಿಂದ ಯೆಹೂದದ ಅರಸನೂ, ಯೋಷೀಯನ ಮಗನೂ ಆದ ಚಿದ್ಕೀಯನ ಆಳ್ವಿಕೆಯ ಹನ್ನೊಂದನೆಯ ವರ್ಷದ ಐದನೆಯ ತಿಂಗಳಿನಲ್ಲಿ ಯೆರೂಸಲೇಮಿನವರು ಸೆರೆಹೋಗುವ ತನಕ ಅವನು ಯೆಹೋವನ ವಾಕ್ಯವನ್ನು ಹೊಂದುತ್ತಾ ಇದ್ದನು.
|
5. “ನಾನು ನಿನ್ನನ್ನು ಗರ್ಭದಲ್ಲಿ ರೂಪಿಸುವುದಕ್ಕೆ ಮುಂಚೆ ತಿಳಿದಿದ್ದೆನು; ನೀನು ಉದರದಿಂದ ಬರುವುದಕ್ಕೆ ಮೊದಲೇ ನಿನ್ನನ್ನು ಪ್ರತಿಷ್ಠಿಸಿದ್ದೆನು. ಜನಾಂಗಗಳಿಗೆ ಪ್ರವಾದಿಯನ್ನಾಗಿ ನಿನ್ನನ್ನು ನೇಮಿಸಿದ್ದೇನೆ” ಎಂಬ ವಾಕ್ಯವನ್ನು ದಯಪಾಲಿಸಿದನು.
|
7. ಆಗ ಯೆಹೋವನು ನನಗೆ, “ಬಾಲಕನು ಎನ್ನಬೇಡ; ನಾನು ಯಾರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಅವರೆಲ್ಲರ ಬಳಿಗೆ ನೀನು ಖಂಡಿತವಾಗಿ ಹೋಗುವಿ; ನಾನು ಆಜ್ಞಾಪಿಸುವುದನ್ನೆಲ್ಲಾ ಖಂಡಿತವಾಗಿ ನುಡಿಯುವಿ.
|
10. ಕಿತ್ತುಹಾಕುವುದು ಮತ್ತು ಮುರಿದುಹಾಕುವುದು, ನಾಶಮಾಡುವುದು ಮತ್ತು ನೆಲಸಮಮಾಡುವುದು ಈ ಎಲ್ಲಾ ಕಾರ್ಯಗಳನ್ನು ಮಾಡುವುದಕ್ಕೋಸ್ಕರ ಜನಾಂಗಗಳ ಮೇಲೂ, ರಾಜ್ಯಗಳ ಮೇಲೂ ನಿನ್ನನ್ನು ಈ ದಿನ ನೇಮಿಸಿದ್ದೇನೆ” ಅಂದನು. PS
|
11. {ಎರಡು ದರ್ಶನಗಳು} PS ಇದಲ್ಲದೆ, “ಯೆರೆಮೀಯನೇ, ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತು ನನಗೆ ಕೇಳಿ ಬಂತು. ಅದಕ್ಕೆ ನಾನು, “ಬಾದಾಮಿ ಮರದ ಕೊಂಬೆಯನ್ನು ನೋಡುತ್ತೇನೆ” ಅಂದೆನು.
|
12. ಆಗ ಯೆಹೋವನು ನನಗೆ, “ಸರಿಯಾಗಿ ನೋಡಿದ್ದಿ, ನನ್ನ ಮಾತನ್ನು ನೆರವೇರಿಸುವುದಕ್ಕೆ ನೀನು ಎಚ್ಚರಗೊಂಡಿರುವೆ ಎಂದು ತಿಳಿದುಕೋ” ಎಂಬುದಾಗಿ ಹೇಳಿದನು. PEPS
|
13. ಎರಡನೆಯ ಬಾರಿ, “ನೀನು ಏನು ನೋಡುತ್ತಿರುವೆ?” ಎಂಬ ಯೆಹೋವನ ಮಾತನ್ನು ಕೇಳಿದೆನು. ಅದಕ್ಕೆ ನಾನು, “ಉರಿಸುತ್ತಿರುವ ಬೆಂಕಿಯಿಂದ ಉಕ್ಕುವ ಹಂಡೆಯನ್ನು ನೋಡುತ್ತೇನೆ. ಅದರ ಬಾಯಿ ಉತ್ತರ ದಿಕ್ಕಿನಿಂದ ಈ ಕಡೆಗೆ ಬಾಗಿಕೊಂಡಿದೆ” ಅಂದೆನು.
|
15. ಇಗೋ, ನಾನು ಉತ್ತರ ದಿಕ್ಕಿನ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇಮಿನ ಊರ ಬಾಗಿಲುಗಳ ಎದುರಿನಲ್ಲಿಯೂ, ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ, ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.
|
16. ನನ್ನ ಜನರು ನನ್ನನ್ನು ಬಿಟ್ಟು ಅನ್ಯದೇವತೆಗಳಿಗೆ ಹೋಮಮಾಡಿದ್ದು, ತಮ್ಮ ಕೈಯಿಂದ ನಿರ್ಮಿಸಿದವುಗಳಿಗೆ * ನಿರ್ಮಿಸಿದವುಗಳಿಗೆ ವಿಗ್ರಹಗಳಿಗೆ. ಅಡ್ಡಬಿದ್ದ ಅಧರ್ಮಕ್ಕೆಲ್ಲಾ ನಾನು ಅವರಿಗೆ ವಿಧಿಸಿರುವ ನ್ಯಾಯದಂಡನೆಗಳನ್ನು ತಿಳಿಸುವೆನು.
|
17. ಹೀಗಿರಲು ನೀನು ಎದ್ದು ನಡುಕಟ್ಟಿಕೊಂಡು ನಾನು ಆಜ್ಞಾಪಿಸುವುದನ್ನೆಲ್ಲಾ ಅವರಿಗೆ ಹೇಳು. ನೀನು ಅವರಿಗೆ ಭಯಪಡಬೇಡ; ಭಯಪಟ್ಟರೆ ನಾನು ನಿನ್ನನ್ನು ಅವರ ಮುಂದೆ ಹೆದರಿಸುವೆನು.
|
18. ಇಗೋ, ನಾನು ಈ ಹೊತ್ತು ನಿನ್ನನ್ನು ಯೆಹೂದದ ಅರಸರು, ಅಧಿಪತಿಗಳು, ಯಾಜಕರು, ಸಾಧಾರಣ ಜನರು, ಅಂತು ದೇಶದವರೆಲ್ಲರನ್ನೂ ಎದುರಿಸತಕ್ಕ ಕೋಟೆಕೊತ್ತಲದ ಪಟ್ಟಣವನ್ನಾಗಿಯೂ, ಕಬ್ಬಿಣದ ಕಂಬವನ್ನಾಗಿಯೂ, ತಾಮ್ರದ ಪೌಳಿಗೋಡೆಯನ್ನಾಗಿಯೂ ಸ್ಥಾಪಿಸಿದ್ದೇನೆ.
|
19. ಅವರು ನಿನ್ನ ವಿರುದ್ಧವಾಗಿ ಯುದ್ಧಮಾಡುವರು, ಆದರೆ ನಿನ್ನನ್ನು ಸೋಲಿಸಲಾಗುವುದಿಲ್ಲ. ನಿನ್ನನ್ನುದ್ಧರಿಸಲು ನಾನೇ ನಿನ್ನೊಂದಿಗಿರುವೆನು, ಇದು ಯೆಹೋವನಾದ ನನ್ನ ಮಾತು” ಎಂದು ಹೇಳಿದನು. PE
|