1. {#1ನಿರ್ಜೀವ ದೇವರುಗಳಿಗೆ ಭಯಪಡಬಾರದು } [QS]ಇಸ್ರಾಯೇಲ್ ವಂಶದವರೇ, ಯೆಹೋವನು ನಿಮಗೆ ನುಡಿಯುವ ಮಾತನ್ನು ಕೇಳಿರಿ; [QE]
2. [QS]ಯೆಹೋವನು, “ಜನಾಂಗಗಳ ಆಚರಣೆಯನ್ನು ಅಭ್ಯಾಸ ಮಾಡಿಕೊಳ್ಳಬೇಡಿರಿ, ಜನಾಂಗಗಳು ಹೆದರುವ ಆಕಾಶದ ಉತ್ಪಾತಗಳಿಗೆ ನೀವು ಹೆದರಬೇಡಿರಿ. [QE]
3. [QS]ಜನಾಂಗಗಳ ಕಟ್ಟಳೆಗಳು ಬರಿದೇ; ಅರಣ್ಯದ ಮರವನ್ನು ಕತ್ತರಿಸುವರು, ಬಡಗಿಯು ಅದನ್ನು ಕೈಯಿಂದ, ಉಳಿಯಿಂದ ರೂಪಿಸುವನು. [QE]
4. [QS]ಅದನ್ನು ಬೆಳ್ಳಿ, ಬಂಗಾರಗಳಿಂದ ಭೂಷಿಸುತ್ತಾರೆ, ಅಲುಗದಂತೆ ಮೊಳೆಗಳಿಂದ, ಸುತ್ತಿಗೆಯಿಂದ ಭದ್ರಪಡಿಸುತ್ತಾರೆ. [QE]
5. [QS]ಇಂಥಾ ಬೊಂಬೆಗಳು ಸೌತೆಕಾಯಿ ತೋಟದ ಬೆದರುಗಂಬದಂತಿವೆ, ಮಾತನಾಡಲಾರವು; [QE][QS]ಹೊತ್ತುಕೊಂಡು ಹೋಗಬೇಕು, ನಡೆಯಲಾರವು. ಅವುಗಳಿಗೆ ಹೆದರಬೇಡಿರಿ, ಕೇಡುಮಾಡಲಾರವು; ಒಳ್ಳೆಯದನ್ನು ಮಾಡಲಿಕ್ಕೂ ಅವುಗಳಿಗೆ ಸಾಮರ್ಥ್ಯವಿಲ್ಲ” ಎಂದು ಹೇಳುತ್ತಾನೆ [QE]
6. [QS]ಯೆಹೋವನೇ, ನಿನ್ನ ಸಮಾನನು ಯಾರು ಇಲ್ಲ; ನೀನು ಮಹೋನ್ನತನು, ನಿನ್ನ ನಾಮವು ಸಾಮರ್ಥ್ಯದಿಂದ ಕೂಡಿ ಮಹೋನ್ನತವಾಗಿದೆ. [QE]
7. [QS]ಜನಾಂಗಗಳ ಅರಸನೇ, ಯಾರು ನಿನಗೆ ಹೆದರದೆ ಇದ್ದಾರು? ಇದು ನಿನಗೆ ತಕ್ಕದ್ದು; ಜನಾಂಗಗಳ ಜ್ಞಾನಿಗಳಲ್ಲಿಯೂ, ರಾಜಪರಂಪರೆಯಲ್ಲಿಯೂ ನಿನಗೆ ಸಮಾನನು ಯಾರೂ ಇಲ್ಲವಷ್ಟೆ. [QE]
8. [QS]ಅವರೆಲ್ಲರೂ ಪಶುಪ್ರಾಯರು, ಮಂದಮತಿಗಳು, ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು. [QE]
9. [QS]ಬೆಳ್ಳಿಯ ತಗಡುಗಳು ತಾರ್ಷೀಷಿನಿಂದಲೂ, ಕೆತ್ತನೆಗಾರನ ಮತ್ತು ಎರಕದವನ ಕೈಕೆಲಸವಾದ ಚಿನ್ನವೂ ಊಫಜಿನಿಂದಲೂ ಸಾಗಿಬರುತ್ತವೆ. [QE][QS]ನೀಲಧೂಮ್ರ ವಸ್ತ್ರಗಳು ಅವುಗಳ ಉಡುಪಾಗಿವೆ, ಇವೆಲ್ಲಾ ಕುಶಲಕರ್ಮಿಗಳ ಕೌಶಲ್ಯ. [QE]
10. [QS]ಯೆಹೋವನಾದರೋ ಸತ್ಯದೇವರು; ಆತನು ಚೈತನ್ಯಸ್ವರೂಪನಾದ ದೇವನೂ ಮತ್ತು ಶಾಶ್ವತ ರಾಜನೂ ಆಗಿದ್ದಾನೆ. [QE][QS]ಆತನ ಕೋಪಕ್ಕೆ ಭೂಲೋಕವು ನಡುಗುತ್ತದೆ, ಜನಾಂಗಗಳು ಆತನ ರೋಷವನ್ನು ತಾಳಲಾರವು. [QE]
11. [QS]ನೀವು ಅವುಗಳಿಗೆ, “ಭೂಮ್ಯಾಕಾಶಗಳನ್ನು ಸೃಷ್ಟಿಸದಿರುವ ದೇವರುಗಳು ಭೂಮಿಯ ಮೇಲಿನಿಂದ, ಆಕಾಶದ ಕೆಳಗಿನಿಂದ, ಅಳಿದುಹೋಗುವವು” ಎಂದು ಹೇಳಿರಿ. [QE]
12. [QS]ಆತನು ತನ್ನ ಶಕ್ತಿಯಿಂದ ಭೂಮಿಯನ್ನು ನಿರ್ಮಿಸಿ, ತನ್ನ ಜ್ಞಾನದಿಂದ ಲೋಕವನ್ನು ಸ್ಥಾಪಿಸಿ, ತನ್ನ ವಿವೇಕದಿಂದ ಆಕಾಶಮಂಡಲವನ್ನು ಹರಡಿದ್ದಾನೆ. [QE]
13. [QS]ಆತನ ಗರ್ಜನೆಗೆ ಆಕಾಶದಲ್ಲಿ ನೀರು ಭೋರ್ಗರೆಯುವಂತೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ. [QE][QS]ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ. [QE]
14. [QS]ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು. [QE][QS]ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ. [QE]
15. [QS]ಅವು ವ್ಯರ್ಥ, ಹಾಸ್ಯಾಸ್ಪದವಾದ ಕೆಲಸ; ದಂಡನೆಯಾಗುವಾಗ ಅಳಿದುಹೋಗುವವು. [QE]
16. [QS]ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು. [QE][QS]ಇಸ್ರಾಯೇಲ್ ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬುದು ಆತನ ನಾಮಧೇಯ. [QE]
17. {#1ಬರಲಿರುವ ವಿನಾಶ } [QS]ಮುತ್ತಿಗೆಗೆ ಈಡಾದ ಜನವೇ, ಗಂಟುಕಟ್ಟಿಕೊಂಡು ದೇಶದೊಳಗಿಂದ ನಡೆ. [QE]
18. [QS]“ಇಗೋ, ನಾನು ಈ ಸಾರಿ ದೇಶನಿವಾಸಿಗಳನ್ನು ಎಸೆದೇ ಬಿಡುವೆನು, [QE][QS]ಅವರಿಗೆ ಬುದ್ಧಿ ಬರಲೆಂದು ಅವರನ್ನು ಬಾಧಿಸುವೆನು” ಎಂದು ಯೆಹೋವನು ನುಡಿಯುತ್ತಾನೆ. [QE]
19. [QS]ಅಯ್ಯೋ, ನನ್ನ ಗಾಯ! ನನಗೆ ಬಿದ್ದ ಪೆಟ್ಟು ಭೀಕರ! ಆದರೂ ನಾನು, “ಇದು ನನಗೆ ವ್ಯಾಧಿಯೇ ಸರಿ, ಸಹಿಸಬೇಕು” ಅಂದುಕೊಂಡಿದ್ದೇನೆ. [QE]
20. [QS]ನನ್ನ ಗುಡಾರವು ಹಾಳಾಗಿದೆ, ಹಗ್ಗಗಳು ಹರಿದುಹೋಗಿವೆ, ಮಕ್ಕಳು ನನ್ನೊಳಗಿಂದ ತೊಲಗಿ ಇಲ್ಲವಾಗಿದ್ದಾರೆ. [QE][QS]ನನ್ನ ಗುಡಾರವನ್ನು ಹಾಕುವುದಕ್ಕೂ, ನನ್ನ ಪರದೆಗಳನ್ನು ಬಿಗಿಯುವುದಕ್ಕೂ ಇನ್ನು ಯಾರೂ ಇರುವುದಿಲ್ಲ. [QE]
21. [QS]ಏಕೆಂದರೆ ಪಾಲಕರು ಪಶುಪ್ರಾಯರಾಗಿ ಯೆಹೋವನ ಕಡೆಗೆ ನೋಡದೆ ಇದ್ದಾರೆ. [QE][QS]ಆದಕಾರಣ ಅವರ ಕಾರ್ಯವು ಸಾರ್ಥಕವಾಗಲಿಲ್ಲ, ಅವರ ಹಿಂಡುಗಳು ಚದರಿಹೋದವು. [QE]
22. [QS]ಇಗೋ, ಒಂದು ಸದ್ದು! ಆಹಾ, ಬರುತ್ತಿದೆ! ಯೆಹೂದದ ಪಟ್ಟಣಗಳನ್ನು ನಾಶಪಡಿಸಿ ನರಿಗಳ ಹಕ್ಕೆಯನ್ನಾಗಿ ಮಾಡುವುದಕ್ಕೆ ಉತ್ತರದೇಶದಿಂದ ಮಹಾಕಂಪನವು ಸಂಭವಿಸುತ್ತದೆ. [QE]
23. {#1ಯೆರೆಮೀಯನ ವಿಜ್ಞಾಪನೆ } [QS]ಯೆಹೋವನೇ, ಮಾನವನ ಮಾರ್ಗವು ಅವನ ಸ್ವಾಧೀನದಲ್ಲಿ ಇಲ್ಲವೆಂದು ನನಗೆ ಗೊತ್ತು. [QE][QS]ಮನುಷ್ಯನು ನಡೆದಾಡುತ್ತಾ ಸರಿಯಾದ ಕಡೆಗೆ ತನ್ನ ಹೆಜ್ಜೆಯನ್ನು ಇಡಲಾರನು. [QE]
24. [QS]ಯೆಹೋವನೇ, ನನ್ನನ್ನು ಶಿಕ್ಷಿಸು, ಆದರೆ ಮಿತಿಮೀರ ಬೇಡ. [QE][QS]ರೋಷದಿಂದ ದಂಡಿಸದಿರು. ನಾನು ಕೇವಲ ಕ್ಷೀಣನಾದೇನು. [QE]
25. [QS]ನಿನ್ನನ್ನು ಅರಿಯದ ಅನ್ಯಜನಾಂಗಗಳ ಮೇಲೆಯೂ, ನಿನ್ನ ನಾಮವನ್ನು ಉಚ್ಚರಿಸದ ವಂಶಗಳ ಮೇಲೆಯೂ ನಿನ್ನ ರೌದ್ರವನ್ನು ಸುರಿದುಬಿಡು. [QE][QS]ಅವರು ಯಾಕೋಬ್ಯರನ್ನು ನುಂಗಿ ಹೌದು, ಪೂರಾ ನುಂಗಿಬಿಟ್ಟು ಅವರ ವಾಸಸ್ಥಳವನ್ನು ಹಾಳುಮಾಡಿದ್ದಾರಲ್ಲಾ. [QE]