1. {ನಡುಕಟ್ಟಿನ ಸಾಮ್ಯ} PS ಯೆಹೋವನು ನನಗೆ, “ನೀನು ಹೋಗಿ ನಾರಿನ ನಡುಕಟ್ಟನ್ನು ಕೊಂಡುಕೊಂಡು ಸೊಂಟಕ್ಕೆ ಬಿಗಿದುಕೋ, ನೀರಿನಲ್ಲಿ ನೆನಸಿಡಬೇಡ” ಎಂದು ಅಪ್ಪಣೆಕೊಟ್ಟನು.
|
4. ಅವನು ನನಗೆ, “ನೀನು ಕೊಂಡುಕೊಂಡು ಸೊಂಟಕ್ಕೆ ಬಿಗಿದ ನಡುಕಟ್ಟನ್ನು ತೆಗೆದುಕೊಂಡು ಹೊರಟು ಯೂಫ್ರೆಟಿಸ್ ನದಿಗೆ ಹೋಗಿ, ಅದನ್ನು ಅಲ್ಲಿ ಬಂಡೆಯ ಸಂದಿನೊಳಗೆ ಬಚ್ಚಿಡು” ಎಂಬುದಾಗಿ ನುಡಿದನು.
|
6. ಬಹು ದಿನಗಳ ಮೇಲೆ ಯೆಹೋವನು ನನಗೆ, “ಹೊರಡು, ಯೂಫ್ರೆಟಿಸ್ ನದಿಗೆ ಹೋಗಿ ಅಲ್ಲಿ ಬಚ್ಚಿಡಬೇಕೆಂದು ನಾನು ಅಪ್ಪಣೆಕೊಟ್ಟ ನಡುಕಟ್ಟನ್ನು ಅಲ್ಲಿಂದ ತೆಗೆ” ಎಂದು ಹೇಳಿದನು.
|
7. ನಾನು ಯೂಫ್ರೆಟಿಸ್ ನದಿಗೆ ಹೋಗಿ ಅಗೆದು, ನಾನು ಬಚ್ಚಿಟ್ಟ ಸ್ಥಳದೊಳಗಿಂದ ನಡುಕಟ್ಟನ್ನು ತೆಗೆದೆನು, ಆಹಾ, ಅದು ಕೆಟ್ಟು ಯಾವ ಕೆಲಸಕ್ಕೂ ಬಾರದ್ದಾಗಿತ್ತು.
|
9. “ಇದು ಯೆಹೋವನಾದ ನನ್ನ ನುಡಿ, ಈ ನಡುಕಟ್ಟಿನಂತೆ ನಾನು ಯೆಹೂದದ ದೊಡ್ಡಸ್ತಿಕೆಯನ್ನೂ ಮತ್ತು ಯೆರೂಸಲೇಮಿನ ಬಲು ದೊಡ್ಡಸ್ತಿಕೆಯನ್ನೂ ಕೆಡಿಸಿಬಿಡುವೆನು.
|
10. ನನ್ನ ಮಾತುಗಳನ್ನು ಕೇಳದೆ ತಮ್ಮ ಹೃದಯದ ಹಟದಂತೆ ನಡೆದು, ಅನ್ಯದೇವತೆಗಳನ್ನು ಹಿಂಬಾಲಿಸಿ, ಸೇವಿಸಿ ಪೂಜಿಸುತ್ತಿರುವ ಈ ದುಷ್ಟ ಜನರು ಯಾವ ಕೆಲಸಕ್ಕೂ ಬಾರದ ಈ ನಡುಕಟ್ಟಿಗೆ ಸಮಾನವಾಗಿರುವರು.
|
11. ಸಮಸ್ತ ಇಸ್ರಾಯೇಲ್ ವಂಶವೂ ಮತ್ತು ಸಕಲ ಯೆಹೂದ ವಂಶವೂ ನನ್ನ ಪ್ರಜೆಯಾಗಿದ್ದು ನನಗೆ ಹೆಸರೂ, ಸ್ತೋತ್ರವೂ, ಮಹಿಮೆಯೂ ಆಗಿರಲೆಂದು ನಡುಕಟ್ಟನ್ನು ಸೊಂಟಕ್ಕೆ ಬಿಗಿದಿರುವಂತೆ ಇವರನ್ನು ಬಿಗಿದುಕೊಂಡಿದ್ದೇನೆ; ಆದರೂ ಇವರು ಕೇಳದೆ ಹೋದರು ಎಂದು ಯೆಹೋವನು ನುಡಿಯುತ್ತಾನೆ” ಎಂಬುದೇ. PS
|
12. {ಗಡಿಗೆಗಳ ಸಾಮ್ಯ} PS “ಹೀಗಿರಲು ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು” ಎಂಬುದಾಗಿ ಇಸ್ರಾಯೇಲರ ದೇವರಾದ ಯೆಹೋವನು ಹೇಳುವ ಮಾತನ್ನು ಕೇಳಿರಿ ಎಂದು ನೀನು ಅವರಿಗೆ ಸಾರು; ಆಗ ಅವರು ನಿನಗೆ, “ಪ್ರತಿಯೊಂದು ಗಡಿಗೆಯು ದ್ರಾಕ್ಷಾರಸದಿಂದ ತುಂಬಿರುವುದು ನಮಗೆ ಗೊತ್ತಿಲ್ಲವೋ” ಎಂದು ಹೇಳುವರು.
|
13. ಆಗ ನೀನು ಅವರಿಗೆ, “ಯೆಹೋವನ ಈ ಮಾತನ್ನು ಕೇಳಿರಿ, ದಾವೀದನ ಸಿಂಹಾಸನವನ್ನೇರಿದ ಅರಸರನ್ನೂ, ಯಾಜಕರನ್ನೂ, ಪ್ರವಾದಿಗಳನ್ನೂ, ಯೆರೂಸಲೇಮಿನ ಸಕಲ ನಿವಾಸಿಗಳನ್ನೂ ಅಂತು ದೇಶದ ಜನರೆಲ್ಲರನ್ನೂ,
|
14. ನಾನು ಅಮಲಿನಿಂದ ತುಂಬಿಸಿ ಹಿರಿಕಿರಿಯರಾದ ಸಮಸ್ತರನ್ನು ಒಬ್ಬರಿಗೊಬ್ಬರು ಬಡಿದಾಡುವಂತೆ ಮಾಡುವೆನು. ನಾನು ಅವರನ್ನು ಉಳಿಸೆನು, ಕನಿಕರಿಸೆನು, ಕರುಣಿಸೆನು, ನಾಶಮಾಡದೆ ಬಿಡೆನು” ಇದು ಯೆಹೋವನ ನುಡಿ.
|
16. ನಿಮ್ಮ ದೇವರಾದ ಯೆಹೋವನನ್ನು ಘನಪಡಿಸಿರಿ; ಇಲ್ಲದಿದ್ದರೆ ಸ್ವಲ್ಪ ಕಾಲದೊಳಗೆ ಆತನು ಕತ್ತಲನ್ನು ಉಂಟುಮಾಡುವನು.
ನಿಮ್ಮ ಕಾಲುಗಳು ಮೊಬ್ಬಿನ ಬೆಟ್ಟಗಳಲ್ಲಿ ಮುಗ್ಗರಿಸುವವು; ನೀವು ಬೆಳಕನ್ನು ನಿರೀಕ್ಷಿಸುತ್ತಿರುವಾಗ ಆತನು ಅದನ್ನು ಮರಣಾಂಧಕಾರದ ಕಾರ್ಗತ್ತಲನ್ನಾಗಿ ಮಾಡುವನು. |
17. ನೀವು ಕೇಳದಿದ್ದರೆ ನನ್ನ ಆತ್ಮವು ಗುಟ್ಟಾದ ಸ್ಥಳದಲ್ಲಿ ನಿಮ್ಮ ಗರ್ವದ ನಿಮಿತ್ತ ಗೋಳಾಡುವುದು.
ಯೆಹೋವನ ಮಂದೆಯು ಸೆರೆಯಾಗಿ ಹೋದುದರಿಂದ ಬಹಳವಾಗಿ ಅಳುವೆನು, ನನ್ನ ನೇತ್ರವು ಅಶ್ರುಧಾರೆಯನ್ನು ಸುರಿಸುವುದು. |
18. {ರಾಜನನ್ನು ರಾಜಮಾತೆಯನ್ನೂ ಎಚ್ಚರಿಸಿದ್ದು} PS ರಾಜನಿಗೂ ಮತ್ತು ರಾಜಮಾತೆಗೂ, “ನೆಲದಲ್ಲಿ ಕುಳಿತುಕೊಳ್ಳಿರಿ, ನಿಮ್ಮ ಅಂದದ ಕಿರೀಟವು ನಿಮ್ಮ ತಲೆಯಿಂದ ಕೆಳಗೆ ಬಿದ್ದಿದೆ” ಎಂದು ಹೇಳಿರಿ.
|
19. ದಕ್ಷಿಣ ಯೆಹೂದ ದೇಶದ ಪಟ್ಟಣಗಳು * ದಕ್ಷಿಣ ಯೆಹೂದ ದೇಶದ ಪಟ್ಟಣಗಳು ನೆಗೆವ್ ಮುತ್ತಿಗೆಯಾಗಿವೆ, ಅವುಗಳನ್ನು ಬಿಡಿಸಲು ಯಾರೂ ಇಲ್ಲ; ಯೆಹೂದವೆಲ್ಲಾ ಸೆರೆಹೋಗಿದೆ, ಸಂಪೂರ್ಣವಾಗಿ ಸೆರೆಯಾಗಿದೆ.
|
20. {ಬಾಬೆಲಿನಿಂದ ಯೆಹೂದಕ್ಕೆ ಬರುವ ದುರ್ಗತಿ} PS ಚೀಯೋನೇ, ಕಣ್ಣೆತ್ತು, ಉತ್ತರ ದಿಕ್ಕಿನಿಂದ ಬರುವವರನ್ನು ನೋಡು.
ನಿನಗೆ ಒಪ್ಪಿಸಿದ ಹಿಂಡು, ನಿನ್ನ ಅಂದವಾದ ಹಿಂಡೂ ಎಲ್ಲಿ? |
21. ನಿನ್ನೊಡನೆ ಗೆಳೆಯರಂತೆ ಬಾಳಲು ನೀನು ಅಭ್ಯಾಸಮಾಡಿಸಿದವರನ್ನು ಯೆಹೋವನು ನಿನಗೆ ತಲೆಯಾಗಿ ನೇಮಿಸುವಾಗ ಏನು ಹೇಳುವಿ?
ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವುದಲ್ಲವೇ. |
22. “ಇವು ನನಗೆ ಏಕೆ ಸಂಭವಿಸಿದವು” ಎಂದು ನೀನು ಮನದೊಳಗೆ ಅಂದುಕೊಂಡರೆ,
ನಿನ್ನ ಉಡುಗೆಯು ಕೀಳಲ್ಪಟ್ಟು, ನಿನ್ನ ಹಿಮ್ಮಡಿಯು ನಾಚಿಕೆಗೆ ಈಡಾದುದ್ದಕ್ಕೆ ನಿನ್ನ ಮಹಾಪಾಪವೇ ಕಾರಣ ಎಂದು ನಿನಗೆ ಗೊತ್ತಾಗುವುದು. |
23. ಕೂಷ್ಯನು ತನ್ನ ಚರ್ಮವನ್ನು ಮಾರ್ಪಡಿಸಬಲ್ಲನೇ? ಚಿರತೆಯು ತನ್ನ ಚುಕ್ಕೆಗಳನ್ನು ಬದಲಾಯಿಸಲು ಸಾಧ್ಯವೇ?
ಹೀಗಾದರೆ ದುಷ್ಟತನದಲ್ಲಿ ಶಿಕ್ಷಿತರಾದ ನೀವು ಶಿಷ್ಟತನದಲ್ಲಿ ನಡೆಯಬಹುದು. |
25. ನೀನು ನನ್ನನ್ನು ಮರೆತು ಸುಳ್ಳನ್ನು ನಂಬಿದ್ದರಿಂದ ಇದೇ ನಿನ್ನ ಪಾಲು, ಇದೇ ನಾನು ನಿನಗೆ ಅಳೆದುಕೊಟ್ಟ ಭಾಗ ಎಂದು ಯೆಹೋವನು ನುಡಿಯುತ್ತಾನೆ.
|
27. ನಾನು ನಿನ್ನ ವ್ಯಭಿಚಾರಗಳನ್ನು, ನಿನ್ನ ಹೇಕಾರಗಳನ್ನು, ನಿನ್ನ ವ್ಯಭಿಚಾರದ ನಡತೆಯನ್ನು ಗುಡ್ಡಗಳಲ್ಲಿಯೂ, ಬಯಲಿನಲ್ಲಿಯೂ ನೀನು ನಡೆಸಿದ ಅಸಹ್ಯಕಾರ್ಯಗಳನ್ನು ನೋಡಿದ್ದೇನೆ.
ಯೆರೂಸಲೇಮೇ, ನಿನ್ನ ಗತಿಯನ್ನು ಏನೆಂದು ಹೇಳಲಿ! ನೀನು ಶುದ್ಧಳಾಗಲು ಇನ್ನೆಷ್ಟು ಕಾಲ ಬೇಕು? PE |