2. ಯೆಹೂದವು ದುಃಖಿಸುತ್ತದೆ, ಅಲ್ಲಿಯ ಜನರು ಕಂಗೆಟ್ಟು ಕರ್ರಗಾಗಿ ನೆಲದ ಮೇಲೆ ಬಿದ್ದಿದ್ದಾರೆ,
ಯೆರೂಸಲೇಮಿನವರ ಗೋಳಾಟವು ಕೇಳಿಸುತ್ತದೆ. |
3. ಅವರಲ್ಲಿನ ಶ್ರೀಮಂತರು ತಮ್ಮ ಕೈಕೆಳಗಿನವರನ್ನು ನೀರು ತರಲು ಕಳುಹಿಸುತ್ತಾರೆ.
ಅವರು ಕೊಳಗಳಿಗೆ ಹೋದಾಗ ನೀರು ಕಾಣುವುದಿಲ್ಲ, ಬರೀ ಪಾತ್ರೆಗಳನ್ನು ತೆಗೆದುಕೊಂಡು ಹಿಂದಕ್ಕೆ ಬರುತ್ತಾರೆ. ಆಶೆಗೆಟ್ಟು ನಾಚಿಕೆಪಟ್ಟು ಮುಖವನ್ನು ಮುಚ್ಚಿಕೊಳ್ಳುತ್ತಾರೆ. |
6. ಕಾಡುಕತ್ತೆಗಳು ಬೋಳುಗುಡ್ಡಗಳಲ್ಲಿ ನಿಂತುಕೊಂಡು ನರಿಗಳಂತೆ ನಿಟ್ಟುಸಿರುಬಿಟ್ಟು ಗಾಳಿಯನ್ನು ಹಾರೈಸುತ್ತವೆ, ಸೊಪ್ಪುಸದೆಯಿಲ್ಲದೆ ಕಂಗೆಡುತ್ತವೆ.
|
7. {ಪ್ರವಾದಿಯು ಸ್ವಜನರಿಗಾಗಿ ಮಾಡಿದ ಪ್ರಾರ್ಥನೆ} PS ಯೆಹೋವನೇ, ನಮ್ಮ ಅಪರಾಧಗಳು ನಮಗೆ ವಿರುದ್ಧವಾಗಿ ಸಾಕ್ಷಿಕೊಟ್ಟರೂ,
ನಿನ್ನ ಹೆಸರಿನ ನಿಮಿತ್ತ ಕಾರ್ಯವನ್ನು ಸಾಧಿಸು. ನಮ್ಮ ದ್ರೋಹಗಳು ಬಹಳ, ನಿನ್ನ ವಿರುದ್ಧವಾಗಿ ಪಾಪವನ್ನು ಮಾಡಿದ್ದೇವೆ. |
8. ಇಸ್ರಾಯೇಲರ ನಿರೀಕ್ಷೆಯೇ, ಇಕ್ಕಟ್ಟಿನಲ್ಲಿ ಅವರಿಗೆ ರಕ್ಷಕನೇ,
ಏಕೆ ಸ್ವದೇಶದಲ್ಲಿ ಪರದೇಶಿಯಂತೆಯೂ, ಇಳಿದುಕೊಳ್ಳುವುದಕ್ಕೆ ಗುಡಾರಹಾಕಿಕೊಳ್ಳುವ ಪ್ರಯಾಣಿಕನ ಹಾಗೂ ಇದ್ದೀ? |
9. ಏಕೆ ಸ್ತಬ್ಧನಂತೆಯೂ * ಸ್ತಬ್ಧನಂತೆಯೂ ಅಥವಾ ಗಲಿಬಿಲಿಗೊಂಡವನಂತೆಯೂ , ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ?
ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತಿ. ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ. |
10. {ಯೆಹೋವನು ತನ್ನ ಜನರನ್ನೂ ಮತ್ತು ಅವರನ್ನು ವಂಚಿಸಿದ ಪ್ರವಾದಿಗಳನ್ನೂ ಗದರಿಸಿದ್ದು} PS ಯೆಹೋವನು ಈ ಜನರನ್ನು ಕುರಿತು, “ಇವರು ಪ್ರಯಾಣಿಕನ ಹಾಗೆ ಅಲೆಯುವುದಕ್ಕೆ ಇಷ್ಟಪಟ್ಟಿದ್ದಾರೆ, ಕಾಲನ್ನು ಹಿಂದೆಗೆಯಲಿಲ್ಲ.
ಆದಕಾರಣ ಯೆಹೋವನಾದ ನಾನು ಇವರನ್ನು ಕಟಾಕ್ಷಿಸೆನು; ಈಗಲೇ ಇವರ ಅಪರಾಧವನ್ನು ಮನಸ್ಸಿಗೆ ತಂದುಕೊಂಡು ಇವರ ಪಾಪಗಳಿಗೆ ದಂಡನೆಯನ್ನು ವಿಧಿಸುವೆನು” ಎಂದು ಹೇಳಿದ್ದಾನೆ. |
12. ಇವರು ಉಪವಾಸಮಾಡುವಾಗ ಇವರ ಮೊರೆಯನ್ನು ಕೇಳೆನು. ಹೋಮನೈವೇದ್ಯಗಳನ್ನು ಅರ್ಪಿಸಲು ಸ್ವೀಕರಿಸೆನು.
ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಇವರನ್ನು ನಿರ್ಮೂಲಮಾಡುವೆನು” ಎಂದು ಹೇಳಿದನು. PEPS |
13. ಅದಕ್ಕೆ ನಾನು, “ಅಯ್ಯೋ, ಕರ್ತನಾದ ಯೆಹೋವನೇ, ಇಗೋ ಪ್ರವಾದಿಗಳು ಈ ಜನರಿಗೆ, ‘ಖಡ್ಗವು ನಿಮ್ಮ ಕಣ್ಣಿಗೆ ಕಾಣದು, ಕ್ಷಾಮವು ನಿಮಗೆ ಸಂಭವಿಸದು; ಯೆಹೋವನು ಈ ಸ್ಥಳದಲ್ಲಿ ತಾನು ಪ್ರಮಾಣ ಮಾಡಿದಂತೆ ಸಮಾಧಾನವನ್ನು ನಿಮಗೆ ಕೊಡುವನು ಎಂದು ನುಡಿಯುತ್ತಾರೆ’ ” ಎಂಬುದಾಗಿ ಹೇಳಿದೆನು.
|
14. ಆಗ ಯೆಹೋವನು ನನಗೆ ಹೀಗೆ ನುಡಿದನು, “ಈ ಪ್ರವಾದಿಗಳು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುತ್ತಾರೆ; ನಾನು ಅವರನ್ನು ಕಳುಹಿಸಲಿಲ್ಲ. ಅವರಿಗೆ ಅಪ್ಪಣೆಕೊಡಲಿಲ್ಲ, ಏನೂ ಹೇಳಲಿಲ್ಲ. ಅವರು ಸುಳ್ಳಾದ ದರ್ಶನವನ್ನೂ, ಕಣಿಯನ್ನೂ, ಮಾಯಾತಂತ್ರವನ್ನೂ, ಸ್ವಕಲ್ಪಿತ ಮೋಸವನ್ನೂ ನಿಮಗೆ ಪ್ರಕಟಿಸುತ್ತಾರೆ.
|
15. ಆದಕಾರಣ ನನ್ನ ಅಪ್ಪಣೆಯಿಲ್ಲದೆ ನನ್ನ ಹೆಸರಿನಿಂದ ಪ್ರವಾದಿಸುತ್ತಾ ಖಡ್ಗವೂ, ಕ್ಷಾಮವೂ ಈ ದೇಶಕ್ಕೆ ಬಾರವು ಎಂದು ಬೋಧಿಸುವ ಪ್ರವಾದಿಗಳ ವಿಷಯದಲ್ಲಿ ಯೆಹೋವನಾದ ನಾನು, ‘ಖಡ್ಗದಿಂದಲೂ, ಕ್ಷಾಮದಿಂದಲೂ ಈ ಪ್ರವಾದಿಗಳು ನಿರ್ಮೂಲರಾಗುವರು’ ” ಎಂದು ಹೇಳುತ್ತೇನೆ.
|
16. ಮತ್ತು ಇವರ ಪ್ರವಾದನೆಯನ್ನು ಕೇಳುವ ಜನರು ಕ್ಷಾಮ ಮತ್ತು ಖಡ್ಗಗಳ ದೆಸೆಯಿಂದ ಯೆರೂಸಲೇಮಿನ ಬೀದಿಗಳಲ್ಲಿ ಬಿಸಾಡಲ್ಪಡುವರು; ಅವರನ್ನೂ ಅವರ ಹೆಂಡತಿ ಮತ್ತು ಮಕ್ಕಳನ್ನೂ ಹೂಣಿಡುವುದಕ್ಕೆ ಯಾರೂ ಇರುವುದಿಲ್ಲ; ನಾನು ಅವರ ದುಷ್ಟತನವನ್ನೇ ಅವರ ಮೇಲೆ ಹೊಯ್ದುಬಿಡುವೆನು.
|
17. ನೀನು ಅವರಿಗೆ, “ನನ್ನ ಕಣ್ಣೀರು ರಾತ್ರಿ ಹಗಲು ನಿರಂತರ ಸುರಿಯಲಿ; ಏಕೆಂದರೆ ನನ್ನ ಜನವೆಂಬ ಯುವತಿಗೆ ದೊಡ್ಡ ಗಾಯವಾಯಿತು, ಹೌದು ಗಡುಸಾದ ಪೆಟ್ಟು ಬಿತ್ತು.
|
18. ನಾನು ಊರ ಹೊರಗೆ ಹೋದರೆ ಇಗೋ, ಖಡ್ಗದಿಂದ ಹತರಾದವರು, ಊರೊಳಗೆ ಬಂದರೆ ಇಗೋ, ಕ್ಷಾಮದಿಂದ ಕೊರಗುವವರು! ಪ್ರವಾದಿಗಳೂ ಯಾಜಕರೂ ತಮಗೆ ಗೊತ್ತಿಲ್ಲದ ದೇಶಕ್ಕೆ ಗಡೀಪಾರಾಗಿದ್ದಾರೆ ಎಂಬ ಮಾತುಗಳನ್ನು ಹೇಳು” ಎಂದನು.
|
19. {ಪ್ರವಾದಿಯು ಸ್ವಜನರಿಗಾಗಿ ಮಾಡಿದ ಇನ್ನೊಂದು ಪ್ರಾರ್ಥನೆ} PS ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ?
ಚೀಯೋನನ್ನು ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದಿಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮ ಕಾಲವನ್ನೂ ಎದುರುನೋಡಿದೆವು, ಹಾ, ಅಂಜಿಕೆಯೇ! |
20. ಯೆಹೋವನೇ, ನಮ್ಮ ದುಷ್ಟತನವನ್ನೂ ಒಪ್ಪಿಕೊಳ್ಳುತ್ತೇವೆ,
ನಮ್ಮ ಪೂರ್ವಿಕರ ದುರಾಚಾರವನ್ನೂ ತಿಳಿದುಕೊಂಡಿದ್ದೇವೆ; ನಾವು ನಿನಗೇ ಪಾಪಮಾಡಿದ್ದೇವೆ. |
21. ನಿನ್ನ ನಾಮದ ಮೇಲೆ ದೃಷ್ಟಿಯಿಡು, ನಿನ್ನ ಮಹಿಮೆಯ ಸಿಂಹಾಸನವನ್ನು ಅಸಡ್ಡೆಮಾಡಬೇಡ.
ಅವಮಾನಪಡಿಸಬೇಡ; ನೀನು ನಮ್ಮೊಂದಿಗೆ ಮಾಡಿಕೊಂಡ ಒಡಂಬಡಿಕೆಯನ್ನು ಜ್ಞಾಪಕಕ್ಕೆ ತಂದುಕೋ, ಅದನ್ನು ಭಂಗಪಡಿಸದಿರು. |
22. ಜನಾಂಗಗಳ ವ್ಯರ್ಥವಾದ ವಿಗ್ರಹಗಳೊಳಗೆ ಮಳೆಯನ್ನು ಸುರಿಸಬಲ್ಲವುಗಳುಂಟೇ?
ಆಕಾಶವು ತಾನಾಗಿ ಹದಮಳೆಗಳನ್ನು ಕೊಟ್ಟೀತೇ? ನಮ್ಮ ದೇವರಾದ ಯೆಹೋವನೇ, ನೀನೇ ವೃಷ್ಟಿಪ್ರದನು; ನಾವು ನಿನ್ನನ್ನೇ ನಿರೀಕ್ಷಿಸುವೆವು. ನೀನು ಇವುಗಳನ್ನೆಲ್ಲಾ ನಡೆಸುವವನಾಗಿದ್ದೀಯಷ್ಟೆ. PE |