1. {ಯೆಹೂದವನ್ನು ಶಿಕ್ಷಿಸುವ ಯೆಹೋವನು} PS ಯೆಹೂದದ ಪಾಪವು ಉಕ್ಕಿನ ಕಂಠದಿಂದಲೂ ಹಾಗೂ ವಜ್ರದ ಮೊನೆಯಿಂದಲೂ ಲಿಖಿತವಾಗಿದೆ.
ಅದು ಅವರ ಹೃದಯದ ಹಲಗೆಯಲ್ಲಿಯೂ, ಅವರ ಯಜ್ಞವೇದಿಗಳ ಕೊಂಬುಗಳಲ್ಲಿಯೂ ಕೆತ್ತಿದೆ. |
2. ಅವರ ಮಕ್ಕಳು ಸೊಂಪಾಗಿ ಬೆಳೆದಿರುವ ಮರಗಳನ್ನು ಎತ್ತರವಾದ ಗುಡ್ಡಗಳನ್ನು ಕಂಡಾಗೆಲ್ಲಾ,
ಅವರ ಯಜ್ಞವೇದಿಗಳನ್ನು ಮತ್ತು ಅಶೇರ ವಿಗ್ರಹಸ್ತಂಭಗಳನ್ನು ಜ್ಞಾಪಿಸಿಕೊಳ್ಳುವರು. |
3. ಬಯಲಿನ ನನ್ನ ಪರ್ವತದ ಜನರೇ, ನಿಮ್ಮ ಸಕಲ ಪ್ರಾಂತ್ಯಗಳಲ್ಲಿ ನೀವು ಮಾಡಿದ ಪಾಪದ ನಿಮಿತ್ತ,
ನಾನು ನಿಮ್ಮ ಎಲ್ಲಾ ಸೊತ್ತು ಸಂಪತ್ತುಗಳನ್ನು ಹಾಗು ಪೂಜಾಸ್ಥಳಗಳನ್ನು ಸೂರೆಗೆ ಈಡು ಮಾಡುವೆನು. |
4. ನಾನು ನಿಮಗೆ ದಯಪಾಲಿಸಿದ ಸ್ವತ್ತನ್ನು ನಿಮ್ಮ ದೋಷದಿಂದಲೇ ಕಳೆದುಕೊಳ್ಳುವಿರಿ.
ನೀವು ನೋಡದ ದೇಶದಲ್ಲಿ ನಿಮ್ಮನ್ನು ನಿಮ್ಮ ಶತ್ರುಗಳಿಗೆ ದಾಸರನ್ನಾಗಿ ಮಾಡುವೆನು. ನೀವು ನನ್ನ ರೋಷಾಗ್ನಿಯನ್ನು ಹೆಚ್ಚಿಸಿದ್ದೀರಿ, ಅದು ನಿತ್ಯವೂ ಉರಿಯುತ್ತಿರುವುದು. |
5. {ದೇವರನ್ನು ನಂಬುವವರಿಗೂ ಮನುಷ್ಯರನ್ನು ನಂಬುವವರಿಗೂ ಇರುವ ವ್ಯತ್ಯಾಸ} PS ಯೆಹೋವನು ಹೀಗೆನ್ನುತ್ತಾನೆ, “ಮಾನವ ಮಾತ್ರದವರಲ್ಲಿ ಭರವಸವಿಟ್ಟು, ನರಜನ್ಮದವರನ್ನು ತನ್ನ ಭುಜಬಲವೆಂದು ತಿಳಿದು,
ಯೆಹೋವನನ್ನು ತೊರೆಯುವ ಮನಸ್ಸುಳ್ಳವನು ಶಾಪಗ್ರಸ್ಥನು. |
6. ಇವನು ಅಡವಿಯಲ್ಲಿನ ಜಾಲಿಗೆ ಸಮಾನನು; ಶುಭ ಸಂಭವಿಸಿದರೂ ಅವನು ಅದನ್ನು ಕಾಣನು.
ಯಾರೂ ವಾಸಿಸದ ಚೌಳು ನೆಲವಾಗಿರುವ ಅರಣ್ಯದ ಬೆಗ್ಗಾಡಿನಲ್ಲಿ ವಾಸಿಸುವ ಸ್ಥಿತಿಯೇ ಅವನದು. |
8. ನೀರಾವರಿಯಲ್ಲಿ ನೆಡಲ್ಪಟ್ಟು ಹೊಳೆಯ ದಡದಲ್ಲಿ ತನ್ನ ಬೇರುಗಳನ್ನು ಹರಡಿ, ಧಗೆಗೆ ಭಯಪಡದೆ,
ಹಸುರೆಲೆಯನ್ನು ಚಿಗುರಿಸುತ್ತಾ, ಕ್ಷಾಮದ ವರ್ಷದಲ್ಲಿಯೂ ನಿಶ್ಚಿಂತೆಯಾಗಿ ಸದಾ ಫಲಕೊಡುತ್ತಾ ಇರುವ ಮರಕ್ಕೆ ಅವರು ಸಮಾನವಾಗಿರುವರು.” |
10. ಯೆಹೋವನಾದ ನಾನು ಪ್ರತಿಯೊಬ್ಬನಿಗೂ ಕರ್ಮಫಲವನ್ನು ಅವನವನ ನಡತೆಗೆ ತಕ್ಕ ಹಾಗೆ ಕೊಡಬೇಕೆಂದು,
ಹೃದಯವನ್ನು ಪರೀಕ್ಷಿಸುವವನೂ, ಅಂತರಿಂದ್ರಿಯವನ್ನು ಶೋಧಿಸುವವನೂ ಆಗಿದ್ದೇನೆ. |
11. ಆಸ್ತಿಪಾಸ್ತಿಗಳನ್ನು ಅನ್ಯಾಯವಾಗಿ ಸಂಪಾದಿಸಿಕೊಂಡವನು ತನ್ನದಲ್ಲದ ಮರಿಗಳನ್ನು ಕೂಡಿಸಿಕೊಳ್ಳುವ ಕೌಜುಗ ಹಕ್ಕಿಗೆ ಸಮಾನನು.
ಅವನ ಮಧ್ಯಪ್ರಾಯದಲ್ಲಿ ಅವು ಅವನಿಂದ ತೊಲಗಿಹೋಗುವವು; ಅವನು ತನ್ನ ಅಂತ್ಯಕಾಲದಲ್ಲಿ ಹುಚ್ಚನಾಗಿ ಕಂಡುಬರುವನು. |
13. ಯೆಹೋವನೇ, ಇಸ್ರಾಯೇಲರ ನಿರೀಕ್ಷೆಯೇ, ನಿನ್ನನ್ನು ಬಿಟ್ಟುಹೋಗುವವರು ಆಶಾಭಂಗಪಡುವರು.
ಯೆಹೋವನಾದ ನಿನ್ನನ್ನು ತೊರೆದವರು ಜೀವಜಲದ ಬುಗ್ಗೆಯನ್ನು ತೊರೆದವರಾಗಿದ್ದಾರೆ; ಅವರ ಹೆಸರು ಧೂಳಿನಲ್ಲಿ ಬರೆಯಲ್ಪಡುವುದು. |
14. {ಪ್ರವಾದಿಯ ವಿಜ್ಞಾಪನೆ} PS ಯೆಹೋವನೇ, ನನ್ನನ್ನು ಸ್ವಸ್ಥಪಡಿಸು, ಆಗ ಸ್ವಸ್ಥನಾಗುವೆನು.
ನನ್ನನ್ನು ರಕ್ಷಿಸು, ಆಗ ರಕ್ಷಿಸಲ್ಪಡುವೆನು; ನೀನೇ ನನಗೆ ಸ್ತುತ್ಯನು. |
16. ನಾನಾದರೋ ಸಭಾಪಾಲನೆಯಲ್ಲಿ ನಿನ್ನನ್ನು ಹಿಂಬಾಲಿಸುವುದನ್ನು ತಪ್ಪಿಸಲು ಆತುರಪಡಲಿಲ್ಲ.
ವಿಪತ್ತಿನ ಅನಿವಾರ್ಯ ದಿನವನ್ನು ಅಪೇಕ್ಷಿಸಲಿಲ್ಲ; ಅದನ್ನು ನೀನೇ ಬಲ್ಲೆ. ನಿನ್ನ ಸಮಕ್ಷಮದಲ್ಲೇ ನನ್ನ ಬಾಯ ಮಾತು ಹೊರಟಿತು. |
18. ನನ್ನ ಹಿಂಸಕರಿಗೆ ಅವಮಾನವಾಗಲಿ, ನನಗಾಗದಿರಲಿ.
ಭಯಭ್ರಾಂತಿಯು ಅವರನ್ನು ಹಿಡಿಯಲಿ, ನನ್ನನ್ನಲ್ಲ. ಅವರಿಗೆ ಕೇಡುಗಾಲವನ್ನು ಬರಮಾಡಿ ವಿಪರೀತ ಕೇಡಿನಿಂದ ಅವರನ್ನು ನಾಶಪಡಿಸು. PS |
19. {ಸಬ್ಬತ್ ದಿನವನ್ನು ಆಚರಿಸಬೇಕೆಂಬ ಬೋಧನೆ} PS ಯೆಹೋವನು ನನಗೆ ಇಂತೆಂದನು, “ನೀನು ಹೊರಟು ಯೆಹೂದದ ಅರಸರು ಹೋಗಿ ಬರುವ ಸಾಮಾನ್ಯ ಜನರ ಬಾಗಿಲಿನಲ್ಲಿಯೂ * ಸಾಮಾನ್ಯ ಜನರ ಬಾಗಿಲಿನಲ್ಲಿಯೂ ಬೆನ್ಯಾಮೀನನ ಬಾಗಿಲು. , ಯೆರೂಸಲೇಮಿನ ಎಲ್ಲಾ ಬಾಗಿಲುಗಳಲ್ಲಿಯೂ ನಿಂತುಕೊಂಡು ಅವರಿಗೆ ಹೀಗೆ ಸಾರು,
|
20. ‘ಈ ಬಾಗಿಲುಗಳಲ್ಲಿ ಸೇರುವ ಯೆಹೂದದ ಅರಸರೇ, ಎಲ್ಲಾ ಯೆಹೂದ್ಯರೇ, ಯೆರೂಸಲೇಮಿನ ಸಕಲ ನಿವಾಸಿಗಳೇ, ಯೆಹೋವನ ಮಾತನ್ನು ಕೇಳಿರಿ.
|
21. ಮನಮುಟ್ಟಿ ಗಮನಿಸಿರಿ, ಸಬ್ಬತ್ ದಿನದಲ್ಲಿ ಯಾವ ಹೊರೆಯನ್ನೂ ಹೊರಬೇಡಿರಿ, ಅದನ್ನು ಯೆರೂಸಲೇಮಿನ ಬಾಗಿಲುಗಳಲ್ಲಿ ತರಲೇಬೇಡಿರಿ.
|
22. ಆ ದಿನದಲ್ಲಿ ನಿಮ್ಮ ಮನೆಗಳಿಂದ ಯಾವ ಹೊರೆಯನ್ನೂ ಈಚೆಗೆ ತೆಗೆದುಕೊಂಡು ಬರಬೇಡಿರಿ, ಯಾವ ಕೆಲಸವನ್ನೂ ಮಾಡದಿರಿ. ಸಬ್ಬತ್ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿರಿ; ನಿಮ್ಮ ಪೂರ್ವಿಕರಿಗೆ ನಾನು ಹೀಗೆ ಆಜ್ಞೆಮಾಡಿದೆನಲ್ಲಾ.
|
24. ಯೆಹೋವನಾದ ನನ್ನ ನುಡಿ ಇದೇ, ನೀನು ನನ್ನ ಕಡೆಗೆ ಚೆನ್ನಾಗಿ ಕಿವಿಗೊಟ್ಟು, ಸಬ್ಬತ್ ದಿನದಲ್ಲಿ ಈ ಊರಿನ ಬಾಗಿಲುಗಳೊಳಗೆ ಯಾವ ಹೊರೆಯನ್ನೂ ತಾರದೆ, ಯಾವ ಕೆಲಸವನ್ನೂ ಮಾಡದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸಿದರೆ,
|
25. ಆಗ ದಾವೀದನ ಸಿಂಹಾಸನಾರೂಢರಾದ ಅರಸರೂ, ಪ್ರಭುಗಳೂ ರಥಾಶ್ವಗಳನ್ನು ಏರಿದವರಾಗಿ ಈ ಪಟ್ಟಣದ ಬಾಗಿಲುಗಳನ್ನು ಪ್ರವೇಶಿಸುವರು. ಇವರು, ಇವರ ಪ್ರಧಾನರು, ಯೆಹೂದದ ಜನರು, ಯೆರೂಸಲೇಮಿನ ನಿವಾಸಿಗಳು, ಎಲ್ಲರೂ ಇಲ್ಲಿ ಸೇರುವರು. ಈ ಪಟ್ಟಣವು ನಿತ್ಯವೂ ನೆಲೆಯಾಗಿರುವುದು.
|
26. ಯೆಹೂದದ ಪಟ್ಟಣಗಳು, ಯೆರೂಸಲೇಮಿನ ಸುತ್ತಣ ಪ್ರದೇಶಗಳು, ಬೆನ್ಯಾಮೀನ್ ಸೀಮೆ, ಇಳಕಲಿನ ಪ್ರದೇಶ, ಬೆಟ್ಟದ ಮೇಲಣ ಪ್ರದೇಶ, ದಕ್ಷಿಣಪ್ರಾಂತ್ಯ † ದಕ್ಷಿಣಪ್ರಾಂತ್ಯ ನೆಗೆವ್. ಈ ಎಲ್ಲಾ ಸ್ಥಳಗಳಿಂದಲೂ ಸರ್ವಾಂಗಹೋಮಪಶು, ಯಜ್ಞಪಶು, ನೈವೇದ್ಯ, ಧೂಪ ಎಂಬ ಕೃತಜ್ಞತಾ ಅರ್ಪಣೆಗಳನ್ನು ಯೆಹೋವನ ಆಲಯಕ್ಕೆ ಜನರು ತೆಗೆದುಕೊಂಡು ಬರುವರು.
|
27. ಆದರೆ ನೀವು ನನ್ನ ಕಡೆಗೆ ಕಿವಿಗೊಡದೆ, ಸಬ್ಬತ್ ದಿನದಲ್ಲಿ ಹೊರೆಯನ್ನು ಹೊತ್ತು ಯೆರೂಸಲೇಮಿನ ಬಾಗಿಲುಗಳೊಳಗೆ ಪ್ರವೇಶಿಸಬಾರದೆಂಬ ನಿಯಮವನ್ನು ಕೈಕೊಳ್ಳದೆ, ಆ ದಿನವನ್ನು ನನ್ನ ಪರಿಶುದ್ಧ ದಿನವೆಂದು ಆಚರಿಸದೆ ಇದ್ದರೆ ಆಗ ನಾನು ಊರಬಾಗಿಲುಗಳಲ್ಲಿ ಬೆಂಕಿಯನ್ನು ಹೊತ್ತಿಸುವೆನು, ಅದು ಯೆರೂಸಲೇಮಿನ ಉಪ್ಪರಿಗೆಗಳನ್ನು ದಹಿಸಿಬಿಡುವುದು, ಆರುವುದೇ ಇಲ್ಲ’ ” ಎಂದು ಹೇಳಿದನು. PE
|