2. “ನೀನೆದ್ದು ಕುಂಬಾರನ ಮನೆಗೆ ಇಳಿದುಹೋಗು; ಅಲ್ಲೇ ನನ್ನ ನುಡಿಯನ್ನು ನಿನಗೆ ಕೇಳಮಾಡುವೆನು” ಎಂಬ ಮಾತನ್ನು ದಯಪಾಲಿಸಿದನು.
|
4. ಆ ಕುಂಬಾರನು ಜೇಡಿಮಣ್ಣಿನಿಂದ ಮಾಡುತ್ತಿದ್ದ ಪಾತ್ರೆಯು ಅವನ ಕೈಯಲ್ಲಿ ಕೆಟ್ಟುಹೋಗಲು ಅವನು ಪುನಃ ತನಗೆ ಸರಿತೋಚಿದ ಹಾಗೆ ಅದನ್ನು ಹೊಸ ಪಾತ್ರೆಯನ್ನಾಗಿ ಮಾಡಿದನು. PEPS
|
6. “ಯೆಹೋವನು ಹೀಗೆನ್ನುತ್ತಾನೆ, ಇಸ್ರಾಯೇಲ್ ವಂಶದವರೇ, ಈ ಕುಂಬಾರನು ಮಾಡಿದಂತೆ ನಾನು ನಿಮ್ಮನ್ನು ಮಾಡಬಾರದೋ? ಇಸ್ರಾಯೇಲ್ ಮನೆತನದವರೇ, ಜೇಡಿಮಣ್ಣು ಕುಂಬಾರನ ಕೈಯಲ್ಲಿ ಹೇಗೋ, ಹಾಗೆಯೇ, ನೀವು ನನ್ನ ಕೈಯಲ್ಲಿದ್ದೀರಿ.
|
8. ನಾನು ದಂಡನೆಯನ್ನು ನಿರ್ಣಯಿಸಿದ ಆ ಜನಾಂಗದವರು ತಮ್ಮ ಕೆಟ್ಟತನದಿಂದ ತಿರುಗಿಕೊಂಡರೆ, ನಾನು ಮಾಡಬೇಕೆಂದಿದ್ದ ಕೇಡನ್ನು ಮನಮರುಗಿ ಮಾಡದಿರುವೆನು.
|
10. ಅದು ನನ್ನ ಮಾತನ್ನು ಕೇಳದೆ, ನನ್ನ ದೃಷ್ಟಿಯಲ್ಲಿ ಕೆಟ್ಟತನವನ್ನು ಮಾಡಿದರೆ ನಾನು ಮನಸ್ಸನ್ನು ಬದಲಾಯಿಸಿಕೊಂಡು ಅದಕ್ಕೆ ಮಾಡಬೇಕೆಂದಿದ್ದ ಮೇಲನ್ನು ಮಾಡದೆ ಇರುವೆನು.
|
11. ಈಗ ನೀನು ಯೆಹೂದ್ಯರಿಗೂ ಯೆರೂಸಲೇಮಿನವರಿಗೂ ಯೆಹೋವನು ಹೀಗೆನ್ನುತ್ತಾನೆ, ‘ಆಹಾ, ನಾನು ನಿಮ್ಮ ವಿರುದ್ಧವಾಗಿ ಯೋಚಿಸಿ, ಕೇಡನ್ನು ಕಲ್ಪಿಸುತ್ತಿದ್ದೇನೆ; ನಿಮ್ಮಲ್ಲಿ ಪ್ರತಿಯೊಬ್ಬನೂ ತನ್ನ ತನ್ನ ದುರ್ಮಾರ್ಗದಿಂದ ಹಿಂದಿರುಗಲಿ, ನಡತೆಯನ್ನೂ ಕೃತ್ಯಗಳನ್ನೂ ಸರಿಪಡಿಸಿಕೊಳ್ಳಲಿ’ ಎಂಬ ಮಾತನ್ನು ಹೇಳು.
|
12. ಅವರೋ, ‘ಏನೂ ನಿರೀಕ್ಷೆಯಿಲ್ಲ; ನಮ್ಮ ಆಲೋಚನೆಗಳಿಗೆ ತಕ್ಕಂತೆ ನಡೆಯುವೆವು, ನಮ್ಮಲ್ಲಿ ಪ್ರತಿಯೊಬ್ಬರೂ ನಮ್ಮ ನಮ್ಮ ದುಷ್ಟ ಹೃದಯದ ಹಾಗೆ ಮಾಡುವೆವು’ ಎಂದು ಹೇಳುತ್ತಾರೆ.”
|
13. ಹೀಗಿರಲು ಯೆಹೋವನು ಹೀಗೆನ್ನುತ್ತಾನೆ, “ಜನಾಂಗಗಳಲ್ಲಿ ವಿಚಾರಿಸಿರಿ, ಇಂಥಾ ಸುದ್ದಿಯನ್ನು ಯಾರು ಕೇಳಿದ್ದಾರೆ?
ಇಸ್ರಾಯೇಲೆಂಬ ಯುವತಿಯು ಕೇವಲ ಅಸಹ್ಯಕಾರ್ಯವನ್ನು ಮಾಡಿದ್ದಾಳೆ. |
15. ನನ್ನ ಜನರೋ ನನ್ನನ್ನು ಮರೆತು ವ್ಯರ್ಥ ವಿಗ್ರಹಗಳಿಗೆ ಧೂಪಹಾಕಿದ್ದಾರಲ್ಲಾ;
ಅವು ಪುರಾತನ ಪದ್ಧತಿಯಾದ ಅವರ ಮಾರ್ಗಗಳಲ್ಲಿ ಅವರು ಮುಗ್ಗರಿಸುವಂತೆಯೂ, ಸರಿಯಲ್ಲದ ಸೀಳು ದಾರಿಗಳಲ್ಲಿ ಅಲೆಯುವಂತೆಯೂ ಮಾಡಿವೆ. |
17. ಶತ್ರುಗಳು ಮೇಲೆ ಬಿದ್ದಾಗ ನನ್ನ ಜನರನ್ನು ಮೂಡಣ ಗಾಳಿಯಿಂದಲೋ ಎಂಬಂತೆ ದಿಕ್ಕಾಪಾಲು ಮಾಡುವೆನು.
ಅವರ ವಿಪತ್ತಿನ ದಿನದಲ್ಲಿ ಅವರ ಕಡೆಗೆ ಮುಖತಿರುಗಿಸದೆ ಬೆನ್ನು ಮಾಡುವೆನು.” |
18. {ಜನರ ಒಳಸಂಚು ಪ್ರವಾದಿಯ ಪ್ರಾರ್ಥನೆ} PS ಆಗ ಅವರು, “ಯೆರೆಮೀಯನ ವಿರುದ್ಧವಾಗಿ ಒಳಸಂಚು ಮಾಡೋಣ ಬನ್ನಿರಿ;
ಧರ್ಮೋಪದೇಶವು ಯಾಜಕನಿಂದ, ಮಂತ್ರಾಲೋಚನೆಯು ಜ್ಞಾನಿಯಿಂದ, ದೈವೋಕ್ತಿಯು ಪ್ರವಾದಿಯಿಂದ ಬಂದ ವಿಷಯ ಎಂದಿಗೂ ತಪ್ಪದು. ಬನ್ನಿರಿ, ಅವನನ್ನು ಬಾಯಿಂದ ಬಡಿಯೋಣ, ಅವನ ಯಾವ ಮಾತಿಗೂ ಕಿವಿಗೊಡದಿರುವ” ಎಂದುಕೊಂಡರು. |
20. ಒಳ್ಳೆಯದನ್ನು ಮಾಡಿದ್ದಕ್ಕೆ ಕೇಡಿನ ಪ್ರತಿಫಲ ಅಗತ್ಯವೇ? ನನ್ನ ಪ್ರಾಣವನ್ನು ಹಿಡಿಯಬೇಕೆಂದು ಗುಂಡಿಯನ್ನು ತೋಡಿದ್ದಾರಲ್ಲಾ.
ಅವರ ಮೇಲಣ ನಿನ್ನ ರೋಷವನ್ನು ತಪ್ಪಿಸಲು ನಾನು ನಿನ್ನ ಮುಂದೆ ನಿಂತುಕೊಂಡು ಅವರ ಹಿತಕ್ಕಾಗಿ ವಿಜ್ಞಾಪಿಸಿಕೊಂಡದ್ದನ್ನು ನೆನಪಿಗೆ ತಂದುಕೋ. |
21. ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ, ಕತ್ತಿಯ ಬಾಯಿಗೆ ಒಪ್ಪಿಸು;
ಅವರ ಹೆಂಡತಿಯರು ಮಕ್ಕಳ್ಳಿಲ್ಲದವರಾಗಿಯೂ, ವಿಧವೆಯರಾಗಿಯೂ ಇರಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ. ಯುದ್ಧದಲ್ಲಿ ಖಡ್ಗವು ಅವರ ಯುವಕರನ್ನು ವಧಿಸಲಿ. |
22. ಸುಲಿಗೆಯವರ ಗುಂಪನ್ನು ಫಕ್ಕನೆ ಅವರ ಮೇಲೆ ಬೀಳಮಾಡು, ಅವರ ಮನೆಗಳೊಳಗಿಂದ ಅರಚಾಟವು ಕೇಳಿಸಲಿ.
ಅವರು ನನ್ನನ್ನು ಹಿಡಿಯಲಿಕ್ಕೆ ಗುಂಡಿಯನ್ನು ತೋಡಿ, ನನ್ನ ಕಾಲುಗಳಿಗೆ ಪಾಶಗಳನ್ನು ಗುಪ್ತವಾಗಿ ಒಡ್ಡಿದ್ದಾರೆ. |
23. ಯೆಹೋವನೇ, ನನ್ನನ್ನು ಕೊಲ್ಲಬೇಕೆಂದು ಅವರು ಮಾಡಿಕೊಂಡಿರುವ ಆಲೋಚನೆಯನ್ನೆಲ್ಲಾ ನೀನೇ ಬಲ್ಲೆ.
ಅವರ ಅಪರಾಧವನ್ನು ಕ್ಷಮಿಸಬೇಡ, ಅವರ ಪಾಪವನ್ನು ಅಳಿಸದಿರು, ಅದು ನಿನ್ನ ಕಣ್ಣೆದುರಿಗಿರಲಿ. ಅವರು ನಿನ್ನ ಮುಂದೆ ಕೆಡವಲ್ಪಡಲಿ; ನಿನ್ನ ಕೋಪವನ್ನು ವ್ಯಕ್ತಪಡಿಸುವಾಗ ಅವರಿಗೆ ತಕ್ಕದ್ದನ್ನು ಮಾಡು. PE |