1. {ಧರ್ಮರಾಜನು ಪಟ್ಟಕ್ಕೆ ಬರುವ ವಾಗ್ದಾನ} PS “ನನ್ನ ಕಾವಲಿನ ಕುರಿಗಳನ್ನು ಚದುರಿಸಿ ಹಾಳು ಮಾಡುವ ಕುರುಬರ ಗತಿಯನ್ನು ಏನೆಂದು ಹೇಳಲಿ” ಎಂಬುದು ಯೆಹೋವನ ನುಡಿ. PEPS
|
2. ಇಸ್ರಾಯೇಲರ ದೇವರಾದ ಯೆಹೋವನು ತನ್ನ ಜನರೆಂಬ ಕುರಿಗಳನ್ನು ಮೇಯಿಸುವ ಕುರುಬರ ದ್ರೋಹವನ್ನು ಕಂಡು ಅವರನ್ನು ಕುರಿತು ಇಂತೆನ್ನುತ್ತಾನೆ, “ನೀವು ನನ್ನ ಮಂದೆಯನ್ನು ಚದರಿಸಿ ಅಟ್ಟಿಬಿಟ್ಟಿದ್ದೀರಿ, ವಿಚಾರಿಸಲೇ ಇಲ್ಲ. ಆಹಾ, ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಾನು ನಿಮ್ಮನ್ನು ವಿಚಾರಿಸುವೆನು.
|
3. ನಾನು ನನ್ನ ಮಂದೆಯನ್ನು ಯಾವ ದೇಶಗಳಿಗೆ ಅಟ್ಟಿಬಿಟ್ಟೆನೋ, ಆ ಸಕಲ ದೇಶಗಳಿಂದ ಉಳಿದ ಕುರಿಗಳನ್ನು ಕೂಡಿಸಿ, ತಮ್ಮ ತಮ್ಮ ಹಟ್ಟಿಗಳಿಗೆ ತಿರುಗಿ ಬರಮಾಡುವೆನು; ಅವು ದೊಡ್ಡ ಸಂತಾನವಾಗಿ ಹೆಚ್ಚುವವು.
|
4. ನಾನು ಅವುಗಳ ಮೇಲೆ ಕುರುಬರನ್ನು ನೇಮಿಸುವೆನು, ಅವರು ಅವುಗಳನ್ನು ಮೇಯಿಸುವರು. ಅವು ಇನ್ನು ಕಳವಳಗೊಳ್ಳುವುದಿಲ್ಲ, ಭಯಪಡುವುದಿಲ್ಲ ಮತ್ತು ಅವುಗಳಲ್ಲಿ ಒಂದೂ ಕಡಿಮೆಯಾಗುವುದಿಲ್ಲ; ಇದು ಯೆಹೋವನ ನುಡಿ” ಎಂಬುದೇ.
|
5. ಯೆಹೋವನು, “ಇಗೋ, ನಾನು ಮುಂದಿನ ಕಾಲದಲ್ಲಿ ದಾವೀದನೆಂಬ ಮೂಲದಿಂದ ಸದ್ಧರ್ಮಿಯಾದ ಮೊಳಕೆಯನ್ನು ಚಿಗುರಿಸುವೆನು.
ಅವನು ರಾಜನಾಗಿ ಆಳುತ್ತಾ, ವಿವೇಕದಿಂದ ಕಾರ್ಯವನ್ನು ಸಾಧಿಸುತ್ತಾ, ದೇಶದಲ್ಲಿ ನೀತಿ, ನ್ಯಾಯಗಳನ್ನು ನಿರ್ವಹಿಸುವನು. |
6. ಅವನ ಕಾಲದಲ್ಲಿ ಯೆಹೂದ್ಯರು ಸುರಕ್ಷಿತರಾಗಿರುವರು, ಇಸ್ರಾಯೇಲರು ನೆಮ್ಮದಿಯಾಗಿ ವಾಸಿಸುವರು;
‘ಯೆಹೋವ ಚಿದ್ಕೇನು’ ಅಂದರೆ ಯೆಹೋವನೇ ನಮ್ಮ ಸದ್ಧರ್ಮ ಎಂಬ ಹೆಸರು ಅವನಿಗಾಗುವುದು” ಎಂದು ನುಡಿಯುತ್ತಾನೆ. PEPS |
7. ಆಹಾ, ಮುಂದಿನ ಕಾಲದಲ್ಲಿ ಜನರು, “ಇಸ್ರಾಯೇಲರನ್ನು ಐಗುಪ್ತ ದೇಶದೊಳಗಿಂದ ಉದ್ಧರಿಸಿದ ಯೆಹೋವನ ಜೀವದಾಣೆ ಎಂಬುದಾಗಿ ಪ್ರಮಾಣ ಮಾಡುವುದನ್ನು ಬಿಟ್ಟು,
|
8. ಇಸ್ರಾಯೇಲ್ ಮನೆತನವೆಂಬ ಸಂತಾನವನ್ನು ಉತ್ತರ ದಿಕ್ಕಿನ ದೇಶದಿಂದಲೂ, ತಾನು ಅವರನ್ನು ತಳ್ಳಿಬಿಟ್ಟಿದ್ದ ಸಕಲ ಸೀಮೆಗಳಿಂದಲೂ ಬರಮಾಡಿ, ಉದ್ಧರಿಸಿದ ಯೆಹೋವನ ಜೀವದಾಣೆ ಎಂದು ಪ್ರಮಾಣಮಾಡುವರು. ಅವರು ಸ್ವದೇಶದಲ್ಲಿ ಸುಖವಾಸಿಗಳಾಗುವರು.” ಇದು ಯೆಹೋವನ ನುಡಿ.
|
9. {ಸುಳ್ಳು ಪ್ರವಾದಿಗಳನ್ನು ಖಂಡಿಸಿದ್ದು} PS ಪ್ರವಾದಿಗಳ ವಿಷಯ: ನನ್ನ ಹೃದಯವು ನನ್ನೊಳಗೆ ಒಡೆದುಹೋಗಿದೆ; ನನ್ನ ಎಲುಬುಗಳೆಲ್ಲಾ ಕರಗಿಹೋಗಿವೆ.
ನಾನು ಯೆಹೋವನಿಗೂ ಆತನ ಪರಿಶುದ್ಧ ವಾಕ್ಯಗಳಿಗೂ ವಶನಾಗಿ ಅಮಲೇರಿದವನಂತಿದ್ದೇನೆ. ಹೌದು, ದ್ರಾಕ್ಷಾರಸಕ್ಕೆ ಸೋತವನ ಹಾಗಿದ್ದೇನೆ. |
10. ಸೀಮೆಯು ವ್ಯಭಿಚಾರಿಗಳಿಂದ ತುಂಬಿದೆ, ದೈವಶಾಪದ ನಿಮಿತ್ತ ದೇಶವು ದುಃಖಿಸುತ್ತದೆ.
ಅಡವಿಯ ಹುಲ್ಗಾವಲು ಬಾಡಿದೆ; ದೇಶದವರು ತ್ವರೆಪಡುವ ಮಾರ್ಗವು ದುರ್ಮಾರ್ಗ, ಅವನ ಶೌರ್ಯವು ಅನ್ಯಾಯಸಾಧಕ. |
11. ಪ್ರವಾದಿಗಳು ಭ್ರಷ್ಟರು, ಯಾಜಕರೂ ಭ್ರಷ್ಟರು.
ಹೌದು ನನ್ನ ಆಲಯದಲ್ಲಿಯೇ ಅವರ ಕೆಟ್ಟತನವನ್ನು ಕಂಡಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ. |
12. ಆದಕಾರಣ ಅವರ ಮಾರ್ಗವು ಕತ್ತಲಲ್ಲಿ ಜಾರಿಬೀಳುವ ಸ್ಥಳಗಳಿಗೆ ಸಮಾನವಾಗುವುದು.
ಅವರು ಅಟ್ಟಲ್ಪಟ್ಟು ಅಂಧಕಾರದಲ್ಲಿ ಬಿದ್ದುಹೋಗುವರು; ನಾನು ಅವರ ಮೇಲೆ ಕೇಡನ್ನು, ದಂಡನೆಯ ವರ್ಷದ ಕೇಡನ್ನು ಬರಮಾಡುವೆನು ಎಂದು ಯೆಹೋವನು ನುಡಿಯುತ್ತಾನೆ. |
13. ನಾನು ಸಮಾರ್ಯದ ಪ್ರವಾದಿಗಳಲ್ಲಿ ಅನೈತಿಕತೆಯನ್ನು ನೋಡಿದ್ದೇನೆ;
ಅವರು ಬಾಳ್ ದೇವತೆಯ ಆವೇಶದಿಂದ ಪ್ರವಾದಿಸಿ, ಇಸ್ರಾಯೇಲೆಂಬ ನನ್ನ ಜನರನ್ನು ಮಾರ್ಗ ತಪ್ಪಿಸಿದ್ದಾರೆ. |
14. ಯೆರೂಸಲೇಮಿನ ಪ್ರವಾದಿಗಳಲ್ಲಿಯೂ ನಾನು ಅಸಹ್ಯವನ್ನು ನೋಡಿದ್ದೇನೆ.
ಅವರು ವ್ಯಭಿಚಾರಮಾಡಿ, ಮೋಸದಲ್ಲಿ ನಡೆದು, ದುಷ್ಟರಲ್ಲಿ ಯಾರೂ ತನ್ನ ದುಷ್ಟತನವನ್ನು ಬಿಡದಂತೆ ಅವರ ಕೈಗಳನ್ನು ಬಲಪಡಿಸುತ್ತಿದ್ದಾರೆ. ಅವರೆಲ್ಲರು ಸೊದೋಮಿನಂತೆ, * ಸೊದೋಮಿನಂತೆ, ಸೊದೋಮ್ ಮತ್ತು ಗೊಮೋರವು ಅವರ ದುಷ್ಟತನದ ನಿಮಿತ್ತ ಕರ್ತನಿಂದ ನಾಶವಾದ ಪಟ್ಟಣಗಳಾಗಿವೆ (ಆದಿ 18:20; 19:24-25 ನೋಡಿರಿ). ಆ ಪಟ್ಟಣದ ನಿವಾಸಿಗಳು ಗೊಮೋರದ ಹಾಗೆ ನನಗೆ ಕಾಣುತ್ತಾರೆ. |
15. ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ, “ಆಹಾ, ನಾನು ಇವರಿಗೆ ಕಹಿಯಾದ ಆಹಾರ ಮತ್ತು ಪಾನಗಳನ್ನು ಕೊಡುವೆನು;
ಯೆರೂಸಲೇಮಿನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ” ಎಂದು ನುಡಿಯುತ್ತಾನೆ. |
16. {ಯೆಹೋವನು ಕೊಡುವ ಎಚ್ಚರಿಕೆ} PS ಸೇನಾಧೀಶ್ವರನಾದ ಯೆಹೋವನು, “ನಿಮಗೆ ಪ್ರವಾದಿಸುವ ಪ್ರವಾದಿಗಳ ಮಾತುಗಳನ್ನು ಕೇಳಬೇಡಿರಿ.
ಅವರು ನಿಮ್ಮಲ್ಲಿ ವ್ಯರ್ಥ ನಿರೀಕ್ಷೆಯನ್ನು ಹುಟ್ಟಿಸುತ್ತಾರೆ; ಯೆಹೋವನ ಬಾಯಿಂದ ಹೊರಟದ್ದನ್ನು ನುಡಿಯದೆ ಸ್ವಂತ ಮನಸ್ಸಿಗೆ ಬಂದದ್ದನ್ನೇ ಹೇಳುತ್ತಾರೆ. |
17. ನನ್ನನ್ನು ಅಸಡ್ಡೆಮಾಡುವವರಿಗೆ, ‘ನಿಮಗೆ ಶುಭವಾಗುವುದು ಎಂಬುದಾಗಿ ಯೆಹೋವನು ನುಡಿದಿದ್ದಾನೆ’ ಎಂದು ಹೇಳುತ್ತಲೇ ಇದ್ದಾರೆ.
ಸ್ವಂತ ಹೃದಯದ ಹಟದಂತೆ ನಡೆಯುವವರೆಲ್ಲರಿಗೂ, ‘ನಿಮಗೆ ಯಾವ ಕೇಡೂ ಸಂಭವಿಸದು’ ಎಂದು ನುಡಿಯುತ್ತಾರೆ. |
18. ಅವರಲ್ಲಿ ಯಾರು ಯೆಹೋವನ ಆಲೋಚನಾಸಭೆಯಲ್ಲಿ ನಿಂತು ಆತನ ಮಾತನ್ನು ಕೇಳಿ ತಿಳಿದುಕೊಂಡಿದ್ದಾರೆ?
ಯಾರು ಆತನ ನುಡಿಗೆ ಕಿವಿಗೊಟ್ಟು ಗಮನಿಸಿದ್ದಾರೆ? |
20. ಯೆಹೋವನು ತನ್ನ ಹೃದಯದ ಆಲೋಚನೆಗಳನ್ನು ಸಾಧಿಸಿ, ನೆರವೇರಿಸುವ ತನಕ ಆತನ ರೋಷವು ತಣ್ಣಗಾಗುವುದಿಲ್ಲ.
ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ. |
22. ಇವರು ಆಲೋಚನಾಸಭೆಯಲ್ಲಿ ನಿಂತಿದ್ದರೆ, ನನ್ನ ಮಾತುಗಳನ್ನು ನನ್ನ ಜನರ ಕಿವಿಗೆ ಮುಟ್ಟಿಸಿ,
ಅವರನ್ನು ಅವರ ದುರ್ಮಾರ್ಗದಿಂದಲೂ ಮತ್ತು ದುಷ್ಕೃತ್ಯಗಳಿಂದಲೂ ತಪ್ಪಿಸುತ್ತಿದ್ದರು” ಎಂದು ಹೇಳುತ್ತಾನೆ. |
24. ದೂರದಲ್ಲಿಯೂ ಇರುವವನಲ್ಲವೋ? ನನ್ನ ಕಣ್ಣಿಗೆ ಬೀಳದಂತೆ ಯಾರಾದರೂ ಗುಪ್ತಸ್ಥಳಗಳಲ್ಲಿ ತನ್ನನ್ನು ತಾನೇ ಮರೆಮಾಡಿಕೊಂಡಾನೇ?
ನಾನು ಭೂಮ್ಯಾಕಾಶಗಳಲ್ಲಿಯೂ ವ್ಯಾಪಿಸಿರುವವನಲ್ಲವೆ.” PEPS |
25. ನನಗೆ ಕನಸು ಬಿತ್ತು, ಕನಸು ಬಿತ್ತು ಎಂದು ನನ್ನ ಹೆಸರಿನಿಂದ ಸುಳ್ಳಾಗಿ ಪ್ರವಾದಿಸುವ ಪ್ರವಾದಿಗಳ ನುಡಿಯನ್ನು ಕೇಳಿದ್ದೇನೆ.
|
26. ಇವರ ಪೂರ್ವಿಕರು ಬಾಳನನ್ನು ಪೂಜಿಸಿ, ನನ್ನ ಹೆಸರನ್ನು ಮರೆತ ಪ್ರಕಾರ ಈ ಪ್ರವಾದಿಗಳು ಸ್ವಹೃದಯಕಲ್ಪಿತ ಮೋಸವನ್ನು ಪ್ರಕಟಿಸುತ್ತಾ, ತಾವು ಕನಸುಗಳ ಮೂಲಕ ನನ್ನ ಜನರು ನನ್ನ ಹೆಸರನ್ನು ಮರೆಯುವಂತೆ ಮಾಡಬೇಕೆಂದು ಆಲೋಚಿಸಿಕೊಂಡಿದ್ದಾರಲ್ಲಾ.
|
28. ಕನಸು ಕಂಡ ಪ್ರವಾದಿಯು ಕನಸನ್ನು ತಿಳಿಸಿದರೆ ತಿಳಿಸಲಿ. ನನ್ನ ಮಾತನ್ನು ಕೇಳಿದವನೋ ನನ್ನ ಮಾತನ್ನು ಯಥಾರ್ಥವಾಗಿ ನುಡಿಯಲಿ.
|
29. ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ, ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ. PS
|
30. {ಯೆಹೋವನ ಭಾರ ಎಂದು ನುಡಿಯುವ ಜನರಿಗೆ ಆಗುವ ಶಿಕ್ಷೆ} PS ಆಹಾ, ನನ್ನ ಮಾತುಗಳನ್ನು ತಮ್ಮ ತಮ್ಮ ನೆರೆಯವರಿಂದ ಕದ್ದುಕೊಳ್ಳುವ ಪ್ರವಾದಿಗಳಿಗೆ ನಾನು ವಿರುದ್ಧನಾಗಿದ್ದೇನೆ. ಇದು ಯೆಹೋವನ ನುಡಿ.
|
31. ಆಹಾ, ತಮ್ಮ ನಾಲಿಗೆಗಳನ್ನು ಚಾಚಿ “ಯೆಹೋವನು ನುಡಿಯುತ್ತಾನೆ” ಎಂದು ಹೇಳುವ ಪ್ರವಾದಿಗಳಿಗೆ ನಾನು ಪ್ರತಿಭಟಿಸುವವನಾಗಿದ್ದೇನೆ. ಇದು ಯೆಹೋವನ ನುಡಿ.
|
32. ಆಹಾ, ಸುಳ್ಳು ಕನಸುಗಳನ್ನು ಪ್ರಕಟಿಸಿ, ವಿವರಿಸಿ ತಮ್ಮ ಸುಳ್ಳು ಮಾತುಗಳಿಂದಲೂ, ನಿರ್ಲಕ್ಷದಿಂದಲೂ ನನ್ನ ಜನರಿಗೆ ದಾರಿತಪ್ಪಿಸುವ ಪ್ರವಾದಿಗಳನ್ನು ಎದುರಿಸುವವನಾಗಿದ್ದೇನೆ; ನಾನು ಅವರನ್ನು ಕಳುಹಿಸಲಿಲ್ಲ, ಆಜ್ಞಾಪಿಸಲಿಲ್ಲ. ಅವರಿಂದ ಈ ಜನರಿಗೆ ಯಾವ ಪ್ರಯೋಜನವೂ ಆಗುವುದಿಲ್ಲ. ಇದು ಯೆಹೋವನ ನುಡಿ. PEPS
|
33. ಪ್ರವಾದಿಯಾಗಲಿ ಅಥವಾ ಯಾಜಕನಾಗಲಿ ಈ ಜನರಲ್ಲಿ ಯಾರೇ ಆಗಲಿ “ಯೆಹೋವನು ದಯಪಾಲಿಸಿರುವ ವಾಕ್ಯದ ಆಧಾರವೇನು?” ಎಂದು ನಿನ್ನನ್ನು ಕೇಳಿದರೆ ನೀನು ಅವರಿಗೆ ಹೀಗೆ ಹೇಳು, “ಯೆಹೋವನು ಇಂತೆನ್ನುತ್ತಾನೆ, ನೀವೇ ನನ್ನ ಹೊರೆ, ನಾನು ನಿಮ್ಮನ್ನು ಎಸೆದುಬಿಡುವೆನು.
|
34. ಪ್ರವಾದಿ, ಯಾಜಕ, ಸಾಧಾರಣ ಜನ, ಇವರಲ್ಲಿ ಯಾರೂ, ‘ಯೆಹೋವನ ಹೊರೆ’ ಎಂದು ಉಚ್ಚರಿಸುವನೋ ಅವನನ್ನೂ ಅವನ ಮನೆಯವರನ್ನೂ ದಂಡಿಸುವೆನು.
|
35. ನೀವು ನಿಮ್ಮ ನಿಮ್ಮ ನೆರೆಹೊರೆಯವರನ್ನೂ ಮತ್ತು ಅಣ್ಣತಮ್ಮಂದಿರನ್ನೂ, ‘ಯೆಹೋವನ ಉತ್ತರವೇನು, ಯೆಹೋವನು ಏನು ನುಡಿದಿದ್ದಾನೆ?’
|
36. ಎಂದು ಕೇಳಬೇಕೇ ಹೊರತು ಯೆಹೋವನ ಹೊರೆ ಎಂಬ ಮಾತನ್ನು ಇನ್ನು ಎತ್ತಲೇ ಕೂಡದು. ಪ್ರತಿಯೊಬ್ಬನ ನುಡಿಯೇ ಅವನವನಿಗೆ ಹೊರೆಯಾಗಿರುವುದು; ಜೀವಸ್ವರೂಪನಾದ ದೇವರ ನುಡಿಗಳನ್ನು, ಹೌದು, ನಮ್ಮ ದೇವರೂ ಸೇನಾಧೀಶ್ವರನೂ ಆದ ಯೆಹೋವನ ನುಡಿಗಳನ್ನು ತಲೆ ಕೆಳಗೆ ಮಾಡಿದ್ದೀರಷ್ಟೆ.
|
38. ಒಂದು ವೇಳೆ ನೀವು ‘ಯೆಹೋವನ ಹೊರೆ’ ಎಂದು ಉಚ್ಚರಿಸಿದರೆ ಯೆಹೋವನು ಇಂತೆನ್ನುತ್ತಾನೆ, ‘ನಾನು ನಿಮಗೆ ಯೆಹೋವನ ಹೊರೆ ಎಂಬ ಮಾತನ್ನು ಎತ್ತಲೇ ಕೂಡದು ಎಂದು ಹೇಳಿಕಳುಹಿಸಿರುವಲ್ಲಿ ನೀವು ಯೆಹೋವನ ಹೊರೆ ಎಂದು ಹೇಳಿದ ಕಾರಣ ಇಗೋ,
|
39. ಖಂಡಿತವಾಗಿ ನಿಮ್ಮನ್ನೂ ನಾನು ನಿಮಗೆ ಮತ್ತು ನಿಮ್ಮ ಪೂರ್ವಿಕರಿಗೆ ದಯಪಾಲಿಸಿದ ಪಟ್ಟಣವನ್ನೂ ಹೊರೆಯೆಂದು ಎತ್ತಿ ನನ್ನೆದುರಿನಿಂದ ಎಸೆದುಬಿಡುವೆನು.
|