1. {ಯೆರೆಮೀಯನು ಹನನ್ಯನನ್ನು ಗದರಿಸಿದ್ದು} PS ಅದೇ ವರ್ಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರ್ಷದ ಐದನೆಯ ತಿಂಗಳಲ್ಲಿ, ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು,
|
2. “ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ‘ಬಾಬೆಲಿನ ಅರಸರು ನಿಮಗೆ ಹೇರಿರುವ ನೊಗವನ್ನು ಮುರಿದುಬಿಟ್ಟಿದ್ದೇನೆ.
|
3. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಈ ಸ್ಥಳದಿಂದ ತೆಗೆದು ಬಾಬಿಲೋನಿಗೆ ಒಯ್ದ ಯೆಹೋವನ ಆಲಯದ ಸಕಲ ಉಪಕರಣಗಳನ್ನು ಎರಡು ವರ್ಷಗಳೊಳಗಾಗಿ ನಾನು ಪುನಃ ಈ ಸ್ಥಳಕ್ಕೆ ಸೇರಿಸುವೆನು. PEPS
|
4. “ ‘ಮತ್ತು ಯೆಹೋಯಾಕೀಮನ ಮಗನೂ ಯೆಹೂದದ ಅರಸನೂ ಆದ ಯೆಕೊನ್ಯನನ್ನೂ ಬಾಬಿಲೋನಿಗೆ ಸೆರೆಹೋದ ಎಲ್ಲಾ ಯೆಹೂದ್ಯರನ್ನೂ ಈ ಸ್ಥಳಕ್ಕೆ ತಿರುಗಿ ಬರಮಾಡುವೆನು. ಬಾಬೆಲಿನ ಅರಸನು ನಿಮಗೆ ಹೇರಿರುವ ನೊಗವನ್ನು ನಾನು ಮುರಿದುಬಿಡುವೆನು. ಇದು ಯೆಹೋವನ ನುಡಿ.’ ” PEPS
|
5. ಆಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಆಲಯದೊಳಗೆ ನಿಂತಿದ್ದ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ಪ್ರವಾದಿಯಾದ ಹನನ್ಯನಿಗೆ,
|
6. “ಹಾಗೆಯೇ ಆಗಲಿ, ಯೆಹೋವನು ಹಾಗೆಯೇ ಮಾಡಲಿ! ಯೆಹೋವನು ತನ್ನ ಆಲಯದ ಉಪಕರಣಗಳನ್ನೂ ಸೆರೆಹೋದವರೆಲ್ಲರನ್ನೂ ಬಾಬೆಲಿನಿಂದ ಈ ಸ್ಥಳಕ್ಕೆ ಪುನಃ ಬರಮಾಡಿ ನೀನು ನುಡಿದ ಮಾತುಗಳನ್ನು ನೆರವೇರಿಸಲಿ!
|
8. ನನಗೂ ನಿನಗೂ ಮುಂಚೆ ಪುರಾತನ ಕಾಲದಿಂದಿದ್ದ ಪ್ರವಾದಿಗಳು ಅನೇಕ ದೇಶಗಳಿಗೂ ದೊಡ್ಡ ದೊಡ್ಡ ರಾಜ್ಯಗಳಿಗೂ ಯುದ್ಧ, ವಿಪತ್ತು, ವ್ಯಾಧಿ, ಇವುಗಳ ವಿಷಯವಾಗಿ ಸಾರುತ್ತಿದ್ದರಷ್ಟೆ.
|
9. ಹಿತ ಸಮಾಚಾರವನ್ನು ಸಾರುವ ಪ್ರವಾದಿಯೋ ಯೆಹೋವನಿಂದ ನಿಜವಾಗಿ ಕಳುಹಿಸಲ್ಪಟ್ಟವನೆಂದು ಅವನ ಮಾತು ಕೈಗೂಡಿದ ಮೇಲೇ ತಿಳಿಯತಕ್ಕದ್ದು” ಎಂದು ಹೇಳಿದನು. PEPS
|
10. ಆಗ ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದುಹಾಕಿ ಎಲ್ಲಾ ಜನರ ಎದುರಿಗೆ,
|
11. “ಯೆಹೋವನು ಹೇಳಿರುವುದೇನೆಂದರೆ, ನಾನು ಹೀಗೆಯೇ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ನೊಗವನ್ನು ಎರಡು ವರ್ಷದೊಳಗಾಗಿ ಸಮಸ್ತ ಜನಾಂಗಗಳ ಹೆಗಲಿನಿಂದ ತೆಗೆದು ಮುರಿದು ಹಾಕುವೆನು” ಎಂದು ಹೇಳಿದನು. ಇದನ್ನು ಕೇಳಿ ಪ್ರವಾದಿಯಾದ ಯೆರೆಮೀಯನು ಅಲ್ಲಿಂದ ಹೊರಟುಹೋದನು. PEPS
|
12. ಪ್ರವಾದಿಯಾದ ಹನನ್ಯನು ಪ್ರವಾದಿಯಾದ ಯೆರೆಮೀಯನ ಹೆಗಲಿನಿಂದ ನೊಗವನ್ನು ತೆಗೆದು ಮುರಿದ ಮೇಲೆ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.
|
13. “ನೀನು ಹೋಗಿ ಹನನ್ಯನಿಗೆ, ಯೆಹೋವನು ಹೀಗೆ ಹೇಳುತ್ತಾನೆ, ‘ನೀನು ಮರದ ನೊಗಗಳನ್ನು ಮುರಿದುಬಿಟ್ಟೆ, ಅವುಗಳಿಗೆ ಬದಲಾಗಿ
|
14. ಕಬ್ಬಿಣದ ನೊಗಗಳನ್ನು ಮಾಡು, ಏಕೆಂದರೆ ಇಸ್ರಾಯೇಲರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, ಈ ಎಲ್ಲಾ ಜನಾಂಗಗಳು ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನನ್ನು ಸೇವಿಸಲೆಂದು ನಾನು ಅವುಗಳ ಹೆಗಲಿಗೆ ಕಬ್ಬಿಣದ ನೊಗವನ್ನು ಹೇರಿದ್ದೇನೆ, ಅವು ಅವನನ್ನು ಪೂಜಿಸುವವು; ಇದಲ್ಲದೆ ಭೂಜಂತುಗಳನ್ನೂ ಅವನಿಗೆ ಕೊಟ್ಟಿದ್ದೇನೆ’ ಎಂದು ಹೇಳು” ಎಂಬುದೇ.
|
15. ಆಗ ಪ್ರವಾದಿಯಾದ ಯೆರೆಮೀಯನು ಪ್ರವಾದಿಯಾದ ಹನನ್ಯನಿಗೆ, “ಹನನ್ಯನೇ, ಕೇಳು, ಯೆಹೋವನು ನಿನ್ನನ್ನು ಕಳುಹಿಸಲಿಲ್ಲ; ಈ ಜನರು ಸುಳ್ಳನ್ನು ನಂಬುವಂತೆ ಮಾಡುತ್ತೀ.
|
16. ಆದಕಾರಣ ಯೆಹೋವನು ಇಂತೆನ್ನುತ್ತಾನೆ, ಇಗೋ, ನಾನು ನಿನ್ನನ್ನು ಭೂಮಿಯ ಮೇಲಿಂದ ತೊಲಗಿಸುವೆನು; ನೀನು ಯೆಹೋವನಾದ ನನ್ನ ವಿರುದ್ಧವಾಗಿ ದ್ರೋಹದ ಮಾತನ್ನು ಆಡಿದ್ದರಿಂದ ಇದೇ ವರ್ಷ ಸಾಯುವಿ” ಎಂದು ಹೇಳಿದನು.
|