3. ಇಗೋ, ನಾನು ನನ್ನ ಜನರಾದ ಇಸ್ರಾಯೇಲರನ್ನು ಮತ್ತು ಯೆಹೂದ್ಯರನ್ನು ಅವರ ದುರವಸ್ಥೆಯಿಂದ ತಪ್ಪಿಸುವ ದಿನಗಳು ಬರುವವು. ಆಗ ನಾನು ಅವರನ್ನು ಅವರ ಪೂರ್ವಿಕರಿಗೆ ಅನುಗ್ರಹಿಸಿದ ದೇಶಕ್ಕೆ ಪುನಃ ಬರಮಾಡುವೆನು. ಅವರು ಅದನ್ನು ಅನುಭವಿಸುವರು. ಇದು ಯೆಹೋವನ ನುಡಿ” ಎಂಬುದೇ. PS
|
4. {ಇಸ್ರಾಯೇಲಿಗೆ ಸಂಭವಿಸುವ ಬಾಧೆಯೂ ಉದ್ಧಾರವೂ} PS ಯೆಹೋವನು ಇಸ್ರಾಯೇಲಿನ ಮತ್ತು ಯೆಹೂದದ ವಿಷಯವಾಗಿ ಈ ಮಾತುಗಳನ್ನು ಹೇಳಿದನು,
|
6. ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವುದುಂಟೆ?
ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವುದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವುದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ? |
7. ಅಯ್ಯೋ, ಆ ದಿನವು ಘೋರವಾದದ್ದು, ಅಂಥ ದಿನ ಮತ್ತೊಂದಿಲ್ಲ,
ಅದು ಯಾಕೋಬರಿಗೆ ಇಕ್ಕಟ್ಟಿನ ದಿನ; ಆದರೂ ಅವರು ಅದರಿಂದ ಪಾರಾಗುವರು.” PEPS |
8. ಸೇನಾಧೀಶ್ವರನಾದ ಯೆಹೋವನು ಇಂತೆನ್ನುತ್ತಾನೆ, “ನಾನು ಆ ದಿನದಲ್ಲಿ ಅವರ ಮೇಲೆ ಹೇರಿದ ನೊಗವನ್ನು ಅವರ ಹೆಗಲಿನಿಂದ ಮುರಿದುಬಿಟ್ಟು, ಕಣ್ಣಿಗಳನ್ನು ಕಿತ್ತುಹಾಕುವೆನು; ಇನ್ನು ಅನ್ಯರು ಅವರನ್ನು ಅಡಿಯಾಳಾಗಿ ಮಾಡಿಕೊಳ್ಳರು.
|
10. ಯೆಹೋವನು ಇಂತೆನ್ನುತ್ತಾನೆ, “ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ!
ಇಗೋ ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು. ಯಾಕೋಬನು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.” |
11. ಯೆಹೋವನು ಇಂತೆನ್ನುತ್ತಾನೆ, “ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ;
ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಓಡಿಸಿಬಿಟ್ಟು ಚದರಿಸಿದೆನೋ, ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು. ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ಮಿತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವುದಿಲ್ಲ.” |
12. {ಹಾಳಾಗಿ ಹೋದ ಚೀಯೋನನ್ನು ಯೆಹೋವನು ಉನ್ನತಿಗೆ ತರುವುದು} PS ಯೆಹೋವನು ಇಂತೆನ್ನುತ್ತಾನೆ, “ನಿನ್ನ ಗಾಯವು ಗುಣಹೊಂದುವುದಿಲ್ಲ, ನಿನ್ನ ಬಾಸುಂಡೆಯು ಘೋರವಾಗಿದೆ.
|
14. ನಿನ್ನೊಂದಿಗೆ ವ್ಯಭಿಚಾರದಲ್ಲಿ ತೊಡಗಿದವರು ಯಾರೂ ನಿನ್ನನ್ನು ಹುಡುಕುವುದಿಲ್ಲ, ಮರೆತುಬಿಟ್ಟರು.
ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಾನು ಶತ್ರುವಾಗಿ ನಿನ್ನನ್ನು ಹೊಡೆದೆನು, ಕ್ರೂರನಾಗಿ ದಂಡಿಸಿದೆನು. |
15. ಅಯ್ಯೋ, ನೋವು ನಿಲ್ಲದು ಎಂದು ನಿನ್ನ ಪೆಟ್ಟಿಗಾಗಿ ಏಕೆ ಅರಚಿಕೊಳ್ಳುತ್ತೀ?
ನಿನ್ನ ಅಪರಾಧವು ಹೆಚ್ಚಿ ಪಾಪಗಳು ಬಹಳವಾದುದರಿಂದ ನಿನಗೆ ಇದನ್ನೆಲ್ಲಾ ಮಾಡಿದೆನು. |
16. ಹೀಗಿರಲು ನಿನ್ನನ್ನು ನುಂಗುವವರೆಲ್ಲರು ನುಂಗಲ್ಪಡುವರು; ನಿನ್ನ ಶತ್ರುಗಳಲ್ಲಿ ಒಬ್ಬನೂ ತಪ್ಪದೆ ಸೆರೆಗೆ ಹೋಗುವರು.
ನಿನ್ನನ್ನು ಸೂರೆಮಾಡುವವರು ಸೂರೆಯಾಗುವರು, ನಿನ್ನನ್ನು ಕೊಳ್ಳೆ ಹೊಡೆಯುವವರನ್ನು ಕೊಳ್ಳೆಗೆ ಈಡುಮಾಡುವೆನು.” |
17. ಯೆಹೋವನು ಇಂತೆನ್ನುತ್ತಾನೆ, “ಇಗೋ, ‘ಇದು ಚೀಯೋನ್, ಯಾರಿಗೂ ಬೇಡವಾಗಿರುವ ನಗರ’ ಎಂದು ಜನರು ಹೇಳಿ,
ನಿನ್ನನ್ನು ಭ್ರಷ್ಟಳೆಂದದ್ದನ್ನು ನಾನು ಸಹಿಸಲಾರದೆ, ನಿನ್ನನ್ನು ಗುಣಪಡಿಸಿ ನಿನ್ನ ಬಾಸುಂಡೆಗಳನ್ನು ವಾಸಿಮಾಡುವೆನು.” |
18. ಯೆಹೋವನು ಹೀಗೆನ್ನುತ್ತಾನೆ, “ಆಹಾ, ನಾನು ಯಾಕೋಬಿನ ಮನೆಗಳ ದುರವಸ್ಥೆಯನ್ನು ತಪ್ಪಿಸಿ, ಅದರ ನಿವಾಸಗಳನ್ನು ಕರುಣಿಸುವೆನು.
ಪಟ್ಟಣವು ತನ್ನ ಹಾಳುದಿಬ್ಬದ ಮೇಲೆ ಪುನಃ ಕಟ್ಟಲ್ಪಡುವುದು, ಅರಮನೆಯು ತಾನಿದ್ದ ಸ್ಥಳದಲ್ಲೇ ನೆಲೆಯಾಗಿರುವುದು. |
19. ಅವುಗಳೊಳಗಿಂದ ಸ್ತೋತ್ರವೂ ಮತ್ತು ಸಂತೋಷದಿಂದ ನಲಿಯುವ ಧ್ವನಿಯೂ ಕೇಳಿಸುವವು.
ನಾನು ಆ ಜನರನ್ನು ಹೆಚ್ಚಿಸುವೆನು, ಅವರು ಇನ್ನು ಅಲ್ಪರಾಗಿರರು, ಅವರನ್ನು ಘನಪಡಿಸುವೆನು, ಅವರು ಇನ್ನು ಹೀನರಾಗಿರರು. |
20. ಅವರ ಸಂತಾನವು ಪೂರ್ವದ ಸ್ಥಿತಿಯನ್ನು ಹೊಂದುವುದು,
ಅವರ ಸಮಾಜವು ನನ್ನ ಮುಂದೆ ನೆಲೆಯಾಗಿರುವುದು, ಅವರನ್ನು ಬಾಧಿಸುವವರನ್ನೆಲ್ಲಾ ದಂಡಿಸುವೆನು. |
21. ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು.
ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು. ನನ್ನನ್ನು ಸಮೀಪಿಸುವುದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.” |
23. {ಯೆಹೋವನ ರೋಷವೆಂಬ ಬಿರುಗಾಳಿ} PS ಆಹಾ, ಯೆಹೋವನ ರೋಷವೆಂಬ ಬಿರುಗಾಳಿಯು, ಬಡಿದುಕೊಂಡು ಹೋಗುವ ಗಾಳಿಯು ಹೊರಟಿದೆ;
ಅದು ದುಷ್ಟರ ತಲೆಯ ಮೇಲೆ ಹೊಡೆಯುವುದು. |
24. ಯೆಹೋವನು ತನ್ನ ಹೃದಯಾಲೋಚನೆಯನ್ನು ಕಾರ್ಯಗತಗೊಳಿಸಿ, ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು,
ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಗ್ರಹಿಸುವಿರಿ. PE |