1. {ಯೆರೆಮೀಯನು ಚಿದ್ಕೀಯನನ್ನು ಎಚ್ಚರಿಸಿದ್ದು} PS ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು, ಅವನ ಪೂರ್ಣಸೈನ್ಯವು, ಅವನ ಕೈಕೆಳಗಿನ ಸಮಸ್ತ ಭೂರಾಜ್ಯಗಳು, ಸಕಲ ಜನಗಳು, ಇವೆಲ್ಲಾ ಯೆರೂಸಲೇಮಿಗೂ ಅದಕ್ಕೆ ಸೇರಿದ ಎಲ್ಲಾ ಊರುಗಳಿಗೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಯೆಹೋವನು ಯೆರೆಮೀಯನಿಗೆ ಈ ಮಾತನ್ನು ದಯಪಾಲಿಸಿದನು.
|
2. ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, “ನೀನು ಯೆಹೂದದ ಅರಸನಾದ ಚಿದ್ಕೀಯನ ಬಳಿಗೆ ಹೋಗಿ ಅವನಿಗೆ ಹೀಗೆ ಹೇಳು, ‘ಯೆಹೋವನ ಮಾತನ್ನು ಆಲಿಸು, ಇಗೋ, ನಾನು ಈ ಪಟ್ಟಣವನ್ನು ಬಾಬೆಲಿನ ಅರಸನ ಕೈವಶಮಾಡುವೆನು, ಅವನು ಅದನ್ನು ಬೆಂಕಿಯಿಂದ ಸುಟ್ಟುಬಿಡುವನು.
|
3. ನೀನು ಅವನ ಕೈಯಿಂದ ತಪ್ಪಿಸಿಕೊಳ್ಳಲಾರದೆ ಹಿಡಿಯಲ್ಪಟ್ಟು ಅವನ ವಶವಾಗುವಿ; ಬಾಬೆಲಿನ ಅರಸನ ಸಮಕ್ಷಮದಲ್ಲಿ ನಿಲ್ಲುವಿ; ಅವನು ನಿನ್ನ ಸಂಗಡ ಎದುರೆದುರಾಗಿ ಮಾತನಾಡುವನು; ನೀನು ಬಾಬಿಲೋನಿಗೆ ಗಡಿ ಪಾರಾಗುವಿ.
|
4. ಆದರೂ ಯೆಹೂದದ ಅರಸನಾದ ಚಿದ್ಕೀಯನೇ, ಯೆಹೋವನ ಮಾತನ್ನು ಕೈಗೊಳ್ಳು; ಯೆಹೋವನು ನಿನ್ನ ವಿಷಯವಾಗಿ ಇಂತೆನ್ನುತ್ತಾನೆ, ನೀನು ಕೇಳಿ ಕೈಕೊಂಡರೆ ಖಡ್ಗದಿಂದ ಹತನಾಗುವುದಿಲ್ಲ; ಸುಖವಾಗಿ ಸಾಯುವಿ.
|
5. ನಿನಗಿಂತ ಮುಂಚಿನ ನಿನ್ನ ಪೂರ್ವಿಕರಾದ ಅರಸರಿಗೆ ಧೂಪಹಾಕಿದ ಪ್ರಕಾರ ನಿನಗೂ ಹಾಕುವರು; ಅಯ್ಯೋ, ಪ್ರಭುವೇ ಎಂದು ನಿನಗಾಗಿ ಗೋಳಾಡುವರು; ನಾನೇ ನುಡಿದಿದ್ದೇನೆ ಎಂದು ಯೆಹೋವನು ಅನ್ನುತ್ತಾನೆ’ ” ಎಂದನು. PEPS
|
7. ಬಾಬೆಲಿನ ಅರಸನ ಸೈನ್ಯವು ಯೆರೂಸಲೇಮಿಗೂ, ಯೆಹೂದದೊಳಗೆ ಕೋಟೆಕೊತ್ತಲದ ಪಟ್ಟಣಗಳಾಗಿ ಉಳಿದಿದ್ದ ಲಾಕೀಷಿಗೂ ಮತ್ತು ಅಜೇಕಕ್ಕೂ ವಿರುದ್ಧವಾಗಿ ಯುದ್ಧಮಾಡುತ್ತಿದ್ದಾಗ ಹೇಳಿದನು. PS
|
8. {ಯೆರೆಮೀಯನು ಯೆರೂಸಲೇಮಿನವರನ್ನು ಖಂಡಿಸಿದ್ದು} PS ಆ ಮೇಲೆ ಯೆಹೋವನು ಯೆರೆಮೀಯನಿಗೆ ಒಂದು ಮಾತನ್ನು ದಯಪಾಲಿಸಿದನು. ಇಷ್ಟರೊಳಗೆ ಅರಸನಾದ ಚಿದ್ಕೀಯನು ಯೆರೂಸಲೇಮಿನವರೆಲ್ಲರೊಂದಿಗೆ ಸೇರಿ,
|
9. “ನಮ್ಮಲ್ಲಿ ಪ್ರತಿಯೊಬ್ಬನು ತನ್ನ ದಾಸ ದಾಸಿಯರೊಳಗೆ ಇಬ್ರಿಯರನ್ನು ಬಿಡುಗಡೆಮಾಡುವನು; ಯಾರೂ ತನ್ನ ಸಹೋದರನಾದ ಯೆಹೂದ್ಯನಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ” ಎಂದು ಅವರಿಗೆ ವಿಮೋಚನೆಯನ್ನು ಪ್ರಕಟಿಸುವ ಒಡಂಬಡಿಕೆಯನ್ನು ಮಾಡಿಕೊಂಡಿದ್ದನು.
|
10. ಆಗ ತಾವು ತಮ್ಮ ತಮ್ಮ ದಾಸ, ದಾಸಿಯರನ್ನು ಬಿಡುಗಡೆಮಾಡಿ ಅವರಿಂದ ಇನ್ನು ಗುಲಾಮತನ ಮಾಡಿಸಿಕೊಳ್ಳುವುದಿಲ್ಲ ಎಂದು ಒಡಂಬಡಿಕೆಗೆ ಒಪ್ಪಿಕೊಂಡ ಸಕಲ ಪ್ರಧಾನರೂ ಮತ್ತು ಸಮಸ್ತ ಪ್ರಜೆಗಳೂ ಅದರಂತೆ ನಡೆದು ಅವರನ್ನು ವಿಮೋಚಿಸಿದರು.
|
11. ಆದರೆ ಸ್ವಲ್ಪ ಸಮಯವಾದ ಮೇಲೆ ಮನಸ್ಸನ್ನು ಬೇರೆ ಮಾಡಿಕೊಂಡು ತಾವು ಬಿಟ್ಟಿದ್ದವರನ್ನು ಪುನಃ ದಾಸ, ದಾಸಿಯರನ್ನಾಗಿ ಅಧೀನಮಾಡಿಕೊಂಡರು.
|
13. “ಇಸ್ರಾಯೇಲರ ದೇವರಾದ ಯೆಹೋವನು ಇಂತೆನ್ನುತ್ತಾನೆ, ಐಗುಪ್ತದೇಶದಲ್ಲಿ ದಾಸರಾಗಿದ್ದ ನಿಮ್ಮ ಪೂರ್ವಿಕರನ್ನು ನಾನು ಅಲ್ಲಿಂದ ಕರೆತಂದಾಗ
|
14. ‘ನಿಮ್ಮಲ್ಲಿ ಪ್ರತಿಯೊಬ್ಬನು ನಿಮಗೆ ಆರು ವರ್ಷಗಳ ಕಾಲ ದಾಸನಾಗಿದ್ದು ನಿಮಗೆ ಸೇವೆ ಮಾಡಿದ ಇಬ್ರಿಯನಾದ ಪ್ರತಿಯೊಬ್ಬ ಸಹೋದರನನ್ನು ಏಳನೆಯ ವರ್ಷದಲ್ಲಿ ಸ್ವತಂತ್ರನನ್ನಾಗಿ ಬಿಟ್ಟುಬಿಡಬೇಕು’ ಎಂದು ವಿಧಿಸಿ, ಅವರೊಂದಿಗೆ ಒಡಂಬಡಿಕೆ ಮಾಡಿಕೊಂಡೆನಷ್ಟೆ. ಆದರೆ ನಿಮ್ಮ ಪೂರ್ವಿಕರು ನನ್ನ ಮಾತಿಗೆ ಕಿವಿಗೊಡಲಿಲ್ಲ, ಕೇಳಲಿಲ್ಲ.
|
15. ನೀವೋ ಈಗಲೇ ಮನಮರುಗಿ ನಿಮ್ಮ ನಿಮ್ಮ ನೆರೆಹೊರೆಯವರಿಗೆ ವಿಮೋಚನೆಯನ್ನು ಪ್ರಕಟಿಸಿ ನನ್ನ ಚಿತ್ತಾನುಸಾರವಾಗಿ ನಡೆದಿರಿ. ನನ್ನ ಹೆಸರಿನಿಂದ ಖ್ಯಾತಿಗೊಂಡಿರುವ ಆಲಯದಲ್ಲಿ ನನ್ನ ಮುಂದೆ ಒಡಂಬಡಿಕೆ ಮಾಡಿಕೊಂಡಿರಿ.
|
16. ಆ ಮೇಲೆ ನೀವು ಮನಸ್ಸನ್ನು ಬೇರೆ ಮಾಡಿಕೊಂಡಿರಿ; ಸ್ವತಂತ್ರರನ್ನಾಗಿ ಬಿಟ್ಟಿದ್ದವರನ್ನು ಪುನಃ ದಾಸದಾಸಿಯರನ್ನಾಗಿ ಸೇರಿಸಿಕೊಂಡು ಅಧೀನಮಾಡಿಕೊಂಡು ನನ್ನ ನಾಮವನ್ನು ಅಪಕೀರ್ತಿಗೆ ಗುರಿಮಾಡಿದಿರಿ” ಎಂಬುದೇ. PEPS
|
17. ಆದಕಾರಣ ಯೆಹೋವನು, “ನೀವು ನನ್ನನ್ನು ಕೇಳಲಿಲ್ಲ, ನಿಮ್ಮ ನಿಮ್ಮ ಸಹೋದರರಿಗೂ, ನೆರೆಹೊರೆಯವರಿಗೂ ಬಿಡುಗಡೆಯನ್ನು ಪ್ರಕಟಿಸಲಿಲ್ಲ; ಇದೇ ಯೆಹೋವನ ನುಡಿ. ಇಗೋ, ನಾನು ನಿಮಗೆ ಬಿಡುಗಡೆಯನ್ನು ಪ್ರಕಟಿಸುತ್ತೇನೆ; ನಿಮ್ಮನ್ನು ಖಡ್ಗ, ವ್ಯಾಧಿ ಮತ್ತು ಕ್ಷಾಮಗಳಿಗೆ ಗುರಿಮಾಡುತ್ತೇನೆ; ನಿಮ್ಮನ್ನು ಲೋಕದ ಸಮಸ್ತ ರಾಜ್ಯಗಳಿಗೆ ಭಯಾಸ್ಪದವಾಗುವಂತೆ ಮಾಡುವೆನು.
|
18. ನನ್ನ ನಿಬಂಧನೆಗಳನ್ನು ಕೈಗೊಳ್ಳದೆ, ನನ್ನ ಮುಂದೆ ಮಾಡಿದ ಒಡಂಬಡಿಕೆಯನ್ನು ಮೀರಿದವರಿಗೆ ಕರುವನ್ನು ಸೀಳಿ ಅದರ ಹೋಳುಗಳ ನಡುವೆ ಹಾದುಹೋಗುವ ಗತಿ ಬರುವಂತೆ ಮಾಡುವೆನು.
|
20. ಕರುವಿನ ಹೋಳುಗಳ ನಡುವೆ ಹಾದುಹೋದ ದೇಶದ ಸಕಲ ಜನರು, ಇವರೆಲ್ಲರನ್ನೂ ಇವರ ಪ್ರಾಣವನ್ನು ಹುಡುಕುವ ಶತ್ರುಗಳ ಕೈಗೆ ಕೊಡುವೆನು; ಇವರ ಹೆಣಗಳು ಆಕಾಶ ಪಕ್ಷಿಗಳಿಗೂ, ಭೂಜಂತುಗಳಿಗೂ ಆಹಾರವಾಗುವವು.
|
21. ಯೆಹೂದದ ಅರಸನಾದ ಚಿದ್ಕೀಯನನ್ನೂ ಮತ್ತು ಅವನ ಪ್ರಧಾನರನ್ನೂ ಅವರ ಪ್ರಾಣ ಹುಡುಕುವ ಶತ್ರುಗಳ ಕೈಗೆ ಅಂದರೆ ನಿಮ್ಮನ್ನು ಬಿಟ್ಟುಹೋಗಿರುವ ಬಾಬೆಲಿನ ಅರಸನ ಕೈಗೆ ಕೊಡುವೆನು” ಎನ್ನುತ್ತಾನೆ.
|
22. ಯೆಹೋವನು, “ಇಗೋ, ನಾನು ಅಪ್ಪಣೆಕೊಟ್ಟು ಆ ಶತ್ರುಗಳು ಈ ಪಟ್ಟಣಕ್ಕೆ ಹಿಂದಿರುಗುವಂತೆ ಮಾಡುವೆನು; ಅವರು ಅದಕ್ಕೆ ವಿರುದ್ಧವಾಗಿ ಯುದ್ಧಮಾಡಿ ಅದನ್ನು ಆಕ್ರಮಿಸಿ ಬೆಂಕಿಯಿಂದ ಸುಟ್ಟುಬಿಡುವರು; ನಾನು ಯೆಹೂದದ ಪಟ್ಟಣಗಳನ್ನು ಜನವಿಲ್ಲದ ಬೀಳುಭೂಮಿಯನ್ನಾಗಿ ಮಾಡುವೆನು” ಎಂದು ನುಡಿಯುತ್ತಾನೆ. PE
|