1. {ಎಬೆದ್ಮೆಲೆಕನು ಯೆರೆಮೀಯನನ್ನು ಬಾವಿಯಿಂದ ರಕ್ಷಿಸಿದ್ದು} PS ಮತ್ತಾನನ ಮಗನಾದ ಶೆಫತ್ಯ, ಪಷ್ಹೂರನ ಮಗನಾದ ಗೆದಲ್ಯ, ಸೆಲೆಮ್ಯನ ಮಗನಾದ ಯೂಕಲ, ಮಲ್ಕೀಯನ ಮಗನಾದ ಪಷ್ಹೂರ ಇವರು ಯೆರೆಮೀಯನ ಮಾತುಗಳನ್ನು ಕೇಳುತ್ತಿದ್ದರು.
|
2. ಯೆರೆಮೀಯನು ಸಮಸ್ತ ಜನರಿಗೆ, “ಯೆಹೋವನು ಇಂತೆನ್ನುತ್ತಾನೆ, ಪಟ್ಟಣದಲ್ಲಿ ನಿಲ್ಲುವವನು ಖಡ್ಗ, ಕ್ಷಾಮ ಮತ್ತು ವ್ಯಾಧಿಗಳಿಂದ ಸಾಯುವನು; ಪಟ್ಟಣವನ್ನು ಬಿಟ್ಟುಹೋಗಿ ಕಸ್ದೀಯರನ್ನು ಮೊರೆಹೋಗುವವನು ಬದುಕುವನು, ತನ್ನ ಪ್ರಾಣವೊಂದನ್ನೇ ಉಳಿಸಿಕೊಂಡು ಹೋಗಿ ಬದುಕುವನು.
|
4. ಆ ಮೇಲೆ ಆ ಪ್ರಧಾನರು ಅರಸನಿಗೆ, “ಒಡೆಯಾ, ಇವನಿಗೆ ಮರಣ ದಂಡನೆಯಾಗಬೇಕು. ಇವನು ಪಟ್ಟಣದಲ್ಲಿ ಉಳಿದಿರುವ ಯೋಧರಿಗೂ ಸಕಲ ಜನರಿಗೂ ಇಂಥಾ ಮಾತುಗಳನ್ನು ಸಾರುತ್ತಾ ಅವರನ್ನು ಜೋಲುಗೈಯವರನ್ನಾಗಿ ಮಾಡುತ್ತಾನೆ; ಈ ಜನರ ಕ್ಷೇಮವನ್ನಲ್ಲ, ಹಾನಿಯನ್ನೇ ಹಾರೈಸುತ್ತಾನೆ” ಎಂದು ಹೇಳಿದರು.
|
5. ಅದಕ್ಕೆ ಅರಸನಾದ ಚಿದ್ಕೀಯನು, “ಇಗೋ, ಯೆರೆಮೀಯನು ನಿಮ್ಮ ಕೈಯಲ್ಲಿದ್ದಾನೆ; ಅರಸನು ನಿಮಗೆ ಅಡ್ಡಬಂದು ಏನೂ ಮಾಡಬಲ್ಲವನಲ್ಲ” ಎಂದು ಹೇಳಿದನು.
|
6. ಆಗ ಅವರು ಯೆರೆಮೀಯನನ್ನು ಹಿಡಿದು ಕಾರಾಗೃಹದ ಅಂಗಳದಲ್ಲಿ ರಾಜವಂಶೀಯನಾದ ಮಲ್ಕೀಯನ ಬಾವಿಯೊಳಗೆ ಹಗ್ಗಗಳಿಂದಿಳಿಸಿ ಹಾಕಿಬಿಟ್ಟರು. ಆ ಬಾವಿಯಲ್ಲಿ ನೀರಿರಲಿಲ್ಲ, ಕೆಸರಿತ್ತು; ಅದರೊಳಗೆ ಯೆರೆಮೀಯನು ಸಿಕ್ಕಿಕೊಂಡನು.
|
9. “ಎನ್ನೊಡೆಯನೇ, ಅರಸನೇ, ಇವರು ಪ್ರವಾದಿಯಾದ ಯೆರೆಮೀಯನಿಗೆ ಮಾಡಿದ್ದೆಲ್ಲಾ ದುಷ್ಟಕಾರ್ಯವೇ ಸರಿ, ಅವನನ್ನು ಬಾವಿಯಲ್ಲಿ ಹಾಕಿದ್ದಾರೆ; ಅವನು ಆಹಾರವಿಲ್ಲದೆ ಬಿದ್ದಲ್ಲೇ ಸಾಯುವುದು ಖಂಡಿತ, ಪಟ್ಟಣದಲ್ಲಿ ಇನ್ನು ರೊಟ್ಟಿಯಿಲ್ಲವಲ್ಲಾ” ಎಂದು ಅರಿಕೆಮಾಡಿದನು.
|
10. ಅರಸನು ಇದನ್ನು ಕೇಳಿ ಕೂಷ್ಯನಾದ ಎಬೆದ್ಮೆಲೆಕನಿಗೆ, “ನೀನು ಇಲ್ಲಿಂದ ಮೂವತ್ತು ಮಂದಿಯನ್ನು ಕರೆದುಕೊಂಡುಹೋಗಿ ಪ್ರವಾದಿಯಾದ ಯೆರೆಮೀಯನು ಸಾಯುವುದರೊಳಗಾಗಿ ಅವನನ್ನು ಬಾವಿಯಿಂದ ಎತ್ತಿ ರಕ್ಷಿಸು” ಎಂದು ಅಪ್ಪಣೆಕೊಟ್ಟನು.
|
11. ಕೂಡಲೇ ಕೂಷ್ಯನಾದ ಎಬೆದ್ಮೆಲೆಕನು ಅವರನ್ನು ಕರೆದುಕೊಂಡು ಹೋಗಿ ಅರಮನೆಯನ್ನು ಹೊಕ್ಕು ಖಜಾನೆಯ ಕೆಳಗಿನ ಕೋಣೆಯಿಂದ ಜೀರ್ಣವಾದ ಹರಕು ಚಿಂದಿಬಟ್ಟೆಗಳನ್ನು ತೆಗೆದುಕೊಂಡು ಹಗ್ಗಗಳಂತೆ ಬಾವಿಯೊಳಗೆ ಯೆರೆಮೀಯನಿಗೆ ಮುಟ್ಟಿಸಿ,
|
12. “ಜೀರ್ಣವಾದ ಈ ಹರಕು ಚಿಂದಿಗಳನ್ನು ಹಗ್ಗಕ್ಕೆ ಸುತ್ತಿ ಕಂಕುಳಲ್ಲಿ ಇಟ್ಟುಕೋ” ಎನ್ನಲು ಯೆರೆಮೀಯನು ಅದರಂತೆಯೇ ಮಾಡಿದನು.
|
13. ಈ ಪ್ರಕಾರ ಅವರು ಯೆರೆಮೀಯನನ್ನು ಹಗ್ಗಗಳ ಮೂಲಕ ನೀರು ಸೇದಿಕೊಳ್ಳುವ ಹಾಗೆ ಬಾವಿಯಿಂದ ಮೇಲಕ್ಕೆ ಎತ್ತಿದರು; ಆ ಮೇಲೆ ಯೆರೆಮೀಯನು ಹಿಂದಿನಂತೆ ಕಾರಾಗೃಹದ ಅಂಗಳದಲ್ಲಿ ವಾಸಿಸುತ್ತಿದ್ದನು. PS
|
14. {ಕಸ್ದೀಯರನ್ನು ಮೊರೆಹೋಗುವಂತೆ ಯೆರೆಮೀಯನು ಚಿದ್ಕೀಯನನ್ನು ಪ್ರೇರೇಪಿಸಿದ್ದು} PS ಹೀಗಿರುವಲ್ಲಿ ಅರಸನಾದ ಚಿದ್ಕೀಯನು ಪ್ರವಾದಿಯಾದ ಯೆರೆಮೀಯನನ್ನು ಯೆಹೋವನ ಆಲಯದ ಮೂರನೆಯ ಬಾಗಿಲಿಗೆ ಕರೆತರಿಸಿ, “ನಾನು ನಿನ್ನನ್ನು ಒಂದು ಮಾತು ಕೇಳುವೆನು, ನನಗೆ ಸ್ವಲ್ಪವೂ ಮರೆಮಾಡಬೇಡ”
|
15. ಎನ್ನಲು ಯೆರೆಮೀಯನು ಚಿದ್ಕೀಯನಿಗೆ, “ನಾನು ನಿನಗೆ ತಿಳಿಸಿದರೆ ನನ್ನನ್ನು ಸಾಯಿಸಿಯೇ ಸಾಯಿಸುವಿ ಅಲ್ಲವೇ? ಆಲೋಚನೆ ಹೇಳಿದರೂ ನೀನು ಕೇಳುವುದಿಲ್ಲ” ಎಂದು ಉತ್ತರಕೊಟ್ಟನು.
|
16. ಆಗ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಈ ಪ್ರಾಣವನ್ನು ನಮಗೆ ದಯಪಾಲಿಸಿದ ಯೆಹೋವನ ಜೀವದಾಣೆ, ನಾನು ನಿನ್ನನ್ನು ಸಾಯಿಸುವುದಿಲ್ಲ, ನಿನ್ನ ಪ್ರಾಣವನ್ನು ಹುಡುಕುವ ಇವರ ಕೈಗೂ ನಿನ್ನನ್ನು ಸಿಕ್ಕಿಸುವುದಿಲ್ಲ” ಎಂದು ರಹಸ್ಯವಾಗಿ ಪ್ರಮಾಣ ಮಾಡಿದನು.
|
17. ಆಗ ಯೆರೆಮೀಯನು ಚಿದ್ಕೀಯನಿಗೆ, “ಸೇನಾಧೀಶ್ವರ ಸ್ವಾಮಿಯೂ ಇಸ್ರಾಯೇಲರ ದೇವರೂ ಆದ ಯೆಹೋವನು ಇಂತೆನ್ನುತ್ತಾನೆ, ನೀನು ಬಾಬೆಲಿನ ಅರಸನ ಸರದಾರರನ್ನು ಮೊರೆಹೊಕ್ಕರೆ ನಿನ್ನ ಪ್ರಾಣ ಉಳಿಯುವುದು, ಈ ಪಟ್ಟಣವೂ ಬೆಂಕಿಯಿಂದ ಸುಟ್ಟು ಹೋಗದು, ನೀನೂ ನಿನ್ನ ಮನೆತನದವರೂ ಬದುಕುವಿರಿ.
|
18. ನೀನು ಬಾಬೆಲಿನ ಅರಸನ ಸರದಾರರ ಬಳಿ ಮೊರೆಹೋಗದಿದ್ದರೆ ಈ ಪಟ್ಟಣವು ಕಸ್ದೀಯರ ಕೈವಶವಾಗುವುದು. ಅವರು ಅದನ್ನು ಬೆಂಕಿಯಿಂದ ಸುಟ್ಟು ಬಿಡುವರು, ನೀನು ಅವರ ಕೈಯಿಂದ ತಪ್ಪಿಸಿಕೊಳ್ಳಲಾರೆ” ಎಂದು ಹೇಳಿದನು.
|
19. ಇದನ್ನು ಕೇಳಿ ಅರಸನಾದ ಚಿದ್ಕೀಯನು ಯೆರೆಮೀಯನಿಗೆ, “ಕಸ್ದೀಯರು ತಮ್ಮನ್ನು ಮೊರೆಹೊಕ್ಕಿರುವ ಯೆಹೂದ್ಯರಿಗೆ ನನ್ನನ್ನು ಒಪ್ಪಿಸುವರೋ ಏನೋ; ಅವರು ನನ್ನನ್ನು ಹಿಂಸಿಸಬಹುದು ಎಂದು ಶಂಕೆಪಡುತ್ತೇನೆ” ಎಂದು ಉತ್ತರಕೊಟ್ಟನು.
|
20. ಅದಕ್ಕೆ ಯೆರೆಮೀಯನು, “ನಿನ್ನನ್ನು ಒಪ್ಪಿಸರು; ಪ್ರಭುವೇ, ನಾನು ನಿನಗೆ ಹೇಳಿರುವ ಯೆಹೋವನ ಮಾತನ್ನು ಕೈಗೊಳ್ಳು; ಕೈಗೊಂಡರೆ ಪ್ರಾಣ ಉಳಿಯುವುದು, ಸುಖವೂ ಆಗುವುದು.
|
21. ಆದರೆ ನೀನು, ‘ಶತ್ರುವಿನ ಮೊರೆಹೋಗೆನು’ ಎನ್ನುವ ಪಕ್ಷದಲ್ಲಿ ಯೆಹೋವನು ನಿನ್ನ ಮುಂದಿನ ಗತಿಯನ್ನು ನನಗೆ ಹೀಗೆ ತೋರ್ಪಡಿಸಿದ್ದಾನೆ.
|
22. ಯೆಹೂದದ ಅರಸನ ಮನೆಯಲ್ಲಿ ಉಳಿದಿರುವ ಸಕಲ ಸ್ತ್ರೀಯರು ಬಾಬೆಲಿನ ಅರಸನ ಸರದಾರರ ಬಳಿಗೆ ತರಲ್ಪಟ್ಟವರಾಗಿ ನಿನ್ನನ್ನು ಪ್ರೇರೇಪಿಸಿ ಒಳಪಡಿಸಿಕೊಂಡಿದ್ದ ನಿನ್ನ ಆಪ್ತಮಿತ್ರರು ನಿನ್ನ ಕಾಲುಗಳ ಬದಿಯಲ್ಲಿ ಹೂತದ್ದನ್ನು ನೋಡಿ ಹಿಂದಿರುಗಿದ್ದಾರೆ ಎಂದು ನಿಂದಿಸುವರು.
|
23. ನಿನ್ನ ಸಮಸ್ತ ಪತ್ನಿಯರೂ, ಗಂಡು ಮತ್ತು ಹೆಣ್ಣುಮಕ್ಕಳು ಕಸ್ದೀಯರ ಬಳಿಗೆ ತರಲ್ಪಡುವರು; ನೀನೂ ಅವರಿಂದ ತಪ್ಪಿಸಿಕೊಳ್ಳಲಾರದೆ ಬಾಬೆಲಿನ ಅರಸನ ಕೈಗೆ ಸಿಕ್ಕಿಕೊಳ್ಳುವಿ; ಈ ಪಟ್ಟಣವು ನಿನ್ನ ನಿಮಿತ್ತ ಬೆಂಕಿಯಿಂದ ಸುಟ್ಟುಹೋಗುವುದು” ಎಂದು ಹೇಳಿದನು.
|
25. ನಾನು ನಿನ್ನ ಸಂಗಡ ಮಾತನಾಡಿದ ಸುದ್ದಿಯನ್ನು ಪ್ರಧಾನರು ಕೇಳಿ ನಿನ್ನ ಬಳಿಗೆ ಬಂದು, ‘ನೀನು ಅರಸನಿಗೆ ಹೇಳಿದ್ದನ್ನು ನಮಗೆ ತಿಳಿಸು; ನಮಗೆ ಮರೆಮಾಡದಿದ್ದರೆ ನಿನ್ನನ್ನು ಕೊಲ್ಲುವುದಿಲ್ಲ; ಅರಸನು ನಿನಗೆ ಹೇಳಿದ್ದನ್ನೂ ತಿಳಿಸು’ ಎಂದು ಪ್ರಶ್ನೆಮಾಡಬಹುದು.
|
26. ಆಗ ನೀನು ಅವರಿಗೆ, ‘ಯೆಹೋನಾಥಾನನ ಮನೆಗೆ ನನ್ನನ್ನು ತಿರುಗಿ ಸೇರಿಸಬೇಡ, ಅಲ್ಲೇ ಸತ್ತೇನು ಎಂದು ಅರಸನಿಗೆ ಬಿನ್ನಹ ಮಾಡಿಕೊಂಡೆನು’ ಎಂಬುದಾಗಿ ಹೇಳು” ಎಂದು ಅಪ್ಪಣೆಕೊಟ್ಟೆನು.
|
27. ಕೆಲವು ಕಾಲದ ಮೇಲೆ ಸಕಲ ಪ್ರಧಾನರು ಯೆರೆಮೀಯನ ಬಳಿಗೆ ಬಂದು ಹಾಗೆಯೇ ಪ್ರಶ್ನೆ ಮಾಡಿದರು. ಅವನು ಅರಸನ ಅಪ್ಪಣೆಯಂತೆಯೇ ಉತ್ತರಕೊಡಲು ಅವರು ಮಾತನ್ನು ಮುಗಿಸಿದರು; ಏನೂ ತಿಳಿದುಕೊಳ್ಳಲಿಲ್ಲ.
|