ಪವಿತ್ರ ಬೈಬಲ್

ಇಂಡಿಯನ್ ರಿವೈಸ್ಡ್ ವೆರ್ಸನ್ (ISV)
ಯೆರೆಮಿಯ
1. {#1ಯೆಹೋವನು ಬಾರೂಕನನ್ನು ಗದರಿಸಿದ್ದು, ಧೈರ್ಯಗೊಳಿಸಿದ್ದು } [PS]ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು.
2. “ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೀಗೆ ಹೇಳುತ್ತಾನೆ, ‘ನನ್ನ ಗತಿಯನ್ನು ಏನು ಹೇಳಲಿ?
3. ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು’ ಎಂದು ನೀನು ಹೇಳಿದೆಯಲ್ಲಾ,
4. ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು.
5. ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.” [PE]
ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 45 / 52
ಯೆಹೋವನು ಬಾರೂಕನನ್ನು ಗದರಿಸಿದ್ದು, ಧೈರ್ಯಗೊಳಿಸಿದ್ದು 1 ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ ಈ ವಾಕ್ಯವನ್ನು ಅವನಿಗೆ ಹೇಳಿದನು. 2 “ಬಾರೂಕನೇ, ಇಸ್ರಾಯೇಲಿನ ದೇವರಾದ ಯೆಹೋವನು ನಿನಗೆ ಹೀಗೆ ಹೇಳುತ್ತಾನೆ, ‘ನನ್ನ ಗತಿಯನ್ನು ಏನು ಹೇಳಲಿ? 3 ವ್ಯಥೆಪಡುತ್ತಿದ್ದ ನನ್ನನ್ನು ಯೆಹೋವನು ಹೆಚ್ಚೆಚ್ಚಾಗಿ ದುಃಖಪಡಿಸಿದ್ದಾನೆ; ನಾನು ನರಳಿ ನರಳಿ ದಣಿದಿದ್ದೇನೆ, ನನಗೆ ಯಾವ ವಿಶ್ರಾಂತಿಯೂ ದೊರಕದು’ ಎಂದು ನೀನು ಹೇಳಿದೆಯಲ್ಲಾ, 4 ಯೆಹೋವನ ಈ ವಾಕ್ಯವನ್ನು ಕೇಳು, ಇಗೋ, ನಾನು ಕಟ್ಟಿದ್ದನ್ನು ನಾನೇ ಕೆಡವುವೆನು, ನಾನು ನೆಟ್ಟದ್ದನ್ನು ನಾನೇ ಕಿತ್ತುಹಾಕುವೆನು; ಹೌದು, ಭೂಮಂಡಲದಲ್ಲೆಲ್ಲಾ ಹಾಗೆ ಮಾಡುವೆನು. 5 ಮಹಾಪದವಿಯನ್ನು ನಿರೀಕ್ಷಿಸಿಕೊಳ್ಳುತ್ತೀಯೋ? ನಿರೀಕ್ಷಿಸ ಬೇಡ; ಆಹಾ, ನಾನು ನರಜನ್ಮದವರೆಲ್ಲರಿಗೂ ಕೇಡನ್ನು ಉಂಟುಮಾಡುವೆನು; ಆದರೆ ನೀನು ಎಲ್ಲಿಗೆ ಹೋದರೂ ಪ್ರಾಣವೊಂದನ್ನೇ ಉಳಿಸಿಕೊಳ್ಳುವುದಕ್ಕೆ ನಿನಗೆ ಅವಕಾಶ ಕೊಡುವೆನು. ಇದು ಯೆಹೋವನಾದ ನನ್ನ ನುಡಿ.”
ಒಟ್ಟು 52 ಅಧ್ಯಾಯಗಳು, ಆಯ್ಕೆ ಮಾಡಲಾಗಿದೆ ಅಧ್ಯಾಯ 45 / 52
×

Alert

×

Kannada Letters Keypad References