2. ಐಗುಪ್ತವನ್ನು ಕುರಿತದ್ದು; ಐಗುಪ್ತದ ಅರಸನಾದ ಫರೋಹ ನೆಕೋವಿನ ಸೈನ್ಯವು ಯೂಫ್ರೆಟಿಸ್ ನದಿಯ ಬಳಿ ಕರ್ಕೆಮೀಷಿನಲ್ಲಿರುವಾಗ ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಆ ಸೈನ್ಯವನ್ನು ಹೊಡೆದ ವಿಷಯ:
|
4. ರಥಾಶ್ವಗಳನ್ನು ಕಟ್ಟಿರಿ, ವಾಹನಾಶ್ವಗಳನ್ನು ಹತ್ತಿರಿ, ಶಿರಸ್ತ್ರಾಣಗಳನ್ನು ಹಾಕಿಕೊಂಡು ಯುದ್ಧಕ್ಕೆ ನಿಲ್ಲಿರಿ, ಭರ್ಜಿಗಳನ್ನು ಬೆಳಗಿರಿ, ಕವಚಗಳನ್ನು ಧರಿಸಿಕೊಳ್ಳಿರಿ.
|
5. ಆಹಾ, ನನ್ನ ಕಣ್ಣಿಗೆ ಬಿದ್ದದ್ದೇನು? ಅವರು ಧೈರ್ಯಗೆಟ್ಟು ಬೆನ್ನುಕೊಟ್ಟಿದ್ದಾರೆ.
ಅವರ ಶೂರರು ಪೆಟ್ಟುತಿಂದು ಹಿಂದಿರುಗದೆ ಓಡಿಹೋಗುತ್ತಾರೆ; ಸುತ್ತಮುತ್ತಲು ದಿಗಿಲು ಎಂದು ಯೆಹೋವನು ಅನ್ನುತ್ತಾನೆ. |
6. ವೇಗಶಾಲಿಗಳೂ ಓಡಿಹೋಗಲಾರರು, ಬಲಿಷ್ಠರೂ ತಪ್ಪಿಸಿಕೊಳ್ಳಲಾರರು.
ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಎಡವಿಬಿದ್ದಿದ್ದಾರೆ. |
8. ಐಗುಪ್ತವೇ ನೈಲ್ ನದಿಯಂತೆ ಉಬ್ಬಿದೆ; ಐಗುಪ್ತವೆಂಬ ಪ್ರವಾಹವೇ ನೈಲ್ ನದಿಯ ಶಾಖೆಗಳ ಹಾಗೆ ತುಂಬಿ ತುಳುಕುತ್ತದೆ;
‘ನಾನು ಉಬ್ಬಿಕೊಂಡು ಲೋಕದಲ್ಲೆಲ್ಲಾ ಹಬ್ಬುವೆನು, ಪಟ್ಟಣವನ್ನು ಪಟ್ಟಣದ ನಿವಾಸಿಗಳನ್ನು ನಾಶಮಾಡುವೆನು’ ಅಂದುಕೊಳ್ಳುತ್ತದೆ. |
9. ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ!
ಖೇಡ್ಯ ಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದೆ ಹೋಗಲಿ! |
10. ಆದರೆ ಆ ಯುದ್ಧ ದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ;
ಅದು ದಂಡನೆಯ ದಿನ; ಆಗ ಖಡ್ಗವು ನುಂಗಿ ತಣಿಯುವುದು, ಅವರ ರಕ್ತವನ್ನು ತುಂಬಾ ಹೀರುವುದು. ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಉತ್ತರ ದಿಕ್ಕಿನಲ್ಲಿ ಯೂಫ್ರೆಟಿಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ. |
11. ಐಗುಪ್ತದ ಕುಮಾರಿಯೇ, ಯುವತಿಯೇ, ಗಿಲ್ಯಾದಿಗೆ ಹೋಗಿ ಔಷಧವನ್ನು ಸಂಪಾದಿಸು;
ನೀನು ಬಗೆಬಗೆಯ ಔಷಧವನ್ನು ಉಪಯೋಗಿಸುವುದು ಪ್ರಯೋಜನವಿಲ್ಲ; ನಿನಗೆ ಗುಣವಾಗದು. |
12. ನಿನ್ನ ಅವಮಾನದ ಸುದ್ದಿಯು ಜನಾಂಗಗಳಿಗೆ ಕೇಳಿಬಂದಿದೆ, ನಿನ್ನ ಕೂಗಾಟವು ಲೋಕದಲ್ಲೆಲ್ಲಾ ತುಂಬಿದೆ;
ವೀರನು ವೀರನನ್ನು ಎಡವಿ ಇಬ್ಬರೂ ಬಿದ್ದಿದ್ದಾರೆ. |
13. ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಬಂದು ಐಗುಪ್ತ ದೇಶವನ್ನು ಹೊಡೆಯುವನು” ಎಂಬುದಾಗಿ
ಯೆಹೋವನು ಪ್ರವಾದಿಯಾದ ಯೆರೆಮೀಯನಿಗೆ ನುಡಿದನು. |
14. “ಐಗುಪ್ತದಲ್ಲಿ ಪ್ರಕಟಿಸಿರಿ, ಮಿಗ್ದೋಲ್, ತಹಪನೇಸ್, ನೋಫ್, ಎಂಬ ಪಟ್ಟಣಗಳಲ್ಲಿ ಪ್ರಚುರಪಡಿಸಿರಿ,
‘ಐಗುಪ್ತವೇ, ಸ್ಥಿರವಾಗಿ ನಿಂತುಕೊಂಡು ಸನ್ನದ್ಧವಾಗು! ಖಡ್ಗವು ನಿನ್ನ ಸುತ್ತಲು ನುಂಗಿಬಿಟ್ಟಿದೆ’ ಎಂದು ಸಾರಿರಿ. |
16. ಬಹು ಜನರು ಮುಗ್ಗರಿಸುವಂತೆ ಮಾಡಿದನು; ಹೌದು, ಒಬ್ಬರಿಗೊಬ್ಬರು ಮೇಲೆ ಬಿದ್ದು;
‘ನಾವು ಎದ್ದು ಜನ್ಮಭೂಮಿಗೆ ಹೊರಟು ಸ್ವಜನರನ್ನು ಸೇರಿ ಹಿಂಸೆಯ ಖಡ್ಗದಿಂದ ತಪ್ಪಿಸಿಕೊಳ್ಳೋಣ’ ಎಂದುಕೊಂಡರು. |
18. ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನು ಇಂತೆನ್ನುತ್ತಾನೆ,
“ನನ್ನ ಜೀವದಾಣೆ, ಇಗೋ, ಪರ್ವತಗಳನ್ನು ಮೀರುವ ತಾಬೋರ್ ಬೆಟ್ಟದಂತೆಯೂ, ಸಮುದ್ರದಿಂದ ಎದ್ದಿರುವ ಕರ್ಮೆಲ್ ಬೆಟ್ಟದ ಹಾಗೂ ಉನ್ನತನಾದವನೊಬ್ಬನು ಬರುವನು. |
19. ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವುದು.
|
21. ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ. ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.
|
22. ಐಗುಪ್ತವು ಓಡಿಹೋಗುವ ಶಬ್ದವು ಸರಿಯುವ ಸರ್ಪದ ಸಪ್ಪಳಕ್ಕೆ ಸಮನಾಗಿರುವುದು; ಶತ್ರುಗಳು ದಂಡೆತ್ತಿಬಂದು ಕಟ್ಟಿಗೆ ಕಡಿಯುವವರಂತೆ ಕೊಡಲಿಗಳಿಂದ ಅವರ ಮೇಲೆ ಬೀಳುವರು.
|
25. ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಇಗೋ, ನಾನು ನೋ ಎಂಬ ಪಟ್ಟಣದಲ್ಲಿನ ಆಮೋನ್ ದೇವತೆ, ಫರೋಹ, ಐಗುಪ್ತ, ಐಗುಪ್ತದ ದೇವತೆಗಳು, ಅಲ್ಲಿನ ಅರಸರು, ಅಂತು ಫರೋಹನನ್ನೂ, ಅವನಲ್ಲಿ ನಂಬಿಕೆಯಿಟ್ಟವರನ್ನೂ ದಂಡಿಸುವೆನು.
|
26. ಅವರ ಪ್ರಾಣವನ್ನು ಹುಡುಕುವ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನ ಮತ್ತು ಅವನ ಸೇವಕರ ಕೈಗೆ ಕೊಟ್ಟುಬಿಡುವೆನು; ಅನಂತರ ಅಲ್ಲಿ ಪೂರ್ವಕಾಲದ ಹಾಗೆ ಜನರು ವಾಸಿಸುವರು. ಇದು ಯೆಹೋವನ ನುಡಿ.
|
27. ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ, ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ, ಹಾಯಾಗಿಯೂ ಇರುವುದು; ಯಾರೂ ಅದನ್ನು ಹೆದರಿಸರು.
|
28. ನನ್ನ ಸೇವಕನಾದ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದ್ದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು. ಮಿತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವುದಿಲ್ಲ. ಇದು ಯೆಹೋವನ ನುಡಿ.” PE
|